Site icon Vistara News

Hit and Run Case: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರ ಸಾವು

Bike Accident

ಆನೇಕಲ್: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವುದು (Hit and Run Case) ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ತೆಲಗರಹಳ್ಳಿ ಬಳಿ ನಡೆದಿದೆ. ಪಲ್ಸರ್ ಬೈಕ್‌ಗೆ ಡಿಕ್ಕಿಯೊಡೆದ ಅಪರಿಚಿತ ವಾಹನ ಚಾಲಕ, ನಿಲ್ಲಿಸದೆ ಪರಾರಿಯಾಗಿದ್ದಾನೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸವಾರರು ಸ್ಥಳದಲ್ಲಿಯೇ ಪ್ರಾಣಬಿಟ್ಟಿದ್ದಾರೆ. ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್-ಬಸ್ ಡಿಕ್ಕಿಯಾಗಿ ಸವಾರ ಮೃತ್ಯು

ವಿಜಯಪುರ: ಬೈಕ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿರುವುದು ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನ ಹೆಸರು ಲಭ್ಯವಾಗಿಲ್ಲ. ಘಟನೆಗೆ ಎರಡು ವಾಹನಗಳ ಅತಿವೇಗವೇ ಕಾರಣ ಎಂದು ಪೊಲೀಸ್ ಶಂಕೆ ವ್ಯಕ್ತಪಡಿಸಿದ್ದಾರೆ.

ಪತ್ನಿಗೆ ಪೆಟ್ರೋಲ್‌ ಎರಚಿ ಬೆಂಕಿ ಹಚ್ಚಿದ; ಸತ್ತಳೆಂದು ನೇಣು ಬಿಗಿದುಕೊಂಡ ಪತಿ

ಹಾಸನ: ಮಡದಿ ಮೇಲೆ ಎರಗಿ ಮಾರಣಾಂತಿಕ ಹಲ್ಲೆ ನಡೆಸಿದ ಪತಿಯೊಬ್ಬ ಆಕೆ ಸತ್ತು ಹೋಗಿದ್ದಾಳೆ (Attempt To Murder) ಎಂದು ತಿಳಿದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಿಟ್ಟಗೊಂಡನಹಳ್ಳಿ ಗ್ರಾಮದಲ್ಲಿ (Family Dispute) ಈ ಘಟನೆ ನಡೆದಿದೆ.

ಪ್ರಶಾಂತ್‌ (32) ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟವನು. ಮೂಲತಃ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗೌರಿಕೊಪ್ಪಲಿನ ಪ್ರಶಾಂತ, ಎರಡು ವರ್ಷಗಳ ಹಿಂದೆ ಬಿಟ್ಟಗೊಂಡನಹಳ್ಳಿಯ ಬಿಂದು (24) ಜತೆ ವಿವಾಹವಾಗಿದ್ದ. ಈ ನಡುವೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಬಿಂದು ತವರು ಮನೆ ಸೇರಿಕೊಂಡಿದ್ದಳು.

ಇದರಿಂದ ಮಾನಸಿಕವಾಗಿ ನೊಂದಿದ್ದ ಪ್ರಶಾಂತ್‌ ಬಿಂದು ಮನೆಗೆ ಬಂದಿದ್ದ. ಜ.9 ರಂದು ಬೆಳಗ್ಗೆ ಪತ್ನಿ ಮನೆಗೆ ಬಂದ ಪ್ರಶಾಂತ್‌ ಪತ್ನಿ ಬಿಂದು ಜತೆಗೆ ಗಲಾಟೆ ಮಾಡಿದ್ದಾನೆ. ಬಳಿಕ ಕುಡುಗೋಲಿನಿಂದ ಕೊಲೆ ಮಾಡಲು ಯತ್ನಿಸಿದ್ದಾನೆ. ಮಾರಣಾಂತಿಕ ಹಲ್ಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ತೀವ್ರ ಹಲ್ಲೆಗೊಳಗಾಗಿದ್ದ ಬಿಂದು ಪ್ರಾಣ ಉಳಿಸಿಕೊಳ್ಳಲು ಮನೆಯಿಂದ ಹೊರಗೆ ಓಡಿ ಬಂದಿದ್ದಾಳೆ.

ಆದರೆ ಇತ್ತ ಪತ್ನಿ ಸತ್ತು ಹೋಗಿದ್ದಾಳೆ ಎಂದು ತಿಳಿದ ಪ್ರಶಾಂತ್‌ ಆಕೆಯ ಮನೆಯಲ್ಲೇ ಸೀರೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಇತ್ತ ಪತಿಯಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಬಿಂದುಳನ್ನು ಸ್ಥಳೀಯರು ಹಾಸನದ ವೈದ್ಯಕೀಯ ಬೋದಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಬಿಂದುವಿಗೆ ಚಿಕಿತ್ಸೆ ಮುಂದುವರಿದಿದೆ.

ಇದನ್ನೂ ಓದಿ | Killer CEO : ಮಗುವನ್ನೇ ಕೊಂದ ಬುದ್ಧಿವಂತೆ; ಭೀಕರ ಕ್ರೌರ್ಯದ ಬೆಚ್ಚಿಬೀಳಿಸುವ ಕಥೆ!

ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊಳೆನರಸೀಪುರ ನಗರ ಪೊಲೀಸರು ಆಗಮಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Exit mobile version