ಪಾವಗಡ: ಪಟ್ಟಣದ ಸುಪ್ರಸಿದ್ಧ ಶ್ರೀ ಶನಿ ಮಹಾತ್ಮ ದೇವರ ಬ್ರಹ್ಮರಥೋತ್ಸವವು ಶನಿವಾರ ಮಧ್ಯಾಹ್ನ ವಿಜೃಂಭಣೆಯಿಂದ (Tumkur News) ನೇರವೇರಿತು.
ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಶ್ರೀ ಶನಿ ಮಹಾತ್ಮ ದೇವರಿಗೆ ವಿಶೇಷ ಪೂಜೆ, ಅಭಿಷೇಕ, ಅಲಂಕಾರ, ಮಹಾಮಂಗಳಾರತಿ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು.
ಇದನ್ನೂ ಓದಿ: Money Guide: EPF vs PPF; ಈ ಎರಡು ಯೋಜನೆಗಳಲ್ಲಿ ಯಾವುದು ಉತ್ತಮ? ಇಲ್ಲಿದೆ ಸಂಪೂರ್ಣ ವಿವರ
ಪಾವಗಡ ಪಟ್ಟಣ ಸೇರಿದಂತೆ ರಾಜ್ಯದ ನಾನಾ ಕಡೆಗಳಿಂದ ಸಾವಿರಾರು ಭಕ್ತರು ಆಗಮಿಸಿ, ದೇವರ ದರ್ಶನ ಪಡೆದರು. ಮಧ್ಯಾಹ್ನ ರಥೋತ್ಸವದ ವೇಳೆ ಗರುಡ ಪಕ್ಷಿಯೊಂದು ರಥದ ಸುತ್ತ ಪ್ರದಕ್ಷಿಣೆ ಹಾಕಿತು. ಪ್ರತಿ ವರ್ಷ ರಥೋತ್ಸವದ ಸಮಯಕ್ಕೆ ಗರುಡ ಪಕ್ಷಿ ಬರುವುದು ವಾಡಿಕೆ.
ರಥೋತ್ಸವದ ಅಂಗವಾಗಿ ದೇವಸ್ಥಾನದ ವತಿಯಿಂದ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಏರ್ಪಡಿಸಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ದೇವರ ದರ್ಶನ ಪಡೆದರು.
ಇದನ್ನೂ ಓದಿ: Aadhaar seeding: ಪಹಣಿಗೂ ಮಾಡಿ ಆಧಾರ್ ಲಿಂಕ್; ‘ಲಿಂಕಿಂಗ್’ ಲೋಕದಲ್ಲಿ ರೈತ ಹೈರಾಣ!
ಭಕ್ತನ ಕಾಲಿಗೆ ಗಾಯ
ರಥ ಎಳೆಯುವ ಸಂದರ್ಭದಲ್ಲಿ ಪಾವಗಡದ ಭಕ್ತ ರಾಮಕೃಷ್ಣ ರೆಡ್ಡಿ ಎಂಬುವವರ ಕಾಲಿನ ಮೇಲೆ ರಥದ ಚಕ್ರ ಹರಿದು ಗಂಭೀರ ಗಾಯಗಳಾಗಿರುವುದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಯಿತು.