ಶಿರಾ: ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ (Mother and Children Hospital) ಪ್ರಭಾರ ತಹಸೀಲ್ದಾರ್ (Tahsildar) ನಾಗಮಣಿ, ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಪ್ರತಿ ವಾರ್ಡ್‌ಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ, ಹೊರ ಮತ್ತು ಒಳ ರೋಗಿಗಳ ಹಿತರಕ್ಷಣೆ ಕಾಪಾಡಬೇಕು ಎಂದು ಸೂಚಿಸಿದ ಅವರು, ಆಸ್ಪತ್ರೆಯ ಶೌಚಾಲಯ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: Kiccha Sudeep: ಅಭಿಮಾನಿಯ ಆಸೆ ಈಡೇರಿಸಿದ ಕಿಚ್ಚ: ’ಕೋಟಿಗೊಬ್ಬ’ನ ಹೃದಯವಂತಿಕೆಗೆ ಫ್ಯಾನ್ಸ್ ಸಲಾಂ!
ಆಸ್ಪತ್ರೆಯ ಹೆರಿಗೆ ಕೋಣೆ, ವಿಶೇಷ ನವಜಾತ ಶಿಶು ಆರೈಕೆ ಕೇಂದ್ರ, ಮಕ್ಕಳ ಪೌಷ್ಟಿಕಾಂಶ ಮತ್ತು ಪುನರ್ವಸತಿ ಕೇಂದ್ರ, ಶಸ್ತ್ರ ಚಿಕಿತ್ಸಾ ಕೋಣೆ, ಒಳ ರೋಗಿಗಳ ಕೋಣೆ, ಪಿಎನ್‌ಸಿ ವಾರ್ಡ್, ಕ್ಷ- ಕಿರಣ ಕೋಣೆ, ರಕ್ತ ಸಂಗ್ರಹಣ ಕೇಂದ್ರ, ಚಿಕಿತ್ಸಾ ವಿಭಾಗ, ಡಯಾಲಿಸಿಸ್, ಒಪಿಡಿ, ವೈದ್ಯರ ತಪಾಸಣೆ ಕೊಠಡಿ, ಔಷಧಿ ವಿತರಣೆ ಕೊಠಡಿ, ರೋಗಿಗಳ ನೋಂದಣಿ ವಿಭಾಗ, ತುರ್ತು ಚಿಕಿತ್ಸಾ ವಿಭಾಗದ ಕೊಠಡಿಗಳಿಗೆ ತೆರಳಿ ಪರಿಶೀಲಿಸಿ, ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚಿಸಿದರು.
ಇಂದಿರಾ ಕ್ಯಾಂಟೀನ್ ಗೆ ಭೇಟಿ
ನಗರದ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಪ್ರಭಾರ ತಹಸೀಲ್ದಾರ್ ನಾಗಮಣಿ, ಕ್ಯಾಂಟೀನ್ ಸುತ್ತಮುತ್ತ ಶುಚಿತ್ವ ಕಾಪಾಡಿಕೊಳ್ಳಬೇಕು, ಕ್ಯಾಂಟೀನ್‌ನಲ್ಲಿನ ಚಿಮಣಿಯನ್ನು ವಾರಕೊಮ್ಮೆಯಾದರೂ ಶುಚಿಗೊಳಿಸಬೇಕೆಂದು ಸೂಚನೆ ನೀಡಿದರು.
ಇದನ್ನೂ ಓದಿ: Bangalore Mysore Expressway : ಹೆದ್ದಾರಿ ರೇಸಿಂಗ್ ಟ್ರ್ಯಾಕ್ ಅಲ್ಲ; ಡ್ರೈವಿಂಗ್ ರೂಲ್ಸ್ ಹೇಳಿದ ಪ್ರತಾಪ್ ಸಿಂಹ
ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.