Site icon Vistara News

Tumkur News: ಶಿರಾ ನಗರದಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ; ಜನತೆ ಹೈರಾಣು

problem of stray dogs has increased in Shira

ಶಿರಾ: ನಗರದ ನಾನಾ ಕಡೆ ಬೀದಿ ನಾಯಿಗಳ (Stray Dogs) ಹಾವಳಿ ಮಿತಿಮೀರಿದ್ದು, ಜನಸಾಮಾನ್ಯರು (Publics) ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ನಗರದ ವಿವಿಧ ಬಡಾವಣೆಗಳಲ್ಲಿ ಬೀದಿ ನಾಯಿಗಳ ಉಪಟಳದಿಂದಾಗಿ ಸಾರ್ವಜನಿಕರು, ಮಹಿಳೆಯರು, ಚಿಕ್ಕ ಮಕ್ಕಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಹಿಂಡು ಹಿಂಡಾಗಿ ಬೀದಿ ನಾಯಿಗಳು ರಸ್ತೆಯಲ್ಲಿ ಓಡಾಡುತ್ತಾ, ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸಿ, ಗಾಯಗೊಳಿಸುತ್ತಿವೆ. ನಗರದ ವಿವಿಧ ಬಡಾವಣೆಗಳಲ್ಲಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತಿವೆ. ಇದರಿಂದ ಸ್ಥಳೀಯ ನಿವಾಸಿಗಳಲ್ಲಿ ಅತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Money Guide: ಅಕ್ಟೋಬರ್ 1ರ ಮೊದಲೇ ಇದೆಲ್ಲ ಮಾಡಿಕೊಳ್ಳಿ… ಇಲ್ಲದಿದ್ದರೆ ಹಣ ಕಳೆದುಕೊಳ್ಳುವಿರಿ!

ಇತ್ತೀಚೆಗೆ ನಗರದ ರಸ್ತೆಯಲ್ಲಿ ರಾತ್ರಿ ವೇಳೆ ದಂಪತಿ ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಅವರ ಮೇಲೆ ನಾಯಿಗಳ ಹಿಂಡು ದಾಳಿ ನಡೆಸಿದ್ದು, ದಂಪತಿ ರಸ್ತೆಯ ವಿಭಜಕದ ಮೇಲೆ ಬಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಗೆ ತೀವ್ರ ಸ್ವರೂಪದ ಗಾಯಗಳಾದ ಘಟನೆಯನ್ನು ನಗರದ ಜನತೆ ಇನ್ನೂ ಮರೆತಿಲ್ಲ.

ನಗರದಲ್ಲಿ ಬೀದಿ ನಾಯಿಗಳು ಚಿಕ್ಕ ಮಕ್ಕಳ ಮೇಲೂ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆಗಳೂ ನಡೆದಿವೆ. ಇದರಿಂದ ಮಕ್ಕಳು ಹೊರಹೋಗಲು ಭಯಪಡುವ ವಾತಾವರಣ ಸೃಷ್ಟಿಯಾಗಿದೆ. ನಗರದ ಹಳೇ ಆಸ್ಪತ್ರೆ ರಸ್ತೆ, ಮಧುಗಿರಿ ರಸ್ತೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನರು ರೋಸಿ ಹೋಗಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗಲು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಆದರೆ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮೌನವಹಿಸಿರುವುದು ಸರಿಯಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರಸಭೆ ನಿರ್ಲಕ್ಷ್ಯ

ನಗರದಲ್ಲಿ ಬೀದಿ ನಾಯಿಗಳ ಉಪಟಳವನ್ನು ನಿಯಂತ್ರಿಸಲು ಸೂಕ್ತ ಕ್ರಮಕೈಗೊಳ್ಳಬೇಕಾದ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: Viral Video: ಪಂದ್ಯ ಮುಗಿದರೂ ತಡರಾತ್ರಿವರೆಗೂ ಬ್ಯಾಟಿಂಗ್​ ಅಭ್ಯಾಸ ನಡೆಸಿದ ಟೀಮ್​ ಇಂಡಿಯಾ ಆಟಗಾರ

ನಗರದಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ನಗರಸಭೆ ಅಧಿಕಾರಿಗಳು ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ಶಾಲೆಗೆ ನಿರ್ಭೀತಿಯಿಂದ ಹೋಗಿ ಬರುವ ವಾತಾವರಣ ಸೃಷ್ಟಿಯಾಗಬೇಕಿದೆ ಎಂದು ನಗರದ ನಿವಾಸಿಗಳು ಒತ್ತಾಯಿಸಿದ್ದಾರೆ.

Exit mobile version