Tumkur Accident | 3 ವರ್ಷದ ಮಗು ಸೇರಿ 6 ಮಂದಿ ನೇತ್ರದಾನಕ್ಕೆ ಒಪ್ಪಿಗೆ; ನೋವಿನಲ್ಲೂ ಸಾರ್ಥಕತೆ! - Vistara News

ಕರ್ನಾಟಕ

Tumkur Accident | 3 ವರ್ಷದ ಮಗು ಸೇರಿ 6 ಮಂದಿ ನೇತ್ರದಾನಕ್ಕೆ ಒಪ್ಪಿಗೆ; ನೋವಿನಲ್ಲೂ ಸಾರ್ಥಕತೆ!

ತುಮಕೂರಿನ ಬಳಿ ನಡೆದ ಲಾರಿ-ಕ್ರೂಸರ್‌ ನಡುವಿನ (Tumkur Accident ) ಅಪಘಾತದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇತ್ತ ತಮ್ಮವರನ್ನು ಕಳೆದುಕೊಂಡ ನೋವಿನಲ್ಲೂ ಕುಟುಂಬಸ್ಥರು ಮೃತರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.

VISTARANEWS.COM


on

Tumkur accident
ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಇಲ್ಲಿನ ಶಿರಾ ಬಳಿ ಮುಂಜಾನೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದ ೧೦ ಜನರಲ್ಲಿ ಆರು ಮಂದಿಯ ನೇತ್ರದಾನಕ್ಕೆ ಕುಟುಂಬಸ್ಥರು ಒಪ್ಪಿಗೆ ನೀಡಿದ್ದು, ಸಾವಿನ ಮನೆಯಲ್ಲಿಯೂ ಕುಟುಂಬದವರು ಸಾರ್ಥಕತೆ (Tumkur Accident) ಮೆರೆದಿದ್ದಾರೆ. ಮೂರು ವರ್ಷದ ಮಗುವಿನ ಕಣ್ಣನ್ನೂ ದಾನ ಮಾಡಿರುವುದು ವಿಶೇಷವಾಗಿದೆ.

ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕಣ್ಣು ದಾನ ಮಾಡಿದ ಬಗ್ಗೆ ಶಿರಾ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಶ್ರೀನಾಥ್ ಕೆ.ಆರ್. ಮಾಹಿತಿ ನೀಡಿದ್ದಾರೆ.

ಮೂರು ವರ್ಷದ ಮಗುವಿನ ಕಣ್ಣು ದಾನ

ಮೃತಪಟ್ಟಿರುವ ಮೂರು ವರ್ಷದ ಮಗು ವಿನೋದ್‌ನ ಕಣ್ಣು ದಾನ ಮಾಡಲಾಗಿದೆ. ಅಲ್ಲದೆ, ಸುಜಾತ, ಮೀನಾಕ್ಷಿ, ಕೃಷ್ಣಪ್ಪ, ಪ್ರಭು, ಸಿದ್ದಾರ್ಥ ಎಂಬುವವರ ಕಣ್ಣುಗಳನ್ನು ಸಹ ಕುಟುಂಬಸ್ಥರ ಅನುಮತಿ ಮೇರೆಗೆ ದಾನವಾಗಿ ಪಡೆಯಲಾಗಿದೆ.

ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಶಿರಾ ಬಳಿ ನಡೆದ ಭೀಕರ ಅಪಘಾತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬರು (ಹೆಸರು ತಿಳಿದುಬಂದಿಲ್ಲ) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕ್ರೂಸರ್‌ನಲ್ಲಿ ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಕ್ರೂಸರ್‌ನಲ್ಲಿ ಸುಮಾರು 23 ಜನರನ್ನು ತುಂಬಿಕೊಂಡು ಬರಲಾಗುತ್ತಿತ್ತು, ಬೆಳಗ್ಗಿನ ಜಾವ 4.30ರ ಸಮಯದಲ್ಲಿ ಲಾರಿ ಹಾಗೂ ಕ್ರೂಸರ್ ನಡುವೆ ಅಪಘಾತ ಸಂಭವಿಸಿತ್ತು.

ಲಾರಿಯನ್ನು ಓವರ್‌ಟೇಕ್‌ ಮಾಡುವ ವೇಳೆ ಡಿವೈಡರ್‌ ಮೇಲೆ ಚಕ್ರ ಹತ್ತಿದ್ದು, ಟಯರ್‌ ಬ್ಲಾಸ್ಟ್‌ ಆಗಿದೆ. ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಚಾಲಕ ಸೇರಿ 9 ಜನ ಮೃತಪಟ್ಟಿದ್ದರು. ಅದರಲ್ಲಿ ಇಬ್ಬರು ಮಕ್ಕಳು, 14 ಜನರಿಗೆ ಗಾಯಗಳಾಗಿವೆ. ಇಬ್ಬರು ಗಾಯಾಳುಗಳನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.

ಇದನ್ನೂ ಓದಿ | Tumkur accident | ಕಂಬನಿ ಮಿಡಿದ ಸಿಎಂ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ದುಮ್ಮಿಕ್ಕಿದ ಹರೆಯದ ತೊರೆ!

Vidyarthi Vidyarthiniyare Movie: ರ‍್ಯಾಪರ್ ಚಂದನ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ʼವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಟ್ರೈಲರ್‌ ರಿಲೀಸ್‌ ಆಗಿದೆ. ಕಾಲೇಜು ಹುಡುಗ, ಹುಡುಗಿಯರ ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ.

VISTARANEWS.COM


on

Vidyarthi Vidyarthiniyare Movie
Koo

ಬೆಂಗಳೂರು: ರ‍್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ʼವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare Movie) ಚಿತ್ರವು ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿದ್ದು, ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೈಲರ್‌ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಯುವ ಆವೇಗದಿಂದ ತೊನೆದಾಡುತ್ತಿರುವಂತೆ ಭಾಸವಾಗುವ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ. ಅದರೊಳಗೆ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳು ಹರೆಯದ ತೊರೆಯೊಂದಿಗೆ ದುಮ್ಮಿಕ್ಕಿ ಹರಿದಿವೆ. ಈ ಟ್ರೈಲರ್ ಅನ್ನು ಸೈಡ್ ಎ ಅಂತ ಹೆಸರಿಸಲಾಗಿದೆ. ಇದನ್ನು ನೋಡುತ್ತಲೇ ಒಟ್ಟಾರೆ ಸಿನಿಮಾದಲ್ಲೇನೋ ಇದೆಯೆಂಬ ಗಟ್ಟಿಯಾದ ಭರವಸೆ ತಂತಾನೇ ಮೂಡುತ್ತದೆ. ಸೈಡ್ ಬಿ ಟ್ರೈಲರ್‌ಗಾಗಿ ಕಾತರವೂ ಮೂಡಿಕೊಳ್ಳುತ್ತೆ. ಅಷ್ಟರಮಟ್ಟಿಗೆ ಈ ಟ್ರೈಲರ್ ಪರಿಣಾಮಕಾರಿಯಾಗಿ ಮೂಡಿ ಬಂದಿದೆ!

ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಟೈಟಲ್ಲೇ ಹೇಳುವಂತೆ ಯೂತ್ಸ್ ಸಬ್ಜೆಕ್ಟ್ ಸಿನಿಮಾ. ಕಾಲೇಜು ಹುಡುಗ, ಹುಡುಗಿಯರ, ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ. ಹಾಗಂತ ಇದು ಮಾಮೂಲಿಯಾಗೂ ಇದು ಸಿದ್ಧಸೂತ್ರದ ಚೌಕಟ್ಟಿಗೊಳಪಟ್ಟಿಲ್ಲ ಅನ್ನೋದು ಟ್ರೈಲರ್ ಎಳೆಯಲ್ಲಿ ಸ್ಪಷ್ಟವಾಗುತ್ತದೆ. ಹೊಡೆದಾಟ, ಬಡಿದಾಟ, ರ‍್ಯಾಗಿಂಗ್, ಬಿಸಿ ರಕ್ತದ ಹುಡುಗರ ಪುಂಡಾಟಿಕೆ ಸೇರಿ ಇಲ್ಲಿ ಎಲ್ಲವೂ ಇದೆ. ಅದರ ಜೊತೆ ಜೊತೆಗೇ ಶೈಕ್ಷಣಿಕ ಪರಿಸರದ ಕ್ರೌರ್ಯದ ಮುಖವೊಂದನ್ನು ಬಯಲಾಗಿಸುವ ಪ್ರಯತ್ನವೂ ಗಮನ ಸೆಳೆಯುವಂತಿದೆ. ಮೋಜು ಮಸ್ತಿಯಲ್ಲಿ ಮೈಮರೆತ ಮನಸ್ಥಿತಿಗಳ ಕಥೆಯ ಸೂಚನೆಯಿದೆ. ಹಿಡಿತ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಯತ್ನವೂ ಇದೆ. ಪ್ರಸ್ತುತ ಕಾಲದ ಟೀನೇಜ್ ಹುಡುಗರ ಕಹಾನಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದೆ ಟ್ರೈಲರ್.

ಚಂದನ್ ಶೆಟ್ಟಿ ಈ ಚಿತ್ರದ ಮೂಲಕ ಡಿಫರೆಂಟಾಗಿ ಕಾಣಿಸಲಿದ್ದಾರೆಂಬ ನಿಖರ ಮಾಹಿತಿಯನ್ನು ನಿರ್ದೇಶಕ ಅರುಣ್ ಅಮುಕ್ತ ನೀಡುತ್ತಾ ಬಂದಿದ್ದಾರೆ. ಅವರ ಪಾತ್ರವನ್ನು ಅಷ್ಟೇ ಗೌಪ್ಯವಾಗಿ ಕಾಪಾಡಿಕೊಂಡು ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ ಚಿತ್ರತಂಡ. ಒಟ್ಟಾರೆಯಾಗಿ ಟ್ರೈಲರ್ ನೋಡಿದರೆ ನಿರ್ದೇಶಕರು ಹೊಸದೇನನ್ನೋ ಹೇಳುವ ಪ್ರಯತ್ನ ಮಾಡಿದ್ದಾರೆ ಅನ್ನೋದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಅರುಣ್ ಅಮುಕ್ತ ಅತ್ಯಂತ ಆಸ್ಥೆಯಿಂದ ಈ ಸಿನಿಮಾವನ್ನು ರೂಪಿಸಿದ್ದಾರೆಂಬುದಕ್ಕೂ ಕೂಡ ಈ ಟ್ರೈಲರಿನಲ್ಲಿ ಸಾಕ್ಷಿಗಳಿವೆ. ಕಾಲೇಜು ಕೇಂದ್ರಿತ ಕಥೆ ಅಂದಾಕ್ಷಣ ಒಂದು ಕಲ್ಪನೆ ಮೊಳೆತುಕೊಳ್ಳುತ್ತದೆ. ಅದನ್ನು ಮೀರಿದ ಆತ್ಮದೊಂದಿಗೆ ಅರುಣ್ ಅಮುಕ್ತ ಈ ಸಿನಿಮಾವನ್ನು ದೃಷ್ಯೀಕರಿಸಿರುವ ಲಕ್ಷಣಗಳಿವೆ. ಈವರೆಗೂ ಹಂತ ಹಂತವಾಗಿ ಕಾಯ್ದುಕೊಂಡಿದ್ದ ಕುತೂಹಲವನ್ನು ಈ ಸೈಡ್ ಎ ಟ್ರೈಲರ್ ಸಾರ್ಥಕಗೊಳಿಸಿದೆ.

ಇದನ್ನೂ ಓದಿ | Turbo Trailer Out: ಮಮ್ಮುಟ್ಟಿ ನಟನೆಯ ‘ಟರ್ಬೋ’ ಟ್ರೈಲರ್‌ ಔಟ್‌: ರಾಜ್‌ ಬಿ ಶೆಟ್ಟಿ ಖದರ್‌ಗೆ ಫ್ಯಾನ್ಸ್‌ ಫಿದಾ!

ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ. ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ , ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Continue Reading

ಉತ್ತರ ಕನ್ನಡ

Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Road Accident: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಮುಂಡಗೋಡ ಪಟ್ಟಣದ ಹೊರವಲಯದ ಕಲಘಟಗಿ ರಸ್ತೆಯಲ್ಲಿ ಸೋಮವಾರ ರಾತ್ರಿ ಜರುಗಿದೆ. ಪಟ್ಟಣದ ಹಳೂರಿನ ನಿವಾಸಿ ಅರವಿಂದ ಬೆಲ್ದಾರ (24) ಮೃತ ಯುವಕ ಎಂದು ಗುರುತಿಸಲಾಗಿದೆ. ಇಬ್ಬರು‌ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Road Accident Head on collision between bikes One person died on the spot
ಮೃತ ಯುವಕ ಅರವಿಂದ ಬೆಲ್ದಾರ.
Koo

ಮುಂಡಗೋಡ: ಪಟ್ಟಣದ ಹೊರವಲಯದ ಕಲಘಟಗಿ ರಸ್ತೆಯಲ್ಲಿ (Road Accident) ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಸೋಮವಾರ ರಾತ್ರಿ ಜರುಗಿದೆ.

ಪಟ್ಟಣದ ಹಳೂರಿನ ನಿವಾಸಿ ಅರವಿಂದ ಬೆಲ್ದಾರ (24) ಮೃತ ಯುವಕ ಎಂದು ಗುರುತಿಸಲಾಗಿದೆ. ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಅರವಿಂದ ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು‌ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

ಗಾಯಗೊಂಡವರನ್ನು ತಾಲೂಕಿನ ಕೊಪ್ಪ ಗ್ರಾಮದವರು ಎಂದು ತಿಳಿದುಬಂದಿದೆ. ತಕ್ಷಣವೇ ಗಾಯಾಳುಗಳನ್ನು ತಾಲೂಕಾಸ್ಪತ್ರೆಗೆ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮುಂಡಗೋಡ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮುಂಡಗೋಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Road Accident: ಬೊಲೇರೋ – ಬೈಕ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಆಳಂದದ ದಂಪತಿ ಸಾವು

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾದ ಮಡ್ಡಿ ಬಳಿ ಬೊಲೇರೋ ಹಾಗೂ ದ್ವಿ ಚಕ್ರ ವಾಹನ‌ಗಳ ನಡುವೆ ರಸ್ತೆ ಅಪಘಾತ (Road Accident) ಸಂಭವಿಸಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗುರುಸಿದ್ದ (42), ಮಧುಮತಿ (34) ಮೃತ ದುರ್ದೈವಿಗಳು. ಇವರು ಮಾದನಹಿಪ್ಪರಗಾ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾದಿಂದ ಮಹಾರಾಷ್ಟ್ರದ ಮೈಂದರಿಗಿಗೆ ದಂಪತಿ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಬುಲೇರೋ ನಿಯಂತ್ರಣಕ್ಕೆ ಸಿಗದೆ ಪಕ್ಕದ ಚರಂಡಿಗೆ ಹೋಗಿ ಬಿದ್ದಿದೆ. ಸ್ಥಳಕ್ಕೆ ಮಾದನಹಿಪ್ಪರಗಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

Continue Reading

ಬೆಂಗಳೂರು

Award Ceremony: ಬೆಂಗಳೂರಿನಲ್ಲಿ ಮೇ 19ರಂದು ಕಾದಂಬರಿ ಸಾರ್ವಭೌಮ ಅ.ನ.ಕೃ. ಪ್ರಶಸ್ತಿ ಪ್ರದಾನ

Award Ceremony: 2022ನೇ ಸಾಲಿನ ಅ. ನ. ಕೃ. ಪ್ರಶಸ್ತಿಗೆ ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ಹಾಗೂ 2023ನೇ ಸಾಲಿನ ಅ. ನ. ಕೃ. ಪ್ರಶಸ್ತಿಗೆ ಡಾ. ಬಿ. ಎಸ್. ಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

VISTARANEWS.COM


on

Award Ceremony
Koo

ಬೆಂಗಳೂರು: ಅ. ನ. ಕೃ. ಪ್ರತಿಷ್ಠಾನ ವತಿಯಿಂದ ಕಾದಂಬರಿ ಸಾರ್ವಭೌಮ ಅ. ನ. ಕೃ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೇ 19ರಂದು ಬೆಳಗ್ಗೆ 10ಗಂಟೆಗೆ ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜಿನ ಎಚ್. ಎನ್. ಮಲ್ಟಿಮೀಡಿಯಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. 2022ನೇ ಸಾಲಿನ ಅ. ನ. ಕೃ. ಪ್ರಶಸ್ತಿಯನ್ನು ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ಹಾಗೂ 2023ನೇ ಸಾಲಿನ ಅ. ನ. ಕೃ. ಪ್ರಶಸ್ತಿಯನ್ನು ಡಾ. ಬಿ. ಎಸ್. ಸ್ವಾಮಿ ಅವರಿಗೆ ಪ್ರದಾನ (Award Ceremony) ಮಾಡಲಾಗುತ್ತದೆ.

ಪ್ರಶಸ್ತಿ ಪುರಸ್ಕೃತರಾದ ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ಅವರು ರಾಷ್ಟೋತ್ಥಾನ ಸಾಹಿತ್ಯದ ಗೌರವ ಪ್ರಧಾನ ಸಂಪಾದಕರಾಗಿದ್ದು, ಡಾ. ಬಿ. ಎಸ್. ಸ್ವಾಮಿ ಅವರು ಆಕಾಶವಾಣಿಯ ವಿಶ್ರಾಂತ ಕಾರ್ಯಕ್ರಮ ನಿರ್ವಾಹಕರಾಗಿದ್ದಾರೆ.

ಪ್ರಜಾವಾಣಿ ದಿನಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಬಹುಶ್ರುತ ವಿದ್ವಾಂಸರಾದ ಶತಾವಧಾನಿ ಡಾ. ಆರ್. ಗಣೇಶ್, ಲೇಖಕ, ಉಪನ್ಯಾಸಕ ಡಾ. ಬಂಡ್ಲಹಳ್ಳಿ ವಿಜಯಕುಮಾ‌ರ್ ಅವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

ಇದನ್ನೂ ಓದಿ | ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

ಡಾ. ಕೆ.ಆರ್. ಸಂಧ್ಯಾರೆಡ್ಡಿ, ಶಾ.ಮಂ. ಕೃಷ್ಣರಾವ್, ಎಂ. ವೆಂಕಟೇಶ್ ಅವರು ಉಪಸ್ಥಿತರಿರಲಿದ್ದು, ಮಾಜಿ ಅಡ್ವೊಕೇಟ್ ಜನರಲ್ ಹಾಗೂ ನ್ಯಾಯವಾದಿ ಅಶೋಕ್ ಹಾರನಹಳ್ಳಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಅ. ನ. ಕೃ. ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಗೌತಮ್ ಅ. ನ. ಕೃ, ಪ್ರತಿಷ್ಠಾನದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿರಲಿದ್ದಾರೆ.

2022ರ ಪ್ರಶಸ್ತಿ ಪುರಸ್ಕೃತರು: ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ

ಆರೂವರೆ ದಶಕಗಳ ಕಾಲ ಪತ್ರಿಕೋದ್ಯಮ, ಸಾಹಿತ್ಯ ಮತ್ತು ಸಮಾಜಕಾರ್ಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಎಸ್. ಆರ್. ರಾಮಸ್ವಾಮಿ ಅವರು (ಜನನ: 29-10-1937) ಕಳೆದ 45 ವರ್ಷಗಳಿಂದ ‘ಉತ್ಥಾನ’ ಮಾಸಪತ್ರಿಕೆ ಮತ್ತು ‘ರಾಷ್ಟ್ರೋತ್ಥಾನ ಸಾಹಿತ್ಯ’ ಪ್ರಕಾಶನದ ಪ್ರಧಾನ ಸಂಪಾದಕರಾಗಿದ್ದಾರೆ.

ಸುಭಾಷ್‌ಚಂದ್ರ ಬೋಸ್ ಅವರ ಸಮಗ್ರ ಜೀವನಚರಿತ್ರೆ ‘ಕೋಲ್ಮಿಂಚು’ ಜಯಪ್ರಕಾಶ್ ನಾರಾಯಣ್ ವಲ್ಲಭಭಾಯಿ ಪಟೇಲ್, ಮೋಕ್ಷಗುಂಡಂ ವಿಶ್ವೇಶ್ವರಯ್ಯ, ಸ್ವಾಮಿ ವಿವೇಕಾನಂದ, ಭಗಿನಿ ನಿವೇದಿತಾ ಮೊದಲಾದ ಇಪ್ಪತ್ತಕ್ಕೂ ಹೆಚ್ಚು ಜೀವನಚರಿತ್ರೆಗಳೂ ಸೇರಿ ಸುಮಾರು 60 ಗ್ರಂಥಗಳನ್ನು ಬರೆದಿದ್ದಾರೆ. ‘ಭಾರತದಲ್ಲಿ ಸಮಾಜಕಾರ್ಯ’, ‘ಸ್ವಾತಂತ್ರ್ಯೋದಯದ ಮೈಲಿಗಲ್ಲುಗಳು’ ಮೊದಲಾದ ಹಲವಾರು ಪ್ರತಿಷ್ಠಿತ ಕೃತಿಗಳಿಗೆ ವಿಸ್ತತ ಸ್ವತಂತ್ರ ಅವಲೋಕನ ಪ್ರಬಂಧಗಳನ್ನು ಬರೆದು ಸಂಪಾದನ ಮಾಡಿದ್ದಾರೆ.

ಅಭ್ಯುದಯ ಅರ್ಥಶಾಸ್ತ್ರದಲ್ಲಿ ಆಳವಾದ ಪರಿಶ್ರಮ ಮಾಡಿರುವ ಇವರು ಜಾಗತೀಕರಣದ ಹಿನ್ನೆಲೆಯಲ್ಲಿ ಬರೆದ ‘ಆರ್ಥಿಕತೆಯ ಎರಡು ಧ್ರುವ’ ಅರ್ಥಶಾಸ್ತ್ರ ಕ್ಷೇತ್ರದ ಒಂದು ಉನ್ನತ ಕೃತಿಯೆಂದು ಪರಿಗಣಿತವಾಗಿದೆ. ಸ್ವಾತಂತ್ರ್ಯೋತ್ತರ ಭಾರತದ ಅರ್ಥಿಕ ಯೋಜನೆಗಳನ್ನು ತಲಸ್ಪರ್ಶಿಯಾಗಿ ವಿಶ್ಲೇಷಿಸಿರುವ ರಾಮಸ್ವಾಮಿಯವರ ‘ಶತಮಾನದ ತಿರುವಿನಲ್ಲಿ ಭಾರತ’ ಸಮಾಜವಿಜ್ಞಾನ ಕ್ಷೇತ್ರದ ಆ ವರ್ಷದ ಶ್ರೇಷ್ಠ ಕೃತಿಯೆಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಪಡೆದಿದೆ. ಬ್ರಿಟಿಷ್-ಪೂರ್ವ ಭಾರತದ ಉನ್ನತ ಸ್ಥಿತಿ ಕುರಿತ ಖ್ಯಾತ ಸಂಶೋಧಕ ಧರ್ಮಪಾಲ್ ಅವರ ಕೃತಿಗಳನ್ನು ಇವರು ಕನ್ನಡಕ್ಕೆ ಪರಿಚಯಿಸಿದ್ದಾರೆ. ಸ್ವದೇಶೀ ಚಿಂತನೆಯ ಪ್ರತಿಪಾದಕಗಳಾದ ಇವರ ಹಲವಾರು ಕೃತಿಗಳು ಪಥದರ್ಶಕವೆನಿಸಿವೆ.

ಅನೇಕ ಹಿರಿಯ ಸಾಹಿತಿಗಳ ಒಡನಾಟದಲ್ಲಿದ್ದ ರಾಮಸ್ವಾಮಿಯವರು, ಡಿ.ವಿ.ಗುಂಡಪ್ಪ, ಸೀತಾರಾಮಯ್ಯ, ರಾಕ್ಲಪಲ್ಲಿ ಅನಂತಕೃಷ್ಣಶರ್ಮ, ವೀರಕೇಸರಿ ಸೀತಾರಾಮಶಾಸ್ತ್ರಿ, ತಿ. ತಾ. ಶರ್ಮ, ಪಿ. ಕೋದಂಡರಾವ್, ತೋಟಗಾರಿಕೆ ಋಷಿ ಎಂ. ಎಚ್. ಮರಿಗೌಡ ಮೊದಲಾದ ಧೀಮಂತರನ್ನು ಕುರಿತು ಬರೆದ ‘ದೀವಟಿಗೆಗಳು’, ‘ದೀಪ್ತಿಮಂತರು’ ಮತ್ತು ‘ದೀಪ್ತಶೃಂಗಗಳು’ – ಇವು ಅನುಪಮ ವ್ಯಕ್ತಿಚಿತ್ರಮಾಲಿಕೆಗಳಾಗಿವೆ. ಈಗಿನ ಜಗದ್‌ವ್ಯಾಪಿ ತುಮುಲಗಳ ಬೇರುಗಳಿರುವುದು ಎರಡು ಭಿನ್ನ ಜೀವನದೃಷ್ಟಿಗಳಲ್ಲಿ – ಎಂದು ಅವರ ‘ನಾಗರಿಕತೆಗಳ ಸಂಘರ್ಷ’ ಕೃತಿ ಪ್ರತಿಪಾದಿಸಿದೆ. ಅವರ ‘ಕೆಲವು ಇತಿಹಾಸ-ಪರ್ವಗಳು’ ಮತ್ತು ‘ಮರೆಯಬಾರದ ಇತಿಹಾಸಾಧ್ಯಾಯಗಳು’ ಮೈಲಿಗಲ್ಲುಗಳೆಂದು ಅಂಕಿತಗೊಂಡಿರುವ ಕೆಲವು ಇತಿಹಾಸ ಘಟನಾಸರಣಿಗಳ ಪರಾಮರ್ಶನೆಯಾಗಿವೆ. ಭಾರತದ ಈಚಿನ ಇತಿಹಾಸಕ್ಕೆ ನಿರ್ಣಾಯಕ ತಿರುವನ್ನಿತ್ತ ರಾಜಾ ರಾಮಮೋಹನರಾಯ್ ಅವರಿಂದ ಜಯಪ್ರಕಾಶ ನಾರಾಯಣ್ ವರೆಗಿನ ಹತ್ತಾರು ಮಹನೀಯರ ಜೀವಿತಕಥನಗಳು `ನವೋತ್ಥಾನದ ಅಧ್ವರ್ಯುಗಳು’ ಮತ್ತು ‘ಹಲವರು ರಾಷ್ಟ್ರಾರಾಧಕರು’. ರಾಮಸ್ವಾಮಿಯವರ ‘ಕವಳಿಗೆ’ ಮತ್ತು ‘ಸಾಹಿತ್ಯ ಸಾನ್ನಿಹಿತ್ಯ ಉನ್ನತಮಟ್ಟದ ಸಾಹಿತ್ಯ ಪರಾಮರ್ಶಕ ಕೃತಿಗಳಾಗಿವೆ. ರಾಮಸ್ವಾಮಿಯವರು ಕಳೆದ ಅರವತ್ತು ವರ್ಷಗಳಲ್ಲಿ ವಿವಿಧ ಪತ್ರಿಕೆಗಳಲ್ಲಿ 2000ಕ್ಕೂ ಹೆಚ್ಚು ಅಧ್ಯಯನಪೂರ್ಣ ಲೇಖನಗಳನ್ನು ಬರೆದಿದ್ದಾರೆ.

ಪತ್ರಿಕೋದ್ಯಮ ಸೇವೆಗಾಗಿ 2006ರಲ್ಲಿ ಇವರಿಗೆ ‘ಆರ್ಯಭಟ ಪ್ರಶಸ್ತಿ’ ದೊರೆತಿದೆ. ಸಾಹಿತ್ಯಸೇವೆಗಾಗಿ 2008ರಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ ಇವರಿಗೆ ದೊರೆತಿದೆ. 2011ರಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಇವರ ಸುದೀರ್ಘ ಸಾಹಿತ್ಯಸೇವೆಗಾಗಿ ಗೌರವಾರ್ಥ ಡಾಕ್ಟರೇಟ್ ನೀಡಿದೆ. ದೀರ್ಘ ಪತ್ರಿಕೋದ್ಯಮ ಸೇವೆಗಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ‘ವರ್ಷದ ಶ್ರೇಷ್ಠ ವ್ಯಕ್ತಿ’ ಸಮ್ಮಾನ ದೊರೆತಿದೆ (2012). ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳ ಜೀವಮಾನ ಸಾಧನೆಗಾಗಿ 2015ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ‘ನಾಡೋಜ’ ಪದವಿಯನ್ನು ಇವರಿಗೆ ನೀಡಲಾಗಿದೆ. ಕರ್ನಾಟಕ ಸರಕಾರವು 2022-23ರ ‘ಪಂಪಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ.

2023ರ ಪ್ರಶಸ್ತಿ ಪುರಸ್ಕೃತರು : ಡಾ. ಬಿ. ಎಸ್. ಸ್ವಾಮಿ

ಬಿ. ಸಿದ್ಧಲಿಂಗ ಸ್ವಾಮಿಯವರು ಮೂಲತಃ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯವರು. ವಿ. ಬಸವಲಿಂಗಪ್ಪ – ಶಿವನಾಗಮ್ಮ ದಂಪತಿಯ ಸುಪುತ್ರರಾದ ಇವರು ಎಂ. ಎ., ಪಿಎಚ್. ಡಿ. ಪದವೀಧರರು. ಐದು ವರ್ಷ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ ನಂತರ ಬೆಂಗಳೂರು ಆಕಾಶವಾಣಿಯಲ್ಲಿ ಇಪ್ಪತ್ತು ವರ್ಷ ಕಾರ್ಯನಿರ್ವಹಿಸಿ ಅನಂತರ ಗುಲ್ಬರ್ಗ, ಬೆಂಗಳೂರು, ಮಂಗಳೂರು ಬಾನುಲಿಕೇಂದ್ರಗಳಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿ ಹದಿನಾಲ್ಕು ವರ್ಷ ದುಡಿದು ನಿವೃತ್ತರಾದರು.

ಬಾನುಲಿಯ ಸುದೀರ್ಘ ಸೇವೆಯಲ್ಲಿ ಇವರು ಹೊಸ ಹೊಸ ಕಾರ್ಯಕ್ರಮಗಳನ್ನು ರೂಪಿಸಿ, ಪ್ರತಿಭಾವಂತರನ್ನು ಹುಡುಕಿ ಅವರನ್ನು ಆಕಾಶವಾಣಿಯ ಕಾರ್ಯಕ್ರಮಗಳಲ್ಲಿ ತೊಡಗಿಸಿ ಜನಾನುರಾಗಿಯಾದರು.
1967ರಲ್ಲಿ ಇವರ ಮೊದಲ ಕವನಸಂಗ್ರಹ ‘ಅಮೃತ’ ಪ್ರಕಟವಾಯಿತು. ಅಂದಿನಿಂದ ಇಂದಿನವರೆಗೆ ಆರು ದಶಕ ಲೇಖನಿಯನ್ನು ಕೆಳಗಿಡದೆ ಒಂದೇ ಸಮನೆ ಬರೆಯುತ್ತ ಸುಮಾರು ನಾಲ್ಕುನೂರು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವುಗಳಲ್ಲಿ ‘ಕಲಿ ಭಾರತ’, ‘ಅಲ್ಲಮಪ್ರಭು’, ‘ಅಕ್ಕಮಹಾದೇವಿ’, ‘ಬಸವಣ್ಣ’ ಮಹಾಕಾವ್ಯಗಳೂ, ‘ಬೆಂಕಿಯಲ್ಲಿ ಅರಳಿದ ಹೂವು’ ನಂತಹ ಆತ್ಮಕಥನವೂ ಸೇರಿದೆ.

ಇವರ ಸಾಹಿತ್ಯಸೃಷ್ಟಿಗೆ ಯಾವ ಸರಹದ್ದುಗಳೂ ಇಲ್ಲ. ಕಥೆ, ಕಾದಂಬರಿ, ಕವನ, ನಾಟಕ, ರೂಪಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಸಂಪಾದನೆ, ವೈಚಾಲಕ, ಹಾಸ್ಯ, ಜಾನಪದ, ಪ್ರವಾಸಕಥನ, ಜೀವನ ಚರಿತ್ರೆ, ವಚನಸಾಹಿತ್ಯ, ದಾಸಸಾಹಿತ್ಯ, ಮಕ್ಕಳ ಸಾಹಿತ್ಯ, ಬಿಡಿ ಬರೆಹಗಳು – ಹೀಗೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೈಯಾಡಿಸಿದ್ದಾರೆ. ಅನೇಕ ಸಾಮಾಜಿಕ, ಐತಿಹಾಸಿಕ ಕಾದಂಬರಿಗಳನ್ನು ಬರೆದ ಕೈಗಳಿಂದಲೇ ಜಾನಪದ ಸಾಹಿತ್ಯಚರಿತ್ರೆಯ ಹದಿನೈದು ಸಂಪುಟಗಳು, ಮಲೆ ಮಾದೇಶ್ವರ ಕಾವ್ಯ ಸಂಪಾದನೆ ಮಾಡಿದ್ದಾರೆ. ಜಾನಪದ ಕ್ಷೇತ್ರದಲ್ಲಿ ಒಂದು ವಿಶ್ವವಿದ್ಯಾಲಯ ಮಾಡುವಷ್ಟು ಕ್ಷೇತ್ರಕಾರ್ಯ, ಸಂಪಾದನೆ, ವಿಶ್ಲೇಷಣ, ಸಂಗ್ರಹ ಮಾಡಿದ್ದಾರೆ. ಶಿಷ್ಟಸಾಹಿತ್ಯದಲ್ಲಿ ಡಾ. ಸ್ವಾಮಿಯವರ ಕೊಡುಗೆ ಸಣ್ಣದಲ್ಲ. ಕಾಳಿದಾಸನ ಸಾಹಿತ್ಯದ ಕುರಿತು ಬರೆಯಬಲ್ಲ ಡಾ. ಸ್ವಾಮಿಯವರು ಸೂರದಾಸನ ಸಾಹಿತ್ಯದ ಬಗೆಗೂ ಬರೆಯಬಲ್ಲರು. ಹರಿದಾಸ ಪರಂಪರೆಯ ಕುರಿತು ಹಲವು ವರ್ಷ ಸಂಶೋಧನೆ ಮಾಡಿ ಒಂದು ಬೃಹತ್ ಗ್ರಂಥ ಪ್ರಕಟಿಸಿದ್ದಾರೆ. ಅದಕ್ಕಾಗಿ ಅವರು ಊರೂರು ಅಲೆದು ಹಲಕಥಾಕಾರರನ್ನು ಸಂದರ್ಶಿಸಿ, ವಾಚನಾಲಯಗಳಲ್ಲಿ ತಿಂಗಳುಗಟ್ಟಲೆ ಕುಳಿತು ಸಂಶೋಧನೆ ಮಾಡಿದ್ದಾರೆ.

ಇದನ್ನೂ ಓದಿ | ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ಇವರ ಸಾಹಿತ್ಯಸೇವೆಯನ್ನು ಗಮನಿಸಿ ಕನ್ನಡಿಗರು ಅವರಿಗೆ ‘ಮಧುವೃತ’ ಎಂಬ ಗೌರವಗ್ರಂಥ ಅರ್ಪಿಸಿದ್ದಾರೆ.
ಇವರ ‘ಕವಿಚಕ್ರೇಶ್ವರ’ ಕಾದಂಬರಿಗೆ ದೇವರಾಜ ಬಹದ್ದೂರ್ ಪ್ರಶಸ್ತಿ(1974), ‘ಜಾನಪದ ಕಥಾಸಂಗಮ’ಕ್ಕೆ ಕರ್ನಾಟಕ ಜಾನಪದ-ಯಕ್ಷಗಾನ ಅಕಾಡೆಮಿಯ ಬಹುಮಾನ(1987), ‘ಮಹಾಜ್ಯೋತಿ ಮಾದೇಶ್ವರ’ ಕೃತಿಗೆ ಮುದ್ದಣ- ರತ್ನಾಕರವರ್ಣಿ ಪ್ರಶಸ್ತಿ, ‘ಜಾನಪದ ಸೌರಭ’, ಅಕ್ಕಮ್ಮ ಗಿರಿಗೌಡ ರುದ್ರಪ್ಪ ಪ್ರಶಸ್ತಿ (1996), ‘ತುಳುನಾಡ ಐಸಿರಿ’ಗೆ ಗೊರೂರು ಪ್ರತಿಷ್ಠಾನದ ಪ್ರಶಸ್ತಿ (1997), ಕದಂಬೋತ್ಸವದಲ್ಲಿ ಅಭಿನಂದನೆ(1998), ‘ಸಮಗ್ರ ನಾಟಕಗಳು’ಗೆ ಆರ್ಯಭಟ ಪ್ರಶಸ್ತಿ, ಜಾನಪದ ಜ್ಞಾನ ವಿಜ್ಞಾನ ಪ್ರಶಸ್ತಿ(2002), ‘ನಾಟಕ ರೂಪಕ’ ಕೃತಿಗೆ ಅತ್ತಿಮಬ್ಬೆ ಸಾಹಿತ್ಯಪ್ರತಿಷ್ಠಾನದ ಪ್ರಶಸ್ತಿ, ‘ಜಾನಪದಶ್ರೀ’ಗೆ ಕರ್ನಾಟಕ ಜಾನಪದ ಅಕಾಡೆಮಿ ಬಹುಮಾನ, ಇಂಥ ಅನೇಕ ಸಂಘಸಂಸ್ಥೆಗಳ ಬಹುಮಾನಗಳು, ಪ್ರಶಸ್ತಿಗಳು ಇವರಿಗೆ ಸಂದಿವೆ.

Continue Reading

ಕರ್ನಾಟಕ

Pratibha Puraskar: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ಮೇ 31 ಕೊನೆಯ ದಿನ

Pratibha Puraskar: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಆನ್‌ಲೈನ್‌ ಮೂಲಕ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

VISTARANEWS.COM


on

Pratibha Puraskar
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ (Pratibha Puraskar) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದ್ದು, 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಿಳಿಸಿದೆ.

ಅರ್ಜಿ ಸಲ್ಲಿಸಲು ಗಮನಿಸಬೇಕಾದ ಅಂಶಗಳು

  • ವಿದ್ಯಾರ್ಥಿಯ ತಂದೆ, ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಕಾಯಂ ನೌಕರರಾಗಿರಬೇಕು.
  • ರಾಜ್ಯ ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ.
  • ವಿದ್ಯಾರ್ಥಿಯು 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.
  • ವಿದ್ಯಾರ್ಥಿ, ತಂದೆ-ತಾಯಿಯ ದೂರವಾಣಿ ಹಾಗೂ ಇ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸುವುದು.
  • ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಧೃಡಿಕೃತ ಅಂಕಪಟ್ಟಿ, ತಂದೆ, ತಾಯಿಯ ಇಲಾಖಾ ಗುರುತಿನ ಚೀಟಿ ಅಥವಾ ಸೇವಾ ಧೃಢೀಕರಣ ಪ್ರಮಾಣ ಪತ್ರ (KSGEA News Blogನಲ್ಲಿ ಸೇವಾ ದೃಢೀಕರಣ ಪತ್ರದ ಪಿಡಿಎಫ್‌ ಫೈಲ್‌ ಲಭ್ಯವಿದೆ) ಮತ್ತು ಪೋಷಕರ ಸಹಿ ಸೇರಿ ಅಗತ್ಯ ದಾಖಲೆಗಳನ್ನು ನಿಗದಿತ ನಮೂನೆಯಲ್ಲಿ 5 ಎಂ.ಬಿ. ಸೈಜ್ ಮೀರದಂತೆ ಅಪ್‌ಲೋಡ್ ಮಾಡುವುದು.
  • ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 10.30 ರಿಂದ ಸಂಜೆ 6.00ವರೆಗೆ ಸಂಪರ್ಕಿಸಿ: ಸುರೇಶ್ ಎನ್. ಕಛೇರಿ ವ್ಯವಸ್ಥಾಪಕರು, 080 22354784/83

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಿ. (https://forms.gle/vRzQ4toZuE7N8c4G9 OR https://bit.ly/ksgea2024pp)

ಸೇವಾ ದೃಢೀಕರಣ ಪತ್ರದ ಪಿಡಿಎಫ್‌ ಫೈಲ್‌ ಇಲ್ಲಿದೆ

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

Continue Reading
Advertisement
Vidyarthi Vidyarthiniyare Movie
ಕರ್ನಾಟಕ4 mins ago

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ದುಮ್ಮಿಕ್ಕಿದ ಹರೆಯದ ತೊರೆ!

Road Accident Head on collision between bikes One person died on the spot
ಉತ್ತರ ಕನ್ನಡ5 mins ago

Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Lok Sabha Election
ದೇಶ1 hour ago

Lok Sabha Election: 28 ವರ್ಷಗಳಲ್ಲೇ ಶ್ರೀನಗರದಲ್ಲಿ ಅಧಿಕ ಮತದಾನ; 370ನೇ ವಿಧಿ ರದ್ದು ಎಫೆಕ್ಟ್?

Award Ceremony
ಬೆಂಗಳೂರು1 hour ago

Award Ceremony: ಬೆಂಗಳೂರಿನಲ್ಲಿ ಮೇ 19ರಂದು ಕಾದಂಬರಿ ಸಾರ್ವಭೌಮ ಅ.ನ.ಕೃ. ಪ್ರಶಸ್ತಿ ಪ್ರದಾನ

Muhammad Waseem
ಕ್ರೀಡೆ1 hour ago

Muhammad Waseem : ಇತಿಹಾಸ ಸೃಷ್ಟಿಸಿದ ಯುಎಇ ಕ್ರಿಕೆಟ್​ ತಂಡದ ನಾಯಕ ವಸೀಮ್​

Narendra Modi
ದೇಶ2 hours ago

Narendra Modi: ವಾರಾಣಸಿಯಲ್ಲಿ ಹೊಸ ಅಲೆ ಸೃಷ್ಟಿಸಿದ ಮೋದಿ, ಶಕ್ತಿ ಪ್ರದರ್ಶನ; ರೋಡ್‌ ಶೋ Photos ಇಲ್ಲಿವೆ

Pratibha Puraskar
ಕರ್ನಾಟಕ2 hours ago

Pratibha Puraskar: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ಮೇ 31 ಕೊನೆಯ ದಿನ

HD Revanna Bail Revanna will not leave the country condition imposed by the court
ಕ್ರೈಂ3 hours ago

HD Revanna Bail: ರೇವಣ್ಣಗೆ ಜಾಮೀನು; ನಾಳೆ 11 ದಿನದ ವನವಾಸದಿಂದ ಮುಕ್ತಿ; ಬೇಲ್‌ ಸಿಗಲು ಕಾರಣವೇನು?

Dust Storm
ಪ್ರಮುಖ ಸುದ್ದಿ3 hours ago

Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

CopConnect cyber security caffe inauguration by Dr Nagalakshmi Chaudhary at bengaluru
ಬೆಂಗಳೂರು3 hours ago

Bengaluru News: ಮಹಿಳೆಯರು ಸೋಷಿಯಲ್‌ ಮೀಡಿಯಾ ಬಳಸುವಾಗ ಎಚ್ಚರ ವಹಿಸಬೇಕು ಎಂದ ಮಹಿಳಾ ಆಯೋಗದ ಅಧ್ಯಕ್ಷೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ4 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ5 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ5 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ5 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ6 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ12 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ17 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ18 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌