ಶಿರಾ: ಸೂತಕದ ಸಂಪ್ರದಾಯದ ಹೆಸರಲ್ಲಿ ಒಂದು ತಿಂಗಳ ಹಸುಗೂಸು ಹಾಗೂ ಬಾಣಂತಿಯನ್ನು ಊರಾಚೆ ಇರಿಸಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕುಂಟನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ (Tumkur News) ನಡೆದಿದೆ.
ಹೆರಿಗೆಯ ಬಳಿಕ 25 ವರ್ಷದ ಬಾಣಂತಿ ಬಾಲಮ್ಮ ಹಾಗೂ ಒಂದು ತಿಂಗಳ ಮಗುವನ್ನು ಗ್ರಾಮದ ಹೊರಗಿನ ಗುಡಿಸಲಿನಲ್ಲಿರಿಸಿದ್ದ ಮಾಹಿತಿಯ ಮೇರೆಗೆ ಶಿರಾ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಗೀತಾಂಜಲಿ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಮನೆಗೆ ಸೇರಿಸಿದ್ದಾರೆ.
ಇದನ್ನೂ ಓದಿ:Virat Kohli : 12 ವರ್ಷದ ಬಳಿಕ ಕೊಹ್ಲಿಯೇ ಇಲ್ಲದೆ ಟೆಸ್ಟ್ ಸರಣಿ ಆಡುತ್ತಿರುವ ಭಾರತ!
ಬಳಿಕ ಗ್ರಾಮದಲ್ಲಿ ಮೌಢ್ಯದ ಬಗ್ಗೆ ಅರಿವು ಮೂಡಿಸಿ, ಈ ರೀತಿಯ ಘಟನೆ ಮತ್ತೆ ಮರುಕಳಿಸಿದರೆ ಪ್ರಕರಣ ದಾಖಲು ಮಾಡುವುದಾಗಿ ಎಚ್ಚರಿಕೆ ಸಹ ನೀಡಿದ್ದಾರೆ.
ಇದನ್ನೂ ಓದಿ: Bandipur National Park: ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಕೆ: ಈಶ್ವರ ಖಂಡ್ರೆ
ಈ ಸಂದರ್ಭದಲ್ಲಿ ತಾಲೂಕು ಕಾಡುಗೊಲ್ಲ ಸಮುದಾಯದ ಮುಖಂಡರು, ತಾವರೆಕೆರೆ ಪೊಲೀಸ್ ಠಾಣಾ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.