ಶಿರಾ: ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರ 10 ವರ್ಷಗಳ ಆಡಳಿತದಲ್ಲಿ ಅಸಾಧಾರಣ ಅಭಿವೃದ್ಧಿ ಆಗಿದೆ. ಪ್ರಪಂಚದ ಎಲ್ಲ ದೇಶಗಳ ಪ್ರೀತಿ, ವಿಶ್ವಾಸ, ಗೌರವವನ್ನು ಭಾರತ ಪಡೆಯುವಂತಾಗಿದೆ. ಭಾರತದ ಜತೆ ವ್ಯಾಪಾರ, ವಹಿವಾಟು, ಸ್ನೇಹಕ್ಕಾಗಿ ಪ್ರಪಂಚದ ಅನೇಕ ದೇಶಗಳು ಹಾತೊರೆಯುತ್ತಿವೆ. ಇದೆಲ್ಲಕ್ಕೂ ಮೋದಿ ಅವರ ಆಡಳಿತವೇ ಕಾರಣ ಎಂದು ಮಾಜಿ ಉಪ ಮುಖ್ಯಮಂತ್ರಿ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ (Tumkur News) ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಒಂದೇ ಪಕ್ಷದವರು 60 ವರ್ಷಗಳ ಕಾಲ ಆಡಳಿತ ಮಾಡಿದ್ದಾರೆ. ಅವರು ಕಳಂಕ ಹೊತ್ತುಕೊಂಡರು. ಆದರೆ ಮೋದಿ ಅವರು ದೇಶದ ಅಭಿವೃದ್ಧಿ ಮಾಡಿ ಪ್ರಪಂಚದ ಅನೇಕ ದೇಶಗಳ ಪ್ರೀತಿ, ವಿಶ್ವಾಸ ಗಳಿಸಿದ್ದಾರೆ. ಅವರ ಜತೆ ಲೋಕಸಭಾ ಸದಸ್ಯನಾಗಿ ಕೆಲಸ ಮಾಡುವ ಅವಕಾಶ ನನಗೆ ಲಭಿಸುತ್ತಿರುವುದು ಜೀವನದ ಸುವರ್ಣಾವಕಾಶ ಎನ್ನಲು ಕಾರಣ ಎಂದು ಅವರು ವಿವರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 23 ವರ್ಷಗಳಿಂದ ಸಾಂವಿಧಾನಿಕ ಹುದ್ದೆಯಲ್ಲಿದ್ದು, ಗುಜರಾತ್ ಮುಖ್ಯಮಂತ್ರಿಗಳಾಗಿ, ದೇಶದ ಪ್ರಧಾನಮಂತ್ರಿಗಳಾಗಿ ದೇಶದ ಅಭಿವೃದ್ಧಿ ಮಾಡಿದ್ದಾರೆ. ಅಲ್ಲದೆ ಕಳಂಕರಹಿತ ಆಡಳಿತ ನೀಡಿದ ಏಕೈಕ ಶ್ರೇಷ್ಠ ವ್ಯಕ್ತಿ ಎಂದು ಹೇಳಿದರು.
ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಇಂದು ರಾಜಧಾನಿಯಲ್ಲಿ ದರ ಹೀಗಿದೆ
ಹಾಲಿ ಸಂಸದ ಎ.ನಾರಾಯಣಸ್ವಾಮಿ ಅವರ ಬದಲಿಗೆ ನಿಮಗೆ ಟಿಕೆಟ್ ನೀಡಿರುವ ಉದ್ದೇಶವೇನೆಂದು ಸುದ್ದಿಗಾರರು ಪ್ರಶ್ನಿಸಿದಾಗ, ಎ.ನಾರಾಯಣಸ್ವಾಮಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರು ರಾಷ್ಟ್ರ ರಾಜಕಾರಣದಿಂದ ರಾಜ್ಯ ರಾಜಕಾರಣಕ್ಕೆ ಬರಬೇಕೆಂಬ ಒಲವು ಹೊಂದಿದ್ದರು. ಈ ಹಿನ್ನಲೆಯಲ್ಲಿ ಪಕ್ಷದ ಹೈಕಮಾಂಡ್ ನನಗೆ ಟಿಕೆಟ್ ನೀಡಿದೆ ಎಂದು ತಿಳಿಸಿದರು.
ಮೋದಿ ಅವರ ನೇತೃತ್ವದ ಕಾರ್ಯಕ್ರಮಗಳು, ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಕಾಲದ ಅಭಿವೃದ್ಧಿ ಕಾರ್ಯಗಳನ್ನು ತಿಳಿಸುವ ಮೂಲಕ ಮತಯಾಚನೆ ಮಾಡಲಿದ್ದೇವೆ. ಜೆಡಿಎಸ್ ಪಕ್ಷವು ಎನ್‍ಡಿಎ ತೆಕ್ಕೆಗೆ ಬಂದಿರುವುದು ಸಂತಸದ ವಿಚಾರ ಎಂದು ತಿಳಿಸಿದರು.
ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ
ನಗರದ ಪ್ರವಾಸಿ ಮಂದಿರದ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗೋವಿಂದ ಕಾರಜೋಳ ಮಾಲಾರ್ಪಣೆ ಮಾಡಿದರು.
ಇದನ್ನೂ ಓದಿ: Miami Open Final: ಚೊಚ್ಚಲ ಪ್ರಶಸ್ತಿ ನಿರೀಕ್ಷೆಯಲ್ಲಿ ಬೋಪಣ್ಣ-ಎಬ್ಡೆನ್ ಜೋಡಿ; ಇಂದು ಫೈನಲ್
ಈ ಸಂದರ್ಭದಲ್ಲಿ ಮಧುಗಿರಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಿ.ಕೆ. ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ, ಜೆಡಿಸ್ ಮುಖಂಡರಾದ ಉಗ್ರೇಶ್, ಎಸ್. ಆರ್. ಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ಸತ್ಯ ಪ್ರಕಾಶ್, ಮುಖಂಡ ಚಂಗಾವರ ಮಾರಣ್ಣ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಇದ್ದರು.