ಶಿರಾ: ಶುದ್ಧ ಕುಡಿಯುವ ನೀರಿನ ಸೇವನೆಯಿಂದ ಮನುಷ್ಯ ಉತ್ತಮ ಆರೋಗ್ಯ (Good Health) ಪಡೆಯಬಹುದಾಗಿದ್ದು, ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಶ್ರಮಿಸುತ್ತಿರುವುದು ಶ್ಲಾಘನೀಯ (Tumkur News) ಎಂದು ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.
ತಾಲೂಕಿನ ಬುಕ್ಕಪಟ್ಟಣ ಹೋಬಳಿಯ ಕುರುಬರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಗದಡು ಗ್ರಾಮದ ಗೊಲ್ಲರಹಟ್ಟಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶುದ್ದಗಂಗಾ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ: Stock Market: 612 ಅಂಕ ಜಿಗಿದ ಸೆನ್ಸೆಕ್ಸ್, ಹೂಡಿಕೆದಾರರು ಫುಲ್ ಖುಷ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಾಗದಡು ಗ್ರಾಮದಲ್ಲಿ ಶುದ್ಧಗಂಗಾ ಯೋಜನೆ ಪ್ರಾರಂಭಿಸಿ, 20 ಲೀ. ಮಿನರಲ್ ನೀರನ್ನು ಕೇವಲ 5 ರೂ.ಗೆ ನೀಡುವ ವ್ಯವಸ್ಥೆ ಕಲ್ಪಿಸಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ ಎಂದು ಅವರು ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಶುದ್ಧಗಂಗಾ ಕೇಂದ್ರ ಕಚೇರಿಯ ನಿರ್ದೇಶಕ ಶಿವಾನಂದ್ ಆಚಾರ್ಯ ಮಾತನಾಡಿ, ಗ್ರಾಮೀಣ ಪ್ರದೇಶದ ಜನರ ಅಭಿವೃದ್ಧಿಗಾಗಿ ಸಂಸ್ಥೆಯು ಅನೇಕ ಯೋಜನೆಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿ ನಿರ್ವಹಿಸಿದೆ ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಕುರುಬರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಿಮ್ಮಕ್ಕ ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ: Tirupati Temple: ತಿರುಪತಿ ದೇವಸ್ಥಾನದಲ್ಲಿ ಫೆ. 3ರಿಂದ ಧಾರ್ಮಿಕ ಸದಸ್
ಈ ಸಂದರ್ಭದಲ್ಲಿ ಶುದ್ಧಗಂಗಾ ಘಟಕದ ಮೇಲ್ವಿಚಾರಕ ಮಂಜುನಾಥ್, ಗ್ರಾ.ಪಂ. ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.