ಶಿರಾ: ತಾಲೂಕಿನ ಮೇಲುಕುಂಟೆ ಗ್ರಾಮದ ಐತಿಹಾಸಿಕ ಪ್ರಸಿದ್ಧ ನವನೀತ ಗೋಪಾಲಕೃಷ್ಣ ದೇವಾಲಯದಲ್ಲಿ (Navaneetha Gopalakrishna Temple) ಗುರುವಾರ ಬನದ ಹುಣ್ಣಿಮೆ ಅಂಗವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ದೇವಾಲಯದ ಅಡಳಿತ ಮಂಡಳಿ ಹಾಗೂ ಭಕ್ತಾಧಿಗಳಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ದೇವಾಲಯದ ಅರ್ಚಕ ಚಕ್ರಪಾಣಿ ಅವರ ನೇತೃತ್ವದಲ್ಲಿ ದೇವಾಲಯದ ಆವರಣದಲ್ಲಿ ಪೂಜೆಯನ್ನು ನೆರವೇರಿಸಲಾಯಿತು.
ಇದನ್ನೂ ಓದಿ: Superfood Tomato: ಬಲ್ಲಿರಾ ಟೊಮೆಟೊ ಎಂಬ ಹಣ್ಣಿನ ಸದ್ಗುಣಗಳನ್ನು?
ಬನದ ಹುಣ್ಣಿಮೆ ಅಂಗವಾಗಿ ಶ್ರೀ ನವನೀತ ಗೋಪಾಲಕೃಷ್ಣ ದೇವರಿಗೆ ಅಭಿಷೇಕ, ವಿಶೇಷ ಪೂಜೆ, ಅಲಂಕಾರ, ಮಹಾಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿದವು.
ಇದನ್ನೂ ಓದಿ: Fitness: ಈ ವ್ಯಕ್ತಿಯ ವಯಸ್ಸು 93, ಆದರೆ ದೇಹ ಮಾತ್ರ 40ರ ಹರೆಯದ್ದು! ಇದು ಹೇಗೆ ಸಾಧ್ಯ?
ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ಶ್ರೀ ಸಾಮೂಹಿಕ ಸತ್ಯ ನಾರಾಯಣ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಭಕ್ತಾಧಿಗಳಿಗೆ ಪ್ರಸಾದ ವ್ಯವಸ್ಥೆ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮೇಲುಕುಂಟೆ ಗ್ರಾಮಸ್ಥರು ಸೇರಿದಂತೆ ನಾನಾ ಕಡೆಗಳಿಂದ ಭಕ್ತಾಧಿಗಳು ಆಗಮಿಸಿ, ದೇವರ ದರ್ಶನ ಪಡೆದು, ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.