Tumkur News: ದೇವಸ್ಥಾನ ಕೆಡವಿ ಮಾಲ್‌ ಕಟ್ಟಲು ಮುಂದಾದ ಪಾಲಿಕೆ, ಹಿಂದು ಸಂಘಟನೆಗಳ ವಿರೋಧ - Vistara News

ತುಮಕೂರು

Tumkur News: ದೇವಸ್ಥಾನ ಕೆಡವಿ ಮಾಲ್‌ ಕಟ್ಟಲು ಮುಂದಾದ ಪಾಲಿಕೆ, ಹಿಂದು ಸಂಘಟನೆಗಳ ವಿರೋಧ

Tumkur News: ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಇರುವ ಜಾಗದಲ್ಲಿ ಪಿಪಿಪಿ ಮಾಡೆಲ್‌ನಲ್ಲಿ ಮಾಲ್ ನಿರ್ಮಾಣಕ್ಕೆ ಪಾಲಿಕೆ ಪ್ಲಾನ್ ಮಾಡಿಕೊಂಡಿದೆ. ನಗರದ ಹೃದಯಭಾಗದಲ್ಲೇ ಈ ಜಮೀನು ಇದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ತಡೆಹಿಡಿಯಲಾಗಿದ್ದ ಯೋಜನೆಗೆ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮರುಜೀವ ಬಂದಿದೆ.

VISTARANEWS.COM


on

tumkur news temple mall
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ದೇವಸ್ಥಾನ (Temple) ಕೆಡವಿ ಮಾಲ್‌ (Mall) ನಿರ್ಮಾಣಕ್ಕೆ ತುಮಕೂರು ನಗರ ಪಾಲಿಕೆ (Tumkur news) ಪ್ಲಾನ್‌ ಮಾಡುತ್ತಿದ್ದು, ಇದೀಗ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ಜನತೆಯ ತೀವ್ರ ವಿರೋಧದ ನಡುವೆಯೂ ಪಾಲಿಕೆ (Tumkur Muncipality) ಹಾಗೂ ಎಪಿಎಂಸಿ (APMC) ಮಾಲ್ ತೆರೆಯಲು ಮುಂದಾಗಿವೆ.

ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಇರುವ ಜಾಗದಲ್ಲಿ ಪಿಪಿಪಿ ಮಾಡೆಲ್‌ನಲ್ಲಿ ಮಾಲ್ ನಿರ್ಮಾಣಕ್ಕೆ ಪಾಲಿಕೆ ಪ್ಲಾನ್ ಮಾಡಿಕೊಂಡಿದೆ. ನಗರದ ಹೃದಯಭಾಗದಲ್ಲೇ ಈ ಜಮೀನು ಇದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ತಡೆಹಿಡಿಯಲಾಗಿದ್ದ ಯೋಜನೆಗೆ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮರುಜೀವ ಬಂದಿದೆ.

ಎರಡು ವರ್ಷದ ಹಿಂದೆ ಈ ಯೋಜನೆಯ ಅನುಷ್ಟಾನಕ್ಕೆ ಪಾಲಿಕೆ ಮತ್ತು ಎಪಿಎಂಸಿ ಮುಂದಾಗಿದ್ದವು. ಯೋಜನೆ ಅನುಷ್ಟಾನಕ್ಕಾಗಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ ನೆಲಸಮ ಮಾಡಲು ಮುಂದಾದಾಗ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಯೋಜನೆಯನ್ನು ಕೈಬಿಡಲಾಗಿತ್ತು‌. ಇದೀಗ ಈ ಯೋಜನೆಗೆ ಮರುಜೀವ ನೀಡಲಾಗಿದೆ.

40ಕ್ಕೂ ಹೆಚ್ಚು ವರ್ಷಗಳಿಂದ ಈ ಜಮೀನಿನಲ್ಲಿ ದೇವಸ್ಥಾನವಿದೆ. ಇದರಲ್ಲಿ ಸುಮಾರು 1 ಎಕರೆ 30 ಗುಂಟೆ ಜಾಗವನ್ನು ಮುಸ್ಲಿಂ ಗುತ್ತಿಗೆದಾರರಿಗೆ ನೀಡಲು ಮಹಾನಗರಪಾಲಿಕೆ ಪ್ಲಾನ್ ರೂಪಿಸಿದೆ. ಪಾಲಿಕೆ ನಿರ್ಧಾರಕ್ಕೆ ಶಾಸಕರು, ರಾಜಕೀಯ ನಾಯಕರು ಹಾಗೂ ಹಿಂದೂಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಡಿಸಿದ್ದು, ಯೋಜನೆ ಕೈಬಿಡುವಂತೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಹಿಂದೂಪರ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದು, ಶಾಸಕ ಜ್ಯೋತಿಗಣೇಶ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಮಾಲ್‌ ಕಾಮಗಾರಿ ಭೂಮಿಪೂಜೆಗೂ ಡೇಟ್ ಫಿಕ್ಸ್ ಆಗಿದೆ. ಆದರೆ ಈ ಕೂಡಲೇ ಯೋಜನೆಯನ್ನು ಕೈಬಿಡುವಂತೆ ಹಿಂದೂಪರ ಸಂಘಟನೆಗಳು ಒತ್ತಾಯ ಮಾಡಿವೆ.

ಮಳೆ, ಪ್ರವಾಹಕ್ಕೆ ಬೆಳಗಾವಿ ತತ್ತರ, ಸಪ್ತನದಿಗಳಲ್ಲಿ ಪ್ರವಾಹ

ಬೆಳಗಾವಿ/ಚಿಕ್ಕೋಡಿ: ಬೆಳಗಾವಿ (belagavi news) ಹಾಗೂ ಚಿಕ್ಕೋಡಿ (Chikkodi news) ಅವಳಿ ಜಿಲ್ಲೆಗಳ ಜನತೆ ಮಳೆ (Rain in Karnataka) ಹಾಗೂ ನದಿಗಳ ಅಬ್ಬರದಿಂದ ತತ್ತರಿಸಿದ್ದಾರೆ. ನದಿಗಳು ತುಂಬಿ ಹರಿಯುತ್ತಿದ್ದು (Flood situation), ಘಟಪ್ರಭಾ ನದಿಯ (Ghataprabha River) ನೀರು ಮನೆಬಾಗಿಲವರೆಗೂ ಬಂದಿರುವುದರಿಂದ ಜನತೆ ಮನೆ ತೊರೆದು ಕಾಳಜಿ ಕೇಂದ್ರಗಳ ಕಡೆ ಸಾಗಿದ್ದಾರೆ.

ಘಟಪ್ರಭಾ ನದಿಯ ನೀರು ಉಕ್ಕಿ ಬಂದು ಮನೆಯ ಬಾಗಿಲವರೆಗೂ ತಲುಪಿರುವುದರಿಂದ, ಹೆಚ್ಚಿನ ಅನಾಹುತ ಆಗದಿರಲೆಂದು ಜನ ಮನೆ ಖಾಲಿ ಮಾಡುತ್ತಿದ್ದಾರೆ. ಗೋಕಾಕದ ದನದ ಪೇಟೆಗೆ ನದಿ ನೀರು ನುಗ್ಗುತ್ತಿದೆ. ನೀರು ಹೆಚ್ಚಾಗುತ್ತಿರುವುದರಿಂದ ಜನ ಕಂಗಾಲಾಗಿದ್ದು, ಈಗಾಗಲೇ ಕೆಲವು ಶೆಡ್‌ಗಳು ನೀರಲ್ಲಿ ಮುಳುಗಿವೆ. ದನದ ಪೇಟೆ ಪಟಗುಂದಿ ಹನುಮ ಗುಡಿಗೂ ಜಲಕಂಟಕ ಎದುರಾಗಿದೆ. ಸದ್ಯ ನೀರಿನಲ್ಲಿಯೇ ಜನ ನಿತ್ಯ ಕೆಲಸಗಳಿಗಾಗಿ ಓಡಾಡುತ್ತಿದ್ದು, ಕ್ಷಣ ಕ್ಷಣಕ್ಕೂ ಘಟಪ್ರಭಾ ನದಿ ಒಳಹರಿವು ಹೆಚ್ಚಾಗುತ್ತಿದೆ. ಸದ್ಯ ನದಿ ಒಳಹರಿವು 55 ಸಾವಿರ ಕ್ಯೂಸೆಕ್ ದಾಟಿದೆ.

ಬೆಳಗಾವಿ ಜಿಲ್ಲೆಯಲ್ಲಿ ಸಪ್ತ ನದಿಗಳ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 30 ಸಂಪರ್ಕ ಸೇತುವೆಗಳು ಜಲಾವೃತವಾಗಿವೆ. ಗೋಕಾಕ್ ತಾಲೂಕಿನಲ್ಲಿ ಐದು ಸೇತುವೆಗಳು, ಮೂಡಲಗಿ ತಾಲೂಕಿನಲ್ಲಿ ಐದು ಸೇತುವೆ, ಹುಕ್ಕೇರಿ ತಾಲೂಕಿನ ಐದು, ಚಿಕ್ಕೋಡಿ ತಾಲೂಕಿನ ನಾಲ್ಕು, ನಿಪ್ಪಾಣಿ ತಾಲೂಕಿನ ನಾಲ್ಕು, ರಾಯಬಾಗ ತಾಲೂಕಿನ ಮೂರು, ಖಾನಾಪುರ ಎರಡು, ಕಾಗವಾಡ ಒಂದು, ಅಥಣಿ ಒಂದು ಸೇತುವೆ ಜಲಾವೃತವಾಗಿವೆ. ಇದರಿಂದ ಜಿಲ್ಲೆಯ ಅರವತ್ತಕ್ಕೂ ಅಧಿಕ ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ.

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ 87 ಗ್ರಾಮಗಳಿಗೆ, ಬೆಳಗಾವಿ ವ್ಯಾಪ್ತಿಯಲ್ಲಿ 35 ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಜಿಲ್ಲೆಯಲ್ಲಿ ಬರೋಬ್ಬರಿ 122 ಗ್ರಾಮಗಳಲ್ಲಿ ಪ್ರವಾಹದ ಸ್ಥಿತಿ ಕಂಡುಬಂದಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ 45 ಬೋಟ್‌ಗಳು ಸಿದ್ಧತೆಯಲ್ಲಿವೆ. ಈಗಾಗಲೇ ಒಂದು ಎನ್‌ಡಿಆರ್‌ಎಫ್ ತಂಡ ಬೀಡುಬಿಟ್ಟಿದೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹುಣ್ಣರಗಿ ಗ್ರಾಮದಲ್ಲಿ ದೂಧಗಂಗಾ ನದಿ ಅಬ್ಬರಿಸಿ ಹರಿಯುತ್ತಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ದೂಧಗಂಗಾ ನದಿ ನೀರು ಗ್ರಾಮದ ಕುರುಬರ ಗಲ್ಲಿಗೆ ನುಗ್ಗಿದೆ. ಹೀಗಾಗಿ ಜನ ಊರು ಖಾಲಿ ಮಾಡುತ್ತಿದ್ದು, ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ. ನಿನ್ನೆ ರಾತ್ರಿಯೆಲ್ಲ‌ ನಿದ್ದೆಯಿಲ್ಲದೆ ಕಂಗೆಟ್ಟ ಗಡಿ ಜಿಲ್ಲೆಯ ಜನ, ಇಂದು ಹುಣ್ಣರಗಿ ಗ್ರಾಮದಿಂದ ಸುರಕ್ಷಿತ ಸ್ಥಳಗಳತ್ತ, ಊರ ಹೊರಗಿನ ಶಾಲೆಯತ್ತ ಸಾಗುತ್ತಿದ್ದಾರೆ.

ಗೋಕಾಕ: ಮಾರ್ಕಂಡೇಯ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿಯ ಅಬ್ಬರಕ್ಕೆ ಸೇತುವೆಯಲ್ಲಿ ಬಿರುಕು ಬಿಟ್ಟಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ನಗರಕ್ಕೆ ಹೊಂದಿಕೊಂಡಿರುವ ಚಿಕ್ಕೋಳಿ ಸೇತುವೆಯಲ್ಲಿ ಮೂಡಿರುವ ಬಿರುಕಿನಿಂದಾಗಿ ಜನ ಆತಂಕದಲ್ಲಿದ್ದಾರೆ. ಈ ಸೇತುವೆ ಮೇಲೆ ನಿತ್ಯ ಸಾವಿರಾರು ವಾಹನಗಳು, ಜನ ಓಡಾಡುತ್ತಾರೆ. ಇನ್ನೊಂದು ಕಡೆ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಇದನ್ನೂ ಓದಿ: Karnataka Rain News: ಮುಂದುವರಿದ ಮಳೆ ಅವಾಂತರ; ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸುವ ವರುಣ; ಒಳನಾಡಿಗೂ ಅಲರ್ಟ್‌

Karnataka Weather Forecast : ಕರಾವಳಿ ಹಾಗೂ ಮಲೆನಾಡು ಸುತ್ತಮುತ್ತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹಾಸನದ ಕೆಲವು ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಕೊಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather Forecast) ನಿರೀಕ್ಷೆಯಿದೆ. ಒಳನಾಡಿನಲ್ಲಿ ಮಧ್ಯಮದಿಂದ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸೇರಿದಂತೆ ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲೂ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

ಬೆಂಗಳೂರಿನಲ್ಲಿ ಗಾಳಿ ಶರವೇಗ

ಬೆಂಗಳೂರು ಸುತ್ತಮುತ್ತ ಗಾಳಿ ವೇಗವು ಹೆಚ್ಚಾಗಿರಲಿದೆ. ಕೆಲವೆಡೆ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಕರಾವಳಿ, ಮಲೆನಾಡಿಗೆ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ವೇಗವು 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ನೀಡಲಾಗಿದೆ. ಉಳಿದಂತೆ ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಶಾಲೆಗಳಿಗೂ ರಜೆ

ಕೊಡಗು ಜಿಲ್ಲೆಯಲ್ಲೂ ಮಳೆ ಅಬ್ಬರದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನು ಹೊರತು ಪಡಿಸಿ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಾದ್ಯಂತ ಮಳೆ (Heavy rain) ಮುಂದುವರಿದಿದ್ದು, ಆರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ (Karnataka Weather Forecast) ಮಾಡಲಾಗಿದೆ. ಜು.26ರಂದು ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಹಾಗೂ ಅರಕಲಗೂಡು ತಾಲೂಕುಗಳಿಗೆ ರಜೆ ಘೋಷಿಸಿ ಡಿಡಿಪಿಐ ಹೆಚ್.ಕೆ.ಪಾಂಡು ಆದೇಶ ಹೊರಡಿಸಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಎಚ್ಚರಿಕೆ; ನಾಳೆ ಹಾಸನ, ಕೊಡಗಿನ ಈ ಶಾಲೆಗಳಿಗೆ ರಜೆ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಮಳೆ ಅಬ್ಬರ (Rain News) ಮುಂದುವರಿದಿದೆ. ಮುಂಜಾಗ್ರತಾ ಕ್ರಮವಾಗಿ ಹಾಸನದ ಕೆಲ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ. ಮುಂದಿನ 24ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಹಾಸನ: ಹಾಸನ ಜಿಲ್ಲೆಯಾದ್ಯಂತ ಮಳೆ (Heavy rain) ಮುಂದುವರಿದಿದ್ದು, ಆರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ (Karnataka Weather Forecast) ಮಾಡಲಾಗಿದೆ. ಜು.26ರಂದು ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಹಾಗೂ ಅರಕಲಗೂಡು ತಾಲೂಕುಗಳಿಗೆ ರಜೆ ಘೋಷಿಸಿ ಡಿಡಿಪಿಐ ಹೆಚ್.ಕೆ.ಪಾಂಡು ಆದೇಶ ಹೊರಡಿಸಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ಇನ್ನೂ ಕೊಡಗು ಜಿಲ್ಲೆಯಲ್ಲೂ ಮಳೆ ಅಬ್ಬರದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನು ಹೊರತು ಪಡಿಸಿ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆಗೆ ಉಕ್ಕಿ ಹರಿದ ಐಗೂರು ಹೊಳೆ

ಭಾರಿ ಮಳೆಗೆ ಹಾಸನದ ಐಗೂರು ಹೊಳೆ ಉಕ್ಕಿ ಹರಿದಿದೆ. ಪರಿಣಾಮ ಯಡಿಕೇರಿ-ಕುಂಬ್ರಳ್ಳಿ ,ಹೆತ್ತೂರು ನಡುವಿನ ಸೇತುವೆ ಮಳುಗಡೆಯಾಗಿದೆ. ಸಕಲೇಶಪುರ ತಾಲೂಕಿನ ಯಡಿಕೇರಿ-ಕುಂಬ್ರಳ್ಳಿ ನಡುವಿನ ಸೇತುವೆ ಮುಳುಗಡೆಯಿಂದಾಗಿ ಯಡಿಕೇರಿ-ಕುಂಬ್ರಳ್ಳಿ-ಹೆತ್ತೂರು ಹಾಗೂ ಸಕಲೇಶಪುರಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ರಸ್ತೆ ಸಂಪರ್ಕವಿಲ್ಲದೆ ಗ್ರಾಮಸ್ಥರು ಪರದಾಟ ಅನುಭವಿಸಿದರು. ಜನ-ಜಾನುವಾರು, ವಾಹನ ಓಡಾಡಲಾಗದೆ ತೀವ್ರ ಸಮಸ್ಯೆಗೆ ಸಿಲುಕಬೇಕಾಯಿತು. ಸೇತುವೆ ದುರಸ್ತಿ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಸೇತುವೆ ಮೇಲೆ ಅಪಾಯಕಾರಿ ರೀತಿಯಲ್ಲಿ ನೀರು ಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸೇತುವೆ ಮೇಲೆ ಸಂಚಾರ ನಿಷೇಧ ಹಾಕಲಾಗಿದೆ. ಸೇತುವೆಯ ಎರಡೂ ಬದಿಗೂ ಬ್ಯಾರಿಕೇಡ್ ಹಾಕಿ ಸಂಚಾರಕ್ಕೆ ತಡೆಹಿಡಿಯಲಾಗಿದೆ.

ಸಕಲೇಶಪುರ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹೇಮಾವತಿ ಜಲಾಶಯಕ್ಕೆ ಒಳಹರಿವು ಏರಿಕೆಯಾಗುತ್ತಿದೆ. ಒಳಹರಿವು ಹೆಚ್ಚಾದ ಹಿನ್ನೆಲೆ‌ಯಲ್ಲಿ ಆರು ಕ್ರಸ್ಟ್ ಗೇಟ್‌ಗಳ ಮೂಲಕ 65 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ಹೇಮಾವತಿ ನದಿಯ ತಗ್ಗು ಪ್ರದೇಶದ ಮತ್ತು ನದಿಯ ಎರಡು ದಂಡೆಯಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳವಂತೆ ಹೇಮಾವತಿ ಅಣೆಕಟ್ಟು ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ರಿಂದ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

ಭಾರಿ ಮಳೆ ಮುನ್ಸೂಚನೆ

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ. ಜತೆಗೆ ಬೆಳಗಾವಿ ಜಿಲ್ಲೆಯ ಘಟ್ಟ ಪ್ರದೇಶದಲ್ಲಿ ಭರ್ಜರಿ ಮಳೆಯೊಂದಿಗೆ ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಘಟ್ಟ ಪ್ರದೇಶದಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗಾಳಿ ವೇಗವು ವಿಪರೀತವಾಗಿರಲಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳ ಕೆಲವೆಡೆ ಗಾಳಿ ಜತೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

karnataka Rain : ರಾಜ್ಯದಲ್ಲಿ ಮಳೆ ಅವಾಂತರಗಳು (Rain Effect) ಮುಂದುವರಿದಿದೆ. ಬೆಳಗಾವಿಯಲ್ಲಿ ಮನೆಯೊಂದಕ್ಕೆ ಮಳೆ ನೀರು ನುಗ್ಗಿದ್ದು, ಕಾಲು ಜಾರಿ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಮಲೆನಾಡಿನಲ್ಲೂ ಮರಗಳು ಧರೆಗುರುಳಿದ್ದು, ಹಾನಿಯಾಗಿವೆ.

VISTARANEWS.COM


on

By

karnataka Rain
Koo

ಬೆಳಗಾವಿ/ಚಿಕ್ಕಮಗಳೂರು: ಮಳೆ (Karnataka Rain) ನೀರು ಮನೆಗೆ ನುಗ್ಗಿದ್ದರಿಂದ ಕಾಲು ಜಾರಿ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಮಹಬೂಬಿ ಅದಂಸಾಹೇಬ್ ಮಕಾಂದಾರ್ (79) ಮೃತ ದುರ್ದೈವಿ. ವೃದ್ಧೆಯ ಶವ ಸಾಗಿಸಲು ಕುಟುಂಬಸ್ಥರು ಪರದಾಡಿದ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ. ನಿರಂತರ ಮಳೆಯಿಂದ ಕಾಲೋನಿಗೆ ಡ್ರೈನೇಜ್ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು. ಮೊಳಕಾಲುದ್ದ ನೀರಲ್ಲಿ ಶವ ಹಿಡಿದು ಕಾಲೋನಿ ಜನರು ಪರದಾಡಿದ್ದಲ್ಲದೇ ಮಳೆಯಲ್ಲೇ ಅಂತ್ಯ ಸಂಸ್ಕಾರ ನೆರವೇರಿಸಿದ್ದರು.

ಉಡುಪಿಯಲ್ಲಿ ಮರ ಬಿದ್ದು ಮನೆಗಳು ಧ್ವಂಸ

ಉಡುಪಿಯ ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಭಾರಿ ಗಾಳಿ ಮಳೆಗೆ ಮರ ಬಿದ್ದು ಎರಡು ಮನೆಗಳು ಸಂಪೂರ್ಣ ಹಾನಿಯಾಗಿದೆ. ಬಳ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಒಂದನೇ ವಾರ್ಡ್‌ನಲ್ಲಿ ಘಟನೆ ನಡೆದಿದೆ. ಸೀತಾ ಪೂಜಾರಿ ಮತ್ತು ಲಚ್ಚ ಪೂಜಾರಿ ಅವರ ಮನೆಗಳು ಧ್ವಂಸಗೊಂಡಿವೆ. ಒಂದು ಮನೆಯ ಮೇಲೆ ತೆಂಗಿನ ಮರ, ಇನ್ನೊಂದು ಮನೆಯ ಮೇಲೆ ಎರಡು ಅಡಿಕೆ ಮರಗಳು ಉರುಳಿ ಬಿದ್ದಿವಿ. ಮನೆಯ ಪಕ್ಕದಲ್ಲಿದ್ದ ಹಲಸಿನ ಮರ ಮತ್ತು ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಗ್ರಾಮ ಕರಣಿಕರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊಡಗಿನಲ್ಲಿ ನೋಡ ನೋಡುತ್ತಿದ್ದಂತೆ ಕುಸಿದ ಗುಡ್ಡ

ಗುಡ್ಡದ ಮಣ್ಣು ಕುಸಿದಿದ್ದು, ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಸಮೀಪ ಜೇಡಿಗುಂಡಿ ಬಳಿ ಘಟನೆ ನಡೆದಿದೆ. ಚಲಿಸುತ್ತಿದ್ದ ಬಸ್ ಮುಂದೆಯೇ ಗುಡ್ಡದ ಮಣ್ಣು ಕುಸಿದಿದೆ. ಕೂಡಲೇ ಚಾಲಕ ಬಸ್ ನಿಲ್ಲಿಸಿದ್ದಾರೆ. ಗುಡ್ಡದ ಮಣ್ಣು ಕುಸಿದು ಸೋಮವಾರಪೇಟೆ ಶಾಂತಳ್ಳಿ ರಸ್ತೆ ಸಂಚಾರ ಬಂದ್ ಆಗಿತ್ತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ‌ ವಾಹನಗಳು ಸಾಲು ಗಟ್ಟಿ ನಿಲ್ಲಬೇಕಾಯಿತು.

ಇತ್ತ ಸೋಮವಾರಪೇಟೆ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆಗೆ ವಾಸದ ಮನೆ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಮನೆಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರಪೇಟೆಯ ಹಾನಗಲ್ಲು ವ್ಯಾಪ್ತಿಯ ಕಲ್ಕಂದೂರುನಲ್ಲಿ ಘಟನೆ ನಡೆದಿದೆ. ಗ್ರಾಮದ ಪ್ರವೀಣ್ ಎಂಬುವರಿಗೆ ಸೇರಿದ ವಾಸದ ಮನೆ ಹಾನಿಯಾಗಿದೆ.

ಚಿಕ್ಕಮಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ವಿದ್ಯುತ್ ತಂತಿ

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅವಾಂತರವೇ ಸೃಷ್ಟಿಸಿದೆ. ಗಾಳಿ ಮಳೆ ಅಬ್ಬರಕ್ಕೆ ಚಲಿಸುತ್ತಿದ್ದ ಕಾರಿನ ಮೇಲೆ ವಿದ್ಯುತ್ ತಂತಿ ಬಿದ್ದಿದೆ. ವಿದ್ಯುತ್ ಇಲ್ಲದ ಪರಿಣಾಮ ಭಾರಿ ಅನಾಹುತ ತಪ್ಪಿದೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಘಟನೆ ನಡೆದಿದೆ. ಗಿರಿ ರಸ್ತೆಯ ಐದಾರು ಕಡೆ ಮರಗಳು ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದೆ. ಚಿಕ್ಕಮಗಳೂರು ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.

ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಭತ್ತದ ನಾಟಿ!

ಕೆಸರುಗದ್ದೆಯಾಂತದ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಜೋಡೆತ್ತುಗಳ ಸಮೇತ ಉಳುವೆ ಮಾಡಲಾಯಿತು. ಉಳುಮೆ ಮಾಡಿ ಬಸ್ ನಿಲ್ದಾಣದಲ್ಲಿ ಭತ್ತದ ನಾಟಿ ಮಾಡಿ ವಿಭಿನ್ನವಾಗಿ ಪ್ರತಿಭಟಿಸಿದರು. ಚಿಕ್ಕಮಗಳೂರು ನಗರದ ಗ್ರಾಮಾಂತರ ಬಸ್ ನಿಲ್ದಾಣದ ದುಸ್ಥಿತಿಗೆ ಹಲವು ಸಂಘಟನೆಗಳು ಕಿಡಿಕಾರಿದರು. ಮಳೆಯಿಂದಾಗಿ ನಡೆದಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ಹೊರಹಾಕಿದರು. ಇನ್ನೂ ಭಾರೀ ಗಾಳಿಗೆ ಬೃಹತ್ ಮರವೊಂದು ಬುಡಸಮೇತ ರಸ್ತೆಗುರುಳಿದ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ನಡೆದಿದೆ. ವಸ್ತಾರೆ ಟು ಆಲ್ದೂರು ರೋಡ್ ಬ್ಲಾಕ್ ಆಗಿತ್ತು. ಬಾಳೆಹೊನ್ನೂರು, ಶೃಂಗೇರಿ, ಕೊಪ್ಪ, ಕಳಸ, ಎನ್.ಆರ್.ಪುರದ ಮಾರ್ಗದಲ್ಲಿ ಒಂದು ಗಂಟೆಗೂ ಹೆಚ್ಚು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.

ಹೆಬ್ಬಾಳ ಸೇತುವೆ ಮತ್ತೆ ಮುಳುಗಡೆ

ಚಿಕ್ಕಮಗಳೂರಿನ ಕಳಸ-ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳ ಸೇತುವೆ ಮತ್ತೆ ಮುಳುಗಡೆಯಾಗಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಕಳೆದ ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಕಳಸ-ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಕಳೆದ 15 ದಿನಗಳಲ್ಲಿ 10ಕ್ಕೂ ಹೆಚ್ಚು ಬಾರಿ ಸೇತುವೆ ಮುಳುಗಡೆಯಾಗಿದೆ. ಹತ್ತಾರು ಹಳ್ಳಿಯ ಸಂಪರ್ಕ ಕಡಿತದೊಂದಿಗೆ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವು ಬಂದ್ ಆಗಿದೆ.

ಇತ್ತ ಕುಡಿದ ಮತ್ತಿನಲ್ಲಿ ಹೆಬ್ಬಾಳ ಸೇತುವೆ ಮೇಲೆ ಜೀಪ್ ಚಾಲಕ ಹುಚ್ಚಾಟ ಮೆರೆದಿದ್ದಾನೆ. ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದ್ದು, ಜೀಪ್‌ ಚಲಾಯಿಸಿದ್ದಾನೆ. ಅಡ್ಡಲಾಗಿ ಬ್ಯಾರಿಕೇಡ್‌ ಇದ್ದರೂ ಚಾಲಕ ಹುಚ್ಚಾಟ ತೋರಿದ್ದಾನೆ. ನದಿ ನೀರಿನ ಸೆಳೆತಕ್ಕೆ ಸ್ವಲ್ಪದರಲ್ಲೇ ಜೀಪು ಚಾಲಕ ಪಾರಾಗಿದ್ದಾನೆ.

ಇದನ್ನೂ ಓದಿ: Actor Darshan: ನಟ ದರ್ಶನ್‌ಗೆ ಜೈಲೂಟ ಫಿಕ್ಸ್‌; ಕೋರ್ಟ್‌ ಮನೆಯೂಟದ ಅರ್ಜಿ ವಜಾಗೊಳಿಸಿದ್ದೇಕೆ?

ತೆಂಗಿನ ಮರ ಬಿದ್ದು ಗೋ ಶಾಲೆ ಧ್ವಂಸ

ಇನ್ನೂ ಇತ್ತ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆಯಾಗುತ್ತಿದ್ದು, ತಾಯಿ ಹೊಳೆ ಅಬ್ಬರಕ್ಕೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಕುಮಾರ ಗಿರಿ ಸೇತುವೆ ಹೊಳೆಯ ನೀರಿಗೆ ಮುಳುಗಡೆಯಾಗಿದೆ. ಹತ್ತಾರು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಗಾಳಿ ಮಳೆಗೆ ಗೋಶಾಲೆಯ ಮೇಲೆ ತೆಂಗಿನ ಮರ ಮುರಿದು ಬಿದ್ದಿದೆ. ತಂಗಿನ ಮರ ಬಿದ್ದ ರಭಸಕ್ಕೆ ಗೋ ಶಾಲೆ ಧ್ವಂಸಗೊಂಡಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹೇರೂರು ಗ್ರಾಂ.ಪಂ ವ್ಯಾಪ್ತಿಯ ಕೆಮ್ಮಣ್ಣು ಗ್ರಾಮದಲ್ಲಿ ಘಟನೆ ನಡೆದಿದೆ. ಹಸುಗಳು ಮೇಯಲು ಹೋಗಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಸುಮಾರು 50ಕ್ಕೂ ಹೆಚ್ಚು ಹಸುಗಳಿದ್ದು, ಗೋ ಶಾಲೆಯ ಚಾವಣಿ ಸಂಪೂರ್ಣ ಜಖಂಗೊಂಡಿದೆ.

ಕಳಸ-ಕುದುರೆ ಮುಖ-ಕಾರ್ಕಳ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಭೂ ಕುಸಿದಿದೆ. ಬೃಹತ್ ಸೇತುವೆ ಪಕ್ಕದಲ್ಲೇ ಕುಸಿದಿದ್ದು, ಭಾರೀ ವಾಹನಗಳು ಓಡಾಡಿದರೆ ರಸ್ತೆ ಸಂಪೂರ್ಣ ಕುಸಿಯುವ ಸಾಧ್ಯತೆ ಇದೆ. ರಸ್ತೆ ಮತ್ತಷ್ಟು ಕುಸಿದರೆ ಬೃಹತ್ ಸೇತುವೆಗೂ ಹಾನಿಯಾಗಲಿದೆ. ಎರಡು ದಿನದ ಹಿಂದೆ ಸ್ವಲ್ಪ ಕುಸಿದಿದ್ದ ಭೂಮಿ ಇಂದು ಮತ್ತಷ್ಟು ಕುಸಿಯಲಿದೆ. ಸದ್ಯ ಪೊಲೀಸರು ರಸ್ತೆಗೆ ರೆಡ್ ಟೇಪ್ ಕಟ್ಟಿ, ಮರಳು ಚೀಲ ಅಡ್ಡ ಇಟ್ಟಿದ್ದಾರೆ.

ಹಾಸನದಲ್ಲಿ ನೂರಾರು ಎಕರೆ ಜಮೀನು ಜಲಾವೃತ

ಹಾಸನದ ಸಕಲೇಶಪುರ ತಾಲೂಕಿನಲ್ಲಿ ಮಳೆಯಾರ್ಭಟಕ್ಕೆ ಹೇಮಾವತಿ ನದಿ ಉಕ್ಕಿ ಹರಿಯುತ್ತಿದೆ. ಹೇಮಾವತಿ ನದಿ ನೀರು ಉಕ್ಕಿ ಹರಿದ ಪರಿಣಾಮ ನೂರಾರು ಎಕ್ಕರೆ ಜಮೀನು ಜಲಾವೃತಗೊಂಡಿದೆ. ಸಕಲೇಶಪುರ ತೇಜಸ್ವಿ ಚಿತ್ರಮಂದಿರ ಸಮೀಪದ ಭತ್ತದ ಗದ್ದೆಗಳು,ತೋಟ ಜಲಾವೃತಗೊಂಡಿದೆ. ನಾಟಿ ಮಾಡಿದ್ದ ಭತ್ತದ ಗದ್ದೆ ,ಭತ್ತದ ಸಸಿ ನೀರುಪಾಲಾಗಿದೆ.

ಕ್ಷಣ-ಕ್ಷಣಕ್ಕೂ ಹೆಚ್ಚುತ್ತಿರುವ ಕೃಷ್ಣಾ ನದಿ ಹರಿವು

ಬಾಗಲಕೋಟೆ ಜಿಲ್ಲೆಯ ಕೃಷ್ಣಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರ ಮಳೆಯಿಂದ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಪ್ರವಾಹ ಆತಂಕ ಹೆಚ್ಚಿದೆ. ಮುತ್ತೂರ,ಮೈಗೂರ,ಕಂಕಣವಾಡಿ ಗ್ರಾಮಗಳಲ್ಲಿ ಜಲಾವೃತ ಭೀತಿ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Karnataka weather Forecast : ಭಾರಿ ಮಳೆಯೊಂದಿಗೆ (Rain News) ಬಿರುಗಾಳಿಯು ಗಂಟೆಗೆ 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (karnataka Weather Forecast) ಸಾಮಾನ್ಯವಾಗಿದ್ದು, ಕರಾವಳಿ ಹಾಗೂ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುವ (Rain News) ನಿರೀಕ್ಷೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಸುತ್ತಮುತ್ತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹಾಸನದಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ಗಾಳಿಯ ವೇಗವು 40-50 ಕಿ.ಮೀ ತಲುಪಲಿದೆ.

ಇನ್ನೂ ದಕ್ಷಿಣ ಒಳನಾಡಿನ ಹಲವೆಡೆ ಗಾಳಿಯ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ ಕೋಲಾರದಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ರಾಯಚೂರು ಮತ್ತು ಕಲಬುರಗಿ , ಬೆಳಗಾವಿ, ರಾಯಚೂರು, ಬೀದರ್, ಬಾಗಲಕೋಟೆ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಸಮುದ್ರಕ್ಕಿಳಿಯುವ ಮುನ್ನ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Assault Case : ಹೋಮ್‌ ವರ್ಕ್‌ ಮಾಡದ್ದಕ್ಕೆ ಬಾಲಕಿಗೆ ಬಾಸುಂಡೆ ಬರುವಂತೆ ಬಾರಿಸಿದ ಮುಖ್ಯ ಶಿಕ್ಷಕಿ

ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ

ಉಡುಪಿ: ಉಡುಪಿಯ (Udupi News ) ಬೈಂದೂರು ಕ್ಷೇತ್ರದ ಯಡಮೊಗೆಯಲ್ಲಿ ಹೊಸ ಪ್ರಯೋಗ ಮಾಡಲಾಗಿದೆ. ಮಳೆಗಾಲದಲ್ಲಿ (Karnataka Rain) ಕಿರು ಸೇತುವೆ ಇಲ್ಲದೆ ಕಂಗಾಲಾಗಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ತಮ್ಮ ಕ್ಷೇತ್ರದ ಜನರಿಗೆ ನೆರವು ನೀಡುವ ಉದ್ದೇಶಕ್ಕೆ ಕ್ರೌಡ್‌ ಫಂಡಿಂಗ್ ಮೂಲಕ ಅತ್ಯಂತ ಕಡಿಮೆ ವೆಚ್ಚದಲ್ಲಿ ಸೇತುವೆ ನಿರ್ಮಿಸಿದ್ದಾರೆ. ಅದು ಕೂಡ ಹಳೆ ಲಾರಿಯ ಚಾಸ್ಸಿ ಬಳಸಿ ಕಿರು ಸೇತುವೆಯನ್ನು ನಿರ್ಮಿಸಲಾಗಿದೆ.

ಕಳೆದ ಬಾರಿ ಸಮರ್ಪಕ ಕಿರು ಸೇತುವೆ ಇಲ್ಲದೆ ಶಾಲಾ ಬಾಲಕಿ ನೀರು ಪಾಲಾಗಿದ್ದಳು. ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಆಗುವ ಸಾವು- ನೋವು ತಪ್ಪಿಸಲು ಸಮೃದ್ಧ ಬೈಂದೂರು ಮತ್ತು ಅರುಣಾಚಲ ಟ್ರಸ್ಟ್ ಸಹಭಾಗಿತ್ವದಲ್ಲಿ ಸೇತುವೆ ನಿರ್ಮಿಸಲಾಗಿದೆ.

ಮಳೆಗಾಲದಲ್ಲಿ ಸುಮಾರು 30 ಮನೆಗಳಿಗೆ ಸಂಪರ್ಕವೇ ಇಲ್ಲದೇ ಕಂಗಲಾಗಿದ್ದರು. ಮೂರು ಲಾರಿಗಳ ಹಳೆಯ ಚಾಸ್ಸಿ ಬಳಸಿ ಕಿರು ಸೇತುವೆಯನ್ನು ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಕಡಿಮೆ ಖರ್ಚಿನಲ್ಲಿ ಲಾರಿಯ ಚಾಸ್ಸಿ, ಬೋರ್ ವೇಲ್ ಪೈಪ್, ಜಿಎ ಪೈಟ್, ಕಬ್ಬಿಣ ತಗಡು ಬಳಸಿ ಸೇತುವೆ ನಿರ್ಮಿಸಲಾಗಿದೆ. ಅಂದಾಜು 2 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಕಿರು ಸೇತುವೆ ನಿರ್ಮಿಸಲಾಗಿದೆ.

udupi news
udupi news

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Ranbir Kapoor casanova opens up about being labelled a cheater
ಬಾಲಿವುಡ್4 mins ago

Ranbir Kapoor: ʻಸ್ತ್ರೀಲೋಲʼ, ʻಚೀಟರ್ʼ ಎನ್ನುವ ಹಣೆಪಟ್ಟಿಯೊಂದಿಗೆ ಬದುಕುತ್ತಿದ್ದೇನೆ ಎಂದ ರಣಬೀರ್ ಕಪೂರ್!

CM Siddaramaiah
ಪ್ರಮುಖ ಸುದ್ದಿ8 mins ago

CM Siddaramaiah: ಇಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆ, ಇಲ್ಲಿದೆ ಅಜೆಂಡಾ

ಕ್ರೀಡೆ9 mins ago

PKL 2024: ಪ್ರೊ ಕಬಡ್ಡಿ ಲೀಗ್ ಆಟಗಾರರ ಹರಾಜು ಪ್ರಕ್ರಿಯೆಗೆ ದಿನಾಂಕ ನಿಗದಿ

Paris Olympics 2024
ಕ್ರೀಡೆ1 hour ago

Paris Olympics 2024: ನೀರಿನಾಳದಲ್ಲಿ ಅಭ್ಯಾಸ ನಡೆಸಿದ ನೀರಜ್ ಚೋಪ್ರಾ; ವಿಡಿಯೊ ವೈರಲ್​

PM Narendra Modi Live
ದೇಶ1 hour ago

PM Narendra Modi Live: ಕಾರ್ಗಿಲ್‌ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ, ವೀರ ಯೋಧರಿಗೆ ಗೌರವ ನಮನ-ಲೈವ್‌ ಇಲ್ಲಿ ವೀಕ್ಷಿಸಿ

police firing hubli
ಕ್ರೈಂ1 hour ago

Police Firing: ದರೋಡೆ, ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆ

Actor Yash Case Against Toxic Movie Producers For Building A Set On Forest Land
ಸ್ಯಾಂಡಲ್ ವುಡ್1 hour ago

Actor Yash: ಯಶ್‌ ನಟನೆಯ ʻಟಾಕ್ಸಿಕ್‌ʼ ಸಿನಿಮಾ ವಿರುದ್ಧ ದೂರು ದಾಖಲು

Women's Asia Cup
ಕ್ರೀಡೆ2 hours ago

Women’s Asia Cup: ಇಂದು ಸೆಮಿಫೈನಲ್‌ ಕಾದಾಟ: ಬಾಂಗ್ಲಾ ಸವಾಲಿಗೆ ಭಾರತ ಸಜ್ಜು

murder in PG koramangala
ಕ್ರೈಂ2 hours ago

Murder In PG: ಕೃತಿ ಕುಮಾರಿಗೆ ಮನಬಂದಂತೆ ಇರಿದ ಪಾತಕಿ, ನೋಡ್ತಾ ಇದ್ರೂ ಸಹಾಯಕ್ಕೆ ಬಾರದ ಯುವತಿಯರು

Actor Darshan wife Vijayalakshmi Darshan Visit Kollur Temple
ಸ್ಯಾಂಡಲ್ ವುಡ್2 hours ago

Actor Darshan: ದರ್ಶನ್‌ಗಾಗಿ ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ವಿಜಯಲಕ್ಷ್ಮಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ18 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್21 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ22 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ23 hours ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ6 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌