Site icon Vistara News

Tumkur News: ಶಿರಾದಲ್ಲಿ ಈಜಲು ಹೋದ ವಿದ್ಯಾರ್ಥಿ ಹೊಂಡದಲ್ಲಿ ಮುಳುಗಿ ಸಾವು

shira Govt ITI College student manu

ಶಿರಾ: ಹೊಂಡದಲ್ಲಿ ಈಜಲು ಹೋಗಿ, ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಭುವನಹಳ್ಳಿ ಬಳಿ ಮಂಗಳವಾರ (Tumkur News) ಜರುಗಿದೆ.

ತಾಲೂಕಿನ ಮದಲೂರು ದಾಸರಹಳ್ಳಿಯ ಮನು (17) ಮೃತ ವಿದ್ಯಾರ್ಥಿ. ನಗರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ವಿದ್ಯಾರ್ಥಿಯು ಕಾಲೇಜಿನಲ್ಲಿ ಬೆಳಿಗ್ಗೆ ಮೊದಲ ಅವಧಿಯ ತರಗತಿ ಮುಗಿಸಿಕೊಂಡು ಕಾಲೇಜು ಸಮೀಪದ ಹೊಂಡಕ್ಕೆ ಈಜಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿಯ ಸಾವಿಗೆ ಕಾಲೇಜಿನ ಅಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿ, ಆಕ್ರೋಶ ವ್ಯಕ್ತಪಡಿದ್ದಾರೆ.

ಇದನ್ನೂ ಓದಿ: IPL 2024: ಐಪಿಎಲ್​ನಲ್ಲಿ ಮತ್ತೊಂದು ಹೊಸ ಪ್ರಯೋಗ ನಡೆಸಲು ಮುಂದಾದ ಬಿಸಿಸಿಐ

ಘಟನೆಯ ಹಿನ್ನಲೆಯಲ್ಲಿ ಬುಧವಾರ ಸ್ಥಳೀಯ ಶಾಸಕ ಟಿ.ಬಿ. ಜಯಚಂದ್ರ, ಇಲ್ಲಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ, ಮಾಹಿತಿ ಪಡೆದರು.

ಶಿರಾ ಶಾಸಕ ಟಿ.ಬಿ.ಜಯಚಂದ್ರ ನಗರದ ಸರ್ಕಾರಿ ಐಟಿಐ ಕಾಲೇಜಿಗೆ ಭೇಟಿ ನೀಡಿ, ಚರ್ಚೆ ನಡೆಸಿದರು.

ಬಳಿಕ ಮೃತ ವಿದ್ಯಾರ್ಥಿಯ ಪೋಷಕರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ನಂತರ ಮಾತನಾಡಿದ ಅವರು, ಈ ಘಟನೆಯು ಮೇಲ್ನೋಟಕ್ಕೆ ಕಾಲೇಜಿನ ಆಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ತಿಳಿದುಬಂದಿದ್ದು, ಈ ಕುರಿತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ದೂರವಾಣಿ ಕರೆ ಮಾಡಿ, ಮಾತನಾಡಿ ಈ ಕೂಡಲೇ ಪ್ರಾಂಶುಪಾಲರ ವಿರುದ್ಧ ತನಿಖೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳುವಂತೆ ಮತ್ತು ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಚರ್ಚೆ ನಡೆಸಿದರು.

ಇದನ್ನೂ ಓದಿ: Microsoft Windows: ಐಐಟಿ ಪದವೀಧರ ಪವನ್‌ ದಾವುಲೂರಿ ಮೈಕ್ರೋಸಾಫ್ಟ್‌ ವಿಂಡೋಸ್‌ ನೂತನ ಮುಖ್ಯಸ್ಥ

ಈ ಬಗ್ಗೆ ಶಿರಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version