ಚಿಕ್ಕನಾಯಕನಹಳ್ಳಿ: ಲೋಕೋಪಯೋಗಿ ಇಲಾಖೆ ವತಿಯಿಂದ ಅಂದಾಜು 3 ಕೋಟಿ ರೂ ವೆಚ್ಚದಲ್ಲಿ ತಾಲೂಕಿನ ಹಂದನಕೆರೆ ಹೋಬಳಿಯ ಗೂಬೆಹಳ್ಳಿ ಮತ್ತು ನಿರುವಗಲ್ ಗ್ರಾಮಗಳ ಮಧ್ಯೆ ಸಂಪರ್ಕ ಕಲ್ಪಿಸುವ ನೂತನ ಸೇತುವೆ (New Bridge) ನಿರ್ಮಾಣಕ್ಕೆ ಕ್ಷೇತ್ರದ ಶಾಸಕ ಸಿ.ಬಿ. ಸುರೇಶ್ ಬಾಬು, ಶುಕ್ರವಾರ ಬೆಳಗ್ಗೆ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕ ಸಿ.ಬಿ. ಸುರೇಶ್ ಬಾಬು ಮಾತನಾಡಿ, ಹಂದನಕೆರೆ ಹೋಬಳಿಯ ಗೂಬೆಹಳ್ಳಿ ಮತ್ತು ನಿರುವಗಲ್ ಗ್ರಾಮಗಳ ಮಧ್ಯೆ ಹರಿದುಹೋಗುವ ಹಳ್ಳದಿಂದ ಗ್ರಾಮಸ್ಥರ ದಿನನಿತ್ಯ ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು. ಈ ಹಿನ್ನಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಈ ನೂತನ ಸೇತುವೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: GDP Growth: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ.7.3 ಬೆಳವಣಿಗೆ!
ಕಾರ್ಯಕ್ರಮದಲ್ಲಿ ಬೆಳಗುಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಣ್ಣ, ನಿರುವಗಲ್ ಗ್ರಾಮ ಪಂಚಾಯಿತಿ ಸದಸ್ಯರಾದ ಜಯಮ್ಮ ಕೃಷ್ಣಪ್ಪ, ಆಂಜಿನಪ್ಪ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಮಚಂದ್ರಯ್ಯ, ಮುಖಂಡರಾದ ಗೂಬೆಹಳ್ಳಿ ಹನುಮೇಗೌಡ, ಪರಮೇಶ್, ಚೇತನ್, ಕೆ.ಪಿ. ಚಂದ್ರು, ದೇವರಾಜು, ರಂಗಸ್ವಾಮಿ ಸೇರಿದಂತೆ ಗ್ರಾಮಸ್ಥರು ಹಾಗೂ ಇತರರು ಪಾಲ್ಗೊಂಡಿದ್ದರು.