ಕೊರಟಗೆರೆ: ತಾಲೂಕಿನ ಸಿ.ಎನ್. ದುರ್ಗಾ ಹೋಬಳಿಯ ಜೆಟ್ಟಿ ಅಗ್ರಹಾರ ಗ್ರಾಮದ ಆದಿ ದೇವತೆ ಶ್ರೀ ಬೇವಿನಾಳಮ್ಮ ದೇವಿಯ ಪಲ್ಲಕ್ಕಿ ಉತ್ಸವವು ಶುಕ್ರವಾರ ವಿಜೃಂಭಣೆಯಿಂದ ಶ್ರದ್ಧಾ ಭಕ್ತಿಯಿಂದ (Tumkur News) ಜರುಗಿತು.
ಪಲ್ಲಕ್ಕಿ ಉತ್ಸವದ ಅಂಗವಾಗಿ ದೇವಾಲಯವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು. ಸಂಜೆ 6 ಗಂಟೆಯಿಂದಲೇ ಶ್ರೀ ಬೇವಿನಾಳಮ್ಮ ದೇವಿಗೆ ವಿಶೇಷ ಪೂಜೆ, ಅಲಂಕಾರ, ಮಹಾಮಂಗಳಾರತಿ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು.
ಇದನ್ನೂ ಓದಿ: Davanagere News: ಹೊನ್ನಾಳಿಯಲ್ಲಿ ಶ್ರದ್ಧಾ ಭಕ್ತಿಯಿಂದ ಮಹಾಶಿವರಾತ್ರಿ ಆಚರಣೆ
ಇನ್ನು ಮೆರವಣಿಗೆ ಸಾಗುವ ಮುಖ್ಯ ಬೀದಿಗಳಲ್ಲಿ ತಳಿರು ತೋರಣ, ರಂಗೋಲಿಗಳು, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಲಂಕೃತ ಹೂವಿನ ಪಲ್ಲಕ್ಕಿಯಲ್ಲಿ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ ಜರುಗಿತು.
ಇದನ್ನೂ ಓದಿ: BCCI: ಐತಿಹಾಸಿಕ ಗೆಲುವಿನ ಬೆನ್ನಲ್ಲೇ ಟೆಸ್ಟ್ ಆಟಗಾರರಿಗೆ ವಿಶೇಷ ವೇತನ ಘೋಷಣೆ ಮಾಡಿದ ಬಿಸಿಸಿಐ
ಪಲ್ಲಕ್ಕಿ ಉತ್ಸವದ ಅಂಗವಾಗಿ ಅಗ್ರಹಾರ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.