Tumkur News : ಸಾಲ ತೀರಿಸಲಾಗದೆ ಅಕ್ಕನ ಮಗಳನ್ನೇ ಮಾರಾಟ ಮಾಡಿದ್ದಳು ಚಿಕ್ಕಮ್ಮ! - Vistara News

ತುಮಕೂರು

Tumkur News : ಸಾಲ ತೀರಿಸಲಾಗದೆ ಅಕ್ಕನ ಮಗಳನ್ನೇ ಮಾರಾಟ ಮಾಡಿದ್ದಳು ಚಿಕ್ಕಮ್ಮ!

Tumkur News : ಮಹಿಳೆಯೊಬ್ಬಳು ಸಾಲ ತೀರಿಸಲು ಆಗದ್ದಕ್ಕೆ ತನ್ನ ಸ್ವಂತ ಅಕ್ಕನ ಮಗಳನ್ನೇ ಮಾರಾಟ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ತಾಯಿಯ ಸಮಯ ಪ್ರಜ್ಞೆಯಿಂದ ಬಾಲಕಿ ಬಚಾವ್‌ ಆಗಿದ್ದಾಳೆ.

VISTARANEWS.COM


on

tumkur News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಮಹಿಳೆಯೊಬ್ಬಳು ಸಾಲ ತೀರಿಸಲಾಗದೆ ಅಕ್ಕನ ಮಗಳನ್ನೇ ಮಾರಾಟ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸುಜಾತ ಎಂಬಾಕೆ ಕೇವಲ 35 ಸಾವಿರ ರೂ. ಸಾಲದ ಬದಲಿಗೆ ಬಾಲಕಿಯನ್ನು ಜೀತಕ್ಕಾಗಿ ಮಾರಾಟ ಮಾಡಿದ್ದಳು. ಆಂಧ್ರದ ಹಿಂದೂಪುರದಲ್ಲಿ ಈ ಘಟನೆ ನಡೆದಿತ್ತು. ತುಮಕೂರು ನಗರದ (Tumkur News) ದಿಬ್ಬೂರು ನಿವಾಸಿ‌ಯಾದ ಚೌಡಮ್ಮ ಎಂಬುವರ ಪುತ್ರಿಯನ್ನು ಆಕೆ ತಂಗಿ ಸುಜಾತ ಮಾರಾಟ ಮಾಡಿದ್ದಳು. ಚೌಡಮ್ಮ ತನ್ನ ತಂಗಿ ಸುಜಾತ ಬಾಣಂತನಕ್ಕೆಂದು ಮಗಳನ್ನು ಹಿಂದೂಪೂರಕ್ಕೆ ಕಳಿಸಿದ್ದಳು‌‌.

ಬಳಿಕ ಬಾಲಕಿಯನ್ನು ದಿಬ್ಬೂರಿಗೆ‌ ಕರೆತರಲು ಚೌಡಮ್ಮ ಹಿಂದೂಪುರದ ತಂಗಿಯ ಮನೆಗೆ ತೆರಳಿದ್ದಳು. ಈ ವೇಳೆ ಮಗಳು ತಂಗಿ ಮನೆಯಲ್ಲಿ ಇಲ್ಲದೇ ಇದ್ದಾಗ ಗಾಬರಿಗೊಂಡಿದ್ದರು. ಆಗ ತಂಗಿ ಸುಜಾತಳನ್ನು ದಬಾಯಿಸಿದಾಗ ಅಸಲಿ ಕಥೆ ಬಿಚ್ಚಿಟ್ಟಿದ್ದಾಳೆ. ಸುಜಾತ ಶ್ರೀರಾಮುಲು ಎಂಬುವನಿಗೆ ಮಾರಾಟ ಮಾಡಿರುವ ಬಗ್ಗೆ ಹೇಳಿಕೊಂಡಿದ್ದಳು.

ಬಾಲಕಿಯನ್ನು ಖರೀದಿಸಿದ್ದ ಶ್ರೀರಾಮುಲು ಬಾತುಕೋಳಿ ಮೇಯಿಸಲು ಒತ್ತೆಯಾಳಾಗಿ ಇರಿಸಿಕೊಂಡಿದ್ದ. ವಿಷಯ ತಿಳಿದ ಚೌಡಮ್ಮ ಮಗಳನ್ನು ತನ್ನೊಂದಿಗೆ ಕಳುಸುವಂತೆ ಬೇಡಿಕೊಂಡಿದ್ದರು. ಆದರೆ ಇದಕ್ಕೆ ಶ್ರೀರಾಮುಲು ಒಪ್ಪಿರಲಿಲ್ಲ.

ಬಾಲಕಿಯನ್ನು ತಾನು ಖರೀದಿಸಿದ್ದು, ಸಾಲದ ಹಣ ಕೊಟ್ಟು ಕರೆದುಕೊಂಡು ಹೋಗುವಂತೆ ಹೇಳಿದ್ದ. ವಾಪಸ್‌ ತುಮಕೂರಿಗೆ ಬಂದಿದ್ದ ಚೌಡಮ್ಮ ಮಗಳ ಸ್ಥಿತಿಯ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ದೂರನ್ನಾಧರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದ ಕಾರ್ಮಿಕ ಇಲಾಖೆ ಅಧಿಕಾರಿಗಳು, ತಕ್ಷಣ ಎಚ್ಚೆತ್ತು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ.

tumkur News
tumkur News

ತಾಯಿಯ ಸಮಯಪ್ರಜ್ಞೆಯಿಂದ 11 ವರ್ಷದ ಬಾಲಕಿ ಬಚಾವ್ ಆಗಿದ್ದಾಳೆ. ಸದ್ಯ ಬಾಲಕಿಯನ್ನು ಅಧಿಕಾರಿಗಳು ಜಿಲ್ಲಾ ಬಾಲ‌ ಮಂದಿರದಲ್ಲಿರಿಸಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇತ್ತ ಆರೋಪಿಗಳು ಕಾಲ್ಕಿತ್ತಿದ್ದು, ಪೊಲೀಸರು ಅವರಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ: Elephant Attack: ಕಾಡಾನೆ ದಾಳಿಗೆ ಫಾರೆಸ್ಟ್‌ ವಾಚರ್‌ ಬಲಿ; ಮೃತದೇಹ ತೆಗೆಯದೆ ಪರಿಹಾರಕ್ಕಾಗಿ ಗ್ರಾಮಸ್ಥರ ಪ್ರತಿಭಟನೆ

ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು; ಗಾಣಗಾಪುರದಲ್ಲಿ ಭಕ್ತೆ ಜಲಸಮಾಧಿ

ರಾಯಚೂರು: ಹಟ್ಟಿ ಚಿನ್ನದ ಗಣಿಯಲ್ಲಿ (Hutti Gold Mine) ಮಣ್ಣು ಕುಸಿದು (Accident news) ಕಾರ್ಮಿಕರೊಬ್ಬರು (Labourer Death) ಸಾವಿಗೀಡಾಗಿದ್ದಾರೆ. ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಪುಣ್ಯಕ್ಷೇತ್ರ ಗಾಣಗಾಪುರದಲ್ಲಿ ಸ್ನಾನಕ್ಕಾಗಿ ನದಿನೀರಿಗಿಳಿದ ಭಕ್ತೆಯೊಬ್ಬರು ಜಲಸಮಾಧಿ (Drowned) ಆಗಿದ್ದಾರೆ.

ಹಟ್ಟಿ ಚಿನ್ನದ ಗಣಿಯಲ್ಲಿ ನಿನ್ನೆ ರಾತ್ರಿ ಶಿಫ್ಟ್‌ನಲ್ಲಿ ಕಾರ್ಯ ನಿರ್ವಹಿಸುವಾಗ ಮಣ್ಣು ಕುಸಿದು ಒಬ್ಬರು ಕಾರ್ಮಿಕ ಸಾವಿಗೀಡಾಗಿದ್ದಾರೆ. ಮೃತ ಕಾರ್ಮಿಕರನ್ನು ಮೌನೇಶ್ (48) ಎಂದು ಗುರುತಿಸಲಾಗಿದೆ. ಇನ್ನೂ ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಒಬ್ಬ ಕಾರ್ಮಿಕರ ಕಾಲು ಕತ್ತರಿಸಿಹೋಗಿದೆ.

ಗಾಯಾಳು ಕಾರ್ಮಿಕರನ್ನು ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಇವರೆಲ್ಲ MS ಸಿಂಕಿ ಒಳಗೆ ಅಂದರೆ ಗಣಿಯ ಅತ್ಯಂತ ಕೊನೆಯ ಆಳದ ಲೆವೆಲ್‌ನಲ್ಲಿ ಕೆಲಸ ಮಾಡುತ್ತಿದ್ದವರು. ಲಾಸ್ಟ್ ಲೆವೆಲ್‌ನಲ್ಲಿ ಕೆಲಸ‌ ಮಾಡುತ್ತಿದ್ದಾಗ ಮಣ್ಣು ಕುಸಿದಿತ್ತು.

ಪುಣ್ಯಸ್ನಾನ ಮಾಡುವಾಗ ಮಹಿಳೆ ಜಲಸಮಾಧಿ

ಕಲಬುರಗಿ: ಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನದ ಬಳಿಯ ಭೀಮಾ ನದಿಯಲ್ಲಿ ಸ್ನಾನ ಮಾಡುವ ವೇಳೆ ಕಾಲು ಜಾರಿ ಬಿದ್ದು ಮುಳುಗಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಗಾಣಗಾಪುರ ಬಳಿಯಿರುವ ಭೀಮಾ ನದಿಯಲ್ಲಿ ಅನಾಹುತ ಸಂಭವಿಸಿದೆ.

ಶೈಲಿ ಗೋಡೆ (23) ಭೀಮಾ ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಮಹಿಳೆ. ಮಹಾರಾಷ್ಟ್ರದ ದೌಂಡ್ ತಾಲೂಕಿನ ವಂಡ‌ಅಡವಿ ಗ್ರಾಮದವರದಾದ ಇವರು ಕುಟುಂಬ ಸಮೇತ ಗಾಣಗಾಪುರದ ದತ್ತಾತ್ರೇಯ ದರ್ಶನಕ್ಕೆ ಆಗಮಿಸಿದ್ದರು. ದರ್ಶನಕ್ಕೂ ಮುನ್ನ ಭೀಮಾ ನದಿಯಲ್ಲಿ ಪುಣ್ಯಸ್ನಾನಕ್ಕೆ ಕುಟುಂಬ ತೆರಳಿತ್ತು. ಈ ವೇಳೆ ಭೀಮಾ ನದಿಯ ಚಕ್ರೇಶ್ವರ ತೀರ್ಥದಲ್ಲಿ ಸ್ನಾನ ಮಾಡಲು ತೆರಳಿದ್ದಾಗ ಅವಘಡ ನಡೆದಿದೆ. ಮೃತದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ಮತ್ತು ಪೊಲೀಸರು ಹೊರತೆಗೆದಿದ್ದಾರೆ. ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ, ಮಲೆನಾಡು ಸೇರಿ ಉತ್ತರ ಒಳನಾಡಿನಲ್ಲಿ ಹಗುರ ಮಳೆ

Karnataka Weather : ಕರಾವಳಿ, ಮಲೆನಾಡು ಸೇರಿ ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಒಣಹವೆ ಮುಂದುವರಿಯಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲಗೊಂಡಿದೆ. ಈ ದಿನ ಬುಧವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಉಳಿದಂತೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ.

ಇನ್ನು ಬೆಂಗಳೂರು ನಗರ ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ಆಕಾಶ ಇರಲಿದೆ. ಒಣ ಹವಾಮಾನ ಮುಂದುವರಿಯಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 20 ಡಿ.ಸೆ ಇರಲಿದೆ.

ಇಲ್ಲೆಲ್ಲ ಮಳೆ?

ಪುತ್ತೂರು ಎಚ್‌ಎಂಎಸ್, ಕೋಟ, ಹಣಂಬೂರು ವೀಕ್ಷಣಾಲಯ, ಗೋಕರ್ಣ, ಅಂಕೋಲಾ, ಕಾರ್ಕಳದಲ್ಲಿ ತಲಾ 3 ಸೆಂ.ಮೀ ಮಳೆಯಾಗಲಿದೆ. ಕಾರವಾರ ವೀಕ್ಷಣಾಲಯ, ಮಂಕಿ, ಮಂಗಳೂರು ಎಪಿ ಅನ್ಸರ್ವೇಟರಿ, ಗೇರ್ಸೊಪ್ಪ, ಕುಮಟಾ, ಉಡುಪಿ, ಶಿರಾಲಿ ಪಿಟಿಒ, ಲಿಂಗನಮಕ್ಕಿ ಎಚ್‌ಎಂಎಸ್, ಶೃಂಗೇರಿ ಎಚ್‌ಎಂಎಸ್ 2 ಸೆಂ.ಮೀ ಮಳೆಯಾಗಿದೆ. ಸಿದ್ದಾಪುರ, ಸುಳ್ಯ, ಮೂಲ್ಕಿ , ಕುಂದಾಪುರ, ಧಾರವಾಡ ಪಿಟಿಒ, ಶಿರಹಟ್ಟಿ , ಧಾರವಾಡ, ನರಗುಂದ, ಭಾಗಮಂಡಲ, ಕಮ್ಮರಡಿ ಸೇರಿ ಕೊಟ್ಟಿಗೆಹಾರ, ಜಯಪುರ, ಪೊನ್ನಂಪೇಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Self Harming : ತುಮಕೂರಿನಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ; ಸಾಲಗಾರರ ಕಿರುಕುಳಕ್ಕೆ ಮಹಿಳೆ ನೇಣಿಗೆ ಶರಣು

Self Harming : ತುಮಕೂರಿನಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಸಾಲಗಾರರ ಕಿರುಕುಳ ಬೇಸತ್ತು ಮಹಿಳೆಯೊಬ್ಬರು ನೇಣಿಗೆ ಶರಣಾಗಿದ್ದಾರೆ.

VISTARANEWS.COM


on

By

Microfinance crisis in Tumkur Woman commits suicide after being harassed by debtors
Koo

ತುಮಕೂರು: ತುಮಕೂರಿನಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗಿದೆ. ಸಾಲಗಾರರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಮಂಜುಳಾ (39) ಮೃತಳು.

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ದಂಡಿನಶಿವರ ಗ್ರಾಮದಲ್ಲಿ ಘಟನೆ ನಡೆದಿದೆ.
ಮೈಕ್ರೋ ಫೈನಾನ್ಸ್ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸಾಲ ಪಡೆದಿದ್ದ ಮಂಜುಳಾ, ಸಾಲಗಾರರ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ದಂಡಿನಶಿವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಕೃಷ್ಣಾ ನದಿಗೆ ಹಾರಿದ ಯುವತಿಯ ಶವ ಪತ್ತೆ

ಕಳೆದ ಸಪ್ಟೆಂಬರ್ 14ರಂದು ಕೃಷ್ಣಾ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಳು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಬಳಿಯ ಸೇತುವೆ ಮೇಲಿಂದ ನದಿಗೆ ಹಾರಿದ್ದಳು. ನೆರೆಯ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಚಟ್ನಿಹಾಳ ಗ್ರಾಮದ ಬಾಲವ್ವ ಕಮರಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಎರಡು ದಿನಗಳ ಕಾರ್ಯಾಚರಣೆ ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ನದಿಯಿಂದ ಯುವತಿ ಶವ ಹೊರ ತೆಗೆದಿದ್ದಾರೆ. ಯುವತಿ ಶವ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿಗೆ ಬಸ್‌ ಡಿಕ್ಕಿಯಾಗಿ ಚಾಲಕ ಸಾವು

ಕಾರಿಗೆ ಸರ್ಕಾರಿ ಬಸ್ ಡಿಕ್ಕಿಯಾಗಿ ಚಾಲಕನೊರ್ವ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡದ ಶಿರಸಿ-ಸಿದ್ದಾಪುರ ರಸ್ತೆಯ ಕಾನಗೋಡು ಗ್ರಾಮದ ಬಳಿ ನಡೆದಿದೆ. ಸಿದ್ದಾಪುರ ತಾಲ್ಲೂಕಿನ ಕೊಂಡ್ಲಿ ನಿವಾಸಿ ಚಂದ್ರಶೇಖರ ಬೆಲ್ಲದ್(55) ಮೃತ ದುರ್ದೈವಿ. ಕಾರಿನಲ್ಲಿದ್ದ ಚಂದ್ರಶೇಖರ್ ಅವರ ಪತ್ನಿ ಸುಜಾತಾ ಬೆಲ್ಲದ್‌ಗೂ ಗಾಯವಾಗಿದೆ. ದಂಪತಿ ತಮ್ಮ ಕಾರಿನಲ್ಲಿ ಸಿದ್ದಾಪುರದಿಂದ ಶಿರಸಿಗೆ ಹೊರಟಿದ್ದರು. ಬಸ್ ಶಿರಸಿಯಿಂದ ಸಾಗರಕ್ಕೆ ಹೊರಟಿದ್ದಾಗ ಕಾರಿಗೆ ಬಡಿದಿದೆ. ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಚಂದ್ರಶೇಖರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ಕರಾವಳಿಯಲ್ಲಿ ಸಾಧಾರಣ ಮಳೆ; ಉಳಿದೆಡೆ ಮುಂದುವರಿಯಲಿದೆ ಒಣಹವೆ

Karnataka Weather Forecast : ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ (Karnataka Weather Forecast) ಕಡಿಮೆ ಆಗಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ (Rain News) ಮುನ್ಸೂಚನೆಯನ್ನು ನೀಡಿದೆ. ಸೆ.16ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ ಸೇರಿ ಮಲೆನಾಡನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಮುಖ್ಯವಾಗಿ ಒಣ ಹವೆಯೇ ಮುಂದುವರಿಯುವ ಸಾಧ್ಯತೆಯಿದೆ. ಒಳನಾಡಿನ ಕೆಲವೆಡೆ ಪ್ರತ್ಯೇಕ ಸ್ಥಳದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇಲ್ಲೆಲ್ಲ ಮಳೆಯ ಸಿಂಚನ

ನಿನ್ನೆ ಕರಾವಳಿಯ ಹಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದೆ. ಉಡುಪಿಯ ಕೋಟ 3 ಸೆಂ.ಮೀ, ಗೋಕರ್ಣ, ಹೊನ್ನಾವರ ವೀಕ್ಷಣಾಲಯ, ಶಿರಾಲಿ ಪಿಟಿಒ, ಸಿದ್ದಾಪುರ, ಗೇರ್ಸೊಪ್ಪದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕುಂದಾಪುರ, ಉಡುಪಿ, ಕ್ಯಾಸಲ್ ರಾಕ್, ಉಪ್ಪಿನಂಗಡಿ, ಕಾರ್ಕಳ, ಕುಮಟಾ ಹಾಗೂ ಲೋಂಡಾ, ಕಮ್ಮರಡಿ, ಹಾಸನ ಪಿಟ್ಟಿಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Road Accident : ತುಮಕೂರಿನ ಪ್ರತ್ಯೇಕ ಕಡೆ ಭೀಕರ ಅಪಘಾತ; 7 ವರ್ಷದ ಬಾಲಕಿ ಸೇರಿ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವು

Road Accident : ತುಮಕೂರಿನ ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು ಸಂಭವಿಸಿದ್ದು, ಏಳು ವರ್ಷದ ಬಾಲಕಿ ಸೇರಿ ಮತ್ತಿಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವರು ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Road accident at isolated places in Tumkur Two bikers including a 7-year-old girl died on the spot
Koo

ತುಮಕೂರು: ಡಿವೈಡರ್‌ಗೆ ಕಾರು ಡಿಕ್ಕಿಯಾಗಿ 7 ವರ್ಷದ ಬಾಲಕಿ ದಾರುಣವಾಗಿ (Road Accident) ಮೃತಪಟ್ಟಿದ್ದಾಳೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ಘಟನೆ ನಡೆದಿದೆ. ಶಾಲಿನಿ (7)‌ ಮೃತ ದುರ್ದೈವಿ. ಬಸವೇಶ್ (16) ಎಂಬ ಬಾಲಕನಿಗೆ ಗಂಭೀರ ಗಾಯವಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ. ಮಲ್ಲಿಕಾರ್ಜುನ್ (51) ಎಂಬುವವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹುಂಡೈ ವೆನ್ಯು ಕಾರು ರಸ್ತೆ ಬದಿಯ ಡಿವೈಡರ್ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ಛಿದ್ರಗೊಂಡಿದೆ. ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್‌ ಕೆ.ವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

Road accident at isolated places in Tumkur Two bikers including a 7-year-old girl died on the spot
Road accident at isolated places in Tumkur Two bikers including a 7-year-old girl died on the spot

ಎರಡು ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ; ಸವಾರರಿಬ್ಬರು ಸಾವು

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೌತಮ್ (26) ಹಾಗೂ ಅನಿಲ್ (26) ಸ್ಥಳದಲ್ಲೇ ಮೃತಪಟ್ಟವರು. ಮಧುಗಿರಿ ತಾಲೂಕಿನ ತೆರೆಯೂರು ಮೂಲದ ಗೌತಮ್ ಹಾಗೂ ಬಂದ್ರೆಹಳ್ಳಿ ಗ್ರಾಮದ ಅನಿಲ್ ಮೃತ ದುರ್ದೈವಿಗಳು. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೆಎಸ್ಆರ್‌ಟಿಸಿ ಡಿಪೋ ಹಾಗೂ ಜಡಗೊಂಡನಹಳ್ಳಿ ಮಧ್ಯೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳು ಮಧುಗಿರಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ನಿಪ್ಪಾಣಿಯಲ್ಲಿ ಸರಣಿ ಅಪಘಾತ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸ್ಥವನಿಧಿ ಘಾಟ್ ಬಳಿ‌ 8 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಸರಣಿ ಅಪಘಾತಕ್ಕೆ ಸ್ಥಳದಲ್ಲೆ ಇಬ್ಬರು ದುರ್ಮರಣ ಹೊಂದಿದ್ದು, 6 ಜನರಿಗೆ ಗಂಭೀರ ಗಾಯಗೊಂಡಿದ್ದಾರೆ. ಸಾವಿನ‌ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಗಾಯಾಳುಗಳಿಗೆ ನಿಪ್ಪಾಣಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕಂಟೇನರ್‌ ವಾಹನದ ಚಾಲಕನ ನಿರ್ಲಕ್ಷ್ಯ ಹಿನ್ನೆಲೆಯಲ್ಲಿ ಮೂರು ಕಾರು, ಎರಡು ಲಾರಿ, ಒಂದು ಕಂಟೇನರ್ ಹಾಗೂ ಬೈಕ್‌ಗಳಿಗೆ ಗುದ್ದಿದೆ. ಒಬ್ಬ ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಿಪ್ಪಾಣಿ ಶಹರ ಪೊಲೀಸರು ದೌಡಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
MCC Seat Retention, Opportunity to Cancel KEA Seat Deadline to Cancel Seats by 11 AM on September 20
ಬೆಂಗಳೂರು3 hours ago

KEA : ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ಅವಕಾಶ; ಸೀಟು ರದ್ದು ಪಡಿಸಿಕೊಳ್ಳಲು ನಾಳೆವರೆಗೂ ಗಡುವು

Innovative technologies have revolutionized patients with heart valve disorder
ಬೆಂಗಳೂರು3 hours ago

World Heart Day: ಹೃದಯ ಕವಾಟ ಅಸ್ವಸ್ಥತೆ ಹೊಂದಿರುವ ರೋಗಿಗಳ ಪಾಲಿಗೆ ನವೀನ ತಂತ್ರಜ್ಞಾನಗಳು ವರದಾನ

Dr JG Manjunatha has been ranked among the world's top scientists for the fifth time in a row
ಕೊಡಗು3 hours ago

KM Cariappa College : ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 5ನೇ ಬಾರಿ ಸ್ಥಾನ ಪಡೆದ ಡಾ.ಜೆ.ಜಿ.ಮಂಜುನಾಥ

Muslims light aarti to Lord Ganesha Basavakalyana witnessed the confluence of unity
ಬೀದರ್‌4 hours ago

Ganesh Chaturthi: ಗಣೇಶನಿಗೆ ಆರತಿ ಬೆಳಗಿ ಸೌರ್ಹಾದತೆ ಮೆರೆದ ಮುಸ್ಲಿಂರು; ಭಾವೈಕತ್ಯೆಯ ಸಮಾಗಮಕ್ಕೆ ಸಾಕ್ಷಿಯಾದ ಬಸವಕಲ್ಯಾಣ

Breast cancer
ಬೆಂಗಳೂರು4 hours ago

Breast cancer : ಸ್ತನ ಕ್ಯಾನ್ಸರ್‌ ರೋಗಿಗೆ ರೊಬೋಟ್‌ ನೆರವಿನಿಂದ ತನ್ನದೆ ದೇಹದ ಮತ್ತೊಂದು ಭಾಗ ಬಳಸಿ ಸ್ತನ ಪುನರ್‌ ನಿರ್ಮಾಣ; ಫೋರ್ಟಿಸ್‌ ಆಸ್ಪತ್ರೆ ವೈದ್ಯರ ಯಶಸ್ವಿ ಶಸ್ತ್ರಚಿಕಿತ್ಸೆ

Road Accident
ಮಂಡ್ಯ4 hours ago

Road Accident : ಮಂಡ್ಯದಲ್ಲಿ ಕಾರು ಹಾಗೂ ಗೂಡ್ಸ್ ಆಟೋ ನಡುವೆ ಡಿಕ್ಕಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Congress expresses displeasure over BJP MLA Munirathnas rape case
ಬೆಂಗಳೂರು5 hours ago

MLA Muniratna: ಬಿಜೆಪಿ ಪಕ್ಷದ ಒಬ್ಬೊಬ್ಬ ನಾಯಕನೂ ಮುನಿರತ್ನನಂತಹ ಮುತ್ತು ರತ್ನಗಳೇ! ಕಾಂಗ್ರೆಸ್‌ ಟೀಕೆ

RDPR Protest
ಬೆಂಗಳೂರು6 hours ago

RDPR Protest: ಅಕ್ಟೋಬರ್ 4ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಸೇವೆ ಸಂಪೂರ್ಣ ಬಂದ್!

Honeytrap by MLA Munirathna
ರಾಜಕೀಯ8 hours ago

MLA Muniratna: ಎದುರಾಳಿಗಳ ಮಟ್ಟ ಹಾಕಲು ಶಾಸಕ ಮುನಿರತ್ನರಿಂದ ಏಡ್ಸ್‌ ಟ್ರ್ಯಾಪ್‌! ಎಫ್‌ಐಆರ್‌ನಲ್ಲಿದೆ ಬೆಚ್ಚಿಬೀಳಿಸುವ ಅಂಶ

Doctors at Siddagiri Hospital perform brain surgery on patient while playing flute
ಬೆಳಗಾವಿ9 hours ago

Siddhagiri Hospital : ರೋಗಿ ಕೊಳಲು ನುಡಿಸುವಾಗಲೇ ಮೆದುಳು ಶಸ್ತ್ರಚಿಕಿತ್ಸೆ; ಸಿದ್ದಗಿರಿ ಆಸ್ಪತ್ರೆ ವೈದ್ಯರ ಕಾರ್ಯಕ್ಕೆ ಮೆಚ್ಚುಗೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 year ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 weeks ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 weeks ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 months ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 months ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌