Tumkur News : ನಿಲ್ಲದ ಗೊಲ್ಲರ ಮೈಲಿಗೆ ಸಂಪ್ರದಾಯ! ಮಗು-ಬಾಣಂತಿಯ ರಕ್ಷಿಸಿದ ಗುಬ್ಬಿ ನ್ಯಾಯಾಧೀಶೆ - Vistara News

ಕರ್ನಾಟಕ

Tumkur News : ನಿಲ್ಲದ ಗೊಲ್ಲರ ಮೈಲಿಗೆ ಸಂಪ್ರದಾಯ! ಮಗು-ಬಾಣಂತಿಯ ರಕ್ಷಿಸಿದ ಗುಬ್ಬಿ ನ್ಯಾಯಾಧೀಶೆ

Tumkur News : ಕಾಡುಗೊಲ್ಲರ ಸೂತಕದ ಸಂಪ್ರದಾಯಕ್ಕೆ (kadugollara Tradition) ಮಗುವೊಂದು ಬಲಿಯಾಗಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಮೇರೆಗೆ ಗುಬ್ಬಿ ನ್ಯಾಯಾಲಯದ ನ್ಯಾಯಾಧೀಶೆ (Gubbi Court Judge) ಉಂಡಿ ಮಂಜುಳ ಶಿವಪ್ಪ ಭೇಟಿ ನೀಡಿ ಮಗು ಬಾಣಂತಿಯನ್ನು ರಕ್ಷಣೆ ಮಾಡಿದ್ದಾರೆ.

VISTARANEWS.COM


on

tradition of the unending gollas! Gubbi judge rescues baby mother
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ದೇವರಿಗೆ ಮೈಲಿಗೆ ಆಗುತ್ತೆ, ಸೂತಕವು ಆಗಿ ಬರುವುದಿಲ್ಲ ಎಂದು ಬಾಣಂತಿ, ಹಸುಗೂಸನ್ನೇ ಊರಿನಿಂದ ಹೊರಗಿಟ್ಟ ಮೌಡ್ಯ ಆಚರಣೆಯಿಂದಾಗಿ ಮಗುವೊಂದು ತುಮಕೂರಲ್ಲಿ (Tumkur News) ಬಲಿಯಾಗಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ವರದೇನಹಳ್ಳಿ ಗೊಲ್ಲರಹಟ್ಟಿಯಲ್ಲಿ (kadugollara Tradition) ಕಳೆದ ಕೆಲವು ದಿನಗಳಿಂದ ಮಗು ಬಾಣಂತಿಯನ್ನು ಊರಿಂದಾಚೆಗೆ ಇಡಲಾಗಿದೆ. ಪ್ರಾಣಿಗಳಿಗೂ ಯೋಗ್ಯವಲ್ಲದ ಚಿಕ್ಕ ಗುಡಿಸಲಿನಲ್ಲಿ ಮಗು ಬಾಣಂತಿಯನ್ನು ಇರಿಸಲಾಗಿದೆ.

tradition of the unending gollas! Gubbi judge rescues baby mother in tumkur

ಖಚಿತ ಮಾಹಿತಿ ಮೇರೆಗೆ ಗುಬ್ಬಿ ನ್ಯಾಯಾಲಯದ ನ್ಯಾಯಾಧೀಶೆ (Gubbi Court Judge) ಉಂಡಿ ಮಂಜುಳ ಶಿವಪ್ಪ ಗ್ರಾಮಕ್ಕೆ ಭೇಟಿ ನೀಡಿ ಮಗು ಮತ್ತು ಬಾಣಂತಿಯನ್ನು ರಕ್ಷಣೆ ಮಾಡಿದ್ದಾರೆ. ಮಗುವನ್ನು ತಾವೇ ಕೈಗೆತ್ತಿಕೊಂಡು ಮನೆಗೆ ಕರೆತಂದಿದ್ದಾರೆ. ಸರಿಯಾದ ಸಮಯಕ್ಕೆ ಸ್ಥಳಕ್ಕೆ ಭೇಟಿ ನೀಡಿ ಮಗು ಮತ್ತು ಬಾಣಂತಿಯನ್ನು ಮನೆಗೆ ಬಿಟ್ಟು ಬಿದ್ದಿದ್ದಾರೆ.

Gubbi judge rescues baby mother after warning to people

ಮತ್ತೆ ಮರುಕಳಿಸಿದರೆ ಕಾನೂನು ಕ್ರಮದ ಎಚ್ಚರಿಕೆ

ಮಗು-ಬಾಣಂತಿಯನ್ನು ಮನೆಗೆ ಬಿಟ್ಟು ಬಂದ ಬಳಿಕ ಕುಟುಂಬಸ್ಥರಿಗೆ ನ್ಯಾಯಾಧೀಶೆ ಉಂಡಿ ಮಂಜುಳ ಶಿವಪ್ಪನವರು ವಾರ್ನಿಂಗ್‌ ನೀಡಿದ್ದಾರೆ. ಈ ರೀತಿಯ ಘಟನೆ ಮತ್ತೆ ಏನಾದರೂ ಮರುಕಳಿಸಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ಬಂದಿದ್ದಾರೆ. ಸದ್ಯ ಮನೆಯೊಳಗೆ ಮಗು ಮತ್ತು ಬಾಣಂತಿ ಸುರಕ್ಷಿತವಾಗಿದ್ದಾರೆ.

ಇದನ್ನೂ ಓದಿ: Rakhi Sawant: ಮಗುವನ್ನು ಹೆರಲು ನಾನು ಸಮರ್ಥಳು ಎಂದ ರಾಖಿ ಸಾವಂತ್!

ವಿಪರೀತ ಶೀತದಿಂದ ಮೃತಪಟ್ಟಿದ್ದ ಮಗು

ತುಮಕೂರು (Tumkur News) ಸಮೀಪದ ಮಲ್ಲೇನಹಳ್ಳಿ ಗೊಲ್ಲರಹಟ್ಟಿಯಲ್ಲಿ (kadugollara Tradition) ಕಳೆದ ಜುಲೈ 26ರಂದು ಸೂತಕದ ಸಂಪ್ರದಾಯಕ್ಕೆ ಮಗುವೊಂದು ಮೃತಪಟ್ಟಿತ್ತು. ಸಿದ್ದೇಶ್ ಮತ್ತು ವಸಂತ ದಂಪತಿಯ ಮಗು ವಿಪರೀತ ಶೀತದಿಂದ (cold weather) ಬಳಲಿ ಮೃತಪಟ್ಟಿತ್ತು.

ಶೀತ ಹೆಚ್ಚಾಗಿದ್ದರಿಂದ ಮಗುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಸುಗೂಸು ಜು.26ರಂದು ಪ್ರಾಣಬಿಟ್ಟಿತ್ತು. ತಮ್ಮ ದೇವರಿಗೆ ಸೂತಕ ಆಗಲ್ಲ ಎಂದು ಬಾಣಂತಿ, ಮಗುವನ್ನು ಕುಟುಂಬಸ್ಥರು ಊರ ಹೊರಗಿಟ್ಟಿದ್ದರು. ಮಳೆ, ಗಾಳಿಯಿದ್ದರೂ ತಾಯಿ, ಮಗು ಊರ ಹೊರಗಿನ ಚಿಕ್ಕ ಗುಡಿಸಲಿನಲ್ಲಿಯೇ ವಾಸವಿದ್ದರು. ಆದರೆ ಮೌಡ್ಯತೆಯೇ ಮಗುವಿನ ಜೀವ ತೆಗೆದಿತ್ತು.

ದೇವರ ಹೆಸರಲ್ಲಿ ಮೌಢ್ಯ

ಮನುಷ್ಯ ಎಷ್ಟೇ ಆಧುನಿಕತೆಯತ್ತ ಮುಖ ಮಾಡುತ್ತಿದ್ದರೂ, ಚಂದ್ರನ ಮೇಲೆ ರಾಕೆಟ್‌ ಹಾರಿದರೂ ಕೆಲವು ಕಡೆಗಳಲ್ಲಿ ಮೌಡ್ಯಾಚರಣೆಗಳು ಮಾತ್ರ ಇಂದಿಗೂ ರೂಢಿಯಲ್ಲಿವೆ. ದೇವರು, ಸಂಪ್ರದಾಯದ ಹೆಸರಿನಲ್ಲಿ ಮನುಷ್ಯರನ್ನೇ ಕೀಳಾಗಿ ಕಾಣುವ ಪರಿಪಾಠ ಇನ್ನೂ ಕೆಲವು ಸಮುದಾಯಗಳಲ್ಲಿ ಹಾಗೆಯೇ ಇದೆ. ಗೊಲ್ಲರಹಟ್ಟಿಯಲ್ಲಿ ವಾಸಿಸುವ ಕಾಡುಗೊಲ್ಲರಲ್ಲಿ ಇಂದಿಗೂ ಕೂಡ ಸೂತಕದ ಸಂಪ್ರದಾಯ ಆಚರಣೆಯಲ್ಲಿದೆ. ತಮ್ಮ ದೇವರಿಗೆ ಸೂತಕ ಆಗಲ್ಲ ಎಂದು ಬಾಣಂತಿ ಮತ್ತು ಹಸುಗೂಸನ್ನೇ ಊರಿನಿಂದ ಹೊರಗಿಡುತ್ತಾರೆ. ಎರಡು ತಿಂಗಳು ಊರ ಹೊರಗೆ ನಿರ್ಮಿಸಿರುವ ಚಿಕ್ಕ ಗುಡಿಸಲಿನಲ್ಲಿಯೇ ಇರಬೇಕು.

ಊರಿಗೆ ಕೇಡು ಬರುವ ಭೀತಿ

ನಮ್ಮ ದೇವರಿಗೆ ಸೂತಕ ಆಗಲ್ಲ. ಹಾಗಾಗಿ ನಾವು ಬಾಣಂತಿಯನ್ನು ಒಳಗೆ ಬಿಟ್ಟುಕೊಳ್ಳುವುದಿಲ್ಲ. ಸೂತಕದ ಬಾಣಂತಿ ಊರಿಗೆ ಬಂದರೆ ಕೇಡು ಆಗುತ್ತದೆ ಎಂಬುದು ಈ ಊರಿನವರ ನಂಬಿಕೆ. ಕಾಡುಗೊಲ್ಲರ ಜುಂಜಪ್ಪ ಹಾಗೂ ಯತ್ತಪ್ಪ ದೇವರಿಗೆ ಸೂತಕ ಆಗಲ್ಲ. ಹಿಂದಿನಿಂದಲ್ಲೂ ಈ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಮಳೆ, ಗಾಳಿ ಏನೇ ಬರಲಿ, ಅವರು ಇದ್ದರೂ, ಸತ್ತರೂ ಊರಿಂದ ಆಚೆಯೇ ಇರಬೇಕು. ಮನೆಯೊಳಗೆ ಬಿಟ್ಟುಕೊಳ್ಳಲು ಸಾಧ್ಯವೇ ಇಲ್ಲ ಎಂಬುದು ಊರಿನವರ ಉತ್ತರವಾಗಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Theft case : ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಕೆಲಸಗಾರ; ರಾಯಚೂರಲ್ಲಿ ಬೀಡುಬಿಟ್ಟ ಮಂಕಿ ಕ್ಯಾಪ್‌ ಗ್ಯಾಂಗ್‌!

Theft case : ಪ್ರತ್ಯೇಕ ಕಡೆಗಳಲ್ಲಿ ಕಳ್ಳತನ ಪ್ರಕರಣಗಳು ವರದಿ ಆಗಿವೆ. ಆನೇಕಲ್‌ನಲ್ಲಿ ಕೆಲಸಗಾರನೊಬ್ಬ ಅನ್ನ ಹಾಕಿದ ಮನೆಗೆ ಕನ್ನ ಹಾಕಿದ್ದಾನೆ. ಬೆಂಗಳೂರಲ್ಲಿ ಬೈಕ್‌ನಲ್ಲಿ ಬಂದ ಕಳ್ಳರು ಆಟೋ ಚಾಲಕನ ಚಿನ್ನದ ಸರವನ್ನು ಎಗರಿಸಿದ್ದಾರೆ. ರಾಯಚೂರಲ್ಲಿ ಮಂಕಿ ಕ್ಯಾಪ್‌ ಕಳ್ಳರ ಕಾಟ ಹೆಚ್ಚಾಗಿದೆ.

VISTARANEWS.COM


on

By

theft Case
Koo

ಆನೇಕಲ್: ಅನ್ನ ಹಾಕಿದ ಮನೆಗೆ ಕೆಲಸಗಾರನೊಬ್ಬ ಕನ್ನ (Theft case) ಹಾಕಿದ್ದಾನೆ. ಬೆಂಗಳೂರಿನ ಜಿಗಣಿ ಸಂತೆ ಬೀದಿ ಬಳಿ ಇರುವ ಮನಿ ಟ್ರಾನ್ಸ್‌ಫರ್‌ ಅಂಗಡಿಯಲ್ಲಿ ಸಂಗ್ರಹವಾಗಿದ್ದ 9 ಲಕ್ಷಕ್ಕೂ ಹೆಚ್ಚು ಹಣವನ್ನು ಕೆಲಸಗಾರನೇ ಕಳವು ಮಾಡಿದ್ದಾನೆ. ರಾಜು ಎಂಬುವವರಿಗೆ ಸೇರಿದ ಮನಿ ಟ್ರಾನ್ಸ್‌ಫರ್‌ ಅಂಗಡಿಯಲ್ಲಿ ಬಿಹಾರ ಮೂಲದ ದಿಲೀಪ್ ಎಂಬಾತ ಕೆಲಸ ಮಾಡುತ್ತಿದ್ದ.

ಐದಾರು ತಿಂಗಳ ಹಿಂದೆ ಕೆಲಸ ಬಿಟ್ಟು ವಾಪಸ್ ಬಿಹಾರಕ್ಕೆ ತೆರಳಿದ್ದ. ಆದರೆ ತಿಂಗಳ ಹಿಂದೆ ವಾಪಸ್ ಕೆಲಸಕ್ಕೆ ಬಂದಿದ್ದ. ಹೀಗೆ ಬಂದವನು ನಿನ್ನೆ ಸೋಮವಾರ ಸಂಜೆ ಸಿಸಿ ಕ್ಯಾಮೆರಾ ಆಫ್‌ ಮಾಡಿ ಮನಿ ಟ್ರಾನ್ಸ್‌ಫರ್‌ನಿಂದ ಸಂಗ್ರಹವಾಗಿದ್ದ ಹಣ ಕದ್ದು ಎಸ್ಕೇಪ್ ಆಗಿದ್ದಾನೆ. ಪ್ರಕರಣ ಸಂಬಂಧ ಬೆಂಗಳೂರಿನ ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಆಟೋ ಚಾಲಕನ ಸರ ಕಿತ್ತು ಪರಾರಿಯಾದ ಕಳ್ಳರು

ಬೆಂಗಳೂರಿನ ಗಿರಿನಗರದ ವಿವೆರಕಾನಂದ ಪಾರ್ಕ್ ಬಳಿ ಆಟೋ ರಿಕ್ಷಾ ಬಾಡಿಗೆ ಕೇಳುವ ನೆಪದಲ್ಲಿ ಸರಗಳ್ಳತನ ನಡೆದಿದೆ. ಬೈಕ್‌ನಲ್ಲಿ ಬಂದಿದ್ದ ಕಳ್ಳರಿಬ್ಬರು, ಬನಶಂಕರಿ ಕಡೆಗೆ ಬರುತ್ತೀರಾ ಎಂದು ಕೇಳಿದ್ದಾರೆ. ಈ ವೇಳೆ ಆಟೋ ಚಾಲಕ ಆ ಕಡೆಗೆ ಬರುವುದಿಲ್ಲ ಎಂದಾಗ ಬೈಕ್‌ನ ಹಿಂಬದಿ ಕುಳಿತ್ತಿದ್ದ ಕಿರಾತಕ ಚಾಕು ತೋರಿಸಿ ಸುಲಿಗೆ ಮಾಡಿದ್ದಾನೆ. ಸುಮಾರು 12 ಲಕ್ಷ ಮೌಲ್ಯದ 25 ಗ್ರಾಂ ತೂಕದ ಚಿನ್ನದ ಸರವನ್ನು ಕದ್ದೊಯ್ದಿದ್ದಾರೆ. ಕೂಡಲೇ ಆಟೋ ಚಾಲಕ ಈ ಸಂಬಂಧ ದೂರು ನೀಡಿದ್ದರು. ದೂರು ದಾಖಲಾದ ಕೂಡಲೆ ಸಿಸಿಟಿವಿ ಆಧರಿಸಿ ಪರಿಶೀಲನೆ ನಡೆಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Physical Abuse : ಶಿಕ್ಷಕನಿಂದ ಇದೆಂಥ ಅನಾಚಾರ! ಬಾಲಕಿಗೆ ಲೈಂಗಿಕ ಕಿರುಕುಳ

ರಾಯಚೂರಿನಲ್ಲಿ ಮಂಕಿ ಕ್ಯಾಪ್‌ ಗ್ಯಾಂಗ್‌ ಹಾವಳಿ

ರಾಯಚೂರು ನಗರದ ಮಂತ್ರಾಲಯ ರೋಡ್‌ನಲ್ಲಿರೋ ಟ್ರೆಂಡ್ಸ್ ಮಾಲ್‌ನಲ್ಲಿ ಕಳ್ಳತನ ನಡೆದಿದೆ. ಗುರುತು ಸಿಗಬಾರೆಂದು ಮಂಕಿ ಕ್ಯಾಪ್ ಹಾಗೂ ಹ್ಯಾಂಡ್‌ ಗ್ಲೌಸ್‌ ಧರಿಸಿ ಬಂದಿದ್ದ ಕಳ್ಳರು ಮಾಲ್‌ನ ಬೀಗ ಮುರಿದು ಕಳ್ಳತನ ಮಾಡಿದ್ದಾರೆ. ಕಳ್ಳರ ಕೃತ್ಯ ಮಾಲ್‌ನಲ್ಲಿದ್ದ ಸಿಸಿಟಿವಿಯಲ್ಲಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮೊದಲು ಕಬ್ಬಿಣದ ರಾಡ್‌ನಿಂದ ಬೀಗ ಮುರಿದು ಮಾಲ್ ಒಳಗೆ ಎಂಟ್ರಿ ಕೊಟ್ಟ ಕಳ್ಳರು ಕ್ಯಾಶ್ ಕೌಂಟರ್‌ನಲ್ಲಿದ್ದ 65 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಕದ್ದು ಪರಾರಿ ಆಗಿದ್ದಾರೆ. ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಧಾರವಾಡದಲ್ಲಿ ಟಾಟಾ ಹಿಟಾಚಿ ಕಂಪನಿಯಲ್ಲಿ ಕಳ್ಳತನ

ಧಾರವಾಡ ತಾಲೂಕಿನ ಗರಗ್ ಗ್ರಾಮದ ಬಳಿ ಇರುವ ಟಾಟಾ ಹಿಟಾಚಿ ಕಂಪನಿಯಲ್ಲಿ ಕಳ್ಳತನ ನಡೆದಿತ್ತು. ಕಳ್ಳತನವಾಗಿದ್ದ ರೂ. 10 ಲಕ್ಷ ಮೌಲ್ಯದ ಟೈರ್ ಮತ್ತು ಬ್ಯಾಟರಿ, 5.5 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ಕಳ್ಳತನ ಮಾಡಿದ್ದ ಮೂವರನ್ನು ಬಂಧನ ಮಾಡಲಾಗಿದೆ. ಕಂಪನಿ ನೌಕರನಿಂದಲೇ ಕಳ್ಳತನ ನಡೆದಿರುವುದು ತಿಳಿದು ಬಂದಿದೆ. ಬಸವರಾಜ ಶಿಪ್ರಿ ಎಂಬಾತ ಅಭಿಷೇಕ ಕಂಬಾರ, ಉಮೇಶ ಜೈನರ್ ಜತೆ ಸೇರಿ ಕಳ್ಳತನ ನಡೆಸಿ ಪೊಲೀಸರಿಗೆ ಲಾಕ್‌ ಆಗಿದ್ದಾರೆ. ಗರಗ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರಲ್ಲಿ ಡ್ರಗ್‌ ಪೆಡ್ಲರ್‌ ಬಂಧನ

ಸ್ಟೂಡೆಂಟ್ ವೀಸಾದಲ್ಲಿ ಬಂದು ಡ್ರಗ್ ಪೆಡ್ಲರ್ ಆದ ವಿದೇಶಿ ಪ್ರಜೆಗಳನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳು ಮೋಜು-‌ಮಸ್ತಿಗಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಗೋವಾ, ‌ಮುಂಬೈ ಹಾಗು ದೆಹಲಿಯಲ್ಲಿ ವಾಸವಾಗಿರುವ ತಮ್ಮದೇ ದೇಶದ ಪ್ರಜೆಗಳಿಂದ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿಸಿ ಬೆಂಗಳೂರಲ್ಲಿ ಮಾರಾಟ ಮಾಡುತ್ತಿದ್ದರು. ಆರೋಪಿಗಳಿಂದ ಸುಮಾರು 12 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Press Day: ಹೊಸಪೇಟೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ

Press Day: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯನಗರ ಜಿಲ್ಲಾ ಘಟಕದಿಂದ ಸೋಮವಾರ ಹೊಸಪೇಟೆಯ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

VISTARANEWS.COM


on

Press Day celebration Programme in hosapete
Koo

ಹೊಸಪೇಟೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯನಗರ ಜಿಲ್ಲಾ ಘಟಕದಿಂದ ಸೋಮವಾರ ಹೊಸಪೇಟೆಯ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು (Press Day) ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ‘ಒತ್ತಡದ ವೃತ್ತಿ ಜೀವನದ ಜತೆಗೆ ಕುಟುಂಬಕ್ಕೂ ಒಂದಿಷ್ಟು ಸಮಯ ಕೊಡಿ’ ಎಂದು ಪತ್ರಕರ್ತರಿಗೆ ಕಿವಿಮಾತು ಹೇಳಿದರು.

ಇದನ್ನೂ ಓದಿ: Foreign Investment: ರಾಜ್ಯದಲ್ಲಿ ವಾಹನ ಬಿಡಿಭಾಗ ತಯಾರಿಕೆ; ಬಂಡವಾಳ ಹೂಡಿಕೆಗೆ ದ.ಕೊರಿಯಾ ಒಲವು

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್‌. ಮಾತನಾಡಿ, ಪತ್ರಕರ್ತರ ಪ್ರತಿಭಾವಂತ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆ ಬರೆದು ಉನ್ನತ ಅಧಿಕಾರಿಗಳಾಗುವ ಕನಸು ಕಾಣಬೇಕು, ಅದಕ್ಕೆ ಅಗತ್ಯವಾದ ನೆರವು ನೀಡಲು ತಾವು ಸಿದ್ಧ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಸಂಸದ ಈ. ತುಕಾರಾಂ ಅವರ ಪತ್ನಿ ಅನ್ನಪೂರ್ಣಾ ಹಾಗೂ ‘ಹುಡಾ’ ಅಧ್ಯಕ್ಷ ಎಚ್‌.ಎನ್‌.ಎಫ್‌. ಮೊಹಮ್ಮದ್ ಇಮಾಮ್‌ ನಿಯಾಜಿ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಮಾತನಾಡಿದರು.

ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷ ಜೆ.ಎಂ. ಶಿವಪ್ರಸಾದ್ ಪತ್ರಕರ್ತ ಆರೋಗ್ಯ ವಿಮೆ ಕಾರ್ಡ್ ಹಸ್ತಾಂತರಿಸಿದರು. ಸಂಘದ ಜಿಲ್ಲಾಧ್ಯಕ್ಷ ಪಿ. ಸತ್ಯನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: Gold Rate Today: ಮತ್ತೆ ಮೇಲ್ಮುಖವಾಗಿ ಸಾಗಿದ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

ಇದೇ ವೇಳೆ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಜಿಲ್ಲೆಯ ಹಿರಿಯ ಪತ್ರಕರ್ತರಿಗೆ ಸನ್ಮಾನ ಹಾಗೂ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

Continue Reading

ಕರ್ನಾಟಕ

Bengaluru News: ಕಲಾ ರಸಿಕರ ಮನಸೂರೆಗೊಳಿಸಿದ ‘ಶ್ರದ್ಧಾ ನೃತ್ಯಾರ್ಣವʼ ವಿಶೇಷ ನೃತ್ಯೋತ್ಸವ

Bengaluru News: ಬೆಂಗಳೂರಿನ ಶ್ರದ್ಧಾ ನೃತ್ಯ ಸಂಸ್ಥೆಯ 14ನೇ ವಾರ್ಷಿಕೋತ್ಸವದ ಅಂಗವಾಗಿ ನಗರದ ಮಲ್ಲೇಶ್ವರದ ವಯ್ಯಲಿಕಾವಲ್‌ನ ಚೌಡಯ್ಯ ಸ್ಮಾರಕ ಭವನದಲ್ಲಿ ಹಮ್ಮಿಕೊಂಡಿದ್ದ ‘ಶ್ರದ್ಧಾ ನೃತ್ಯಾರ್ಣವʼವಿಶೇಷ ನೃತ್ಯೋತ್ಸವವು ಕಲಾ ರಸಿಕರ ಮನಸೂರೆಗೊಳಿಸಿತು.

VISTARANEWS.COM


on

Shraddha Nrityarnava special dance festival in Bengaluru
Koo

ಬೆಂಗಳೂರು: ನಗರದ ಶ್ರದ್ಧಾ ನೃತ್ಯ ಸಂಸ್ಥೆಯ 14ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಶ್ರದ್ಧಾ ನೃತ್ಯಾರ್ಣವ’ ವಿಶೇಷ ನೃತ್ಯೋತ್ಸವ ಕಲಾ ರಸಿಕರ (Bengaluru News) ಮನಸೂರೆಗೊಂಡಿತು.

ನಗರದ ಮಲ್ಲೇಶ್ವರದ ವಯ್ಯಲಿಕಾವಲ್‌ನ ಚೌಡಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಸ್ಥೆಯ ಉತ್ಸಾಹಿ ಕಲಾವಿದರಿಂದ ನೃತ್ಯ ಸಮರ್ಪಣೆಯಾಗಿದ್ದು ವಿಶೇಷ. ಇದುವೇ ‘ನೃತ್ಯಾರ್ಣವʼದ ವಿಶೇಷ.

ದೇಶದ ಸುವಿಖ್ಯಾತ ರಚನೆಕಾರರ ಕೃತಿಗಳನ್ನು ಮೊದಲ ಹಂತದಲ್ಲಿ ನೃತ್ಯಾರ್ಣವಕ್ಕೆ ಸಮರ್ಥವಾಗಿ ಬಳಸಿಕೊಂಡು ಅದಕ್ಕೆ ತಕ್ಕಂತೆ ಚೇತೋಹಾರಿಯಾಗಿ ಯುವತಿಯರು ಹೆಜ್ಜೆ ಹಾಕಿದ್ದು ಗಮನ ಸೆಳೆಯಿತು.

ಇದನ್ನೂ ಓದಿ: Foreign Investment: ರಾಜ್ಯದಲ್ಲಿ ವಾಹನ ಬಿಡಿಭಾಗ ತಯಾರಿಕೆ; ಬಂಡವಾಳ ಹೂಡಿಕೆಗೆ ದ.ಕೊರಿಯಾ ಒಲವು

ಉತುಕ್ಕಾಡು ವೆಂಕಟಸುಬ್ಬಯ್ಯ ಅವರ ಆನಂದ ನರ್ತನ ಗಣಪತಿ, ತುಳಸೀ ದಾಸರ ಶ್ರೀ ರಾಮಚಂದ್ರ ಕೃಪಾಳು ಭಜಮನ, ಪದ್ಮಚರಣರ ಪ್ರದೋಷ ಸಮಯದಿ ಪರಶಿವ ತಾಂಡವ, ಪುರಂದರ ದಾಸರ ಭಾಗ್ಯದ ಲಕ್ಷ್ಮಿ ಬಾರಮ್ಮ – ಕೃತಿಗಳಿಗೆ ಸಂಸ್ಥೆಯ ಕಿರಿಯ ಕಲಾವಿದರು ನರ್ತಿಸಿ, ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯಿತು.

ಕಲಾಭಿವ್ಯಕ್ತಿಗೆ ಹೊಸ ಆಯಾಮ

ಕಾರ್ಯಕ್ರಮದಲ್ಲಿ ‘ಅಮೃತ ಮಂಥನ’ ನೃತ್ಯ ರೂಪಕ ಕಲಾಭಿವ್ಯಕ್ತಿಗೆ ಹೊಸ ಆಯಾಮವನ್ನೇ ನೀಡಿತು. ಸಂಸ್ಥೆ ನಿರ್ದೇಶಕಿ ಶಮಾ ಕೃಷ್ಣ ಹಾಗು ಹಿರಿಯ ಕಲಾವಿದರಿಂದ ಅಮೃತ ಮಂಥನ ಎಂಬುವ ರಸಪೂರ್ಣ ನೃತ್ಯ ನಾಟಕದ ಪ್ರಸ್ತುತಿ ವಿಶೇಷವಾಗಿ ಮೂಡಿಬಂತು. ಇದಕ್ಕೆ ಶತಾವಧಾನಿ ಡಾ. ಆರ್. ಗಣೇಶ್‌ರ ಸಾಹಿತ್ಯ, ಕಲಾವಿದ ಪ್ರವೀಣ್ ಡಿ. ರಾವ್ ಸಂಗೀತ ಮತ್ತು ವಿದುಷಿ ಶಮಾ ಕೃಷ್ಣ ಅವರ ನೃತ್ಯ ಸಂಯೋಜನೆ ಸಮರ್ಥವಾದ ನ್ಯಾಯ ಒದಗಿಸಿದ್ದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

ʼಅಮೃತ ಮಂಥನ’ ಕ್ಕೆ ಖ್ಯಾತ ಸಂಶೋಧಕಿ ಪ್ರೊ. ಕರುಣಾ ವಿಜಯೇಂದ್ರ, ಖ್ಯಾತ ನೃತ್ಯ ಪಟುಗಳಾದ ಶೇಷಾದ್ರಿ ಅಯ್ಯಂಗಾರ್ ಮತ್ತು ನವ್ಯಾ ನಟರಾಜ ಅವರು ಕಲಾ ರಸದೌತಣಕ್ಕೆ ಸಾಕ್ಷಿಯಾಗಿದ್ದು ಬಹು ವಿಶೇಷ.

ಇದನ್ನೂ ಓದಿ: Gold Rate Today: ಮತ್ತೆ ಮೇಲ್ಮುಖವಾಗಿ ಸಾಗಿದ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

ಹಿರಿಯ ಭರತನಾಟ್ಯ ಕಲಾವಿದೆ ವಿದುಷಿ ಶಮಾ ಕೃಷ್ಣ ಮಾತನಾಡಿ, ನನ್ನ ಕನಸು, ಕಲ್ಪನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹಿರಿಯ ಮತ್ತು ಕಿರಿಯ ಶಿಷ್ಯರು ಸೂಕ್ತವಾಗಿ ಸ್ಪಂದಿಸಿದ್ದಾರೆ. ನೃತ್ಯ ರೂಪಕ ಪ್ರಸ್ತುತಿ ಸಂದರ್ಭ ಕಲಾವಿದರ ಪ್ರತಿ ಹೆಜ್ಜೆಯಲ್ಲೂ ಹೊಸತನ ಮೂಡಿದೆ. ಮುಂಬರುವ ವರ್ಷಗಳಲ್ಲಿ ಮತ್ತಷ್ಟು ಹೊಸ ಪ್ರಯೋಗಕ್ಕೆ ಅಣಿಯಾಗಲು ‘ನೃತ್ಯಾರ್ಣವ’ ಹೊಸ ಚೈತನ್ಯ ನೀಡಿದೆ ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

Yuva Sambhrama 2024: ಸಂಗಮ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಟರ್ಬೋಸ್ಟೀಲ್‌ ಮತ್ತು ವಿಸ್ತಾರ ನ್ಯೂಸ್‌ ಸಹಯೋಗದಲ್ಲಿ ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಇದೇ ಜು. 12 ರಿಂದ 14 ರವರೆಗೆ ಮೂರು ದಿನಗಳ ಕಾಲ “ಯುವ ಸಂಭ್ರಮ 2024” ಕಾರ್ಯಕ್ರಮ ಏರ್ಪಡಿಸಲಾಗಿದೆ. ಚಿಣ್ಣರ ಮೇಳ, ನೃತ್ಯ ಸಂಭ್ರಮ, ಉಚಿತ ಆರೋಗ್ಯ ತಪಾಸಣೆ, ಉದ್ಯೋಗ ಮೇಳ, ರಸ ಸಂಜೆ ಕಾರ್ಯಕ್ರಮಗಳು ಜರುಗಲಿವೆ.

VISTARANEWS.COM


on

Yuva Sambhrama 2024 programme for 3 days from July 12 in Bengaluru
Koo

ಬೆಂಗಳೂರು: ಸಂಗಮ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಟರ್ಬೋಸ್ಟೀಲ್‌ ಮತ್ತು ವಿಸ್ತಾರ ನ್ಯೂಸ್‌ ಸಹಯೋಗದಲ್ಲಿ ನಗರದ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಇದೇ ಜು. 12ರಿಂದ 14 ರವರೆಗೆ ಮೂರು ದಿನಗಳ ಕಾಲ “ಯುವ ಸಂಭ್ರಮ 2024” ಕಾರ್ಯಕ್ರಮ (Yuva Sambhrama 2024) ಏರ್ಪಡಿಸಲಾಗಿದೆ.

ಇದನ್ನೂ ಓದಿ: Gold Rate Today: ಮತ್ತೆ ಮೇಲ್ಮುಖವಾಗಿ ಸಾಗಿದ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

ಜು.12 ರಂದು ಬೆಳಗ್ಗೆ 10 ಗಂಟೆಗೆ ಚಿಣ್ಣರ ಮೇಳ ಏರ್ಪಡಿಸಲಾಗಿದ್ದು, ಗಾಯನ, ರಸಪ್ರಶ್ನೆ, ಚಿತ್ರಕಲೆ ಹಾಗೂ ಆಶುಭಾಷಣ ಸ್ಪರ್ಧೆ ನಡೆಯಲಿದೆ. ಸಂಜೆ 5 ಗಂಟೆಗೆ ನೃತ್ಯ ಸಂಭ್ರಮ ನಡೆಯಲಿದ್ದು, ಭಾರತೀಯ ಸಂಸ್ಕೃತಿಯ ವಿದ್ಯಾಪೀಠ ಶಾಲೆ, ಸುಮನ್ಸ್‌ ಕಾನ್ವೆಂಟ್‌, ಎಂ.ಇ.ಎಸ್.‌ ಶಾಲೆ ಮತ್ತು ಕಾಲೇಜು ಹಾಗೂ ಲಹರಿ ಮ್ಯೂಜಿಕಲ್‌ ಅಕಾಡಮಿ ವಿದ್ಯಾರ್ಥಿಗಳು, ನರ್ತನ ನೃತ್ಯ ವೃಂದ ಹಾಗೂ ಪಾರ್ವತಿ ನೃತ್ಯ ವಿಹಂಗಮ ತಂಡದಿಂದ ನೃತ್ಯ ಸಂಭ್ರಮ ಜರುಗಲಿದೆ.

ಇದನ್ನೂ ಓದಿ: Foreign Investment: ರಾಜ್ಯದಲ್ಲಿ ವಾಹನ ಬಿಡಿಭಾಗ ತಯಾರಿಕೆ; ಬಂಡವಾಳ ಹೂಡಿಕೆಗೆ ದ.ಕೊರಿಯಾ ಒಲವು

ಜು. 12 ರಿಂದ 14 ರವರೆಗೆ ಆರೋಗ್ಯ ಮೇಳ (ಉಚಿತ ಆರೋಗ್ಯ ತಪಾಸಣೆ) ಏರ್ಪಡಿಸಲಾಗಿದೆ. ಜು.13 ಮತ್ತು 14 ರಂದು ಬೆಳಿಗ್ಗೆ 10 ಗಂಟೆಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದ್ದು, 40ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ.

ಜು.13 ಮತ್ತು 14 ರಂದು ಎರಡು ದಿನಗಳ ಕಾಲ ಸಂಜೆ 6 ಗಂಟೆಗೆ ಪ್ರಸಿದ್ಧ ಕಲಾವಿದರಿಂದ ರಸ ಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸರ್ವರಿಗೂ ಉಚಿತ ಪ್ರವೇಶ ವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading
Advertisement
Highest Collection Movie
ಸಿನಿಮಾ4 mins ago

Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

Narendra Modi
ರಾಜಕೀಯ5 mins ago

Narendra Modi: ರಾಹುಲ್‌ ಗಾಂಧಿ ಥರ ಆಡ್ಬೇಡಿ; ಗಂಭೀರವಾಗಿರಿ: ಎನ್‌ಡಿಎ ಸಂಸದರಿಗೆ ಮೋದಿ ಕಿವಿಮಾತು

theft Case
ಕ್ರೈಂ11 mins ago

Theft case : ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಕೆಲಸಗಾರ; ರಾಯಚೂರಲ್ಲಿ ಬೀಡುಬಿಟ್ಟ ಮಂಕಿ ಕ್ಯಾಪ್‌ ಗ್ಯಾಂಗ್‌!

AR Rahman
ಕ್ರೀಡೆ21 mins ago

AR Rahman: ಹಾಡಿನ ಮೂಲಕ ಟೀಮ್​ ಇಂಡಿಯಾಕ್ಕೆ ‘ಜೈ ಹೋ’ ಎಂದ ಎಆರ್ ರೆಹಮಾನ್

Press Day celebration Programme in hosapete
ವಿಜಯನಗರ21 mins ago

Press Day: ಹೊಸಪೇಟೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ

Police Arrest
Latest23 mins ago

Police Arrest: ಅಕ್ರಮ ಮದ್ಯ ಸಾಗಿಸಲು ಸಹಾಯ; ಸಿಕ್ಕಿ ಬಿದ್ದ ಸಿಐಡಿ ಲೇಡಿ ಆಫೀಸರ್!

Turbulence
ದೇಶ28 mins ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಲಗೇಜ್‌ ಕಂಪಾರ್ಟ್‌ಮೆಂಟ್‌ನಲ್ಲಿ ಸಿಲುಕಿದ ವ್ಯಕ್ತಿ-ವಿಡಿಯೋ ಇದೆ

Shraddha Nrityarnava special dance festival in Bengaluru
ಕರ್ನಾಟಕ28 mins ago

Bengaluru News: ಕಲಾ ರಸಿಕರ ಮನಸೂರೆಗೊಳಿಸಿದ ‘ಶ್ರದ್ಧಾ ನೃತ್ಯಾರ್ಣವʼ ವಿಶೇಷ ನೃತ್ಯೋತ್ಸವ

Yuva Sambhrama 2024 programme for 3 days from July 12 in Bengaluru
ಕರ್ನಾಟಕ29 mins ago

Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

Rohit Sharma
ಕ್ರೀಡೆ43 mins ago

Rohit Sharma: ಪಿಚ್​ ಮಣ್ಣು ತಿಂದಿದ್ದೇಕೆ?; ಪ್ರತಿಕ್ರಿಯಿಸಿದ ರೋಹಿತ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ20 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌