Site icon Vistara News

Tumkur News: ವಿದ್ಯಾರ್ಥಿಗಳಿಗೆ ಶಿಸ್ತು, ಶ್ರದ್ಧೆ, ನಿರಂತರ ಪರಿಶ್ರಮ ಅಗತ್ಯ: ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

Veerashaiva Lingayat Employees Conference Pratibha Puraskar programme inauguration at shira

ಶಿರಾ: ವಿದ್ಯಾರ್ಥಿಗಳು ಶಿಸ್ತು (Discipline), ಶ್ರದ್ಧೆ ಮತ್ತು ತಾಳ್ಮೆಯನ್ನು ಮೈಗೂಡಿಸಿಕೊಂಡು ನಿರಂತರ ಪರಿಶ್ರಮದಿಂದ ಅಧ್ಯಯನ (Study) ಮಾಡಿದರೆ ಜೀವನದಲ್ಲಿ ಉನ್ನತ ಸ್ಥಾನ ಪಡೆಯಬಹುದು ಎಂದು ಸಿದ್ಧರಬೆಟ್ಟ ಸುಕ್ಷೇತ್ರದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ನಗರದ ಶ್ರೀರಾಮ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಶಿರಾ ಘಟಕ ಹಾಗೂ ವೀರಶೈವ ಲಿಂಗಾಯತ ಸಮಾಜ ವತಿಯಿಂದ ಎರಡನೇ ವರ್ಷದ ತಾಲೂಕು ವೀರಶೈವ ಲಿಂಗಾಯತ ನೌಕರರ ಸಮಾವೇಶ, ಹಾಗೂ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.

ಇದನ್ನೂ ಓದಿ: Asian Games 2023: ಟಿಟಿಯಲ್ಲಿ ಕಂಚು ಗೆದ್ದ ಐಹಿಕಾ-ಸುತೀರ್ಥ ಜೋಡಿ

ನೌಕರರ ಕ್ಷೇಮಾಭಿವೃದ್ಧಿ ಸಂಘವು ಪ್ರತಿಭಾ ಪುರಸ್ಕಾರ ನಡೆಸುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದ ಶ್ರೀಗಳು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಯಶಸ್ವಿ ಹಾಗು ಉನ್ನತ ಹುದ್ದೆ ಪಡೆಯಬೇಕಾದರೆ ನಿರಂತರ ಪರಿಶ್ರಮ, ಶಿಸ್ತು, ಶ್ರದ್ಧೆ, ಸಮಯ ಪ್ರಜ್ಞೆ ಅತ್ಯಗತ್ಯ. ಸಾಧನೆ ಮತ್ತು ಗುರಿ ತಲುಪಲು ಬಡತನ ಅಡ್ಡಿಯಾಗದು. ಸಾಧಿಸುವ ಛಲ ಬೆಳಸಿಕೊಂಡಾಗ ಗುರಿ ಮಟ್ಟಲು ಸಾಧ್ಯ ಎಂದು ತಿಳಿಸಿದರು.

ಬಳಿಕ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.

ಇದನ್ನೂ ಓದಿ: Car Sales: ಆಟೊಮೊಬೈಲ್‌ ವಲಯ ಚೇತರಿಕೆ, ಸೆಪ್ಟೆಂಬರ್‌ನಲ್ಲಿ ಕಾರುಗಳ ಸಾರ್ವಕಾಲಿಕ ದಾಖಲೆ ಮಾರಾಟ

ಕಾರ್ಯಕ್ರಮದಲ್ಲಿ ಸ್ಥಾನಿಕ ಜಿಲ್ಲಾಧಿಕಾರಿ ಶಿವಾನಂದ್ ಜಿ., ತುಮಕೂರಿನ ವಿದ್ಯಾವಾಹಿನಿ ಸಮೂಹ ಸಂಸ್ಥೆಯ ಪ್ರದೀಪ್ ಕುಮಾರ್, ಪೊಲೀಸ್ ಇನ್ಸ್‌ಪೆಕ್ಟರ್ ನಿರ್ಮಲ ವಿ., ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಶಿರಾ ಘಟಕದ ಪದಾಧಿಕಾರಿಗಳು, ವೀರಶೈವ ಲಿಂಗಾಯತ ಸಮಾಜದ ಮುಖಂಡರು ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Exit mobile version