ಶಿರಾ: ಚಿರತೆಯೊಂದು (Leopard) ಪ್ರತ್ಯಕ್ಷವಾಗಿರುವ ಘಟನೆ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ತಿಪ್ಪನಹಳ್ಳಿ ಗ್ರಾಮದ ಬಳಿ ಗುರುವಾರ ಜರುಗಿದೆ.
ಶಿರಾ ಮತ್ತು ಗುಬ್ಬಿ ಗಡಿ ಭಾಗದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ತಿಪ್ಪನಹಳ್ಳಿ ಗ್ರಾಮದಲ್ಲಿ ಚಿರತೆ ಕಂಡು ಬಂದಿದೆ ಎಂದು ಗ್ರಾಮಸ್ಥರು ತಿಳಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಗುರುವಾರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಇದನ್ನೂ ಓದಿ: Vijayanagara News: ಹಂಪಿ ಕನ್ನಡ ವಿವಿ ನುಡಿಹಬ್ಬ; ಮೂವರಿಗೆ ನಾಡೋಜ ಗೌರವ ಪ್ರದಾನ
ಕಳೆದ ಮೂರು ದಿನಗಳ ಹಿಂದೆ ಚಿರತೆಯು ಗ್ರಾಮದ ಸುತ್ತಮುತ್ತಲೂ ಓಡಾಡುತ್ತಿರುವುದು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆ ಹಾಗೂ ಕಳ್ಳಂಬೆಳ್ಳ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಚಿರತೆಯನ್ನು ಸೆರೆ ಹಿಡಿಯಲು ಬೋನುಗಳನ್ನು ಅಳವಡಿಸಲಾಗಿದೆ.
ಇದನ್ನೂ ಓದಿ: Vivek Murthy: ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಅಮೆರಿಕ ಪ್ರತಿನಿಧಿಯಾಗಿ ವಿವೇಕ್ ಮೂರ್ತಿ ನೇಮಕ
ಈ ಕುರಿತು ಮಾತನಾಡಿದ ಅರಣ್ಯ ಇಲಾಖೆಯ ಅಧಿಕಾರಿ ನವನೀತ, ಇಂದು ಚಿರತೆಯ ಯಾವುದೇ ಸುಳಿವು ಕಂಡುಬಂದಿಲ್ಲ, ಆದರೆ ಚಿರತೆ ಗ್ರಾಮದಲ್ಲಿ ಓಡಾಡುತ್ತಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದು, ಚಿರತೆಯನ್ನು ಸೆರೆ ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.