ಕುಣಿಗಲ್: ತಾಲೂಕಿನ ಸೀನಪ್ಪನಹಳ್ಳಿ ಗ್ರಾಮದ ಶ್ರೀ ಅಂಬಾ ಭವಾನಿ ಅನುದಾನಿತ ಫ್ರೌಢಶಾಲೆಯಲ್ಲಿ ನೀಡಿದ್ದ ಮೊಸರನ್ನ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳು ಚಿಕಿತ್ಸೆ ಪಡೆದು ಮನೆಗೆ ತೆರಳಿದ ಬಳಿಕ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು, (Tumkur News) ಗುರುವಾರ ತಡರಾತ್ರಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗುರುವಾರ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿದ ಬಳಿಕ 24 ಗಂಟೆ ನಿಗಾ ಘಟಕದಲ್ಲಿರಿಸಿ ಆರೋಗ್ಯ ಸ್ಥಿತಿ ಅವಲೋಕಿಸದೇ ವೈದ್ಯರು ಮನೆಗಳಿಗೆ ಕಳುಹಿಸಿದ್ದಾರೆ. ಇದಕ್ಕೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.
ಇದನ್ನೂ ಓದಿ: Tumkur News: ಚಿಕ್ಕನಾಯಕನಹಳ್ಳಿಯಲ್ಲಿ ಕೊಬ್ಬರಿ ಖರೀದಿ ಅವಧಿಯನ್ನು ವಿಸ್ತರಿಸುವಂತೆ ಆಗ್ರಹ; ರೈತರಿಂದ ಪ್ರತಿಭಟನೆ
ಘಟನೆಯ ಬಗ್ಗೆ ಮಾಹಿತಿ ಪಡೆದು ಆಸ್ಪತ್ರೆಗೆ ಆಗಮಿಸಿದ ತಾಲೂಕು ದಂಡಾಧಿಕಾರಿ ವಿಶ್ವನಾಥ್, ಮಕ್ಕಳ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದು ವೈದ್ಯರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಮಕ್ಕಳು ಗುಣಮುಖರಾಗುವವರೆಗೆ ಚಿಕಿತ್ಸೆ ಮುಂದುವರಿಸುವಂತೆ ತಿಳಿಸಿದರು. ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಾಲೆಯಲ್ಲಿ ಘಟನೆಗೆ ಕಾರಣವಾದವರ ವಿರುದ್ದ ಕ್ರಮಕ್ಕೆ ಸೂಚಿಸಿದ್ದಾರೆ.
ಇದನ್ನೂ ಓದಿ: Money Guide : ನಿವೃತ್ತಿಯ ಹಣಕಾಸು ಭದ್ರತೆಗೆ ಪ್ಲಾನ್ ಮಾಡೋದು ಹೇಗೆ?
ಡಿಎಚ್‌ಒ ಡಾ. ಮಂಜುನಾಥ್ ಆಸ್ಪತ್ರೆಗೆ ಭೇಟಿ ನೀಡಿ, ಬಳಿಕ ಮಾತನಾಡಿ, ಪ್ರಾಥಮಿಕ ವರದಿ ಪ್ರಕಾರ ಆಹಾರದಲ್ಲಿ ವ್ಯತ್ಯಾಸವಾಗಿರುವ ಕಾರಣ ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು ಕ್ರೀಮಿನಾಷಕದಿಂದಲ್ಲ. ಶಾಲಾ ಮಕ್ಕಳನ್ನು ಹೊರತುಪಡಿಸಿದರೆ ಶಾಲೆಯ ಅಕ್ಕಪಕ್ಕ ವಾಸವಿರುವ ಗ್ರಾಮಸ್ಥರಿಗೆ ಯಾವುದೇ ಸಮಸ್ಯೆಯಾಗಿಲ್ಲ ಬಿಸಿಯೂಟದ ಬದಲು ಮೋಸರನ್ನ ನೀಡಿದ್ದೆ ಘಟನೆಗೆ ಕಾರಣವಾಗಿದ್ದು ಶಾಲೆಯ ಆಡಳಿತ ಮಂಡಳಿಯವರು ಹಾಗು ಶಿಕ್ಷಕರು ಪ್ರಕರಣವನ್ನು ಮುಚ್ಚಿಹಾಕಲು ಮಾವಿನ ಗಿಡಗಳಿಗೆ ಔಷಧಿ ಸಿಂಪರಣೆ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುತ್ತಿರುವುದು ಈಗ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.