ಗುಬ್ಬಿ: ಪಟ್ಟಣದ ಬೆಸ್ಕಾಂ ಕಚೇರಿಯ ಸಭಾಂಗಣದಲ್ಲಿ ಶನಿವಾರ ರಾಜ್ಯ ಸರ್ಕಾರದ (State Govt) ಮಹತ್ವದ ಗೃಹ ಜ್ಯೋತಿ ಯೋಜನೆಗೆ (Gruha Jyothi scheme) ಶಾಸಕ ಎಸ್.ಆರ್.ಶ್ರೀನಿವಾಸ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕ ಎಸ್.ಆರ್.ಶ್ರೀನಿವಾಸ್, ಚುನಾವಣೆಯ ಸಂದರ್ಭದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಉಚಿತವಾಗಿ 5 ಯೋಜನೆಗಳನ್ನು ಘೋಷಣೆ ಮಾಡಿದ್ದು ಅದರಲ್ಲಿ ಮೂರನೇ ಯೋಜನೆಯದ ಗೃಹಜ್ಯೋತಿ ಯೋಜನೆಗೆ ಇಂದು ಮುಖ್ಯಮಂತ್ರಿಗಳು ಕಲ್ಬುರ್ಗಿಯಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದು, ಅದರಂತೆ ರಾಜ್ಯದ ಪ್ರತಿ ತಾಲೂಕುಗಳಲ್ಲಿ ಶಾಸಕರ ನೇತೃತ್ವದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಗಿದೆ ಎಂದರು.
ಇದನ್ನೂ ಓದಿ: Weather Report : ನಾಳೆ ಇಡೀ ದಿನ ಈ ಜಿಲ್ಲೆಯಲ್ಲಿ ತುಂತುರು ಮಳೆ ಜತೆಗೆ ಥಂಡಿ ಹವಾ!
ತಾಲೂಕಿನಲ್ಲಿ ಒಟ್ಟು 70566 ಕುಟುಂಬಗಳು ಇದ್ದು, ಅದರಲ್ಲಿ 49900 ಜನ ನೋಂದಣಿ ಮಾಡಿದ್ದು ಇನ್ನೂ 20666 ಜನ ನೋಂದಣಿ ಮಾಡಿಕೊಂಡಿರುವುದಿಲ್ಲ. ಅವರಿಗೂ ಸಹ ಮುಂದಿನ ಒಂದು ತಿಂಗಳಿನಲ್ಲಿ ನೊಂದಣಿ ಮಾಡಿಕೊಳ್ಳಬಹುದು. ಇದಕ್ಕೆ ಸರ್ಕಾರದ ಯಾವುದೇ ನಿಬಂಧನೆಗಳನ್ನು ಮಾಡಿಲ್ಲ ಎಂದು ತಿಳಿಸಿದರು.
ಈ ವೇಳೆ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಕರಿಯಪ್ಪ ಮಾತನಾಡಿದರು.
ಇದನ್ನೂ ಓದಿ: Alex Hales Retirement: ಟಿ20 ವಿಶ್ವಕಪ್ನಲ್ಲಿ ಭಾರತದ ಗೆಲುವು ಕಸಿದ ಇಂಗ್ಲೆಂಡ್ನ ಸ್ಟಾರ್ ಆಟಗಾರ ಕ್ರಿಕೆಟ್ಗೆ ವಿದಾಯ
ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಬಿ.ಆರತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಪಟ್ಟಣ ಪಂಚಾಯಿತಿ ಸದಸ್ಯರಾದ ರಂಗಸ್ವಾಮಿ, ಕುಮಾರ್, ಶೌಕತ್ ಅಲಿ, ಕೃಷ್ಣ ಮೂರ್ತಿ, ಶಶಿಕುಮಾರ್, ಬಿದರೆ ಗ್ರಾಮ ಪಂಚಾಯತಿ ಅಧ್ಯಕ್ಷ ಯತೀಶ್, ನಲ್ಲೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ವತ್ಸಲ, ಬೆಸ್ಕಾಂನ ಕಾಂತರಾಜು, ರಾಜೇಶ್, ಬೆಸ್ಕಾಂ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಹಾಜರಿದ್ದರು.