ಚಿಕ್ಕನಾಯಕನಹಳ್ಳಿ: ತಾಲೂಕಿನ ಶೆಟ್ಟಿಕೆರೆ ಹೋಬಳಿಯ ಮಾದಿಹಳ್ಳಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾರ್ಗದರ್ಶನದಲ್ಲಿ ಮಾತೃಶ್ರೀ ಜ್ಞಾನ ವಿಕಾಸ ಕೇಂದ್ರದ (Jnanavikasa Kendra) ಎರಡನೇ ವರ್ಷದ ವಾರ್ಷಿಕೋತ್ಸವ (Anniversary Program) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಯೋಜನಾಧಿಕಾರಿ ಪ್ರೇಮಾನಂದ ಎಲ್. ಬಿ. ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಕನಸಿನಂತೆ ಜ್ಞಾನವಿಕಾಸ ಕಾರ್ಯಕ್ರಮಗಳು ನಡೆಯುತ್ತಿವೆ, ಯೋಜನೆಯಲ್ಲಿ ಸದಸ್ಯರ ಮಕ್ಕಳಿಗೆ ವೃತ್ತಿಪರ ಶಿಕ್ಷಣಕ್ಕಾಗಿ ಸುಜ್ಞಾನನಿಧಿ ಶಿಷ್ಯ ವೇತನ, ವಿಕಲಚೇತನರಿಗೆ ಜನ ಮಂಗಲ ಕಾರ್ಯಕ್ರಮ, ಆರ್ಥಿಕ ಅಭಿವೃದ್ಧಿಗಾಗಿ ಪ್ರಗತಿ ನಿಧಿ ಕಾರ್ಯಕ್ರಮ, ಆರೋಗ್ಯ ಸಮಸ್ಯೆಗಾಗಿ ಅರೋಗ್ಯ ರಕ್ಷಾ ಕಾರ್ಯಕ್ರಮ ಸೇರಿದಂತೆ ನಾನಾ ಕಾರ್ಯಕ್ರಮಗಳನ್ನು ಸದಸ್ಯರುಗಳಿಗೆ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಇದನ್ನೂ ಓದಿ: School Teachers : ಸರ್ಕಾರಿ ಶಿಕ್ಷಕರಿಗೆ Good News; ಗಣತಿ, ಚುನಾವಣಾ ಕೆಲಸಕ್ಕೆ ಬಳಸದಂತೆ ಆಯೋಗಕ್ಕೆ ಸೂಚನೆ
ಮಾದಿಹಳ್ಳಿ ಶಾಲೆಯ ಶಿಕ್ಷಕ ನಾಗರಾಜ್ ಮಾತನಾಡಿದರು. ಮಮತ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಕೇಂದ್ರದ ಸದಸ್ಯರಿಗೆ ಏರ್ಪಡಿಸಿದ್ದ ಆಟೋಟ ಸ್ಪರ್ಧೆ ಹಾಗೂ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಇದನ್ನೂ ಓದಿ: Weather report : ಉತ್ತರ ಕರ್ನಾಟಕದಲ್ಲಿ ಬಿರು ಮಳೆ; ಕರಾವಳಿ, ಮಲೆನಾಡಲ್ಲೂ ಅಬ್ಬರ!
ಈ ವೇಳೆ ಗ್ರಾಮ ಪಂಚಾಯ್ತಿ ಸದಸ್ಯೆ ಮಾಲಾ, ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ನೇತ್ರಾವತಿ, ಮೇಲ್ವಿಚಾರಕಿ ಚೈತ್ರ, ಸೇವಾಪ್ರತಿನಿಧಿ ಜಯಂತಿ ಉಪಸ್ಥಿತರಿದ್ದರು. ಕಾವ್ಯ ನಿರೂಪಿಸಿದರು, ಶಕುಂತಲಾ ಸ್ವಾಗತಿಸಿದರು.