Site icon Vistara News

Tumkur News: ಕೊರಟಗೆರೆ ಸರ್ಕಾರಿ ಶಾಲೆಯಲ್ಲಿ ಶುದ್ಧ ಜಲ ಅಭಿಯಾನ ಕಾರ್ಯಕ್ರಮ

Shuddha jal abhiyan programme at koratagere

ಕೊರಟಗೆರೆ: ಪಟ್ಟಣದ ಕೋಟೆ ಮಾರಮ್ಮ ದೇವಸ್ಥಾನದ ಬಳಿಯಿರುವ ಕೋಟೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶುದ್ಧ ಗಂಗಾ ಕುಡಿಯುವ ನೀರಿನ ಘಟಕದ ವತಿಯಿಂದ ಶುದ್ದ ಜಲ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿಕೊಂಡು ಬಂದಿದೆ. ಈ ಎಲ್ಲಾ ಕಾರ್ಯಕ್ರಮಗಳು ಸಮುದಾಯದ ಪಾಲ್ಗೊಳ್ಳುವಿಕೆಯಿಂದ ಅನುಷ್ಠಾನ ಮಾಡುತ್ತಿರುವುದರಿಂದ ಯಶಸ್ಸು ಸಾಧ್ಯವಾಗಿದೆ. ಡಾ. ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಸಮುದಾಯದ ಅಭಿವೃದ್ಧಿಯ ಆಶಯವನ್ನಿಟ್ಟುಕೊಂಡು ಹಲವಾರು ಕಾರ್ಯಕ್ರಮಗಳಿಗೆ ಪ್ರೇರೇಪಣೆ ಮತ್ತು ಮಾರ್ಗದರ್ಶನ ನೀಡುತ್ತಿದ್ದಾರೆ. ಇಂತಹ ಆಶಯದೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವೇ ಶುದ್ಧಗಂಗಾ ಕಾರ್ಯಕ್ರಮವಾಗಿದೆ ಎಂದರು.

ಇದನ್ನೂ ಓದಿ: IND vs SA 2nd Test: ಪಂದ್ಯ ಗೆದ್ದು ನೂತನ ದಾಖಲೆ ಬರೆದ ಭಾರತ ತಂಡ

ಕೊರಟಗೆರೆ ತಾಲೂಕಿನಲ್ಲಿ ಆರು ಶುದ್ಧಗಂಗಾ ಘಟಕಗಳಿವೆ, ಘಟಕಗಳಲ್ಲಿ ಐದು ರೂಪಾಯಿಗೆ 20 ಲೀಟರ್ ನೀರು ಕೊಡುತ್ತಿದ್ದೇವೆ. ನಮ್ಮ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ 2000 ಜನ ಬಳಕೆದಾರರು ದಿನವಹಿ ನೀರನ್ನು ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ತಿಳಿಸಿದರು.

ಬಳಿಕ ಶಾಲಾ ಮಕ್ಕಳಿಗೆ, ಅತಿಯಾದ ಫ್ಲೋರೈಡ್‌ಯುಕ್ತ ಕಲುಷಿತ ನೀರಿನಿಂದ ಬರುವ ರೋಗಗಳು ಯಾವ ರೀತಿ ಹರಡುತ್ತದೆ. ಶುದ್ಧ ಕುಡಿಯುವ ನೀರಿನ ಬಳಕೆಯಿಂದ ಆಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ: Vastu Tips: ವಾಸ್ತು ಪ್ರಕಾರ ನಿಮ್ಮ ಅಡುಗೆ ಕೋಣೆ ಹೀಗಿರಲಿ…

ಈ ಸಂದರ್ಭದಲ್ಲಿ ಶಾಲೆ ಮುಖ್ಯ ಶಿಕ್ಷಕ ಕೃಷ್ಣಮೂರ್ತಿ, ಸಹ ಶಿಕ್ಷಕರು, ಆಶಾ ಕಾರ್ಯಕರ್ತರು, ಶುದ್ಧ ಕುಡಿಯುವ ನೀರಿನ ಘಟಕದ ಮೇಲ್ವಿಚಾರಕ ವಿನೋದ್ ಕುಮಾರ್, ರಾಮಕೃಷ್ಣ, ಛಾಯದೇವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version