Tumkur News: ಊರಾಚೆ ಇರಿಸಿದ್ದ ಹಸುಗೂಸು, ಬಾಣಂತಿ ರಕ್ಷಿಸಿದ ನ್ಯಾಯಾಧೀಶರು - Vistara News

ತುಮಕೂರು

Tumkur News: ಊರಾಚೆ ಇರಿಸಿದ್ದ ಹಸುಗೂಸು, ಬಾಣಂತಿ ರಕ್ಷಿಸಿದ ನ್ಯಾಯಾಧೀಶರು

Tumkur News: ಶಿರಾ ತಾಲೂಕಿನ ಕುಂಟನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಸೂತಕ ಸಂಪ್ರದಾಯದ ಹೆಸರಲ್ಲಿ ಊರಾಚೆ ಇರಿಸಿದ್ದ ಒಂದು ತಿಂಗಳ ಹಸುಗೂಸು ಹಾಗೂ ಬಾಣಂತಿಯನ್ನು, ಶಿರಾ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಗೀತಾಂಜಲಿ ಅವರು ರಕ್ಷಿಸಿರುವ ಘಟನೆ ಜರುಗಿದೆ.

VISTARANEWS.COM


on

Suthaka tradition in Gollarhatti village of Kuntanahatti infant and mother rescued by judge
ಶಿರಾ ತಾಲೂಕಿನ ಕುಂಟನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಶಿರಾ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಗೀತಾಂಜಲಿ ಅವರು ಮೌಢ್ಯದ ಬಗ್ಗೆ ಅರಿವು ಮೂಡಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಾ: ಸೂತಕದ ಸಂಪ್ರದಾಯದ ಹೆಸರಲ್ಲಿ ಒಂದು ತಿಂಗಳ ಹಸುಗೂಸು ಹಾಗೂ ಬಾಣಂತಿಯನ್ನು ಊರಾಚೆ ಇರಿಸಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕುಂಟನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ (Tumkur News) ನಡೆದಿದೆ.

ಹೆರಿಗೆಯ ಬಳಿಕ 25 ವರ್ಷದ ಬಾಣಂತಿ ಬಾಲಮ್ಮ ಹಾಗೂ ಒಂದು ತಿಂಗಳ ಮಗುವನ್ನು ಗ್ರಾಮದ ಹೊರಗಿನ ಗುಡಿಸಲಿನಲ್ಲಿರಿಸಿದ್ದ ಮಾಹಿತಿಯ ಮೇರೆಗೆ ಶಿರಾ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಗೀತಾಂಜಲಿ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಮನೆಗೆ ಸೇರಿಸಿದ್ದಾರೆ.

ಇದನ್ನೂ ಓದಿ:Virat Kohli : 12 ವರ್ಷದ ಬಳಿಕ ಕೊಹ್ಲಿಯೇ ಇಲ್ಲದೆ ಟೆಸ್ಟ್ ಸರಣಿ ಆಡುತ್ತಿರುವ ಭಾರತ!

ಬಳಿಕ ಗ್ರಾಮದಲ್ಲಿ ಮೌಢ್ಯದ ಬಗ್ಗೆ ಅರಿವು ಮೂಡಿಸಿ, ಈ ರೀತಿಯ ಘಟನೆ ಮತ್ತೆ ಮರುಕಳಿಸಿದರೆ ಪ್ರಕರಣ ದಾಖಲು ಮಾಡುವುದಾಗಿ ಎಚ್ಚರಿಕೆ ಸಹ ನೀಡಿದ್ದಾರೆ.

ಇದನ್ನೂ ಓದಿ: Bandipur National Park: ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಕೆ: ಈಶ್ವರ ಖಂಡ್ರೆ

ಈ ಸಂದರ್ಭದಲ್ಲಿ ತಾಲೂಕು ಕಾಡುಗೊಲ್ಲ ಸಮುದಾಯದ ಮುಖಂಡರು, ತಾವರೆಕೆರೆ ಪೊಲೀಸ್ ಠಾಣಾ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Election Results 2024: ಡಿ.ಕೆ. ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ: ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

Election Results 2024: ಕರ್ನಾಟಕದಲ್ಲಿ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು ಎಂದು ಒಂದು ಅಹಿಂದ ಟೀಮ್ ಯಾವಾಗಲೂ ಕೆಲಸ ಮಾಡುತ್ತದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಬಾರದು ಎಂದು ಅವರ ಸಹೋದರರನನ್ನು ಸೋಲಿಸಲಾಗಿದೆ ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ.ಸುರೇಶ್‌ ಗೌಡ ಆರೋಪಿಸಿದ್ಧಾರೆ.

VISTARANEWS.COM


on

Election Results 2024
Koo

ತುಮಕೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ (Election Results 2024) ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ (DK Suresh) ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬಾರದು ಎಂದು ಈ ರೀತಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಿ. ಸುರೇಶ್ ಗೌಡ (B Suresh Gowda) ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕರ್ನಾಟಕದಲ್ಲಿ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು ಎಂದು ಒಂದು ಅಹಿಂದ ಟೀಮ್ ಯಾವಾಗಲೂ ಕೆಲಸ ಮಾಡುತ್ತದೆ. ಆ ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿ.ಕೆ. ಸುರೇಶ್ ಅವರನ್ನು ಸೋಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ಈ ಹಿಂದೆಯೇ ಹೇಳಿದ್ದೆ. ಸತೀಶ್ ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಇಷ್ಟೂ ಜನ ಸೇರಿ ಡಿ.ಕೆ. ಸುರೇಶ್ ಅವರನ್ನು ಸೋಲಿಸುತ್ತಾರೆ ಎಂದು ಚುನಾವಣೆಯ ಮೊದಲೇ ಹೇಳಿದ್ದೆ. ನಾನು ಹೇಳಿದಂತೆಯೇ ನಡೆದಿದೆ. ಎರಡು ಲಕ್ಷ ಮತಗಳ ಅಂತರದಿಂದ (Lok Sabha Election 2024) ಸೋಲಿಸುತ್ತಾರೆ ಅಂತ ಹೇಳಿದ್ದೆ. ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಡಿ.ಕೆ. ಸುರೇಶ್‌ ಅವರನ್ನು ಸೋಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Kumar Bangarappa: ಗೀತಾ ಸೋತ ಹಿನ್ನೆಲೆಯಲ್ಲಿ ಗೇಲಿ ಮಾಡಿದ್ದ ಕುಮಾರ್ ಬಂಗಾರಪ್ಪ ಮನೆಗೆ ಶಿವಣ್ಣ ​ಅಭಿಮಾನಿಗಳ ಮುತ್ತಿಗೆ

ಕಾಂಗ್ರೆಸ್‌ನಲ್ಲಿ ಒಳಜಗಳ ಶುರುವಾಗುತ್ತೆ

ಇದು ಸಿದ್ದರಾಮಯ್ಯ ಸಂಚಿನ ಒಂದು ಭಾಗ. ಡಿ.ಕೆ. ಶಿವಕುಮಾರ್ ಅವರು ಮುಂದೆ ಮುಖ್ಯಮಂತ್ರಿ ಆಗಬಾರದು, ಅವರ ನೈತಿಕತೆ ಕುಸಿಯಬೇಕು ಅಂತ ಹೀಗೆ ಮಾಡಿದ್ದಾರೆ. ಇದರಿಂದ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ, ಈ ಸರ್ಕಾರ ಉಳಿಯಲ್ಲ ಎಂಬುವುದು ಗೊತ್ತಾಗುತ್ತದೆ. ಇಲ್ಲಿಂದ ರಾಜಕೀಯ ಧ್ರುವೀಕರಣ ಪ್ರಾರಂಭ ಆಗುತ್ತದೆ, ಕಾಂಗ್ರೆಸ್‌ನಲ್ಲಿ ಒಳಜಗಳ ಶುರುವಾಗುತ್ತೆ. ಈಗಾಗಲೇ ಬೆಳಗಾವಿಯಲ್ಲಿ ಕಿತ್ತಾಟ ಶುರುವಾಗಿದೆ. ಬೆಂಗಳೂರು ಗ್ರಾಮಾಂತರದ ಸೋಲಿನಿಂದ ಇಲ್ಲಿಯೂ ಕೂಡ ಜಗಳ ಶುರುವಾಗಿದೆ, ಸರ್ಕಾರ ಪತನವಾಗುತ್ತೆ ಎಂದು ಹೇಳಿದ್ದಾರೆ.

Continue Reading

ಮಳೆ

Karnataka Weather : ರಾಜ್ಯಾದ್ಯಂತ ಮುಂದುವರಿದ ಮಳೆ; 19 ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌

Heavy rain : ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (rain news) ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ (karnataka weather forecast) ಯೆಲ್ಲೋ ಹಾಗೂ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ನೈರುತ್ಯ ಮಾನ್ಸೂನ್ ರಾಜ್ಯವನ್ನು ಆವರಿಸಿದೆ. ವಾರಾಂತ್ಯದಲ್ಲಿ ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ. ಜೂ.10ರವರೆಗೆ ಮೀನುಗಾರಿಕೆಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ ಮತ್ತು ವಿಜಯನಗರ, ಬಾಗಲಕೋಟೆ, ಕೊಪ್ಪಳ , ಧಾರವಾಡದಲ್ಲೂ ವ್ಯಾಪಕ ಮಳೆಯಾಗಲಿದೆ.

ಮಲೆನಾಡಿನ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಚದುರಿದಂತೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಿನಲ್ಲೂ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ ಸುಮಾರು 32 ಮತ್ತು 23 ಡಿ.ಸೆ ಇರಲಿದೆ.

ಮತ್ತೆ ಭಾರಿ ಮಳೆ ಎಚ್ಚರಿಕೆ ಕೊಟ್ಟ ತಜ್ಞರು

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿಯು ಗಂಟೆಗೆ 40-50 ಕಿ.ಮೀ ಬೀಸಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ದಕ್ಷಿಣ ಕನ್ನಡ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Karnataka weather Forecast: ರಾಜ್ಯದ ಹಲವೆಡೆ ಮಳೆಯು (Heavy Rain News) ಅಬ್ಬರಿಸುತ್ತಿದ್ದು, ಧಾರವಾಡದಲ್ಲಿ ವೃದ್ಧರೊಬ್ಬರು ಮಳೆಯಲ್ಲೇ ತಪಸ್ಸಿಗೆ ಕುಳಿತ ವಿಡಿಯೊವೊಂದು ವೈರಲ್‌ ಆಗಿದೆ. ಇತ್ತ ಮಳೆಯ ಅವಾಂತರವು ಮುಂದುವರಿದಿದೆ.

VISTARANEWS.COM


on

By

Karnataka weather Forecast
Koo

ಧಾರವಾಡ: ಹಿರಿಯ ಜೀವಿಯೊಬ್ಬರು ಮಳೆ (Rain News ) ಬರುವಾಗಲೇ ತಪಸ್ಸಿಗೆ ಕುಳಿತ ಘಟನೆ ಧಾರವಾಡದ ಸಿಬಿಟಿ ಬಸ್ ನಿಲ್ದಾಣದ ಎದುರು ನಡೆದಿದೆ. ಜೋರಾಗಿ ಬರುತ್ತಿದ್ದ ಮಳೆಯಲ್ಲಿ (Karnataka weather Forecast) ನಡು ರಸ್ತೆಯಲ್ಲಿಯೇ ಕಣ್ಣು ಮುಚ್ಚಿ ಕುಳಿತ ವೃದ್ಧ, ಒಂಚೂರು ಅಲುಗಾಡದೆ ತಪಸ್ಸು ಮಾಡಿದ್ದಾರೆ. ಇನ್ನೂ ಈ ದೃಶ್ಯವನ್ನು ಓರ್ವ ಯುವಕನ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಬಳ್ಳಾರಿಯಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ಶುಕ್ರವಾರ ವಿಜಯನಗರದಲ್ಲೂ ಧಾರಾಕಾರ ಮಳೆಯಾಗಿದೆ. ಮಳೆಯಿಂದಾಗಿ ಕೆಲ ಕಾಲ ವಾಹನ ಸವಾರರು ಪರದಾಟಬೇಕಾಯಿತು. ಧಾರವಾಡದ ನಗರದ ಕೆಎಂಎಫ್ ಬಳಿಯ ರಸ್ತೆಯ ಮೇಲೆ ಮೊಣಕಾಲುದ್ದ ನೀರು ಬಂದ ಪರಿಣಾಮ ಸವಾರರು ಬೈಕ್ ತಳ್ಳಿಕೊಂಡು ಹೋದರು. ಇತ್ತ ಗಣಿನಾಡು ಬಳ್ಳಾರಿಯಲ್ಲೂ ವರುಣನ ಆರ್ಭಟ ಜೋರಾಗಿತ್ತು. ಬಿಸಿಲಿನ ತಾಪದಿಂದ ಬೇಸೆತ್ತಿದ್ದ ಜನರಿಗೆ ಮಳೆಯು ಸಂತಸವನ್ನುಂಟು ಮಾಡಿತ್ತು. ಮುಂಗಾರು ಬಿತ್ತನೆಯ ನಿರೀಕ್ಷೆಯಲ್ಲಿರುವ ರೈತರ ಮೊಗದಲ್ಲಿ ಹರ್ಷ ತಂದಿತ್ತು. ಮಳೆಯಿಂದಾಗಿ ಬಳ್ಳಾರಿ ನಗರದ ಕೆಲ ರಸ್ತೆಗಳು ಜಲಾವೃತ್ತವಾಗಿದ್ದವು. ನಗರದ ಹಳೆ ಬಸ್ ನಿಲ್ದಾಣದ ಎದುರುಗಡೆ ರಸ್ತೆಯ ಮೇಲೆ ನೀರು ನಿಂತು ಸವಾರರು ಸಮಸ್ಯೆ ಎದುರಿಸುವಂತಾಯಿತು. ನಗರದ ರಾಯಲ್ ಸರ್ಕಲ್ ಪೆಟ್ರೋಲ್ ಬಂಕ್ ಪ್ರದೇಶ, ರೇಣುಕಾ ಕಿಚನ್ ಮುಂದೆಲ್ಲ ನೀರುಮಯವಾಗಿತ್ತು.

ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿತ್ತು. ಗಾಳೆ ಮಳೆಗೆ ಕೆಲವೆಡೆ ಮರಗಳು ಧರೆಗುರುಳಿದ್ದವು. ಸಂಡೂರು ತಾಲೂಕಿನಲ್ಲಿ ಮನೆಗಳಿಗೆ, ಹಳೇ ಮಾದಪುರ ಗ್ರಾಮದಲ್ಲಿ ನೀರು ನುಗ್ಗಿದ್ದವು. ಬಳ್ಳಾರಿಯ ಬಂಡಿಮೋಟ್‌ನ ಕೆಲ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಐವತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿರುವ ಸಾಮಾನುಗಳು ತೇಲಾಡುತ್ತಿದೆ. ಬಸ್ ನಿಲ್ದಾಣ, ಲಾರಿ ಟರ್ಮಿನಲ್‌ನಲ್ಲೂ ಅವಾಂತರವೇ ಸೃಷ್ಟಿಯಾಗಿದೆ.

ಇದನ್ನೂ ಓದಿ:Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

ದಾವಣಗೆರೆಯಲ್ಲಿ ಬಸ್‌ ನಿಲ್ದಾಣ ಜಲಾವೃತ

ದಾವಣಗೆರೆಯ ಹೊನ್ನಾಳಿಯಲ್ಲಿ ಸುರಿದ ಮಳೆಯಿಂದ ಶುಕ್ರವಾರ ಖಾಸಗಿ ಬಸ್ ನಿಲ್ದಾಣ ಜಲಾವೃತಗೊಂಡಿತ್ತು. ಕೆರೆಯಂತಾದ ನಿಲ್ದಾಣದಲ್ಲಿ ಮೊಣಕಾಲಿನ ವರೆಗೆ ನಿಂತ ನೀರು ಪ್ರಯಾಣಿಕರು ಪರದಾಡಬೇಕಾಯಿತು. ಮಳೆ ‌ನೀರು ಸರಾಗವಾಗಿ ಹೋಗಲು ಸರಿಯಾದ ರೀತಿ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಈ ಅವಸ್ಥೆ ಎಂದು ಕಿಡಿಕಾರಿದರು. ದಾವಣಗೆರೆ, ಮಾಯಕೊಂಡ, ದಾವಣಗೆರೆ ಕುವೆಂಪು ರಸ್ತೆ, ಕೆಬಿ ಬಡಾವಣೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದವು. ದಾವಣಗೆರೆಯ ಈರುಳ್ಳಿ ಮಾರ್ಕೆಟ್ ನ ರೈಲು ಬ್ರಿಡ್ಜ್ ಬಳಿ ರಸ್ತೆಯು ಕೆರೆಯಂತಾಗಿತ್ತು, ಹರಪನಹಳ್ಳಿ, ಜಗಳೂರು ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ರಸ್ತೆ ದಾಟಲು ವಾಹನ ಸವಾರರು ಹರಸಾಹಸ ಪಟ್ಟವರು.

ಕರಾವಳಿಯಲ್ಲಿ ವರುಣಾರ್ಭಟ

ಉತ್ತರ ಕನ್ನಡದ ಕಾರವಾರ, ಅಂಕೋಲಾ, ಕುಮಟಾ ಸೇರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದೆ. ಅಂಕೋಲಾದಲ್ಲಿ ಪಟ್ಟಣದ ರಸ್ತೆಯಲ್ಲಿ ಕಣ್ಣುಹಾರಿಯಿಸಿದರೆ ಬರೀ ನೀರೆ ಕಾಣಿಸುತ್ತಿತ್ತು. ಭಾರೀ ಮಳೆಯಿಂದಾಗಿ ರಸ್ತೆ ಬದಿ ವ್ಯಾಪಾರಸ್ಥರು ಪರದಾಡಬೇಕಾಯಿತು.

ಶುಕ್ರವಾರ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ಅಂಕೋಲಾದ ಬೋಳೆ ನಾಡವರಕೇರಿ ಅಂಗನವಾಡಿ ಕೇಂದ್ರಕ್ಕೆ ನೀರು ನುಗ್ಗಿತ್ತು. ಕಾಲುವೆ ಸೇರಿದಂತೆ ಅಂಗನವಾಡಿ ಕೇಂದ್ರದ ಅಂಗಳದಲ್ಲಿ ನೀರು ಜಮಾವಣೆಯಾಗಿತ್ತು. ನೀರು ಹರಿಯದೇ ಅಂಗನವಾಡಿ ಕೇಂದ್ರದಲ್ಲಿ ತುಂಬಿಕೊಂಡಿತ್ತು. ಅದೃಷ್ಟವಶಾತ್ ಮಕ್ಕಳು ಮನೆಗೆ ಹೋಗಿದ್ದರಿಂದ ಅನಾಹುತ ತಪ್ಪಿತ್ತು. ಇತ್ತ ಅಂಗನವಾಡಿ ಕೇಂದ್ರಕ್ಕೆ ನೀರು ನುಗ್ಗಿದ ಪರಿಣಾಮ ಕಿರಾಣಿ ಸೇರಿ ವಸ್ತುಗಳನ್ನು ರಕ್ಷಿಸಿಕೊಳ್ಳಲು ಸಿಬ್ಬಂದಿ ಪರದಾಡಬೇಕಾಯಿತು.

ಯಾದಗಿರಿಯಲ್ಲಿ ಜಮೀನಿಗೆ ನುಗ್ಗಿದ ನೀರು

ಶುಕ್ರವಾರ ಸಂಜೆ ಯಾದಗಿರಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ವಡಗೇರಾ ತಾಲೂಕಿನ ಭಾಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಯಕ್ಷಿಂತಿ ಗ್ರಾಮ ಜಮೀನಿಗೆ ನೀರು ನುಗ್ಗಿದೆ. ಜಮೀನಿಗೆ ತೆರಳುವ ರಸ್ತೆಯು ಸಂಪೂರ್ಣ ಜಲಾವೃತಗೊಂಡಿತ್ತು. ಇತ್ತ ಜಮೀನಿಗೆ ತೆರಳಿದ್ದ ಕಾರ್ಮಿಕರಿಗೆ ವಾಪಸ್‌ ಮನೆಗೆ ತೆರಳಲು ಸಂಕಷ್ಟ ಎದುರಿಸಬೇಕಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

Karnataka Rain : ಮಳೆ ಪ್ರಾರಂಭವಾಗುತ್ತಿದ್ದಂತೆ ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ ಹೆಚ್ಚಾಗುತ್ತದೆ. ಇಷ್ಟಕ್ಕೂ ಏನಿದು ಗುಡ್ಡದ ಭೂತದ ಕಾಟ ಅಂದರೆ ಗೋಕಾಕ ಬೆಟ್ಟದಿಂದ ದೊಡ್ಡ ದೊಡ್ಡ ಬಂಡೆಕಲ್ಲುಗಳು ಉರುಳಿ ಬೀಳುತ್ತಿವೆ.

VISTARANEWS.COM


on

By

karnataka rain
Koo

ಬೆಳಗಾವಿ: ಬೆಳಗಾವಿಯ ಗೋಕಾಕ ತಾಲೂಕಿನ ಗೋಕಾಕ ಕೊಣ್ಣೂರ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಡ್ಡದ ಭೂತದ ಕಾಟ (Karnataka Rain) ಶುರುವಾಗಿದೆ. ಅದು ಕೂಡ ಮಳೆ ಪ್ರಾರಂಭವಾಗುತ್ತಿದ್ದಂತೆ ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ ಹೆಚ್ಚಾಗುತ್ತದೆ. ಇಷ್ಟಕ್ಕೂ ಏನಿದು ಗುಡ್ಡದ ಭೂತದ ಕಾಟ ಅಂದರೆ ಗೋಕಾಕ ಬೆಟ್ಟದಿಂದ ದೊಡ್ಡ ದೊಡ್ಡ ಬಂಡೆಕಲ್ಲುಗಳು ಉರುಳಿ ಬೀಳುತ್ತಿವೆ.

karnataka rain

ಗೋಕಾಕ ಹಾಗೂ ಕೊಣ್ಣೂರು ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯೆ ಬಂಡೆಗಳು ಉರುಳಿ ಬೀಳುತ್ತಿವೆ. ಬೆಟ್ಟದಿಂದ ಉರುಳುತ್ತಿರುವ ಬಂಡೆಗಳಿಂದ ಸವಾರರು, ಜನರು ಭಯಭೀತರಾಗಿದ್ದಾರೆ. ಮಳೆಯಿಂದಾಗಿ ಬಂಡೆಗಳ ಕೆಳಗಿನ ಮಣ್ಣು ಕುಸಿಯುತ್ತಿದೆ. ಇದರಿಂದಾಗಿ ಬಂಡೆ ಕಲ್ಲುಗಳು ರಸ್ತೆಗೆ ಬಂದು ಬೀಳುತ್ತಿವೆ. ರಸ್ತೆಯಲ್ಲಿ ಸಂಚರಿಸುವವರು ಪ್ರಾಣ ಭಯದಲ್ಲೇ ಓಡಾಡುವಂತಾಗಿದೆ.

karnataka rain

ಕೊಚ್ಚಿ ಹೋದ ಬೈಕ್‌

ವಿಜಯಪುರದಲ್ಲಿ ನಿನ್ನೆ ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ವಿಜಯಪುರ ಜಿಲ್ಲೆಯ ಸಾರವಾಡ ಗ್ರಾಮದಲ್ಲಿ ಡೋಣಿ ನದಿ ಉಕ್ಕಿ ಹರಿದಿದೆ. ಪರಿಣಾಮ ಅಕ್ಕ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ವಿಜಯಪುರ ನಗರದಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮಳೆ ನೀರಲ್ಲಿ ಬೈಕ್‌ವೊಂದು ಕೊಚ್ಚಿ ಹೋದ ಘಟನೆ ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ನಡೆದಿದೆ. ಉಕ್ಕಿ ಹರಿಯುತ್ತಿರುವ ಮಳೆ ನೀರಲ್ಲಿ ಬೈಕ್ ಕೊಂಡೊಯ್ಯುವ ಹರಸಾಹಸದ ವೇಳೆ ಕೊಚ್ಚಿಹೋಗಿದೆ.

ಇದನ್ನೂ ಓದಿ: Electric shock : ಶಾಲೆಗೆ ಹೋದವಳು ಮಸಣ ಸೇರಿದಳು; ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಳು

ಇತ್ತ ತುಮಕೂರು ಜಿಲ್ಲೆಯಲ್ಲಿ ರಾತ್ರಿ ಧಾರಕಾರ ಸುರಿದ ಮಳೆ ರಭಸಕ್ಕೆ ಕೆರೆ, ಕಟ್ಟೆಗಳು ಕೋಡಿ ಬಿದ್ದಿದ್ದವು. ತುಮಕೂರು ಜಿಲ್ಲೆಯ ಕೊರಟಗೆರೆ ಬಳಿಯಿರುವ ಜಂಪೇನಹಳ್ಳಿ ಕೆರೆ ನೀರಿಲ್ಲದೇ ಬತ್ತಿಹೋಗಿತ್ತು. ಇದೀಗ ತುಂಬಿ ಹರಿಯುತ್ತಿದ್ದು, ರೈತರಲ್ಲಿ ಮಂದಹಾಸ ಮೂಡಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಕೃಷ್ಣಾ ನದಿ ಉಗಮ ಸ್ಥಾನ ಮಹಾಬಲೇಶ್ವರದಲ್ಲಿ ಭಾರೀ ಮಳೆ ಹಿನ್ನೆಲೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಈ ವರ್ಷದ ಮೊದಲ ಒಳಹರಿವು 1,768 ಕ್ಯೂಸೇಕ್ ದಾಖಲಾಗಿದ್ದು, ಕೃಷ್ಣಾ ನದಿ ಪಾತ್ರದ ಜನರು ಸಂತಸಗೊಂಡಿದ್ದಾರೆ. ಕಳೆದ ವರ್ಷ ಜೂನ್ ಕಳೆದರು ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾಗಿದೆ.

ಗ್ರಾಮಕ್ಕೆ ರಭಸವಾಗಿ ನುಗ್ಗಿದ ನೀರು

ಚಿತ್ರದುರ್ಗ ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಕೂನಬೇವು ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ. ವರುಣ ಅಬ್ಬರಕ್ಕೆ ಕೊನಬೇವು ಗ್ರಾಮ ಜಲಾವೃತಗೊಂಡಿತ್ತು. ಗ್ರಾಮದ ರಸ್ತೆಯಲ್ಲಿ ನೀರು ನದಿಯಂತೆ ಹರಿದಿತ್ತು. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಚಿತ್ರದುರ್ಗ ತಾಲೂಕಿನ ಬೆಳಘಟ್ಟ ಗ್ರಾಮದಲ್ಲಿ ನೀರಿನಲ್ಲಿ ಬಸ್ ಸಿಲುಕಿದ ಘಟನೆಯು ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Election Results 2024
ಕರ್ನಾಟಕ42 seconds ago

Election Results 2024: ಡಿ.ಕೆ. ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ: ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

Toyota Kirloskar Motor Inauguration of Toyota Used Car Store by TKM in New Delhi
ದೇಶ7 mins ago

Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ

Niveditha Gowda chandan divorce main reason told by advocate
ಸ್ಯಾಂಡಲ್ ವುಡ್9 mins ago

Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ ಬಗ್ಗೆ ಅಸಲಿ ಸತ್ಯ ಬಯಲು ಮಾಡಿದ ವಕೀಲೆ!

Job Alert
ಉದ್ಯೋಗ12 mins ago

Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

assault case
ಬೆಂಗಳೂರು20 mins ago

Assault Case : ಅರೆ ಬೆತ್ತಲಾಗಿ ಯುವಕನಿಗೆ ನಡು ರಸ್ತೆಯಲ್ಲೆ ಹಿಗ್ಗಾಮುಗ್ಗಾ ಥಳಿತ; ಹಲ್ಲೆಕೋರರು ಅರೆಸ್ಟ್‌

Kumar Bangarappa attack by Shivarajkumar Supporters
ರಾಜಕೀಯ36 mins ago

Kumar Bangarappa: ಗೀತಾ ಸೋತ ಹಿನ್ನೆಲೆಯಲ್ಲಿ ಗೇಲಿ ಮಾಡಿದ್ದ ಕುಮಾರ್ ಬಂಗಾರಪ್ಪ ಮನೆಗೆ ಶಿವಣ್ಣ ​ಅಭಿಮಾನಿಗಳ ಮುತ್ತಿಗೆ

Pakistan
ವಿದೇಶ36 mins ago

Pakistan: ಇಡೀ ಜಗತ್ತೇ ಮೋದಿಗೆ ಅಭಿನಂದಿಸಿದರೂ ಪಾಕಿಸ್ತಾನ ಮಾತ್ರ ಇನ್ನೂ Congratulations ಎಂದಿಲ್ಲ!

Valmiki Corporation Scam
ಪ್ರಮುಖ ಸುದ್ದಿ37 mins ago

Valmiki Corporation Scam: ಸಾಕ್ಷ್ಯ ನಾಶ ಆರೋಪ; ಮೇ 24ರಂದು ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದ ಸಚಿವ ಶರಣ ಪ್ರಕಾಶ್ ಪಾಟೀಲ್

Gold Rate Today
ಚಿನ್ನದ ದರ1 hour ago

Gold Rate Today: ಆಭರಣ ಖರೀದಿಗೆ ಇದು ಸಕಾಲ; ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

MM Hills
ಚಾಮರಾಜನಗರ1 hour ago

MM Hills : ಮಲೆಮಹದೇಶ್ವರ ಬೆಟ್ಟದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ; ಒಬ್ಬರು ಸಾವು, ಮೂವರು ಗಂಭೀರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ19 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ21 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌