ಶಿರಾ: ರೈತರ ಪಂಪ್‌ಸೆಟ್‌ಗಳಿಗೆ ಹಾಗೂ ತೋಟದಮನೆ ವಾಸಿಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ (Power Supply) ಒತ್ತಾಯಿಸಿ, ತಾಲೂಕಿನ ಬುಕ್ಕಾಪಟ್ಟಣ ಹೋಬಳಿ ಸುತ್ತಮುತ್ತಲಿನ ಗ್ರಾಮಸ್ಥರು, ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ಸಂಘಟನೆಯ ನೇತೃತ್ವದಲ್ಲಿ ವಿದ್ಯುತ್ ವಿತರಣಾ ಕೇಂದ್ರದ ಎದುರು ಪ್ರತಿಭಟನೆ (Protest) ನಡೆಸಿದರು.
ಇತ್ತೀಚೆಗೆ ರೈತರಿಗೆ ಸಮರ್ಪಕವಾದ ವಿದ್ಯುತ್ ಪೂರೈಕೆ ಮಾಡುವಲ್ಲಿ ಬೆಸ್ಕಾಂ ವಿಫಲವಾಗಿದೆ. ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಸಿಂಗಲ್ ಫೇಸ್ ಮತ್ತು 3 ಫೇಸ್ ವಿದ್ಯುತ್ ಪೂರೈಕೆಯಾಗುತ್ತಿತ್ತು ಅದರೆ ಕಳೆದ 15 ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು ರಾತ್ರಿ ವೇಳೆ ಕೆಲವೇ ಗಂಟೆಗಳು ಮಾತ್ರ ಪೂರೈಕೆಯಾಗುತ್ತಿರುವುದರಿಂದ ರೈತರಿಗೆ ತೀವ್ರ ತೊಂದರೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ಹಿಂದೆ ವಿದ್ಯುತ್ ಪೂರೈಕೆ ಮಾಡುತ್ತಿದ್ದ ವ್ಯವಸ್ಥೆಯಂತೆ ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಸಿಂಗಲ್ ಮತ್ತು 3 ಫೇಸ್ ವಿದ್ಯುತ್ ಪೂರೈಕೆ ಮಾಡಬೇಕು, ತೋಟದ ಮನೆ ವಾಸಿಗಳಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಗ್ರಾಮಸ್ಥರು ಹಾಗೂ ರೈತರು ಒತ್ತಾಯಿಸಿದರು.
ಇದನ್ನೂ ಓದಿ: Big Pumpkin: ಹಿತ್ತಲಿನಲ್ಲಿ ಯಾರೂ ಎತ್ತಲಾರದಂಥ 1247 ಕೆಜಿ ತೂಕದ ಕುಂಬಳಕಾಯಿ ಬೆಳೆದ ಶಿಕ್ಷಕ!
ಬಳಿಕ ಬೆಸ್ಕಾಂ ಸಹಾಯಕ ಕಾರ್ಯಪಾಲಕರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಶ್ರೀನಿವಾಸ ಮೂರ್ತಿ, ನಾಗರಾಜ್, ಕುಮಾರಸ್ವಾಮಿ ಸೇರಿದಂತೆ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ಸಂಘಟನೆಯ ಮುಖಂಡರು ಮತ್ತು ಇತರರು ಪಾಲ್ಗೊಂಡಿದ್ದರು.