ಕೊರಟಗೆರೆ: ತಾಲೂಕಿನ ಅರಸಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾತೃವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ಗೋವಿಂದ ರಾಜು ಮಾತನಾಡಿ, ಹೊಸ ವರ್ಷದ ಅಂಗವಾಗಿ ಮಾತೃವಂದನಾ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ವಿದ್ಯಾರ್ಥಿಗಳು ತಮ್ಮ ತಾಯಂದಿರಿಗೆ ಪಾದಪೂಜೆ ಮಾಡಿ, ಗೌರವಿಸುವ ಮೂಲಕ ಪ್ರೌಢಶಾಲೆಯಲ್ಲಿ ವಿಶೇಷವಾಗಿ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವಂತಹ ಈ ಕಾರ್ಯಕ್ರಮವು ಅರ್ಥಪೂರ್ಣವಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: IND vs SA 2nd Test: ಪಂದ್ಯ ಗೆದ್ದು ನೂತನ ದಾಖಲೆ ಬರೆದ ಭಾರತ ತಂಡ
ಈ ವೇಳೆ ಪೋಷಕರಾದ ಮಂಜುಳಾ ಮಾತನಾಡಿ, ಮಾತೃವಂದನಾ ಕಾರ್ಯಕ್ರಮವು ಅತ್ಯುತ್ತಮವಾಗಿದೆ. ಶಾಲಾ ಮಕ್ಕಳು ತಮ್ಮ ತಾಯಂದಿರಿಗೆ ಪಾದಪೂಜೆ ಮಾಡುವ ಮೂಲಕ ಗೌರವಿಸುವುದರೊಂದಿಗೆ ಹೊಸ ವರ್ಷವನ್ನು ಬಹಳ ಸಂಭ್ರಮದಿಂದ ಆಚರಣೆ ಮಾಡಿದ್ದಾರೆ ಎಂದು ಹೇಳಿದರು.
ಶಾಲೆಯ ಮುಖ್ಯೋಪಾಧ್ಯಾಯ ವಜೀರ್ ಖಾನ್ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಿದ್ದರು.
ಇದನ್ನೂ ಓದಿ: Vastu Tips: ವಾಸ್ತು ಪ್ರಕಾರ ನಿಮ್ಮ ಅಡುಗೆ ಕೋಣೆ ಹೀಗಿರಲಿ…
ಈ ಸಂದರ್ಭದಲ್ಲಿ ಶಾಲೆಯ ಸಹಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.