Site icon Vistara News

ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಪಿಯು ವಿದ್ಯಾರ್ಥಿಗಳು ನೀರು ಪಾಲು

students

ಮೈಸೂರು: ಈಜಲು ಹೋಗಿ ಇಬ್ಬರು ಬಾಲಕರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಹುಣಸೂರು ತಾಲೂಕಿನ ಹೆಗ್ಗಂದೂರು ಗ್ರಾಮದ ರಮೇಶ್‌ ಎಂಬುವವರ ಪುತ್ರ ಶರತ್‌(17), ಪುಟ್ಟೇಗೌಡ ಎಂಬುವವರ ಪುತ್ರ ಶಿವಕುಮಾರ್(‌17) ಮೃತರು.

ಹನಗೋಡು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಇವರು ಲಕ್ಷ್ಮಣ ತೀರ್ಥ ನದಿಯಲ್ಲಿ ಶುಕ್ರವಾರ ಈಜಲು ಹೋಗಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಸಾವಿಗೀಡಾಗಿದ್ದಾರೆ. ಇಬ್ಬರೂ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದರು. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಕುಮಾರ್‌ ಶವವನ್ನು ಅಗ್ನಿಶಾಮಕ ಸಿಬ್ಬಂದಿ ಪತ್ತೆ ಹಚ್ಚಿದ್ದು, ಶರತ್ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ.

ಸ್ನಾನಕ್ಕೆ ಹೋಗಿದ್ದವ ಮೃತ

ಶಿವಮೊಗ್ಗ: ನಗರದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತುಂಗಾ ನದಿಗೆ ಸ್ನಾನ ಮಾಡಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಬಾಪೂಜಿ ನಗರದ ನಿವಾಸಿ ಚರಣ್ (17)ಮೃತ ಬಾಲಕ. ಇಬ್ಬರು ಟ್ಯಾಂಕ್ ಮೊಹಲ್ಲಾ ಯುವಕರೊಂದಿಗೆ ತುಂಗಾ ನದಿಯ ಮಂಟಪಕ್ಕೆ ಸ್ನಾನಕ್ಕೆ ಹೋದಾಗ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಚರಣ್ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದೆ. ನಡೆದ ಘಟನೆ ನಡೆದಿದೆ.

ಇದನ್ನೂ ಓದಿ | ‘ತೆಲುಗಿನ ಕ್ರೈಮ್ ಸಿನೆಮಾಗಳೇ ಪ್ರೇರಣೆ’; ನಿವೃತ್ತ ಯೋಧ ಸುರೇಶ್ ಕೊಲೆ ಆರೋಪಿಗಳು ಅರೆಸ್ಟ್

Exit mobile version