ಕೊರಟಗೆರೆ: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಬಿಡುತ್ತಿರುವುದನ್ನು ಖಂಡಿಸಿ, ಶುಕ್ರವಾರ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ (Karnataka Bandh) ಕೊರಟಗೆರೆ (Koratagere) ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಕರ್ನಾಟಕ ಬಂದ್ ಹಿನ್ನಲೆಯಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು, ರೈತ ಪರ ಸಂಘಟನೆಗಳು ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ತಾಲೂಕು ಕಚೇರಿಯವರಿಗೆ ಕಾಲ್ನಡಿಗೆಯ ಮುಖಾಂತರ ಜಾಥಾ ನಡೆಸಿ ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಿದವು.
ಇದನ್ನೂ ಓದಿ: karnataka weather forecast : ವಾರಾಂತ್ಯದಲ್ಲಿ ಭಾರಿ ಮಳೆ; ಯಾವ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್
ಕೊರಟಗೆರೆ ಪಟ್ಟಣದಲ್ಲಿ ಕರ್ನಾಟಕ ರಣಧೀರರ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ), ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಕನ್ನಡ ರಕ್ಷಣಾ ವೇದಿಕೆ, ಅಪ್ಪು ಸೇನೆ, ದರ್ಶನ್ ಅಭಿಮಾನಿ ಬಳಗದವರಿಂದ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಬೈಕ್ ರ‍್ಯಾಲಿ ನಡೆಸಲಾಯಿತು. ಅಂಗಡಿ ಮಾಲಿಕರು, ವರ್ತಕರು, ಸಂಘ-ಸಂಸ್ಥೆಗಳು ಬಂದ್‌ಗೆ ಬೆಂಬಲ ಸೂಚಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಣಧೀರರ ವೇದಿಕೆ ತಾ.ಅಧ್ಯಕ್ಷ ಮಂಜುಸ್ವಾಮಿ ಎಂ.ಎನ್. ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾ.ಅಧ್ಯಕ್ಷ ಸಿದ್ದರಾಜು ಮಾತನಾಡಿದರು.
ಇದನ್ನೂ ಓದಿ: Bengaluru Traffic: ಟ್ರಾಫಿಕ್ ಚಕ್ರವ್ಯೂಹಕ್ಕೆ ಸಿಲುಕಿ 12 ಕಿ.ಮೀ ನಡೆದು ಮನೆ ತಲುಪಿದ ವ್ಯಕ್ತಿ!
ಪ್ರತಿಭಟನೆಯಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರಾದ ಕೆ.ಎನ್. ನಟರಾಜು, ದೇವರಾಜ್, ರವಿಕುಮಾರ್, ಮುತ್ತುರಾಜು, ದೊಡ್ಡಯ್ಯ, ಕುಮಾರ್, ಹರೀಶ್ ಬಾಬು, ದಿನೇಶ್ ಕುಮಾರ್, ದೇವರಾಜು, ನಾಗರಾಜು ಮತ್ತು ನಯಾಜ್ ಅಹಮದ್, ಭೀಮರಾಜು, ಉಮೇಶ್, ದರ್ಶನ್, ಚಿರಂಜೀವಿ ಹಾಗೂ ರೈತ ಸಂಘದ ಲೋಕೇಶ್, ಪುಟ್ಟರಾಜು, ಪ್ರಸನ್ನಕುಮಾರ್, ಲಕ್ಷ್ಮಣ್ ನಾಯಕ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.