ಕೊರಟಗೆರೆ: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ (ZP CEO) ಜಿ.ಪ್ರಭು ಅವರು ದಿಢೀರ್ ಭೇಟಿ (sudden visit) ನೀಡಿದ ಪ್ರಗತಿಯಲ್ಲಿರುವ ಜಲಜೀವನ್ ಮಿಷನ್ (Jal jeevan Mission) , ಶುದ್ದ ಕುಡಿಯುವ ನೀರಿನ ಘಟಕ ಹಾಗೂ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣಗೊಂಡ ಕಾಮಗಾರಿಗಳನ್ನು ವೀಕ್ಷಿಸಿದರು.
ತಾಲೂಕಿನ ತುಂಬಾಡಿ ಗ್ರಾಪಂಗೆ ಭೇಟಿ ನೀಡಿದ ಸಿಇಒ, ಗ್ರಾಪಂ ವ್ಯಾಪ್ತಿಯಲ್ಲಿಯ ಕಾಮಗಾರಿಗಳ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾ.ಪಂ ವ್ಯಾಪ್ತಿಯಲ್ಲಿರುವ ಪ್ರತೀ ಗ್ರಾಮದ ರೈತರ ಮನವೊಲಿಸಿ ಕನಿಷ್ಠ 500 ವೈಯಕ್ತಿಕ ಕಾಮಗಾರಿಗಳ ಪಟ್ಟಿಯನ್ನು ನೀಡುವಂತೆ ಗ್ರಾ.ಪಂ ಸದಸ್ಯರಿಗೆ ಮನವಿ ಮಾಡಿದರು.
ಯಾವುದೇ ಗ್ರಾಮ ಪಂಚಾಯಿತಿ ಅಭಿವೃದ್ಧಿ ಹೊಂದಬೇಕಾದರೆ, ಅಯಾ ಗ್ರಾಪಂ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳು, ಅಂಗನವಾಡಿ ಕಟ್ಟಡಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಶೌಚಾಲಯಗಳು ಉತ್ತಮವಾಗಿರಬೇಕು ಎಂದು ಜಿಪಂ ಸಿಇಒ ಜಿ.ಪ್ರಭು ತಿಳಿಸಿದರು.
ಇದನ್ನೂ ಓದಿ: Viral Video : ಆಗಸದಲ್ಲಿ ಹಾರುವ ಮಹಿಳೆ! ಭಯವೇ ಇಲ್ಲದ ಇವರ ನೆಗೆತ ನೋಡಿ…
ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕಸದ ವಾಹನಗಳ ಮೂಲಕ ಕಸ ಸಂಗ್ರಹಣೆ ಮಾಡಲಾಗುತ್ತಿದೆ. ಸಂಗ್ರಹಿಸಿದ ಕಸವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು, ಕಸ ಸಂಗ್ರಹ ವಾಹನವು ಯಾವ ದಿನ ಯಾವ ಗ್ರಾಮ ಪಂಚಯಿತಿಗೆ ಬರುತ್ತದೆ ಎಂಬ ಮಾಹಿತಿಯನ್ನು ವೇಳಾಪಟ್ಟಿಯಂತೆ ಸಂಗ್ರಹಿಸಬೇಕು ಎಂದು ಸಿಇಒ ಸೂಚನೆ ನೀಡಿದರು. ಬಳಿಕ ತುಂಬಾಡಿ ಗ್ರಾಪಂ ವ್ಯಾಪ್ತಿಯ ತುಂಬಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆಂಜನೇಯ ಸ್ವಾಮಿ ಸಮುದಾಯ ಭವನದ ಕಾಮಗಾರಿಯನ್ನು ವೀಕ್ಷಿಸಿದರು.
ಬಳಿಕ ಕ್ಯಾಮೇನಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಜಲ ಜೀವನ್ ಮಿಷನ್ ಹಾಗೂ ನರೇಗಾ ಕಾಮಗಾರಿಗಳನ್ನು ವೀಕ್ಷಿಸಿದರು. ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಪಂ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಸಿದ ಸಿಇಒ ಅವರು, ಕೂಲಿ ಆಧಾರಿತ 500 ಮಂದಿ ರೈತರ ವೈಯಕ್ತಿಕ ಕಾಮಗಾರಿಗಳ ಪಟ್ಟಿಯನ್ನು ಮೊದಲು ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಂತೆ ಸೂಚನೆ ನೀಡಿದರು.
ಕ್ಯಾಮೇನಹಳ್ಳಿ ಗ್ರಾಪಂ ವ್ಯಾಪ್ತಿಯ ಶಾಂತಲಿಂಗಯ್ಯಪಾಳ್ಯದಲ್ಲಿ ಪ್ರಗತಿಯಲ್ಲಿರುವ ಜಲ ಜೀವನ್ ಮಿಷನ್ ಕಾಮಗಾರಿಗಳನ್ನು ವೀಕ್ಷಿಸಿ ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು.
ಇದನ್ನೂ ಓದಿ: Viral Video: ಅಮೆರಿಕದ ಹಾದಿ ಬೀದಿಯಲ್ಲಿ ‘ಮುಕ್ಕಾಲ ಮುಕ್ಕಾಬುಲ್ಲಾ’ ಹಾಡಿಗೆ ಬಿಂದಾಸ್ ಸ್ಟೆಪ್ಸ್ ಹಾಕಿದ ಜಡೇಜಾ
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ರವೀಶ್ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಕೀರ್ತಿ ನಾಯಕ್ , ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ರವಿಕುಮಾರ್, ತಾ.ಪಂ. ಸಹಾಯಕ ನಿರ್ದೇಶಕ ( ಗ್ರಾ.ಉ) ಎಂ.ಬಿ ಗುರುಮೂರ್ತಿ , ತಾ.ಪಂ ಯೋಜನಾಧಿಕಾರಿ ಮಧುಸೂದನ್ , ತಾಂತ್ರಿಕ ಸಂಯೋಜಕ ಕೆ.ಎಸ್. ಮಧು ಸೇರಿದಂತೆ ಇತರರು ಇದ್ದರು.