ಶಿರಾ: ಹಿಂದೂ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ, ಶಿರಾದ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ಹಾಗೂ ಹಿಂದೂ ಜಾಗರಣ ವೇದಿಕೆ ಜಂಟಿಯಾಗಿ ನಗರದಲ್ಲಿ (Tumkur News) ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಹಿಂದೂ ಯುವಕನ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ಹಾಗೂ ಹಿಂದೂ ಜಾಗರಣ ವೇದಿಕೆಯ ಮುಖಂಡರು ಹಾಗೂ ಕಾರ್ಯಕರ್ತರು ನಗರದ ದುರ್ಗಾದೇವಿ ದೇವಸ್ಥಾನದಿಂದ ಪ್ರವಾಸಿ ಮಂದಿರದ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ಬಳಿಕ ಪ್ರಭಾರ ಗ್ರೇಡ್ 2 ತಹಸೀಲ್ದಾರ್ ಶಿವಾನಂದ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಏರಿಕೆ; ಇಷ್ಟಿದೆ ಇಂದಿನ ದರ
ಕಳೆದ ಮಾ.03 ರಂದು ಹಿಂದೂ ಯುವಕ ರಘು ಎಂಬುವರರು ಕೊರಿಯರ್ ಸರಬರಾಜು ಮಾಡಲೆಂದು ನಗರದ ವಿಳಾಸಗಾರರಿಗೆ ತಲುಪಿಸಲೆಂದು ಹೋದ ವೇಳೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಕುರಿತು ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಕೂಡಲೇ ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕರರು ಆಗ್ರಹಿಸಿದರು.
ಇದನ್ನೂ ಓದಿ: Namma Metro: ನಮ್ಮ ಮೆಟ್ರೋ ಬೋಗಿಗೆ ಎಂಟ್ರಿ ಕೊಟ್ಟ ಕರಿಮಣಿ ಮಾಲೀಕ!
ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡರಾದ ಮಂಜುನಾಥ್, ಗಿರಿಧರ್ ಹಾಗೂ ನಗರಸಭಾ ಸದಸ್ಯೆ ಉಮಾ ವಿಜಯ್‌ರಾಜ್, ಮಾಜಿ ನಗರಸಭಾ ಸದಸ್ಯ ನಟರಾಜ್ ಸೇರಿದಂತೆ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ಕಾರ್ಯಕರ್ತರು ಹಾಗೂ ಇತರರು ಪಾಲ್ಗೊಂಡಿದ್ದರು.