Site icon Vistara News

Tumkur News: ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ: ಡಾ. ಬಸವ ಮಾಚಿದೇವ ಸ್ವಾಮೀಜಿ

Students from Madiwala community were felicitated at gubbi

ಗುಬ್ಬಿ: ಪಟ್ಟಣದ ಶ್ರೀ ಮಡಿವಾಳ ಮಾಚಿದೇವ ಮಂದಿರದಲ್ಲಿ ಮಂಗಳವಾರ ಮನೆ ಮನೆಗೆ ಮಾಚಿದೇವ ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು (Pratibha Puraskar programme) ಹಮ್ಮಿಕೊಳ್ಳಲಾಗಿತ್ತು.

ಚಿತ್ರದುರ್ಗ ಮಠದ ಡಾ. ಬಸವ ಮಾಚಿದೇವ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಶ್ರೀಗಳು, ಶ್ರಾವಣ ಮಾಸದ ಒಂದು ತಿಂಗಳ ಕಾಲ ರಾಜ್ಯದ ಹಲವು ಭಾಗದಲ್ಲಿ ಪ್ರವಾಸ ಮಾಡಿದ್ದೇನೆ, ಇದರ ಮೂಲಕ ನಮ್ಮ ಮಡಿವಾಳ ಸಮುದಾಯವನ್ನು ಸಂಘಟನೆ, ಅಭಿವೃದ್ಧಿ ಹಾಗೂ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದು, ಇದರ ಮೂಲಕ ನಮ್ಮ ಸಮುದಾಯಕ್ಕೆ ಹೆಚ್ಚಿನ ಶಕ್ತಿ ತುಂಬಲು ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ನಮ್ಮ ಸಮಾಜವು ಮೇಲೆ ಬರಬೇಕು ಎಂಬ ಆಶಯದಲ್ಲಿದ್ದೇನೆ ಎಂದು ತಿಳಿಸಿದರು.

ಮಡಿವಾಳ ಸಮಾಜದ ಎಲ್ಲರೂ ಸಂಘಟಿತರಾಗಿ, ಶಕ್ತಿಯುತರಾದಾಗ ನಮ್ಮ ಸಮಾಜ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ, ಸಮುದಾಯದ ಮಕ್ಕಳಿಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಂದು ಹೇಳಿದರು.

ಇದನ್ನೂ ಓದಿ: Weather report : ರಾಜ್ಯದ ಈ ಕಡೆಗಳಲ್ಲಿ 7 ದಿನ ಭಯಂಕರ ಮಳೆ!

ಕಾರ್ಯಕ್ರಮದಲ್ಲಿ ಶಾಸಕ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ಮಡಿವಾಳ ಸಮುದಾಯವು ಹೆಚ್ಚಿನ ರೀತಿಯಲ್ಲಿ ಸಂಘಟನೆಯ ಮೂಲಕ, ಶಿಕ್ಷಣದ ಮೂಲಕ ಅಭಿವೃದ್ಧಿಯ ಪಥದತ್ತ ಸಾಗಬೇಕಾಗಿದೆ ಎಂದ ಅವರು, ಶ್ರೀಗಳು ತಮ್ಮ ಸಮುದಾಯದ ಏಳಿಗೆಗೆ ಹೆಚ್ಚಿನ ರೀತಿಯಲ್ಲಿ ಸಹಕಾರ ಮಾಡಿದ್ದು ಅವರ ಮಾರ್ಗದರ್ಶನದಲ್ಲಿ ತಾವೆಲ್ಲರೂ ನಡೆಯಬೇಕು ಇದರಿಂದ ಸಮಾಜದ ಏಳಿಗೆ ಸಾಧ್ಯ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಮುದಾಯದ ಎಸ್ಎಸ್ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತ್ಯಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ: Financial planning : ನೀವು ನಿವೃತ್ತಿಗೆ, ಮಕ್ಕಳ ಶಿಕ್ಷಣಕ್ಕೆ ಉಳಿತಾಯ ಮಾಡಿದ್ದೀರಾ?

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಮಹಾಲಕ್ಷ್ಮಿ, ಷೋಕತ್ ಅಲಿ, ಕುಮಾರ್, ರೇಣುಕಪ್ಪ, ಮಂಗಳಮ್ಮ ರಾಜಣ್ಣ, ಶ್ವೇತಾ ಜಗದೀಶ್, ಮಮತಾ ಶಿವಪ್ಪ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಖಾ ನಾಗರಾಜು, ಮೋಹನ್, ಕುಮಾರ್, ತಾಲೂಕು ಸಂಘ ಅಧ್ಯಕ್ಷ ಪರಮೇಶ್ವರಪ್ಪ ಕಾರ್ಯದರ್ಶಿ ವಾಸಣ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.

Exit mobile version