Site icon Vistara News

Road Accident: ದ್ವಿಚಕ್ರ ವಾಹನ-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾಗಿ ಸವಾರ ಸಾವು

bike Accident in Doddaballapur

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನ ಮತ್ತು ಟ್ರ್ಯಾಕ್ಟರ್‌ ಮುಖಾಮುಖಿ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಪಸಿಹಳ್ಳಿ ಬಳಿ ಸೋಮವಾರ ರಾತ್ರಿ ನಡೆದಿದೆ. ಮಂಜುನಾಯ್ಕ (26) ಮೃತ ಯುವಕ. ಅಪಘಾತ (Road Accident) ನಡೆದಾಗ ಟ್ರ್ಯಾಕ್ಟರ್ ಕುತ್ತಿಗೆ ಮೇಲೆ‌ ಹರಿದ ಕಾರಣ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಕನಕಪುರದಲ್ಲಿ ಕಾರು-ಬಸ್‌ ನಡುವೆ ಭೀಕರ ಅಪಘಾತ; ಆರು ಮಂದಿ ದುರ್ಮರಣ, ಹಲವರಿಗೆ ಗಾಯ

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿಯ ಸಾತನೂರು ಮುಖ್ಯರಸ್ತೆಯಲ್ಲಿ ಕಾರು ಮತ್ತು ಕೆಎಸ್ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿಯಾಗಿ (Kanakapura Road Accident) ಸ್ಥಳದಲ್ಲೇ ಆರು ಮಂದಿ ದುರ್ಮರಣ ಹೊಂದಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ | Attack on farmer : ನಿರಾಣಿ ವಿರುದ್ಧ ಭಿಕ್ಷಾಟನಾ ಅಭಿಯಾನ; ರೈತ ಮುಖಂಡನ ಮೇಲೆ ದುಷ್ಕರ್ಮಿಗಳು ಅಟ್ಯಾಕ್‌!

ಮಹದೇಶ್ವರ ಬೆಟ್ಟದಿಂದ ವಾಪಸ್ ಆಗುವ ವೇಳೆ ಘಟನೆ ನಡೆದಿದೆ. ಕಾರಿನಲ್ಲಿದ್ದ 6 ಪ್ರಯಾಣಿಕರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಕಾರಿಗೆ ಡಿಕ್ಕಿಯಾಗಿದೆ. ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಆಟೋಗೆ ಲಾರಿ ಡಿಕ್ಕಿ; ಮಹಾರಾಷ್ಟ್ರ ಮೂಲದ ನಾಲ್ವರ ಸಾವು; ಇಬ್ಬರ ಸ್ಥಿತಿ ಗಂಭೀರ

ಬೀದರ್: ಆಟೋಗೆ ಲಾರಿ ಡಿಕ್ಕಿಯಾಗಿ ಮಹಾರಾಷ್ಟ್ರ ಮೂಲದ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ (Road Accident) ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದಿದೆ.

ಇದನ್ನೂ ಓದಿ | Murder Case : ಹೆತ್ತಮ್ಮನನ್ನೇ ಕೊಂದ ಧೂರ್ತ ಮಗ ; ಕುಡಿದ ಮತ್ತಿನಲ್ಲಿ ಕೊಲೆ ಮಾಡಿ ಗದ್ದೆಗೆ ಹೋಗಿ ಮಲಗಿದ್ದ!

ಮಹಾರಾಷ್ಟ್ರದ ಮುರುಮ್ ಗ್ರಾಮದ ನಾಲ್ವರು ಮೃತಪಟ್ಟಿದ್ದು, ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಮಹಾರಾಷ್ಟ್ರದ ಉಮರ್ಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಶ್ರಾವಣ ಸೋಮವಾರದ ಹಿನ್ನೆಲೆಯಲ್ಲಿ ಬಸವಕಲ್ಯಾಣ ತಾಲೂಕಿನ ಚಂಡಕಾಪೂರ ಬಳಿಯ ಐತಿಹಾಸಿಕ ಶ್ರೀ ಕ್ಷೇತ್ರ ಅಮೃತಕುಂಡಕ್ಕೆ ದರ್ಶನಕ್ಕೆಂದು ಆಗಮಿಸಿದ್ದರು. ದರ್ಶನ ಮುಗಿಸಿಕೊಂಡು ಗ್ರಾಮಕ್ಕೆ ವಾಪಸ್‌ ತೆರಳುವಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸವಕಲ್ಯಾಣದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version