ಗುಬ್ಬಿ: ತಾಲೂಕಿನ ಕೆಜಿ ಟೆಂಪಲ್ ಗ್ರಾಮದ ಕಾಳಘಟ್ಟಮ್ಮ ದೇವಾಲಯದ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಆರ್. ಶ್ರೀನಿವಾಸ್ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನತೆ ಒಪ್ಪಿದ್ದಾರೆ, ಉತ್ತಮ ಪ್ರತಿಕ್ರಿಯೆ ಸಹ ನೀಡಿದ್ದಾರೆ ಇದನ್ನು ಎರಡು ಪಕ್ಷಗಳಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಹೀಗಾಗಿ ಸರ್ಕಾರದ ವಿರುದ್ಧ ಮಾತನಾಡುತ್ತಾರೆ ಎಂದು ಆರೋಪಿಸಿದರು.
ಇದನ್ನೂ ಓದಿ:Mobile Addiction : ಮಕ್ಕಳಿಗಿನ್ನು ಮೊಬೈಲ್ ಮುಟ್ಟಿದರೆ ಮುನಿ; ಇದು ಹೊಸ APP ಕಹಾನಿ!
ಮುಂಬರುವ ಲೋಕಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಕಾಂಗ್ರೆಸ್ನಿಂದ ಸಾಕಷ್ಟು ಜನ ಅಭ್ಯರ್ಥಿಗಳಿದ್ದು, ಪಕ್ಷದ ನಿರ್ಣಯದಂತೆ ಅಭ್ಯರ್ಥಿಯಾಗುತ್ತಾರೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಇದನ್ನೂ ಓದಿ: Independence Day 2023: ಸ್ವಾತಂತ್ರ್ಯೋತ್ಸವ ದಿನ ನೋಡಲೇಬೇಕಾದ ಕನ್ನಡ ಚಿತ್ರಗಳಿವು
ಈ ಸಂದರ್ಭದಲ್ಲಿ ಕುನ್ನಾಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಅಶಾಮಣಿ ಪ್ರಸನ್ನ ಕುಮಾರ್, ಪ್ರೇಮ ದಿವಾಕರ್, ಅಶೋಕ್ ಕುಮಾರ್, ಶಂಕರೇ ಗೌಡ, ಚೇತನ್ ಕುಮಾರ್, ಕೊಪ್ಪ ದೇವರಾಜು, ಪ್ರಕಾಶ್, ಎಲ್ ಪಿ.ರಾಜಣ್ಣ, ರೆಹಮತ್ ವುಲ್ಲಾ, ಅಬು ಸಾಲೇಹ, ರಾಮಲಿಂಗೇ ಗೌಡ, ಪರಮೇಶ್, ಶ್ರೀಧರ್, ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.