ಹುಬ್ಬಳ್ಳಿ: ಹುಬ್ಬಳ್ಳಿಯ ಕೊಪ್ಪಿಕರ್ ರಸ್ತೆ ಜ್ಯುವೆಲರಿ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು (Jewel thieves) ಬಂಧಿಸುವಲ್ಲಿ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮುಂಬೈನ ಪುಣೆ ಮೂಲದ ಯುವತಿ ಜೋಶ್ನಾ ಹಾಗೂ ಯುವಕ ನವಜೀವ ಬಂಧಿತ ಆರೋಪಿಗಳು. ಬಂಧಿತರಿಂದ 3.34 ಲಕ್ಷ ರೂಪಾಯಿ ಮೌಲ್ಯದ 66.6 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಹುಬ್ಬಳ್ಳಿ- ಧಾರವಾಡ ಸೇರಿದಂತೆ ನಗರದ ವಿವಿಧ ಆಭರಣ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದೆ.
ಗ್ರಾಹಕ ಸೋಗಿನಲ್ಲಿ ಆಭರಣ ಅಂಗಡಿಗೆ ಹೋಗುತ್ತಿದ್ದ ಇಬ್ಬರೂ ಇಟಾಲಿಯನ್ ಮಾದರಿಯ ಬಂಗಾರದ ಚೈನ್ ಕಳ್ಳತನ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣ ಉಪನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಶೋಧ ನಡೆಸಿದ ಪೊಲೀಸರು ಇನ್ಸ್‌ಪೆಕ್ಟರ್ ರವಿಚಂದ್ರನ್ ಅವರ ನೇತೃತ್ವದಲ್ಲಿ ಪಿಎಸ್ಐ ಕವಿತಾ.ಎಸ್.ಎಂ ಅವರ ತಂಡ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಈ ತಂಡ ಇನ್ನೂ ಬೇರೆ ಬೇರೆ ಕಡೆ ಕಳವು ಮಾಡಿದೆಯೇ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | Theft Case | ಕಿರಾಣಿ ಅಂಗಡಿಯಲ್ಲಿ ಸಿಗರೇಟು ಕೇಳುವ ನೆಪದಲ್ಲಿ ಬಂದ್ರು; ಚಿನ್ನ ಕದ್ದು ಪರಾರಿಯಾದರು