Someshwara Beach: ದ್ವಿತೀಯ ಪಿಯುಸಿ ಇಬ್ಬರು ವಿದ್ಯಾರ್ಥಿಗಳು ಸೋಮೇಶ್ವರದಲ್ಲಿ ಸಮುದ್ರಪಾಲು - Vistara News

ಕರ್ನಾಟಕ

Someshwara Beach: ದ್ವಿತೀಯ ಪಿಯುಸಿ ಇಬ್ಬರು ವಿದ್ಯಾರ್ಥಿಗಳು ಸೋಮೇಶ್ವರದಲ್ಲಿ ಸಮುದ್ರಪಾಲು

Someshwara Beach:‌ ನಾಪತ್ತೆಯಾದವರು ಸೋಮೇಶ್ವರ ಪರಿಜ್ಞಾನ ಪಿಯುಸಿ ಕಾಲೇಜಿನ ದ್ವಿತೀಯ ವರ್ಷ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾಗಿದ್ದಾರೆ. ಕಾಲೇಜು ಮುಗಿಸಿ ಮಧ್ಯಾಹ್ನ ನಂತರ ಸಮುದ್ರ ವಿಹಾರಕ್ಕೆಂದು ತೆರಳಿದ್ದರು. ಈ ವೇಳೆ ಓರ್ವ ವಿದ್ಯಾರ್ಥಿ ಸಮುದ್ರದ ಅಲೆಗಳ ನಡುವೆ ಸಿಲುಕಿದರೆ, ಇನ್ನೋರ್ವ ವಿದ್ಯಾರ್ಥಿ ಆತನನ್ನು ಹಿಡಿಯಲು ಮುಂದಾಗುತ್ತಿದ್ದಂತೆ ಇಬ್ಬರೂ ಅಲೆಗಳ ನಡುವೆ ಸಿಲುಕಿ ನಾಪತ್ತೆಯಾಗಿದ್ದಾರೆ.

VISTARANEWS.COM


on

PUC students drown in Someshwara Beach
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಉಳ್ಳಾಲ: ಸೋಮೇಶ್ವರ ಸಮುದ್ರತೀರಕ್ಕೆ (Someshwara Beach) ವಿಹಾರಕ್ಕೆಂದು ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು (2nd PUC Students) ಸಮುದ್ರಪಾಲಾಗಿರುವ (Drown in sea) ಘಟನೆ ಶನಿವಾರ (ಡಿ.9) ಮಧ್ಯಾಹ್ನ ಸಂಭವಿಸಿದೆ. ಕಣ್ಮರೆಯಾಗಿರುವ ಇಬ್ಬರು ವಿದ್ಯಾರ್ಥಿಗಳಿಗಾಗಿ ಸ್ಥಳೀಯ ಈಜುಗಾರರು ಹಾಗೂ ಉಳ್ಳಾಲ ಠಾಣಾ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಯೆಶ್ವಿತ್ (18) ಮತ್ತು ಕುಂಜತ್ತೂರು ಮಜಲ್ ನಿವಾಸಿ ಜಯೇಂದ್ರ ಎಂಬುವವರ ಪುತ್ರ ಯುವರಾಜ್ (18) ಸಮುದ್ರ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾದವರು.

ಇಬ್ಬರು ಸಮೀಪದ ಸೋಮೇಶ್ವರ ಪರಿಜ್ಞಾನ ಪಿಯುಸಿ ಕಾಲೇಜಿನ ದ್ವಿತೀಯ ವರ್ಷ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾಗಿದ್ದಾರೆ. ಕಾಲೇಜು ಮುಗಿಸಿ ಮಧ್ಯಾಹ್ನ ನಂತರ ಸಮುದ್ರ ವಿಹಾರಕ್ಕೆಂದು ತೆರಳಿದ್ದರು. ಈ ವೇಳೆ ಓರ್ವ ವಿದ್ಯಾರ್ಥಿ ಸಮುದ್ರದ ಅಲೆಗಳ ನಡುವೆ ಸಿಲುಕಿದರೆ, ಇನ್ನೋರ್ವ ವಿದ್ಯಾರ್ಥಿ ಆತನನ್ನು ಹಿಡಿಯಲು ಮುಂದಾಗುತ್ತಿದ್ದಂತೆ ಇಬ್ಬರೂ ಅಲೆಗಳ ನಡುವೆ ಸಿಲುಕಿ ನಾಪತ್ತೆಯಾಗಿದ್ದಾರೆ.

ಸ್ಥಳಕ್ಕೆ ಉಳ್ಳಾಲ ಠಾಣಾಧಿಕಾರಿ ಎಚ್.ಎನ್ ಬಾಲಕೃಷ್ಣ ಭೇಟಿ ನೀಡಿದ್ದು, ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರ ಸಹಕಾರದೊಂದಿಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಅಲೆಗಳ ಅಬ್ಬರವಿದೆ ಈಜದಿರಿ!

ಸೋಮೇಶ್ವರ ಸಮುದ್ರ ತೀರ ಈಗಾಗಲೇ ಹಲವು ಜೀವಗಳನ್ನು ಬಲಿ ಪಡೆದುಕೊಂಡಿದೆ. ಈ ಕುರಿತು ಸ್ಥಳದಲ್ಲಿರುವ ಬಂಡೆಗಳಲ್ಲಿ ಹಾಗೂ ಇಲಾಖೆ ವತಿಯಿಂದ ನಾಮಫಲಕಗಳನ್ನು ಅಳವಡಿಸಿ ಮುನ್ನೆಚ್ಚರಿಕೆ ಕ್ರಮವನ್ನು ವಹಿಸುವಂತೆ ಕೋರಲಾಗಿದೆ. ಆದರೂ ಸ್ಥಳದಲ್ಲಿ ವಿಹಾರಕ್ಕೆಂದು ಬರುವ ವಿದ್ಯಾರ್ಥಿಗಳು, ಪ್ರವಾಸಿಗರು ಹೋಂಗಾರ್ಡ್‌ಗಳ ಮತ್ತು ನಾಮಫಲಕಗಳನ್ನು ಗಮನಿಸಿಯೂ ಸಮುದ್ರಕ್ಕೆ ಇಳಿದು ಜೀವ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಸ್ಥಳಕ್ಕೆ ಬರುವವರು ಮುಂಜಾಗ್ರತಾ ವಹಿಸಿ ವಿಹರಿಸುವಂತೆ ಉಳ್ಳಾಲ ಠಾಣಾಧಿಕಾರಿ ಎಚ್.ಎನ್. ಬಾಲಕೃಷ್ಣ ಎಚ್ಚರಿಕೆಯ ಸೂಚನೆ ನೀಡಿದ್ದಾರೆ.

Murder case : ಮಲಗಿದ್ದ ರೈತನ‌ ರುಂಡವನ್ನೇ ಕತ್ತರಿಸಿದ ದುರುಳರು!

ಗದಗ: ಮೆಣಸಿನಕಾಯಿ ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತನನ್ನು ಭೀಕರವಾಗಿ ಹತ್ಯೆ (Murder case) ಮಾಡಲಾಗಿದೆ. ಜಮೀನಲ್ಲಿ ಮಲಗಿದ್ದ ವ್ಯಕ್ತಿಯ ರುಂಡವನ್ನೇ ದುರುಳರು ಕತ್ತರಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಮಾಳೆಕೊಪ್ಪ ಗ್ರಾಮದ ನಿವಾಸಿ ಸಣ್ಣ ಹನಂತಪ್ಪ ವಜ್ರದ್ (60) ಹತ್ಯೆಯಾದವರು.

ಸಣ್ಣಹನಂತಪ್ಪರ ಕತ್ತರಿಸಿರುವ ದುಷ್ಕರ್ಮಿಗಳು ಮುಂಡವನ್ನು ಜಮೀನಿನಲ್ಲೇ ಬಿಟ್ಟು, ರುಂಡ ಸಮೇತ ಪರಾರಿ ಆಗಿದ್ದಾರೆ. ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ಜಮೀನೊಂದರಲ್ಲಿ ಈ ಹತ್ಯೆ ನಡೆದಿದೆ. ಮೆಣಸಿನಕಾಯಿ ಕಾವಲಿಗಾಗಿ ಸಣ್ಣದೊಂದು ಗುಡಿಸಲು ನಿರ್ಮಿಸಿಕೊಂಡು ಮಲಗಿದ್ದರು. ಈ ವೇಳೆ ಕೊಲೆಗಡುಕರು ಸಣ್ಣಹನಂತಪ್ಪರ ತಲೆಯನ್ನೇ ಕಡಿದಿದ್ದಾರೆ.

ಭೀಕರ ಹತ್ಯೆ ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗದಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದು, ಕೊಲೆಗಾರರು ಯಾರೆಂದು ಹುಡುಕಾಟ ನಡೆಸಿದ್ದಾರೆ.

ಕೊಡಗು ರೆಸಾರ್ಟ್‌ನಲ್ಲಿ ಮಗುವನ್ನು ಕೊಂದು ತಂದೆ-ತಾಯಿ ಆತ್ಮಹತ್ಯೆ

ಕೊಡಗು: ಕೇರಳ ಮೂಲದ ಕುಟುಂಬವೊಂದು ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಖಾಸಗಿ ರೆಸಾರ್ಟ್‌ನಲ್ಲಿ (Madikeri Resort) ಮಗುವನ್ನು ಕೊಂದು ಗಂಡ, ಹೆಂಡತಿ ಸಾಮೂಹಿಕವಾಗಿ ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ.

ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇರಳದ ಕೊಲ್ಲಂನಿಂದ ಮಡಿಕೇರಿಗೆ ಆಗಮಿಸಿದ್ದ ಕುಟುಂಬ ಇದಾಗಿದೆ. ಆದರೆ, ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕಾರಣ ಇನ್ನೂ ತಿಳಿದುಬಂದಿಲ್ಲ. ವಿನೋದ್‌ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಕುಟುಂಬದವರಿಗೆ ಈಗಾಗಲೇ ಮಾಹಿತಿಯನ್ನು ನೀಡಿದ್ದು, ಕೇರಳದಿಂದ ಆಗಮಿಸುತ್ತಿದ್ದಾರೆ. ಕುಟುಂಬದವರು ಸ್ಥಳಕ್ಕೆ ಆಗಮಿಸುವವರೆಗೂ ಮೃತದೇಹವನ್ನು ಅಲ್ಲಿಯೇ ಇಡಲಾಗುವುದು. ಅವರು ಬಂದ ಬಳಿಕಷ್ಟೇ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಸೇರಿ ಮುಂದಿನ ಪ್ರಕ್ರಿಯೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮಗುವನ್ನು ಉಸಿರು ಕಟ್ಟಿಸಿ ಕೊಂದು ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: JDS Karnataka: ಪಕ್ಷ ವಿರೋಧಿ ಚಟುವಟಿಕೆ; ಸಿ.ಎಂ.ಇಬ್ರಾಹಿಂ, ಕೇರಳದ ಸಿ.ಕೆ. ನಾನು ಉಚ್ಚಾಟನೆ

ಆದರೆ, ಶುಕ್ರವಾರ ರೆಸಾರ್ಟ್‌ಗೆ ಬಂದಿದ್ದ ದಂಪತಿ. ಶನಿವಾರ ಬೆಳಗ್ಗೆ ಚೆಕ್‌ಔಟ್‌ ಮಾಡುವುದಾಗಿ ಸಿಬ್ಬಂದಿಗೆ ಹೇಳಿದ್ದರು. ಹೀಗಾಗಿ ಬೆಳಗ್ಗೆಯಾದರೂ ಚೆಕ್‌ಔಟ್‌ ಮಾಡಲು ಬಾರದ ಕಾರಣ ರೆಸಾರ್ಟ್‌ ಸಿಬ್ಬಂದಿ ರೂಂಗೆ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸದ ಕಾರಣ, ಅನುಮಾನ ಬಂದು ಕೊಠಡಿಯತ್ತ ಬಂದಿದ್ದಾರೆ. ಆಗ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading
Advertisement
Latest2 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest20 hours ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest20 hours ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest20 hours ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest22 hours ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest23 hours ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest1 day ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest1 day ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest1 day ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest2 days ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌