ತುಮಕೂರು: ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನಗೊಂಡಿದೆ. ಕುಣಿಗಲ್ ಕ್ಷೇತ್ರದ ಮಾಜಿ ಶಾಸಕ ಎಚ್. ನಿಂಗಪ್ಪ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎನ್ನಲಾಗಿದ್ದು, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗುವ ಇರಾದೆ ಹೊಂದಿದ್ದಾರೆ.
ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ
ನಿಂಗಪ್ಪ ಅವರು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. 2004ರಲ್ಲಿ ಕುಣಿಗಲ್ ಕ್ಷೇತ್ರದಿಂದ ಶಾಸಕರಾಗಿದ್ದ ಎಚ್.ನಿಂಗಪ್ಪ ಅವರು 2008ರಲ್ಲಿ ತುಮಕೂರು ಗ್ರಾಮಾಂತರದಿಂದ ಸ್ಪರ್ಧೆ ಮಾಡಿ ಸೋತಿದ್ದರು. 2013ರಲ್ಲಿ ಜೆಡಿಎಸ್‌ನಿಂದ ಟಿಕೆಟ್ ಸಿಗದಿದ್ದಾಗ ಕೆಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಅಲ್ಲಿ ಸೋತ ಬಳಿಕ ಕಾಂಗ್ರೆಸ್ ಸೇರಿದ್ದರು. ಮತ್ತೆ 2018ರಲ್ಲಿ ಜೆಡಿಎಸ್‌ಗೆ ಮರಳಿದ್ದರು.
2018ರಲ್ಲಿ ಜೆಡಿಎಸ್ ಸೇರಿದ ನಿಂಗಪ್ಪ ಅವರನ್ನು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉಸ್ತುವಾರಿ ಎಂದು ನೇಮಿಸಿ ಕುಮಾರಸ್ವಾಮಿ ಅವರು ಆದೇಶ ಪತ್ರ ನೀಡಿದ್ದರು. ಆದರೆ, ಅದು ಪತ್ರವಾಗಿಯೇ ಉಳಿಯಿತು ಎಂದು ನಿಂಗಪ್ಪ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಪಕ್ಷದ ಎಲ್ಲಾ ಚಟುವಟಿಕೆಗಳಿಂದ ನನ್ನ ದೂರ ಇಟ್ಟಿದ್ದರು ಎಂದು ಅಸಮಾಧಾನ ಎಂದೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಎಚ್ ನಿಂಗಪ್ಪ ಮಾಹಿತಿ ನೀಡಿದ್ದು, 2023ರ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.
ಈಗಾಗಲೇ ಗುಬ್ಬಿ ಕ್ಷೇತ್ರದ ಹಾಲಿ ಶಾಸಕರಾಗಿರುವ ಎಸ್.ಆರ್. ಶ್ರೀನಿವಾಸ್ ಅವರು ಈಗಾಗಲೇ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುವುದು ಖಚಿತವಾಗಿದೆ. ಈ ನಡುವೆ ತುಮಕೂರಿನ ಮತ್ತೊಬ್ಬ ಪ್ರಬಲ ರಾಜಕಾರಣಿ, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು.
ಇದನ್ನೂ ಓದಿ | ಎಚ್ಡಿಕೆಗೆ ತಾಕತ್ತಿದ್ರೆ ಗುಬ್ಬಿಯಲ್ಲಿ ಗೆದ್ದು ತೋರಿಸಲಿ : ಶಾಸಕ ಎಸ್.ಆರ್.ಶ್ರೀನಿವಾಸ್ ಓಪನ್ ಚಾಲೆಂಜ್