ಜೋಡಿ ಕೊಲೆ | ಹಾರೆಯಿಂದ ತಲೆಗೆ ಹೊಡೆದು ಪತ್ನಿ, ಮಗನ ಹತ್ಯೆ - Vistara News

ಕ್ರೈಂ

ಜೋಡಿ ಕೊಲೆ | ಹಾರೆಯಿಂದ ತಲೆಗೆ ಹೊಡೆದು ಪತ್ನಿ, ಮಗನ ಹತ್ಯೆ

ತುಮಕೂರಿನ ಗುಬ್ಬಿ ತಾಲೂಕಿನ ಮಾವಿನಹಳ್ಳಿಯಲ್ಲಿ ಗಂಡನೊಬ್ಬ ತನ್ನ ಪತ್ನಿ ಹಾಗೂ ಮಗುವನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ.

VISTARANEWS.COM


on

murder
ಆರೋಪಿ ಸ್ವಾಮಿಯನ್ನು ಗ್ರಾಮಸ್ಥರು ಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಪತ್ನಿ ಹಾಗೂ ಮಗುವನ್ನು ಪಾತಕಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ‌ ಕೊಂಡ್ಲಿ ಸಮೀಪದ ಮಾವಿನಹಳ್ಳಿಯಲ್ಲಿ ನಡೆದಿದೆ.

24 ವರ್ಷದ ಕವಿತಾ ಹಾಗೂ 4 ವರ್ಷದ ಜೀವನ್ ಕೊಲೆಯಾದವರು. ಕವಿತಾಳ ಗಂಡ ಸ್ವಾಮಿ ಇವರಿಬ್ಬರಿಗೂ ಹಾರೆಯಿಂದ ತಲೆಗೆ ‌ಹೊಡೆದು ಹತ್ಯೆ ಮಾಡಿದ್ದಾನೆ. ಬೆಳಗ್ಗೆ 6 ಗಂಟೆ ಸಂದರ್ಭದಲ್ಲಿ ಘೋರ ಕೃತ್ಯ ನಡೆದಿದೆ. ಗಲಾಟೆ ಕೇಳಿದ ಸ್ಥಳಕ್ಕೆ ಬಂದ ಗ್ರಾಮಸ್ಥರು ಆರೋಪಿ ಸ್ವಾಮಿಯನ್ನು ಹಿಡಿದು ತಪ್ಪಿಸಿಕೊಂಡು ಓಡಿ ಹೋಗದಂತೆ ಹಗ್ಗದಿಂದ ಕಟ್ಟಿ ಹಾಕಿ, ಪೊಲೀಸರ ವಶಕ್ಕೆ ನೀಡಿದ್ದಾರೆ.

ಗುಬ್ಬಿ ತಾಲೂಕು ನಿಟ್ಟೂರು ಹೋಬಳಿ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಚೇಳೂರು ಸಬ್ ಇನ್ಸ್‌ಪೆಕ್ಟರ್, ಗುಬ್ಬಿ ಸರ್ಕಲ್‌ ಇನ್ಸ್‌ಪೆಕ್ಟರ್ ನದಾಫ್‌ ಭೇಟಿ ನೀಡಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ | ಮ್ಯಾಟ್ರಿಮೋನಿ ವಂಚಕ | ಶ್ರೀಮಂತ ಯುವತಿಯರಿಗೆ ಸಾಲು ಸಾಲು ವಂಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Physical Abuse : ಕಾಂಪೌಂಡ್‌ ಹಾರಿ ಬಂದ ಪುರಸಭೆ ಅಧ್ಯಕ್ಷೆಯ ಗಂಡನಿಗೆ ಚಳಿ ಬಿಡಿಸಿದ ಮಹಿಳೆಯರು

ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪುರಸಭೆಯ ಅಧ್ಯೆಕ್ಷೆಯ ಪತಿಯನ್ನು ಹಿಡಿದು ಥಳಿಸಿದ್ದಾರೆ. ಕಾಂಪೌಂಡ್‌ ಹಾರಿ ಮನೆಯೊಳಗೆ ಬಂದು ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.

VISTARANEWS.COM


on

By

Physical Abuse in Gadaga
Koo

ಗದಗ: ಲೈಂಗಿಕ ಕಿರುಕುಳ (Physical Abuse) ಕೊಟ್ಟ ಪುರಸಭೆ ಅಧ್ಯಕ್ಷೆಯ‌ ಪತಿಗೆ ಮಹಿಳೆಯರು ಹಿಡಿದು ಥಳಿಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ನಡೆದಿದೆ. ಪುರಸಭೆ ಪ್ರಭಾರಿ ಅಧ್ಯಕ್ಷೆ ಕವಿತಾ ಉಳ್ಳಾಗಡ್ಡಿ ಅವರ ಪತಿ ಅಂದಪ್ಪ ಉಳ್ಳಾಗಡ್ಡಿ ಧರ್ಮದೇಟು ತಿಂದವನು.

ಮುಂಡರಗಿಯಲ್ಲಿದ್ದ ಕುಟುಂಬವೊಂದರ ಸಹೋದರಿಯರಿಗೆ, ಅಂದಪ್ಪ ಉಳ್ಳಾಗಡ್ಡಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈತನ ಕಾಟಕ್ಕೆ ತಿರುಗಿದ್ದ ಬಿದ್ದ ಮಹಿಳೆಯರು ಮನೆಗೆ ಬರುವಂತೆ ಹೇಳಿದ್ದರು.

ಈ ವೇಳೆ ತಾನೇನು ಮಾಡಿಲ್ಲ, ಸುಖಾಸುಮ್ಮನೆ ಆರೋಪ ಮಾಡಲಾಗುತ್ತಿದೆ ಎಂದಾಗ ಸಹೋದರಿಯರು ಕಪಾಳಮೋಕ್ಷ ಮಾಡಿ ಚಳಿ ಬಿಡಿಸಿದ್ದಾರೆ. ಹಿಂದೊಮ್ಮೆ ಕಾಂಪೌಂಡ್‌ ಹಾರಿ ಮನೆಯೊಳಗೆ ಬಂದು ಕಿರಿಕಿರಿ ಮಾಡುತ್ತಿದ್ದ ಎನ್ನಲಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

ಮಕ್ಕಳ ಎದುರೇ ತಂದೆಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ಮೀರತ್: ಮೂವರು ಚಿಕ್ಕ ಮಕ್ಕಳ ಎದುರೇ ತಂದೆಯನ್ನು ಗುಂಡಿಕ್ಕಿ ಹತ್ಯೆ (murder) ಮಾಡಿರುವ ಘಟನೆ ಉತ್ತರ ಪ್ರದೇಶದ (uttarpradesh) ಮೀರತ್‌ನ (Meerut) ಕ್ಲಬ್‌ನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೀರತ್‌ನ ಜೈದಿ ಫಾರ್ಮ್‌ನ ನಿವಾಸಿ ಅರ್ಷದ್ (25) ಹತ್ಯೆಯಾದ ವ್ಯಕ್ತಿ. ಅವರು ತಮ್ಮ ಇಬ್ಬರು ಹೆಣ್ಣುಮಕ್ಕಳು ಮತ್ತು ಮಗನೊಂದಿಗೆ ಮೀರತ್‌ನ ಕ್ಲಬ್‌ಗೆ ಬಂದಿದ್ದಾಗ ಈ ಘಟನೆ ನಡೆದಿದೆ.

ಉತ್ತರ ಪ್ರದೇಶದ ಮೀರತ್‌ನ ಲೋಹಿಯಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ (Viral Video) ಆಗಿದೆ. ಅರ್ಷದ್ ಮಂಗಳವಾರ ರಾತ್ರಿ ಮಕ್ಕಳೊಂದಿಗೆ ಭದಾನದಲ್ಲಿರುವ ಕ್ಲಬ್‌ನ ಈಜುಕೊಳಕ್ಕೆ ತೆರಳಿದ್ದರು. ಜನರಿಂದ ತುಂಬಿದ್ದ ಕ್ಲಬ್‌ನಲ್ಲಿ ಅರ್ಷದ್ ಒಬ್ಬ ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದಾಗಲೇ ಈ ಘಟನೆ ನಡೆದಿದೆ. ಈ ಘಟನೆ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದೆ. ಅರ್ಷದ್ ತನ್ನ ಫೋನ್ ಅನ್ನು ನೋಡುತ್ತಿದ್ದಂತೆ ಒಬ್ಬ ವ್ಯಕ್ತಿ ಅವರನ್ನು ಜನರ ಗುಂಪಿನಿಂದ ಪ್ರತ್ಯೇಕಿಸಲು ಪ್ರಯತ್ನಿಸುತ್ತಾನೆ. ಕೂಡಲೇ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ನೆಲಕ್ಕೆ ಬಿದ್ದ ಅವರತ್ತ ಮಕ್ಕಳು ಅಳುತ್ತಾ ಓಡಿ ಬಂದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ವಿಕ್ರಮ್ ತಿಳಿಸಿದ್ದಾರೆ.

ಆರೋಪಿಗಳು ಅರ್ಷದ್ ಅವರ ತಲೆಗೆ ಅತಿ ಸಮೀಪದಿಂದ ಪಾಯಿಂಟ್ ಬ್ಲಾಂಕ್ ರೇಂಜ್‌ ನಲ್ಲಿ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಹಳೆ ವೈಷಮ್ಯವೇ ಘಟನೆಗೆ ಕಾರಣ ಎನ್ನಲಾಗಿದೆ.


ಕೆಲವು ದಿನಗಳ ಹಿಂದೆ ಹಣದ ವಿಚಾರವಾಗಿ ಬಿಲಾಲ್ ಮತ್ತು ಅರ್ಷದ್ ನಡುವೆ ತೀವ್ರ ಜಗಳವಾಗಿತ್ತು. ಇಬ್ಬರ ವಿರುದ್ಧವೂ ಹಲವು ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಅರ್ಷದ್ ಕುಟುಂಬದ ದೂರಿನ ಮೇರೆಗೆ ಬಿಲಾಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಆತನ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Encounter in UP: ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ ಎನ್‌ಕೌಂಟರ್‌ಗೆ ಬಲಿ! ಯೋಗಿ ನಾಡಿನಲ್ಲಿ ಮತ್ತೆ ಗುಂಡಿನ ಸದ್ದು

Encounter in UP: ನೀಲೇಶ್‌ ರೈ ಪತ್ತೆಗೆ ಉತ್ತರಪ್ರದೇಶ ಪೊಲೀಸರು 2.25 ಲಕ್ಷ ರೂ. ಬಹುಮಾನ ಘೋಷಿಸಿದ್ದರು. ಮೂಲತಃ ಈ ಬಿಹಾರಸ ಬೇಗಸರೈ ಜಿಲ್ಲೆಯವನಾಗಿದ್ದು, ಬರೋಬ್ಬರಿ 16 ಪ್ರಕರಣಗಳು ಆತನ ವಿರುದ್ಧ ದಾಖಲಾಗಿದ್ದವು. ಆತನ ವಿರುದ್ಧ ಕೊಲೆ, ಲೂಟಿ ಮತ್ತು ಸುಲಿಗೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಆತನ ಪತ್ತೆಗಾಗಿ ಪೊಲೀಸರು ಭಾರೀ ಬಹುಮಾನ ಘೋಷಿಸಿದ್ದರು.

VISTARANEWS.COM


on

Encounter in UP
Koo

ಲಕ್ನೋ: ಚುನಾವಣೆ ಮುಗಿಯುತ್ತಿದ್ದಂತೆ ಯೋಗಿ(Yogi adityanath)ನಾಡು ಉತ್ತರಪ್ರದೇಶ(Uttar Pradesh)ದಲ್ಲಿ ಗುಂಡಿನ ಸದ್ದು ಮೊಳಗಿದೆ. ಗ್ಯಾಂಗ್‌ಸ್ಟರ್‌(Gangster)ವೊಬ್ಬನನ್ನು ಎನ್‌ಕೌಂಟರ್‌(Encounter in UP) ಮಾಡಲಾಗಿದೆ. ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ಉತ್ತರಪ್ರದೇಶ ಮತ್ತು ಬಿಹಾರದ ವಿಶೇಷ ಕಾರ್ಯಪಡೆಗಳು ಜಂಟೀ ಕಾರ್ಯಾಚರಣೆ ನಡೆಸಿ ನೀಲೇಶ್‌ ರೈ ಎಂಬಾತನನ್ನು ಹೊಡೆದುರುಳಿಸಿದೆ. ಮುಜಾಫರ್‌ನಗರದ ರತನ್‌ಪುರಿ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಇನ್ನು ನೀಲೇಶ್‌ ರೈ ಪತ್ತೆಗೆ ಉತ್ತರಪ್ರದೇಶ ಪೊಲೀಸರು 2.25 ಲಕ್ಷ ರೂ. ಬಹುಮಾನ ಘೋಷಿಸಿದ್ದರು. ಮೂಲತಃ ಈ ಬಿಹಾರಸ ಬೇಗಸರೈ ಜಿಲ್ಲೆಯವನಾಗಿದ್ದು, ಬರೋಬ್ಬರಿ 16 ಪ್ರಕರಣಗಳು ಆತನ ವಿರುದ್ಧ ದಾಖಲಾಗಿದ್ದವು. ಆತನ ವಿರುದ್ಧ ಕೊಲೆ, ಲೂಟಿ ಮತ್ತು ಸುಲಿಗೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಆತನ ಪತ್ತೆಗಾಗಿ ಪೊಲೀಸರು ಭಾರೀ ಬಹುಮಾನ ಘೋಷಿಸಿದ್ದರು.

ಇನ್ನು ಈತ ರತನ್‌ಪುರಿ ಪ್ರದೇಶದಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಬಿಹಾರ, ಉತ್ತರಪ್ರದೇಶ ಪೊಲೀಸರು ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಪೊಲೀಸರ ಗುಂಡೇಟು ಬಿದ್ದು ನೀಲೇಶ್‌ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದಾನೆ.

ಐದು ತಿಂಗಳ ಹಿಂದೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗ್ಯಾಂಗ್‌ಸ್ಟರ್‌, ಶಾರ್ಪ್‌ ಶೂಟರ್‌ ವಿನೋದ್‌ ಕುಮಾರ್‌ ಉಪಾಧ್ಯಾಯ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಬಲಿಯಾಗಿದ್ದಾನೆ. ಸುಲ್ತಾನ್‌ಪುರದ ದೆಹತ್ ಕೊಟ್ವಾಲಿ ಪ್ರದೇಶದ ಎಸ್‌ಟಿಎಫ್‌ ಪ್ರಧಾನ ಕಚೇರಿಯ ಡಿವೈಎಸ್ಪಿ ದೀಪಕ್ ಕುಮಾರ್ ಸಿಂಗ್ ನೇತೃತ್ವದ ತಂಡ ಈ ಎನ್‌ಕೌಂಟರ್‌ ನಡೆಸಿತ್ತು.

ವಿನೋದ್‌ ಕುಮಾರ್‌ ವಿರುದ್ಧ ಲಕ್ನೋ ಮತ್ತು ಗೋರಖ್‌ಪುರ ಸೇರಿದಂತೆ ಉತ್ತರ ಪ್ರದೇಶದಾದ್ಯಂತ ಅಪಹರಣ, ದರೋಡೆ, ಸುಲಿಗೆಯ ಅನೇಕ ಪ್ರಕರಣಗಳು ದಾಖಲಾಗಿವೆ. ಆತನನ್ನು ಬಂಧಿಸುವವರಿಗೆ ಗೋರಖ್‌ಪುರ ಪೊಲೀಸರು 1 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದ್ದರು. ಈತ ಗೋರಖ್‌ಪುರ, ಬಸ್ತಿ, ಸಂತ ಕಬೀರ್ ನಗರ ಮತ್ತು ಲಕ್ನೋದಲ್ಲಿ ಆತ ಹಲವು ಕೊಲೆಗಳನ್ನು ನಡೆಸಿದ್ದ. ಇದಲ್ಲದೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕ್ಷೇತ್ರವಾದ ಗೋರಖ್‌ಪುರದ ಗೋರಖನಾಥ್ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿವೆ. ಅಲ್ಲದೆ ವಿನೋದ್ ಕುಮಾರ್‌ ಹೆಸರಿನಲ್ಲಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಇನ್ನೂ 31 ಪ್ರಕರಣಗಳಿವೆ.

ಸುಲ್ತಾನ್‌ಪುರ ಜಿಲ್ಲೆಯ ಕೊಟ್ವಾಲಿ ಪ್ರದೇಶದಲ್ಲಿ ವಿನೋದ್ ಕುಮಾರ್‌ ಮತ್ತು ಯುಪಿ ಎಸ್‌ಟಿಎಫ್ ನಡುವೆ ಎನ್ ಕೌಂಟರ್ ನಡೆದಿತ್ತು. ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ವಿನೋದ್‌ ಕುಮಾರ್‌ನನ್ನು ಬಳಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅಷ್ಟರಲ್ಲಿ ಆತ ಸಾವನ್ನಪ್ಪಿದ್ದ ಎಂದು ವೈದ್ಯರು ತಿಳಿಸಿದ್ದರು. ನಿಖರವಾದ ಗುರಿಗೆ ಹೆಸರುವಾಸಿಯಾದ ವಿನೋದ್ ಕುಮಾರ್‌ ಅಪರಾಧ ಜಗತ್ತಿನಲ್ಲಿ ಕೋಲಾಹಲ ಸೃಷ್ಟಿಸಿದ್ದ. ಹೀಗಾಗಿ ಈತನ ಹತ್ಯೆ ಎಸ್‌ಟಿಎಫ್ ಸಿಕ್ಕ ಯಶಸ್ಸು ಎಂದು ಪರಿಗಣಿಸಲಾಗಿದೆ. ಎನ್‌ಕೌಂಟರ್‌ ಬಳಿಕ 30 ಚೀನಿ ಕಂಪನಿ ನಿರ್ಮಿತ ಪಿಸ್ತೂಲ್, ಕಾರ್ಖಾನೆ ನಿರ್ಮಿತ 9 ಎಂಎಂ ಸ್ಟೆನ್ ಗನ್ ಮತ್ತು ಖಾಲಿ ಕಾರ್ಟಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜತೆಗೆ ಪೊಲೀಸರು ಸ್ವಿಫ್ಟ್ ಕಾರನ್ನು ಸಹ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: Narendra Modi: ಜೂ.8ರಂದು ಮೋದಿ ಪ್ರಮಾಣವಚನ; ದೇಶ ವಿದೇಶಗಳ ಗಣ್ಯರು ಭಾಗಿ

Continue Reading

ಬಾಗಲಕೋಟೆ

Dead Body Found : ಸೇತುವೆ ಸಮೀಪದಲ್ಲಿತ್ತು ಕೊಳೆತ ಮಹಿಳೆಯ ಶವ; ಹಂತಕರು ಯಾರು?

Dead Body Found : ಮಹಿಳೆಯೊಬ್ಬರ ಅಪರಿಚಿತ ಶವವೊಂದು ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ದುಷ್ಕರ್ಮಿಗಳು ಹತ್ಯೆ ಮಾಡಿ ಶವ ಬಿಸಾಡಿ ಹೋಗಿರಬಹುದೆಂದು ಅಂದಾಜಿಸಲಾಗಿದೆ.

VISTARANEWS.COM


on

By

Dead Body Found
Koo

ಬಾಗಲಕೋಟೆ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ (Dead Body Found) ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ರೊಳ್ಳಿ ಗ್ರಾಮದ ಎನ್‌ಎಚ್-218ರ ಸೇತುವೆ ಬಳಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಎರಡು ದಿನಗಳ ಹಿಂದೆ ಕೊಲೆ ಮಾಡಿ ಶವವನ್ನು ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಳ ಬಗ್ಗೆ ಯಾವುದೇ ಗುರುತು ಪತ್ತೆಯಾಗಿಲ್ಲ. ಮೃತ‌ದೇಹ ಡಿ-ಕಂಪೂಸ್ ಆಗಿದ್ದು, ನಾಪತ್ತೆ ಪ್ರಕರಣಗಳು ದಾಖಲಾಗಿರುವ ಪೊಲೀಸ್‌ ಠಾಣೆಗಳಿಗೆ ಮಾಹಿತಿ ರವಾನಿಸಲಾಗಿದೆ.

ಮೃತ ಯುವತಿ ನೆವಿ ಬ್ಲೂ ಟಾಪ್ ಮತ್ತು ರೆಡ್ ಲಗ್ಗಿನ್ಸ್ ಧರಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಮಹಿಳೆ ಯಾವ ರೀತಿ ಮೃತಪಟ್ಟಿದ್ದಾಳೆ ಎಂಬುದು ತಿಳಿಯಲಿದೆ. ಬೀಳಗಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Kannada New Movie: ಮಹಿಳಾ ಪ್ರಧಾನ ಮರ್ಡರ್ ಮಿಸ್ಟ್ರಿ “ಕ್ಯಾನ್ಬೆರಿ ಬೇಬೀಸ್”ಗೆ ಮುಹೂರ್ತ

ಸ್ನೇಹಿತರೇ ಕೊಲೆಗಾರರು; ಬರ್ತ್‌ ಡೇ ಪಾರ್ಟಿಗೆ ಹೋದ ಯುವಕನ ಬರ್ಬರ ಹತ್ಯೆ

ಬೆಳಗಾವಿ: ಸ್ನೇಹಿತನ ಬರ್ತ್ ಡೇ ಪಾರ್ಟಿಗೆ (Birthday Party) ತೆರಳಿದ್ದ ಯುವಕನ ಬರ್ಬರ (Murder Case) ಹತ್ಯೆಯಾಗಿದೆ. ಬೆಳಗಾವಿ ಜಿಲ್ಲೆಯ (Belgavi News) ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ಬಸವರಾಜ ಮುದ್ದಣ್ಣವರ (23) ಎಂಬಾತನ ಹತ್ಯೆಯಾಗಿದೆ.

ಎಂಎಸ್‌ಡಬ್ಲ್ಯೂ ವ್ಯಾಸಂಗ ಮಾಡುತ್ತಿದ್ದ ಬಸವರಾಜ ಮುದ್ದಣ್ಣವರ, ನಿನ್ನೆ ಬುಧವಾರ ರಾತ್ರಿ ಸ್ನೇಹಿತ ಮಲ್ಲಿಕಾರ್ಜುನ ಎಂಬಾತನ ಬರ್ತ್ ಡೇ ಪಾರ್ಟಿಗೆ ತೆರಳಿದ್ದ. ಈ ವೇಳೆ ಬರ್ತ್ ಡೇ ಪಾರ್ಟಿಗೆ ಆಗಮಿಸಿದ್ದ ಸ್ನೇಹಿತರ ಮಧ್ಯೆ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ಸ್ನೇಹಿತರೇ ಬಸವರಾಜ ಮುದ್ದಣ್ಣವರಗೆ ಹೊಟ್ಟೆ, ಬೆನ್ನಿಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

ತೀವ್ರ ಹಲ್ಲೆಗೊಳಾದ ಬಸೌರಾಜನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಕಲಾಗಿದೆ. ಬಸವರಾಜ ಮೃತದೇಹವನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇನ್ನು ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗನ ಹತ್ಯೆಗೈದವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಬಸವರಾಜ ತಾಯಿ ಒತ್ತಾಯಿಸಿದ್ದಾರೆ. ನನ್ನ ಮಗ ಯಾರ ತಂಟೆಗೂ ಹೋಗುತ್ತಿರಲಿಲ್ಲ, ಕಾಲೇಜಿನಲ್ಲಿ ಚಿನ್ನದ ಪದಕ ಪಡೆದಿದ್ದ. ಬರ್ತ್ ಡೇ ಪಾರ್ಟಿಗೆ ಹೋಗುತ್ತೇನೆ ಎಂದರೆ ಕಳಿಸುತ್ತಿರಲಿಲ್ಲ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಎಂದು ಕಣ್ಣೀರಿಟ್ಟರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Murder Case : ಸ್ನೇಹಿತರೇ ಕೊಲೆಗಾರರು; ಬರ್ತ್‌ ಡೇ ಪಾರ್ಟಿಗೆ ಹೋದ ಯುವಕನ ಬರ್ಬರ ಹತ್ಯೆ

Murder case : ಸ್ನೇಹಿತನ ಬರ್ತ್‌ ಡೇ ಪಾರ್ಟಿಗೆಂದು (Birthday Party) ಹೋದ ಯುವಕನೊಬ್ಬ ಕೊಲೆಯಾಗಿ ಹೋಗಿದ್ದಾನೆ. ಬರ್ತ್‌ ಡೇ ಪಾರ್ಟಿಯಲ್ಲಿ ಸಣ್ಣದೊಂದು ಕಿರಿಕ್‌ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕೊಲೆಗಾರರಿಗೆ ಕಠಿಣ ಶಿಕ್ಷೆ ವಿಧಿಸಿ ಎಂದು ಆಕ್ರೋಶಿಸಿದ್ದಾರೆ.

VISTARANEWS.COM


on

By

Murder Case
ಮೃತ ಬಸವರಾಜ
Koo

ಬೆಳಗಾವಿ: ಸ್ನೇಹಿತನ ಬರ್ತ್ ಡೇ ಪಾರ್ಟಿಗೆ (Birthday Party) ತೆರಳಿದ್ದ ಯುವಕನ ಬರ್ಬರ (Murder Case) ಹತ್ಯೆಯಾಗಿದೆ. ಬೆಳಗಾವಿ ಜಿಲ್ಲೆಯ (Belgavi News) ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ಬಸವರಾಜ ಮುದ್ದಣ್ಣವರ (23) ಎಂಬಾತನ ಹತ್ಯೆಯಾಗಿದೆ.

ಎಂಎಸ್‌ಡಬ್ಲ್ಯೂ ವ್ಯಾಸಂಗ ಮಾಡುತ್ತಿದ್ದ ಬಸವರಾಜ ಮುದ್ದಣ್ಣವರ, ನಿನ್ನೆ ಬುಧವಾರ ರಾತ್ರಿ ಸ್ನೇಹಿತ ಮಲ್ಲಿಕಾರ್ಜುನ ಎಂಬಾತನ ಬರ್ತ್ ಡೇ ಪಾರ್ಟಿಗೆ ತೆರಳಿದ್ದ. ಈ ವೇಳೆ ಬರ್ತ್ ಡೇ ಪಾರ್ಟಿಗೆ ಆಗಮಿಸಿದ್ದ ಸ್ನೇಹಿತರ ಮಧ್ಯೆ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ಸ್ನೇಹಿತರೇ ಬಸವರಾಜ ಮುದ್ದಣ್ಣವರಗೆ ಹೊಟ್ಟೆ, ಬೆನ್ನಿಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

ತೀವ್ರ ಹಲ್ಲೆಗೊಳಾದ ಬಸೌರಾಜನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಕಲಾಗಿದೆ. ಬಸವರಾಜ ಮೃತದೇಹವನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇನ್ನು ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗನ ಹತ್ಯೆಗೈದವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಬಸವರಾಜ ತಾಯಿ ಒತ್ತಾಯಿಸಿದ್ದಾರೆ. ನನ್ನ ಮಗ ಯಾರ ತಂಟೆಗೂ ಹೋಗುತ್ತಿರಲಿಲ್ಲ, ಕಾಲೇಜಿನಲ್ಲಿ ಚಿನ್ನದ ಪದಕ ಪಡೆದಿದ್ದ. ಬರ್ತ್ ಡೇ ಪಾರ್ಟಿಗೆ ಹೋಗುತ್ತೇನೆ ಎಂದರೆ ಕಳಿಸುತ್ತಿರಲಿಲ್ಲ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಎಂದು ಕಣ್ಣೀರಿಟ್ಟರು.

ಇದನ್ನೂ ಓದಿ: Prajwal Revanna Case: ಬೆಡ್‌ಶೀಟ್‌ ಮೇಲಿರುವ `ಕಲೆಗಳ ಮಾಲಿಕ ನಾನಲ್ಲ…’ ಎನ್ನುತ್ತಿರುವ ಪ್ರಜ್ವಲ್!

ಸತ್ತ ವ್ಯಕ್ತಿಯ ದೇಹವನ್ನು ಏಕಾಂಗಿಯಾಗಿ ಬಿಡಬಾರದು ಅನ್ನೋದು ಯಾಕೆ ಗೊತ್ತೇ?

ಭೂಮಿಯಲ್ಲಿ (earth) ಹುಟ್ಟಿದ ಮನುಷ್ಯ, ಪ್ರಾಣಿ, ಸಸ್ಯಗಳು ಸೇರಿ ಪ್ರತಿಯೊಂದು ಜೀವ ಜಂತುಗಳು ಒಂದಲ್ಲ ಒಂದು ದಿನ ಸಾಯಲೇಬೇಕು (death) ಎಂಬುದು ಜೀವನದ ಕಟು ಸತ್ಯ. ಜೀವನ ಮತ್ತು ಸಾವಿನ ಚಕ್ರವು ನಾವೆಲ್ಲರೂ ಒಪ್ಪಿಕೊಳ್ಳಬೇಕಾದ ಅನಿವಾರ್ಯ ಸತ್ಯವಾಗಿದೆ. ಹಿಂದೂ ಧರ್ಮದ ನಂಬಿಕೆ (Hinduism Beliefs) ಪ್ರಕಾರ ಸತ್ತ ವ್ಯಕ್ತಿಯ ದೇಹವನ್ನು (dead body) ಒಂಟಿಯಾಗಿ ಬಿಡಬಾರದು ಎನ್ನಲಾಗುತ್ತದೆ.

ವ್ಯಕ್ತಿಯ ಕರ್ಮಗಳ ಪ್ರಕಾರ ಒಬ್ಬನು ಸ್ವರ್ಗ ಅಥವಾ ನರಕಕ್ಕೆ ಹೋಗುತ್ತಾನೆ ಎಂದು ಹೇಳಲಾಗುತ್ತದೆ. ಗರುಡ ಪುರಾಣವು ಹುಟ್ಟಿನಿಂದ ಸಾವಿನವರೆಗೆ ಎಲ್ಲವನ್ನೂ ವಿವರಿಸುವ ಒಂದು ಪಠ್ಯವಾಗಿದೆ. ಅದರೊಂದಿಗೆ, ಒಬ್ಬ ವ್ಯಕ್ತಿಯು ತನ್ನ ಮರಣದ ಅನಂತರ ಯಾವ ನೋವುಗಳು ಮತ್ತು ಫಲಿತಾಂಶಗಳನ್ನು ಪಡೆಯಬೇಕು ಎಂಬುದರ ಕುರಿತು ಸಹ ವಿವರಿಸಲಾಗಿದೆ.

ಇಲ್ಲಿ ಗಮನಿಸಬೇಕಾದ ಒಂದು ವಿಷಯವೆಂದರೆ ಒಬ್ಬ ವ್ಯಕ್ತಿ ಸತ್ತಾಗ ಅಂತ್ಯಕ್ರಿಯೆ ನಡೆಯುವವರೆಗೆ ಆತನ ದೇಹವನ್ನು ಒಂಟಿಯಾಗಿ ಇರಲು ಬಿಡುವುದಿಲ್ಲ.

ಸನಾತನ ಧರ್ಮದ ನಿಯಮದ ಪ್ರಕಾರ ವ್ಯಕ್ತಿಯನ್ನು ಸಾಯಂಕಾಲ ಅಥವಾ ರಾತ್ರಿ ಶವಸಂಸ್ಕಾರ ಮಾಡುವಂತಿಲ್ಲ. ಒಬ್ಬ ವ್ಯಕ್ತಿ ರಾತ್ರಿಯಲ್ಲಿ ಸತ್ತಾಗ, ವ್ಯಕ್ತಿಯ ಮೃತ ದೇಹವನ್ನು ರಾತ್ರಿಯಿಡೀ ಮನೆಯಲ್ಲಿ ಇಡಲಾಗುತ್ತದೆ. ಪಂಚಕಾಲದಲ್ಲಿ ಅಂದರೆ ಧನಿಷ್ಠ, ಶತಭಿಷ, ಪೂರ್ವಭಾದ್ರ, ಉತ್ತರಾಭಾದ್ರ ನಕ್ಷತ್ರಗಳಲ್ಲಿ ವ್ಯಕ್ತಿ ಸತ್ತರೆ ಪಂಚಕ ವಿಧಿಯನ್ನು ನಡೆಸಿಯೇ ಮೃತ ವ್ಯಕ್ತಿಯ ದೇಹವನ್ನು ಸುಡಬೇಕಾಗುತ್ತದೆ.

ಒಬ್ಬ ವ್ಯಕ್ತಿ ಸತ್ತಾಗ ಆತನ ಮಕ್ಕಳು ಹತ್ತಿರದಲ್ಲಿಲ್ಲದಿದ್ದರೆ ಅವರು ಬರುವವರೆಗೂ ಶವವನ್ನು ಮನೆಯಲ್ಲಿ ಇಡಲಾಗುತ್ತದೆ. ಆದರೆ ಯಾವುದೇ ಸಂದರ್ಭಗಳಲ್ಲಿ ಮೃತ ದೇಹವನ್ನು ಮಾತ್ರ ಒಂಟಿಯಾಗಿ ಬಿಡುವುದಿಲ್ಲ. ಇದಕ್ಕೆ ಕಾರಣವೇನು ಎಂಬುದನ್ನು ಗರುಡ ಪುರಾಣದಲ್ಲಿ ವಿವರವಾಗಿ ವಿವರಿಸುತ್ತದೆ.

ಮೃತ ದೇಹವನ್ನು ಏಕಾಂಗಿಯಾಗಿ ಏಕೆ ಬಿಡುವುದಿಲ್ಲ?

ಗರುಡ ಪುರಾಣದ ಪ್ರಕಾರ ಒಬ್ಬ ವ್ಯಕ್ತಿಯು ಸತ್ತಾಗ ಸತ್ತ ವ್ಯಕ್ತಿಯ ದೇಹದ ಸುತ್ತಲೂ ದುಷ್ಟಶಕ್ತಿಗಳು ಸುತ್ತಾಡುತ್ತಲೇ ಇರುತ್ತವೆ. ಮೃತ ದೇಹವನ್ನು ಏಕಾಂಗಿಯಾಗಿ ಬಿಟ್ಟರೆ ಸತ್ತ ವ್ಯಕ್ತಿಯ ದೇಹವನ್ನು ದುಷ್ಟಶಕ್ತಿಗಳು ಪ್ರವೇಶಿಸಬಹುದು ಎಂದು ನಂಬಲಾಗಿದೆ.

ಮೃತದೇಹವನ್ನು ಮಾತ್ರ ಬಿಟ್ಟು ಹೋಗುವುದು ಅಪಾಯಕಾರಿ ಎನ್ನಲಾಗುತ್ತದೆ. ಕುಟುಂಬ ಸದಸ್ಯರಿಗೆ ಕೆಟ್ಟದನ್ನು ಉಂಟು ಮಾಡಬಹುದು ಎನ್ನಲಾಗುತ್ತದೆ. ಆದ್ದರಿಂದ, ಸತ್ತ ವ್ಯಕ್ತಿಯ ಮೃತ ದೇಹವನ್ನು ಎಂದಿಗೂ ಒಂಟಿಯಾಗಿ ಬಿಡುವುದಿಲ್ಲ.


ಎರಡನೆಯದಾಗಿ ಸತ್ತ ವ್ಯಕ್ತಿಯ ದೇಹವನ್ನು ಏಕಾಂಗಿಯಾಗಿ ಬಿಟ್ಟರೆ ಕೆಂಪು ಇರುವೆಗಳು ಅಥವಾ ಪ್ರಾಣಿಗಳಂತಹ ಹತ್ತಿರದ ನರಭಕ್ಷಕ ಜೀವಿಗಳು ದೇಹವನ್ನು ಹಾನಿಗೊಳಿಸಬಹುದು ಎಂಬುದೂ ಒಂದು ಕಾರಣವಾಗಿದೆ. ಆದ್ದರಿಂದ ಸತ್ತ ವ್ಯಕ್ತಿಯ ದೇಹವನ್ನು ಸುಡುವವರೆಗೆ ಅದನ್ನು ಸುಮ್ಮನೆ ಬಿಡುವುದಿಲ್ಲ. ಒಂಟಿಯಾಗಿ ಬಿಟ್ಟರೆ ಸತ್ತ ಆತ್ಮವೂ ಯಮಲೋಕಕ್ಕೆ ಹೋಗುವ ದಾರಿಯಲ್ಲಿ ಹಿಂಸೆಗಳನ್ನು ಅನುಭವಿಸಬೇಕಾಗುತ್ತದೆ ಎನ್ನಲಾಗುತ್ತದೆ.

ಇದಲ್ಲದೇ ಮೃತದೇಹವನ್ನು ಸುದೀರ್ಘ ಕಾಲ ಒಂಟಿಯಾಗಿ ಬಿಟ್ಟರೆ ದುರ್ವಾಸನೆ ಬರಲಾರಂಭಿಸುತ್ತದೆ ಎನ್ನುವುದೂ ಒಂದು ಕಾರಣವಾಗಿದೆ. ಹಾಗಾಗಿ ಯಾರಾದರೂ ಅಲ್ಲಿ ಕುಳಿತುಕೊಂಡು ಮೃತದೇಹದ ಸುತ್ತಲೂ ಅಗರಬತ್ತಿಗಳನ್ನು ಉರಿಸಬೇಕು. ಇದರಿಂದ ಮೃತದೇಹದಿಂದ ಬರುವ ದುರ್ವಾಸನೆಯು ಸುತ್ತಲೂ ಹರಡುವುದಿಲ್ಲ.

ಇದನ್ನೂ ಓದಿ: Vastu Tips: ಮನೆಯ ಯಾವ ಕೋಣೆಗೆ ಯಾವ ಬಣ್ಣ ಇದ್ದರೆ ನೆಮ್ಮದಿ ಸಿಗುತ್ತದೆ? ವಾಸ್ತು ಸಲಹೆ ಹೀಗಿದೆ

ಗರುಡ ಪುರಾಣದ ಪ್ರಕಾರ ಒಬ್ಬ ವ್ಯಕ್ತಿಯು ಸತ್ತಾಗ ಮೃತ ವ್ಯಕ್ತಿಯ ಆತ್ಮವು ಅಂತ್ಯಕ್ರಿಯೆ ನಡೆಯುವವರೆಗೆ ಕುಟುಂಬದೊಂದಿಗೆ ಸಂಪರ್ಕದಲ್ಲಿರುತ್ತದೆ. ಕುಟುಂಬ ಸದಸ್ಯರು ಮೃತದೇಹವನ್ನು ಬಿಟ್ಟು ಹೋದರೆ ಸತ್ತ ವ್ಯಕ್ತಿಯ ಆತ್ಮವು ಪರಿತ್ಯಕ್ತಗೊಂಡಾಗ ದುಃಖಿತ ಆಗುತ್ತದೆ ಎಂದು ನಂಬಲಾಗಿದೆ. ಆದ್ದರಿಂದ, ಮೃತ ದೇಹವನ್ನು ಎಂದಿಗೂ ಒಂಟಿಯಾಗಿ ಬಿಡಬಾರದು.

ಹಿಂದೂ ಧರ್ಮದಲ್ಲಿ ಸೂರ್ಯಾಸ್ತದ ಅನಂತರ ಯಾರಾದರೂ ಸತ್ತರೆ ಅವರ ದೇಹವನ್ನು ರಾತ್ರಿಯಿಡೀ ಮನೆಯಲ್ಲಿ ಇರಿಸಲಾಗುತ್ತದೆ ಮತ್ತು ಮರುದಿನ ಅವರ ಅಂತ್ಯಕ್ರಿಯೆಯನ್ನು ಮಾಡಲಾಗುತ್ತದೆ. ರಾತ್ರಿ ವೇಳೆ ಶವ ಸಂಸ್ಕಾರ ಮಾಡಿದರೆ ಮೋಕ್ಷ ಸಿಗುವುದಿಲ್ಲ ಎಂಬುದು ಇದರ ಹಿಂದಿನ ನಂಬಿಕೆ. ಹೀಗೆ ಮಾಡಿದರೆ ಅಂತಹ ಆತ್ಮವು ರಾಕ್ಷಸ, ದೆವ್ವ ಅಥವಾ ಪಿಶಾಚಿಯ ಗರ್ಭದ ಮೂಲಕ ಜನಿಸುತ್ತದೆ ಎಂಬ ಉಲ್ಲೇಖ ಗರುಡ ಪುರಾಣದಲ್ಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Narendra Modi
ದೇಶ13 mins ago

Narendra Modi: ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮ ದಿಢೀರ್‌ ಮುಂದೂಡಿಕೆ?

Kannada New Movie sahara movie release tomorrow
ಸ್ಯಾಂಡಲ್ ವುಡ್18 mins ago

Kannada New Movie: ನಾಳೆಯಿಂದ ʻಸಹಾರಾʼ ಆಟ ಶುರು; ಕನ್ನಡದ ಮೊದಲ ಮಹಿಳಾ ಕ್ರಿಕೆಟ್ ಕಥೆಯಾಧಾರಿತ ಸಿನಿಮಾ!

Physical Abuse in Gadaga
ಕ್ರೈಂ23 mins ago

Physical Abuse : ಕಾಂಪೌಂಡ್‌ ಹಾರಿ ಬಂದ ಪುರಸಭೆ ಅಧ್ಯಕ್ಷೆಯ ಗಂಡನಿಗೆ ಚಳಿ ಬಿಡಿಸಿದ ಮಹಿಳೆಯರು

Environment awareness programme by NCC team in Bengaluru
ಬೆಂಗಳೂರು31 mins ago

World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ

SIT feels it would be better for Minister Nagendra to resign
ಕರ್ನಾಟಕ36 mins ago

Valmiki Corporation Scam: ಸಚಿವ ನಾಗೇಂದ್ರ ರಾಜೀನಾಮೆ ಪಡೆಯುವುದು ಉತ್ತಮ; ಸರ್ಕಾರಕ್ಕೆ ಅಭಿಪ್ರಾಯ ತಿಳಿಸಿದ ಎಸ್‌ಐಟಿ?

Encounter in UP
ದೇಶ43 mins ago

Encounter in UP: ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ ಎನ್‌ಕೌಂಟರ್‌ಗೆ ಬಲಿ! ಯೋಗಿ ನಾಡಿನಲ್ಲಿ ಮತ್ತೆ ಗುಂಡಿನ ಸದ್ದು

Pradeep Eshwar
ಪ್ರಮುಖ ಸುದ್ದಿ47 mins ago

Pradeep Eshwar: ಪ್ರದೀಪ್‌ ಈಶ್ವರ್‌ ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್‌ ನಾಯಕ ಪಕ್ಷದಿಂದಲೇ ಉಚ್ಚಾಟನೆ!

Gold Rate Today
ಚಿನ್ನದ ದರ1 hour ago

Gold Rate Today: ಕೈ ಸುಡುತ್ತಿದೆ ಚಿನ್ನದ ಬೆಲೆ; ಆಭರಣ ಖರೀದಿಗೆ ಮುನ್ನ ಬೆಲೆ ಹೆಚ್ಚಳ ಗಮನಿಸಿ

T20 World Cup 2024
ಕ್ರೀಡೆ1 hour ago

T20 World Cup 2024: ನಸೌ ಪಿಚ್​ ಬಗ್ಗೆ ಕಳವಳ ವ್ಯಕ್ತಪಡಿಸಿದ ಟೀಮ್​ ಇಂಡಿಯಾ ಆಟಗಾರರು

Sunil Lahri aka Lakshman of Ramayan lashes out at Ayodhya citizens
ಬಾಲಿವುಡ್1 hour ago

Sunil Lahri: ಅಯೋಧ್ಯೆಯಲ್ಲಿ ಬಿಜೆಪಿಗೆ ದಾರುಣ ಸೋಲು; ಅಲ್ಲಿಯ ಜನರ ವಿರುದ್ಧ ರಾಮಾಯಣದ ಲಕ್ಷ್ಮಣ ಕೆಂಡಾಮಂಡಲ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌