ಕೊರಟಗೆರೆ: ಮಾ. 25ರಿಂದ ಏಪ್ರಿಲ್ 6ರವರೆಗೆ 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಅಂತಿಮ ಪರೀಕ್ಷೆಗಳು ನಡೆಯಲಿದ್ದು, ಕೊರಟಗೆರೆ ತಾಲೂಕಿನಲ್ಲಿ ಒಟ್ಟು 2348 ವಿದ್ಯಾರ್ಥಿಗಳು ನೋಂದಣಿ (Tumkur News) ಮಾಡಿಸಿಕೊಂಡಿದ್ದಾರೆ.
ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 2348 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಹೊಸ ವಿದ್ಯಾರ್ಥಿಗಳು- 2279, ಮರು ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ- 14, ಖಾಸಗೀ ವಿದ್ಯಾರ್ಥಿಗಳ ಸಂಖ್ಯೆ- 55 ಆಗಿದ್ದು, ಒಟ್ಟು 2348 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ.
ಇದನ್ನೂ ಓದಿ: Uttara Kannada News: ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ಇಂದಿನಿಂದ ಹೆಚ್ಚುವರಿ ವಿಶೇಷ ಬಸ್
ಮಾ.25 ರಂದು ಪ್ರಥಮ ಭಾಷೆ, ಮಾ.27ರಂದು ಸಮಾಜ ವಿಜ್ಞಾನ, ಮಾ.30 ರಂದು ವಿಜ್ಞಾನ, ಏಪ್ರಿಲ್ 02 ರಂದು ಗಣಿತ, ಏ. 04 ರಂದು ತೃತೀಯ ಭಾಷೆ, ಏ.06 ರಂದು ದ್ವಿತೀಯ ಭಾಷೆ ಪರೀಕ್ಷೆ ನಡೆಯಲಿವೆ.
ತಾಲೂಕಿನಲ್ಲಿ ಒಟ್ಟು 9 ಪರೀಕ್ಷಾ ಕೇಂದ್ರಗಳಿದ್ದು, ಇದರಲ್ಲಿ ಕ್ಲಸ್ಟರ್ ಸಹಿತ ಪರೀಕ್ಷಾ ಕೇಂದ್ರಗಳು 02, 7 ಕ್ಲಸ್ಟರ್ ರಹಿತ ಪರೀಕ್ಷಾ ಕೇಂದ್ರಗಳಾಗಿವೆ.
ಇದನ್ನೂ ಓದಿ: Karnataka Weather : ಒಳನಾಡು ಜಿಲ್ಲೆಗಳಲ್ಲಿ ಇನ್ನೆರಡು ದಿನ ಬರಲಿದೆ ಅಲ್ಪ ಮಳೆ! ಬೆಂಗಳೂರು ಕಥೆ ಏನು?
ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ಸಿಸಿಟಿವಿ, ಕ್ಯಾಮೆರಾ, ಡೆಸ್ಕ್ ಮತ್ತು ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವಿ. ನಟರಾಜು ಮತ್ತು ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿ ಟಿ.ಎಸ್ ಗಂಗಾಧರ್ ಮಾಹಿತಿ ನೀಡಿದ್ದಾರೆ.