ಶಿರಾ: ಮಾ. 25ರಿಂದ ಏಪ್ರಿಲ್ 6ರವರೆಗೆ 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಅಂತಿಮ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ. ಸಿ.ಎನ್. (Tumkur News) ತಿಳಿಸಿದ್ದಾರೆ.
ಇದನ್ನೂ ಓದಿ: Money Guide: ಗಮನಿಸಿ; ಏ. 1ರಿಂದ ಎನ್‌ಪಿಎಸ್ ವಹಿವಾಟಿಗೆ ಆಧಾರ್ ದೃಢೀಕರಣ ಕಡ್ಡಾಯ: ಏನಿದು ಹೊಸ ನಿಯಮ ? ಯಾಕಾಗಿ ?
ತಾಲೂಕಿನಲ್ಲಿ ಸರ್ಕಾರಿ 28, ಅನುದಾನಿತ 31, ಅನುದಾನ ರಹಿತ 26 ಒಟ್ಟು 85 ಪ್ರೌಢಶಾಲೆಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 4339 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಶಿರಾ ತಾಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳಿದ್ದು, ನಗರದಲ್ಲಿ 04 ಮತ್ತು ಗ್ರಾಮೀಣ ಭಾಗದಲ್ಲಿ 10 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ.
4086 ಹೊಸ ವಿದ್ಯಾರ್ಥಿಗಳು, 175 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 78 ಖಾಸಗಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 4339 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ.
ಇದನ್ನೂ ಓದಿ: Summer Skincare: ಬೇಸಿಗೆಯಲ್ಲಿ ನಿಮ್ಮ ಚರ್ಮ ಕಪ್ಪಾಗದಂತೆ ತಡೆಯಲು ಹೀಗೆ ಮಾಡಿ
ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ಸಿಸಿಟಿವಿ, ಕ್ಯಾಮೆರಾ, ಡೆಸ್ಕ್ ಮತ್ತು ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ. ಸಿ.ಎನ್ ಮಾಹಿತಿ ನೀಡಿದ್ದಾರೆ.