ಕರ್ನಾಟಕ
Tree Plantation: 5 ವರ್ಷದಲ್ಲಿ 25 ಕೋಟಿ ಸಸಿ: ಬದುಕಿರುವ ಬಗ್ಗೆ ಆಡಿಟ್ ಮಾಡುತ್ತೇವೆ ಎಂದ ಖಂಡ್ರೆ
ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯೂ ಗ್ರಾಮೀಣ ಪ್ರದೇಶದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಈಶ್ವರ ಖಂಡ್ರೆ ಹೇಳಿದರು.
ಬೆಂಗಳೂರು: ಪ್ರಸಕ್ತ ವರ್ಷ 5 ಕೋಟಿ ಸಸಿಗಳನ್ನು ರಾಜ್ಯಾದ್ಯಂತ ನೆಟ್ಟು, ಅವು ಮರವಾಗಿ ಬೆಳೆಯುವಂತೆ ಕಾಳಜಿ ವಹಿಸುವುದರ ಜೊತೆಗೆ ಎಷ್ಟು ಸಸಿಗಳು ಉಳಿದಿವೆ ಎಂಬ ಬಗ್ಗೆ ಜಿಯೋ ಟ್ಯಾಗ್ ಮೂಲಕ ಆಡಿಟ್ ಮಾಡಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ವಿಕಾಸಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾತನಾಡಿದರು. ಅರಣ್ಯ ವ್ಯಾಪ್ತಿ, ಹಸಿರು ವ್ಯಾಪ್ತಿ ಹೆಚ್ಚಿಸುವುದು ಸರ್ಕಾರದ ಗುರಿಯಾಗಿದೆ. ಒಟ್ಟಾರೆ ಭೌಗೋಳಿಕ ಪ್ರದೇಶದ ಪೈಕಿ ಅರಣ್ಯ ಹಾಗೂ ಹಸಿರು ವ್ಯಾಪ್ತಿ ಕನಿಷ್ಠ ಶೇ.33ಕ್ಕೆ ಇರಬೇಕು ಎಂಬುದು ಮಾನದಂಡ. ಆದರೆ ಪ್ರಸ್ತುತ ರಾಜ್ಯದಲ್ಲಿ ಈ ವ್ಯಾಪ್ತಿ ಸುಮಾರು 20.19ರಷ್ಟು ಮಾತ್ರವೇ ಇದ್ದು, ಸರ್ಕಾರ ವ್ಯಾಪ್ತಿ ಹೆಚ್ಚಳವನ್ನು ಆದ್ಯ ಕರ್ತವ್ಯ ಎಂದು ಪರಿಗಣಿಸಿದೆ ಎಂದರು.
ನಾವು ಪ್ರಕೃತಿ ಪರಿಸರ ರಕ್ಷಿಸಿದರೆ ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ. ಅರಣ್ಯ ಇಲಾಖೆ ಮುಖ್ಯವಾಗಿ ಅರಣ್ಯ ಸಂರಕ್ಷಿಸಬೇಕು. ಆ ಕಾರ್ಯವನ್ನು ಇಲಾಖೆ ಮಾಡುತ್ತದೆ. ಮಕ್ಕಳಲ್ಲಿ ಪರಿಸರ ಕಾಳಜಿ ಮೂಡಿಸಲು ಯೋಜನೆ ರೂಪಿಸಿದ್ದು, ಶಿಕ್ಷಣ ಇಲಾಖೆಯೂ ಸೇರಿದಂತೆ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಸಹಯೋಗದಲ್ಲಿ ಪ್ರಸಕ್ತ ವರ್ಷ 5 ಕೋಟಿ ಸಸಿ ನೆಟ್ಟು, ಪೋಷಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸಲಾಗುವುದು ಎಂದರು.
ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಎಷ್ಟು ಮಹತ್ವದ್ದು ಎಂಬುದು ಇಡೀ ಮಾನವ ಕುಲಕ್ಕೆ ಅರಿವಾಯಿತು. ಹೀಗಾಗಿ ನಮಗೆ ಪ್ರಾಣವಾಯು ನೀಡುವ ವೃಕ್ಷಗಳನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು, ಮಾಧ್ಯಮಗಳು ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಬೇಕು ಎಂದರು.
ಜುಲೈ 1ರಿಂದ 7 ದಿನಗಳ ಕಾಲ ಆಚರಿಸಲಾಗುತ್ತಿರುವ ವನಮಹೋತ್ಸವಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೂ ಇದ್ದು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ. ಜಿಲ್ಲೆಯ ಇತರ ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಹಸಿರು ವ್ಯಾಪ್ತಿ ಹೆಚ್ಚಳ ಕೇವಲ ಅರಣ್ಯ ಇಲಾಖೆ ಒಂದರಿಂದ ಆಗುವ ಕಾರ್ಯವಲ್ಲ. ಇದರಲ್ಲಿ ಇಡೀ ಸಮಾಜ ಪಾಲ್ಗೊಳ್ಳಬೇಕು. ಪ್ರತಿಯೊಬ್ಬರೂ ಸಸಿ ನೆಟ್ಟು ಬೆಳೆಸುವುದು ತಮ್ಮ ಕರ್ತವ್ಯ ಎಂದು ತಿಳಿಯಬೇಕು. ಆಬಾಲವೃದ್ಧರಾದಿಯಾಗಿ ಎಲ್ಲರೂ ಕೈಜೋಡಿಸಿದರೆ ಇದು ಜನಾಂದೋಲನವಾಗುತ್ತದೆ ಎಂದರು.
ಇಂದು ಹಸಿರು ವ್ಯಾಪ್ತಿ ಕ್ಷೀಣಿಸುತ್ತಿರುವುದರ ಪರಿಣಾಮವಾಗಿ ಮತ್ತು ಕೈಗಾರಿಕೆಗಳು, ವಾಹನಗಳು ಮತ್ತು ಮನೆಗಳಲ್ಲಿ ಎಲೆಕ್ಟ್ರಿಕ್ ಉಪಕರಣಗಳಿಂದ ಹೊರಹೊಮ್ಮುವ ಶಾಖ, ತ್ಯಾಜ್ಯ, ಹೊಗೆಯಿಂದ ಹಸಿರು ಮನೆ ಅನಿಲ ಪ್ರಮಾಣ ಹೆಚ್ಚಾಗಿ ಓಜೋನ್ ಪದರಕ್ಕೂ ಹಾನಿಯಾಗಿ ಹವಾಮಾನ ವೈಪರೀತ್ಯ ಆಗುತ್ತಿರುವುದು ನಮಗೆಲ್ಲಾ ತಿಳಿದ ವಿಷಯವಾಗಿದೆ. ಕುಡಿಯುವ ನೀರು, ಸೇವಿಸುವ ಗಾಳಿ ಮಲಿನವಾಗುತ್ತಿದೆ. ಈ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಬೇಕು. ನಾವೆಲ್ಲರೂ ಸೇರಿ ಪ್ರಕೃತಿ ಪರಿಸರ ಉಳಿಸಬೇಕು ಎಂದು ಈಶ್ವರ ಖಂಡ್ರೆ ಹೇಳಿದರು.
ನಮ್ಮ ಅರಣ್ಯ ಇಲಾಖೆ 5 ಕೋಟಿ ಸಸಿ ನೆಡಲೆಂದೇ ತನ್ನ ನರ್ಸರಿಗಳಲ್ಲಿ ವ್ಯಾಪಕ ಶ್ರೇಣಿಯ ಸಸಿ ಬೆಳೆಸಿದೆ. 2.5 ಕೋಟಿಯಷ್ಟು ಸಸಿಗಳನ್ನು ಅರಣ್ಯ ವ್ಯಾಪ್ತಿಯಲ್ಲಿ ಇಲಾಖೆಯ ವತಿಯಿಂದ ನೆಡಲಾಗುತ್ತಿದೆ ಎಂದರು.
ಇದನ್ನೂ ಓದಿ: KEA Recruitment 2023 : ಸರ್ಕಾರದ ನಿಗಮ ಮಂಡಳಿಗಳಲ್ಲಿ 670 ಹುದ್ದೆ; ಇಂದಿನಿಂದ ಅರ್ಜಿ ಸಲ್ಲಿಕೆ ಶುರು
ದರ ಇಳಿಕೆ: ತಾವು ಅಧಿಕಾರ ವಹಿಸಿಕೊಳ್ಳುವ ಮೊದಲೇ ರೈತರಿಗೆ ಪೂರೈಕೆ ಮಾಡುತ್ತಿದ್ದ ಸಸಿಗಳ ದರವನ್ನು ಹೆಚ್ಚಳ ಮಾಡಲಾಗಿತ್ತು. ಈ ಬಗ್ಗೆ ಪುನರ್ ಪರಿಶೀಲನೆ ಮಾಡಿ, 5×8 ಗಿಡಗಳಿಗೆ 2 ರೂ., 6 x8 ಗಿಡಗಳಿಗೆ 3 ರೂ. ಮತ್ತು 8 x12 ಗಿಡಗಳಿಗೆ 6 ರೂ. ನಿಗದಿ ಮಾಡಲಾಗಿದೆ ಎಂದು ವಿವರಿಸಿದರು.
ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲೂಗ್ರಾಮೀಣ ಪ್ರದೇಶದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಅದೇ ರೀತಿ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸ್ಥಳೀಯ ನಗರ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು.
ಒಣ ಮಹೋತ್ಸವ ಆಗಲು ಬಿಡುವುದಿಲ್ಲ: ಯಾವುದೇ ಕಾರಣಕ್ಕೂ ವನಮಹೋತ್ಸವವನ್ನು ಒಣ ಮಹೋತ್ಸವ ಆಗಲು ಬಿಡುವುದಿಲ್ಲ. ನೆಟ್ಟ ಸಸಿಗಳು ಜೀವಂತ ಉಳಿಯಬೇಕು, ಬೆಳೆಯಬೇಕು. ಇದಕ್ಕಾಗಿ ಜಿಯೋ ಟ್ಯಾಗ್ ಮೂಲಕ ಆಡಿಟ್ ಮಾಡಿಸಲಾಗುವುದು, ಅಗತ್ಯ ಬಿದ್ದರೆ ಮೂರನೆ ವ್ಯಕ್ತಿ ಆಡಿಟ್ ಕೂಡ ಮಾಡಿಸಲಾಗುವುದು. ಈ ಬಾರಿ ನೆಟ್ಟ ಗಿಡಗಳ ಪೈಕಿ ಕನಿಷ್ಠ ಶೇ.80ರಷ್ಟು ಜೀವಂತ ಉಳಿಸಿ ಬೆಳೆಸುವುದು ನಮ್ಮ ಉದ್ದೇಶವಾಗಿದೆ ಎಂದರು. ಅಕೇಶಿಯಾ ಮತ್ತು ನೀಲಗಿರಿ ಗಿಡಗಳಿಂದಾಗುವ ದುಷ್ಪರಿಣಾಮದ ಬಗ್ಗೆಯೂ ಕ್ರಮ ವಹಿಸುವ ಭರವಸೆ ನೀಡಿದರು.
ಕರ್ನಾಟಕ
Cauvery Protest: ಕಾವೇರಿ ಕಿಚ್ಚು: ಮಂಡ್ಯ ಬಂದ್; ಹೆದ್ದಾರಿಯಲ್ಲಿ ಉರುಳುಸೇವೆ, ರೈತರ ಜತೆ ಸೇರಿದ ಬಿಜೆಪಿ, ಜೆಡಿಎಸ್
ಇಂದಿನ ಹೋರಾಟಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಾಥ್ ನೀಡಲಿದ್ದಾರೆ. ಇಂದಿನ ರೈತರ ಹೋರಾಟದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ಮಂಡ್ಯ: ಮಂಡ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾವೇರಿ ಕಿಚ್ಚು (Cauvery Dispute) ಕಾವೇರಿದ್ದು, ಇಂದು ಮಂಡ್ಯ ಪೂರ್ತಿ ಬಂದ್ (Mandya Bundh) ಆಗಿದೆ. ವರ್ತಕರು ಸ್ವಯಂಪ್ರೇರಿತರಾಗಿ ಬಂದ್ ಮಾಡಿದ್ದಾರೆ. ಪ್ರತಿಭಟನಾಕಾರರು (Cauvery protest) ಮುಂಜಾನೆಯಿಂದಲೇ ಹೆದ್ದಾರಿಯಲ್ಲಿ ಮಲಗಿ, ಕಬ್ಬಿನ ಜಲ್ಲೆ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂದಿನ ಹೋರಾಟಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಾಥ್ ನೀಡಲಿದ್ದಾರೆ. ಇಂದಿನ ರೈತರ ಹೋರಾಟದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಸಿ.ಟಿ ರವಿ ಹಾಗೂ ಮಧ್ಯಾಹ್ನ 12ಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮಿಸಿ ಮಂಡ್ಯದಲ್ಲಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹೋರಾಟದಲ್ಲಿ ಭಾಗಿಗಳಾಗಲಿದ್ದಾರೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ರೈತರ ಪ್ರತಿಭಟನೆ ಹಲವು ದಿನಗಳಿಂದ ನಡೆಯುತ್ತಿದೆ. ಇಂದು ಮಂಡ್ಯ ಬಂದ್‌ಗೆ ಕರೆ ನೀಡಲಾಗಿದೆ. ಮಂಡ್ಯದ ಸಂಜಯ ವೃತ್ತದಲ್ಲಿ ಟೀ ತಯಾರಿಸಿ ಪ್ರತಿಭಟನೆಯನ್ನು ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಆಯೋಜಿಸಿದ್ದಾರೆ. ಕಾವೇರಿ ವಿಚಾರದಲ್ಲಿ ಸುಪ್ರಿಂ ಕೋರ್ಟ್ ನೀಡಿರುವ ತೀರ್ಪಿನ ಪ್ರತಿಯಿಂದ ಟೀ ತಯಾರಿಸಿ ಪ್ರತಿಭಟನೆ ನಡೆಯಲಿದೆ. ಹಾಗೆಯೇ ಕಿವಿಗೆ ಹೂ ಮುಡಿದು, ಪಟ್ಟೆ ಪಟ್ಟೆ ಚಡ್ಡಿ ಧರಿಸಿಯೂ ಪ್ರತಿಭಟನೆಗೆ ನಿರ್ಧರಿಸಲಾಗಿದೆ.
ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಭದ್ರತೆಗಾಗಿ 6 ಡಿಎಆರ್, 4 ಕೆ ಎಸ್ ಆರ್ ಪಿ ತುಕಡಿ ಜೊತೆಗೆ 200 ಜನ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಿದ್ದಾರೆ.
ಬೆಳಗೆಯಿಂದ ಕಾರ್ಯ ನಿರ್ವಹಿಸ್ತಿದ್ದ ಪೆಟ್ರೋಲ್ ಬಂಕ್‌ಗಳನ್ನು ಬೆಂಬಲ ನೀಡುವಂತೆ ಹಿತ ರಕ್ಷಣಾ ಸಮಿತಿ ಸದಸ್ಯರು ಬಂದ್ ಮಾಡಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ರ್ಯಾಪಿಡ್ ಆಕ್ಸನ್ ಪೋರ್ಸ್ ಆಗಮಿಸಿದ್ದು, ಮಂಡ್ಯದ ಸಂಜಯ ವೃತ್ತದಲ್ಲಿ ನಿಯೋಜಿಸಲಾಗಿದೆ. ಬೆಳವಣಿಗೆಗಳ ಮೇಲೆ ಭದ್ರತಾ ಸಿಬ್ಬಂದಿ ನಿಗಾ ವಹಿಸಿದ್ದಾರೆ. ಪ್ರತಿಭಟನೆ ತೀವ್ರಗೊಂಡಿದ್ದು, ಹೆದ್ದಾರಿಯಲ್ಲೇ ಮಲಗಿ ಪ್ರತಿಭಟಿಸುತ್ತಿದ್ದಾರೆ.
ಮದ್ದೂರು ಪಟ್ಟಣದಲ್ಲಿಯೂ ಬಹುತೇಕ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಸ್ವಯಂ ಪ್ರೇರಿತರಾಗಿ ಬಂದ್‌ಗೆ ಸಹಕರಿಸಲು ವರ್ತಕರು ನಿರ್ಧರಿಸಿದ್ದಾರೆ. ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಮೆಡಿಕಲ್ ಶಾಪ್, ಹಾಲಿನ ಮಳಿಗೆಗಳು, ಹೋಟೆಲ್ ಸೇರಿ ಅತ್ಯಗತ್ಯ ಸೇವೆಗಳು ಮಾತ್ರ ಲಭ್ಯವಿವೆ. ಕೆ. ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಂದಿನಂತೆ ಸೇವೆ ಲಭ್ಯವಿದೆ.
“ಇಂದು ಮಂಡ್ಯ ರೈತ ಹಿತ ರಕ್ಷಣಾ ಸಮಿತಿ ಬಂದ್‌ಗೆ ಕರೆ ನೀಡಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ತನಕ ಮಂಡ್ಯ ಸಂಪೂರ್ಣ ಬಂದ್ ಮಾಡಲಾಗುವುದು. ಬಂದ್‌ಗೆ ಸ್ವಯಂಪ್ರೇರಿತವಾಗಿ ಸಾರ್ವಜನಿಕರು ಬೆಂಬಲ ನೀಡಿದ್ದಾರೆʼʼ ಎಂದು ಜೆಡಿಎಸ್ ಮುಖಂಡ ಶ್ರೀಕಂಠೇ ಗೌಡ ಹೇಳಿದ್ದಾರೆ.
ಇದನ್ನೂ ಓದಿ: Cauvery Protest : ಮಂಡ್ಯದಲ್ಲಿ ಬೆಳಗ್ಗಿನಿಂದಲೇ ಜಲಾಕ್ರೋಶ; ತಮಿಳುನಾಡಿಗಷ್ಟೇ ಅಲ್ಲ ಬೆಂಗಳೂರಿಗೂ ನೀರು ಬಿಡಬೇಡಿ!
ಕರ್ನಾಟಕ
Halashri Swameeji : ಹಾಲಶ್ರೀ ಇನ್ನೊಂದು ದೋಖಾ; ಶಿರಹಟ್ಟಿ ಬಿಜೆಪಿ ಟಿಕೆಟ್ ಕೊಡಿಸೋದಾಗಿ ಪಿಡಿಒಗೆ ಕೋಟಿ ವಂಚನೆ!
Halashri Swameeji : ಹಾಲಶ್ರೀ ಸ್ವಾಮೀಜಿಯ ಇನ್ನೊಂದು ದೋಖಾ ಬಯಲಾಗಿದೆ. ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಅವರು ಪಿಡಿಒ ಒಬ್ಬರಿಗೆ ವಂಚನೆ ಮಾಡಲಾದ ಬಗ್ಗೆ ದೂರು ದಾಖಲಾಗಿದೆ. ಹಾಗಿದ್ದರೆ ಈ ಕೋಟಿ ಕುಳ ಪಿಡಿಒ ಯಾರು?
ಗದಗ: ಉದ್ಯಮಿ ಗೋವಿಂದ ಪೂಜಾರಿ (Govinda Poojari) ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ (Bynduru BJP ticket) ಕೊಡಿಸುವುದಾಗಿ ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗ್ ಐದು ಕೋಟಿ ರೂ. ವಂಚಿಸಿದ ಪ್ರಕರಣ ಜಗಜ್ಜಾಹೀರಾಗಿದೆ. ಈ ಪ್ರಕರಣದ ಮೂರನೇ ಆರೋಪಿ ಹಿರೇಹಡಗಲಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ (Halashri swameeji) ಈಗ ಇನ್ನೊಂದು ದೋಖಾ ಮಾಡಿದ ಮಾಹಿತಿ ಬಯಲಾಗಿದೆ. ಅವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ (Shirahatti BJP Ticket) ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO-Panchayat development officer) ಒಬ್ಬರಿಂದ 1 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂದು ಮುಂಡರಗಿ ಠಾಣೆಯಲ್ಲಿ (Mundargi Station) ಪ್ರಕರಣ ದಾಖಲಾಗಿದೆ.
ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯ್ತಿ ಪಿಡಿಒ ಆಗಿದ್ದ ಸಂಜಯ್ ಚಡವಾಳ (Sanjay Chadavala) ಅವರಿಗೇ ಈ ವಂಚನೆ ನಡೆದಿರುವುದು. ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಜಯ್ ಅವರು ಹಾಲಶ್ರೀ ಅವರ ಜನಪ್ರಿಯತೆ, ಬಿಜೆಪಿ ನಾಯಕರ ಒಡನಾಟ ಕಂಡು ಅವರ ಮೂಲಕ ಟಿಕೆಟ್ ಪಡೆಯಬಹುದು ಎಂದು ಭಾವಿಸಿದ್ದರು. ಮಾತುಕತೆಯ ವೇಳೆ ಒಂದು ಕೋಟಿ ರೂ.ಗೆ ಡೀಲ್ ಆಗಿತ್ತು. ಸಂಜಯ್ ಒಂದು ಕೋಟಿ ರೂ. ಹಣವನ್ನು ಹಾಲಶ್ರೀ ಅವರಿಗೆ ನೀಡಿದ್ದರು ಎನ್ನಲಾಗಿದೆ.
ಆದರೆ, ಶಿರಹಟ್ಟಿ ಟಿಕೆಟ್ ಕೊಡಿಸುವಲ್ಲಿ ಹಾಲಶ್ರೀ ವಿಫಲರಾಗಿದ್ದರು. ಅದಾದ ಬಳಿಕ ಸಂಜಯ್ ತನ್ನ ಹಣ ವಾಪಸ್ ಕೊಡಬೇಕು ಎಂದು ಹಾಲಶ್ರೀ ಬೆನ್ನು ಬಿದ್ದಿದ್ದರು. ಆದರೆ, ಹಾಲಶ್ರೀ ದಿನ ದೂಡುತ್ತಲೇ ಇದ್ದರು. ಈ ನಡುವೆ, ಗೋವಿಂದ ಪೂಜಾರಿ ಪ್ರಕರಣ ಎದ್ದುಬಂದಿತ್ತು. ಸೆಪ್ಟೆಂಬರ್ 8ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಹಾಲಶ್ರೀ ತಮ್ಮ ಇನ್ನಷ್ಟು ಅಕ್ರಮಗಳು ಬಯಲಿಗೆ ಬರುವುದು ಬೇಡ ಎಂದು ಸಂಜಯ್ ಅವರಿಗೆ ಕರೆ ಮಾಡಿ ಹಣ ತೆಗೆದುಕೊಂಡು ಹೋಗುವಂತೆ ತಿಳಿಸಿದ್ದರು.
ಸಂಜಯ್ ಅವರು ಒಂದೆರಡು ದಿನ ಬಿಟ್ಟು ಹಣಕ್ಕಾಗಿ ಮಠಕ್ಕೆ ತೆರಳಿದರೆ ಅಷ್ಟು ಹೊತ್ತಿಗೆ ಹಾಲಶ್ರೀ ಮಠದಿಂದಲೇ ನಾಪತ್ತೆಯಾಗಿದ್ದರು. ಈ ವೇಳೆ ಸಂಜಯ್ ಅವರು ಹಾಲಶ್ರೀ ಚಾಲಕನ ಸಂಪರ್ಕ ಮಾಡಿದ್ದರು ಆಗ ಚಾಲಕ ಹಿರೇಹಡಗಲಿ ಮಠದಿಂದ ಮೈಸೂರಿನತ್ತ ತೆರಳಿ ಆಗಿತ್ತು.
ಈ ನಡುವೆ, ಹಾಲಶ್ರೀ ಕಾರು ಚಾಲಕ ಸಿಸಿಬಿ ಬಲೆಗೆ ಬಿದ್ದಿದ್ದ. ಈ ನಡುವೆ ಕಾರು ಚಾಲಕ ಮತ್ತು ಪಿಡಿಒ ಸಂಜಯ್ ನಡೆದಿರುವ ಮಾತುಕತೆ, ಫೋನ್ ಕಾಲ್ ಬೆನ್ನು ಹತ್ತಿ ಪಿಡಿಒ ಸಂಜಯ್‌ನನ್ನು ವಿಚಾರಣೆ ನಡೆಸಿದ್ದರು. ಆಗ ಹಾಲಶ್ರೀಯ ಇನ್ನೊಂದು ಹಗರಣ ಬೆಳಕಿಗೆ ಬಂದಿದೆ. ಸಿಸಿಬಿ ವಿಚಾರಣೆಯ ಬಳಿಕ ಸಂಜಯ್ ಈಗ ಮುಂಡರಗಿ ಠಾಣೆಗೆ ದೂರು ನೀಡಿದ್ದಾರೆ.
ಯಾರೀ ಕೋಟಿ ಕುಳ ಸಂಜಯ್, ದೂರಿನಲ್ಲೇನಿದೆ?
ಸಂಜಯ್ ಚವಡಾಳ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದವರು. ಎಸ್ ಸಿ (ಮಾದಿಗ) ಸಮುದಾಯಕ್ಕೆ ಸೇರಿದವರು. ಎಸ್ ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವ ಆಸಕ್ತಿಹೊಂದಿದ್ದ ಸಂಜಯ್ ಅರುಂಧತಿ ಫೌಂಡೇಷನ್ ಹೆಸರಲ್ಲಿ ಸಾಮಾಜಿಕ ಸೇವೆ ಮಾಡುತ್ತಿದ್ದರು. ಒಬ್ಬ ಪಿಡಿಒ ಆಗಿ ಕೋಟಿಗಟ್ಟಲೆ ಹಣ ಕೊಟ್ಟು ಟಿಕೆಟ್ ಪಡೆಯುವಷ್ಟು ಗಟ್ಟಿ ಕುಳಾನಾ ಎನ್ನುವ ಪ್ರಶ್ನೆಗೆ ಸಂಪೂರ್ಣ ವಿಚಾರಣೆ ಬಳಿಕವೇ ಉತ್ತರ ಸಿಗಬೇಕಾಗಿದೆ. ಅವರ ಘನಾಂದಾರಿ ಕೆಲಸಗಳಿಗಾಗಿ ಅವರು ಕರ್ತವ್ಯ ಲೋಪದ ಆರೋಪದಲ್ಲಿ ಸದ್ಯ ಅಮಾನತುಗೊಂಡಿದ್ದಾರೆ.
ಇದನ್ನೂ ಓದಿ: Halashri Swameeji: ಹಾಲ ಮಠದ ಚರಿತ್ರೆಯಲ್ಲಿ ಕಪ್ಪು ಚುಕ್ಕೆ; ಕರ್ನಾಟಕದ ಯೋಗಿಯಾಗುವ ಕನಸು ಹೊತ್ತಿದ್ದ ಹಾಲಶ್ರೀ!
ಹಾಲಶ್ರೀಯಿಂದ ತನಗೂ ಕೋಟಿ ರೂಪಾಯಿ ವಂಚನೆ ಆಗಿರುವ ಬಗ್ಗೆ ಸಿಸಿಬಿ ವಿಚಾರಣೆಯಲ್ಲಿ ಹೇಳಿಕೊಂಡಿರುವ ಸಂಜಯ್ ಶಿರಹಟ್ಟಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಜನರ ಮುಂದೆ ಬಿಂಬಿಸಿಕೊಂಡಿದ್ದರು. ಟಿಕೆಟ್ ಸಿಕ್ಕೇ ಸಿಗುತ್ತದೆ ಎಂದು ಹೇಳಿಕೊಂಡಿದ್ದರು.
ಸೆಪ್ಟೆಂಬರ್ 19 ನೇ ತಾರೀಕು ಮಧ್ಯರಾತ್ರಿ ಠಾಣೆ ಬಂದು ಸಂಜಯ್ ದೂರು ನೀಡಿದ್ದು ಅದರಲ್ಲಿ ಚುನಾವಣೆ ಮುಂಚಿತವಾಗಿ 1 ಕೋಟಿ ರೂಪಾಯಿ ಹಣವನ್ನು ಶ್ರೀಗಳಿಗೆ ನೀಡಿದ್ದಾಗಿ ಹೇಳಿದ್ದಾರೆ. ಮೂರು ಕಂತುಗಳಲ್ಲಿ ಹಣ ನೀಡಿದ್ದಾಗಿ ದೂರಿನಲ್ಲಿ ದಾಖಲಿಸಿದದಾರೆ. ಆದರೆ, ಸೂಕ್ತ ದಾಖಲೆ ಇಲ್ಲದ ಹಿನ್ನೆಲೆಯಲ್ಲಿ ಕೇವಲ ಎನ್ ಸಿಆರ್ ದಾಖಲಿಸಿ ಕಳುಹಿಸಿರುವ ಮುಂಡರಗಿ ಪೊಲೀಸರು, ದಾಖಲೆ ತೆಗೆದುಕೊಂಡು ಬರುವಂತೆ ಸೂಚಿಸಿದ್ದಾರೆ.
ದೂರು ನೀಡಿದ ಬಳಿಕ ಸಂಜಯ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಸಂಜಯ್. ಒಟ್ಟಿನಲ್ಲಿ ಹಾಲಶ್ರೀ ಮಾಡಿಕೊಂಡಿರುವ ಭಾನಗಡಿ ಒಂದೆರಡಲ್ಲ!
ಶಿವಮೊಗ್ಗ
Communal Tension: ಗಣಪತಿ ವಿಸರ್ಜನೆ ವೇಳೆ ಮಸೀದಿ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಪ್ರತಿಭಟನೆ
ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿರುವ ಮಸೀದಿ ಮುಂದೆ ಸಾಗುತ್ತಿದ್ದ ಗಣಪತಿ ಮೆರವಣಿಗೆಯ ವೇಳೆ ಕೆಲ ಯುವಕರು ಪಟಾಕಿ ಹಚ್ಚಿದರು. ಮಸೀದಿ ಎದುರು ಪಟಾಕಿ ಹಚ್ಚಿದ್ದಕ್ಕೆ ಇನ್ನೊಂದು ಕೋಮಿನ ಯುವಕರು ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ: ಗಣಪತಿ ವಿಸರ್ಜನೆ (Ganesh immersion) ಮೆರವಣಿಗೆ ವೇಳೆ ಮಸೀದಿ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೋಮು ಉದ್ವಿಗ್ನತೆ (Communal Tension) ಸೃಷ್ಟಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ (Shivamogga news) ಹೊಳೆಹೊನ್ನೂರಿನಲ್ಲಿ ನಿನ್ನೆ ರಾತ್ರಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ಗಲಾಟೆ ಸೃಷ್ಟಿಯಾಯಿತು. ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿರುವ ಮಸೀದಿ ಮುಂದೆ ಸಾಗುತ್ತಿದ್ದ ಗಣಪತಿ ಮೆರವಣಿಗೆಯ ವೇಳೆ ಕೆಲ ಯುವಕರು ಪಟಾಕಿ ಹಚ್ಚಿದರು. ಮಸೀದಿ ಎದುರು ಪಟಾಕಿ ಹಚ್ಚಿದ್ದಕ್ಕೆ ಇನ್ನೊಂದು ಕೋಮಿನ ಯುವಕರು ಆಕ್ರೋಶ ವ್ಯಕ್ತಪಡಿಸಿದರು.
ಈ ಘಟನೆ ಖಂಡಿಸಿ ಯುವಕರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಅಡಿಷನಲ್ ಎಸ್‌ಪಿ ಅನಿಲ್ ಭೂಮರೆಡ್ಡಿ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದ ಪೂರ್ಯನಾಯ್ಕ ಭೇಟಿ ನೀಡಿ, ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದರು. ಮಸೀದಿ ಎದುರು ಪಟಾಕಿ ಹಚ್ಚಿ ಅಶಾಂತಿಗೆ ಕಾರಣರಾದವರ ಬಂಧನಕ್ಕೆ ಮುಸ್ಲಿಂ ಮುಖಂಡರು ಆಗ್ರಹಿಸಿದರು. ನಂತರ ಶಾಸಕಿ, ಅಡಿಷನಲ್ ಎಸ್‌ಪಿ ಪ್ರತಿಭಟನಾಕಾರರ ಮನವೊಲಿಸಿದರು.
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಯುವಕ ಸಾವು
ವಿಜಯನಗರ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಹೃದಯಾಘಾತದಿಂದ (Heart Attack) ಯುವಕ ಮೃತಪಟ್ಟಿರುವ ಘಟನೆ ಹಗರಿಬೊಮ್ಮನಹಳ್ಳಿ ಪಟ್ಟಣದ ಭೋವಿ ಕಾಲನಿಯಲ್ಲಿ ಶುಕ್ರವಾರ ನಡೆದಿದೆ. ಮೆರವಣಿಗೆ ವೇಳೆ ಡಿಜೆ ಸದ್ದಿಗೆ ನೂರಾರು ಯುವಕರು ಕುಣಿಯುತ್ತಿದ್ದರು. ಈ ವೇಳೆ ಯುವಕನಿಗೆ ಹೃದಯಾಘಾತವಾಗಿದೆ.
ಜಮೀರ್ ಪಿಂಜಾರ (22) ಮೃತ ಯುವಕ. ಮೆರವಣಿಗೆಯಲ್ಲಿ ಏಕಾಏಕಿ ಯುವಕ ಕುಸಿದು ಬಿದ್ದ ಹಿನ್ನೆಲೆಯಲ್ಲಿ ತಕ್ಷಣವೇ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಹೃದಯಾಘಾತದಿಂದ ಯುವಕ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅತಿಯಾಗಿ ಮದ್ಯ ಸೇವನೆ ಮಾಡಿದ್ದರಿಂದ ಯುವಕ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿನ ಖಚಿತ ಮಾಹಿತಿ ಲಭ್ಯವಾಗಲಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಇನ್ನೂ ಪ್ರಕರಣ ದಾಖಲಾಗಿಲ್ಲ.
ಇದನ್ನೂ ಓದಿ: Shivamogga News: ಶಿವಮೊಗ್ಗದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ
ಶಿವಮೊಗ್ಗ
Shivamogga News: ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಮಾನತಿಗೆ ಶಾಸಕ ಗೋಪಾಲಕೃಷ್ಣ ಸೂಚನೆ
Shivamogga News: ರಿಪ್ಪನ್‌ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುಕ್ರವಾರ ಶಾಸಕ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ರಿಪ್ಪನ್‌ಪೇಟೆ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ (Primary Health Centre) ವೈದ್ಯಾಧಿಕಾರಿ ಡಾ.ಅನಿಲ್‌ಕುಮಾರ್ ಸರಿಯಾಗಿ ಕರ್ತವ್ಯಕ್ಕೆ (Duty) ಹಾಜರಾಗುತ್ತಿಲ್ಲ ಎಂದು ಸಾರ್ವಜನಿಕರ ದೂರಿನನ್ವಯ ಶುಕ್ರವಾರ ಶಾಸಕ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ದಿಢೀರ್ ಭೇಟಿ (Surprise Visit) ನೀಡಿದರು.
ಆಸ್ಪತ್ರೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಭೇಟಿ ನೀಡಿದ ಸಂದರ್ಭದಲ್ಲಿಯೂ ವೈದ್ಯಾಧಿಕಾರಿ ಗೈರಾಗಿರುವುದನ್ನು ಕಂಡು ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಇಲ್ಲಿನ ವೈದ್ಯಾಧಿಕಾರಿಯನ್ನು ಅಮಾನತು ಪಡಿಸಿ, ವರದಿ ನೀಡುವಂತೆ ಅವರು ಸೂಚಿಸಿದರು.
ಇದನ್ನೂ ಓದಿ: Sirsi News:ಅಕ್ರಮ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ ಶ್ರೀಗಂಧ ವಶ
ಪ್ರಾಥಮಿಕ ಆರೋಗ್ಯ ಕೇಂದ್ರದ ಹಲವು ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸಾರ್ವಜನಿಕರಿಂದ ಸಾಕಷ್ಟು ದೂರುಗಳನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಆಲಿಸಿದರು.
ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲ, ಇದರಿಂದ ಸರಿಯಾಗಿ ಔಷಧಿ ವಿತರಣೆಯಾಗದೇ ರೋಗಿಗಳು ಖಾಸಗಿ ಮೆಡಿಕಲ್‌ಗಳಿಗೆ ಚೀಟಿ ಹಿಡಿದು ಹೋಗುವಂತಾಗಿದೆ ಎಂದು ಸಾರ್ವಜನಿಕರು ದೂರಿದರು, ಆಗ ಶಾಸಕರು ಈ ಬಗ್ಗೆ ಸಂಬಂಧಿಸಿದ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಸ್ಥಳೀಯ ಅಸ್ಪತ್ರೆಯ ಫಾರ್ಮಾಸಿಸ್ಟ್ ಸರಿಯಾಗಿ ಕೆಲಸಕ್ಕೆ ಬಾರದಿರುವುದರ ಬಗ್ಗೆ ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಇದನ್ನೂ ಓದಿ: Shivamogga News: ವಿಶ್ವ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಸೆ.23ರಿಂದ ಸೊರಬದಲ್ಲಿ ಕಾರ್ಯಕ್ರಮ
ಈ ಸಂದರ್ಭದಲ್ಲಿ ಡಾ.ಅಂಜನಪ್ಪ, ಸಿಬ್ಬಂದಿಗಳಾದ ಗಾಯಿತ್ರಿ, ಜಿ.ಪಂ.ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ತಾ.ಪಂ. ಮಾಜಿ ಸದಸ್ಯ ಚಂದ್ರು ಮೌಳಿಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ,ಕೆಂಚನಾಲ ಗ್ರಾ.ಪಂ. ಅಧ್ಯಕ್ಷೆ ಉಭೇದುಲ್ಲಾ ಷರೀಫ್, ಆಶೀಫ್, ಗಣಪತಿ, ಉಂಡಗೋಡು ನಾಗಪ್ಪ, ಶ್ರೀಧರ್, ರಮೆಶ್ ಪ್ಯಾನ್ಸಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
-
ಪ್ರಮುಖ ಸುದ್ದಿ23 hours ago
Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ!
-
ಪ್ರಮುಖ ಸುದ್ದಿ15 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಉಡುಪಿ21 hours ago
FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್ ಬುಕ್ ಪ್ರೊಫೈಲ್ ಏಕಕಾಲದಲ್ಲಿ ಡಿಲೀಟ್!
-
ಸುವಚನ5 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಗ್ಯಾಜೆಟ್ಸ್17 hours ago
YouTube: ಯುಟ್ಯೂಬ್ ವಿಡಿಯೋ ಮಾಡುವುದು ಇನ್ನೂ ಸುಲಭ! ಹೊಸ ಎಡಿಟಿಂಗ್ ಆ್ಯಪ್ ಲಾಂಚ್
-
ಕ್ರೈಂ16 hours ago
Assault Case : ಕೈ ತಾಗಿದ್ದಕ್ಕೆ ಯುವಕರ ಮಧ್ಯೆ ಕಿರಿಕ್; ಖಾನಾಪುರದಲ್ಲಿ ಬಿಗುವಿನ ವಾತಾವರಣ
-
ದೇಶ16 hours ago
Prisoners Escape: ವ್ಯಾನ್ನಿಂದ ಜಿಗಿದು ಇಬ್ಬರು ಕೈದಿಗಳು ಪರಾರಿ; ಕತ್ತೆ ಕಾಯುತ್ತಿದ್ದ ಪೊಲೀಸರು!
-
ಉಡುಪಿ14 hours ago
Dr HS Shetty : ಯಶಸ್ವೀ ಉದ್ಯಮಿ ಡಾ. ಎಚ್.ಎಸ್ ಶೆಟ್ಟಿ ಅವರಿಗೆ ಹುಟ್ಟೂರ ಸನ್ಮಾನ; ಸಾಧನೆ, ಸೇವೆಯ ವಿಸ್ತಾರಕ್ಕೆ ನಮಿಸಿದ ಜನ