ಕೊರಟಗೆರೆ: ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ 18ನೇ ವಾರ್ಷಿಕೋತ್ಸವವನ್ನು ಜೂ.9ರಂದು ಆಯೋಜನೆ ಮಾಡಲಾಗಿದೆ ಎಂದು ಸಿದ್ದರಬೆಟ್ಟದ ಶ್ರೀಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ (Tumkur News) ತಿಳಿಸಿದರು.
ತಾಲೂಕಿನ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದಲ್ಲಿ 18ನೇ ವಾರ್ಷಿಕೋತ್ಸವದ ಪೂರ್ವಭಾವಿ ಸಭೆಯಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಠದ ಸದ್ಭಕ್ತರ ಸಹಕಾರದಿಂದ ಶ್ರೀ ಮಠದ 18ನೇ ವಾರ್ಷಿಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಶ್ರೀ ಮಠದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆದು ದೇಶ ಸೇರಿದಂತೆ ರಾಜ್ಯದ ಮೂಲೆ ಮೂಲೆಯಲ್ಲಿ ಉನ್ನತ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಬಂಗಾರ ಖರೀದಿಸುವವರಿಗೆ ಇಲ್ಲಿದೆ ಉಪಯುಕ್ತ ಟಿಪ್ಸ್
ಇನ್ಪೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರ ಸಲಹೆಯಂತೆ ಕಳೆದ 17 ವರ್ಷಗಳಿಂದಲೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಿಕೊಂಡು ಬಂದಿದ್ದು, ಸುಮಾರು 800ಕ್ಕೂ ಹೆಚ್ಚು ವಿವಾಹಗಳು ನಡೆದಿದೆ. ಇದರಿಂದ ಸಾಕಷ್ಟು ಬಡ ಕುಟುಂಬಗಳಿಗೆ ಅನುಕೂಲವಾಗಿದೆ ಎಂದರು.
ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕಾ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಭಗವತ್ಪಾದರ ದಿವ್ಯ ಸಾನಿಧ್ಯದಲ್ಲಿ ಮತ್ತು ಸಿದ್ದರಬೆಟ್ಟದ ಶ್ರೀಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ 18ನೇ ವಾರ್ಷಿಕೋತ್ಸವ, ಶ್ರೀ ಜಗದ್ಗುರು ರೇಣುಕಾಚಾರ್ಯರ ಮತ್ತು ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತ್ಯೋತ್ಸವ, ಉಚಿತ ಸಾಮೂಹಿಕ ವಿವಾಹ, ಜನಜಾಗೃತಿ ಧರ್ಮ ಸಮಾವೇಶ ನಡೆಯಲಿದೆ ಎಂದು ಹೇಳಿದರು.
ಇದನ್ನೂ ಓದಿ: Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ
ಈ ಸಂದರ್ಭದಲ್ಲಿ ತುಮಕೂರು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್, ತಾಲೂಕು ಉಪಾಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ನಾಗರಾಜು, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ನಾಗರಾಜು, ಬಿಜೆಪಿ ಮಂಡಲದ ತಾಲೂಕು ಅಧ್ಯಕ್ಷ ದರ್ಶನ್, ಪರ್ವತಯ್ಯ ಸೇರಿದಂತೆ ಮಠದ ಭಕ್ತರು ಹಾಜರಿದ್ದರು.