Site icon Vistara News

Special Casual leave: ರಾಜ್ಯ ಸರ್ಕಾರಿ ನೌಕರರಿಗೆ ಎರಡು ದಿನ ವಿಶೇಷ ಸಾಂದರ್ಭಿಕ ರಜೆ

Two days special casual leave for state government employees

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಾರ್ಚ್ 5 ಮತ್ತು 6ರಂದು ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು (Special Casual leave) ಕರ್ನಾಟಕ ಸರ್ಕಾರ ಮಂಜೂರು ಮಾಡಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಜಿ. ಸುಧಾ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ಸಹ ರಜೆ ನೀಡಲಾಗಿತ್ತು. ಇದೀಗ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ವತಿಯಿಂದ ಬೆಂಗಳೂರಿನ ವಸಂತ ನಗರದಲ್ಲಿರುವ ಡಾ. ಅಂಬೇಡ್ಕರ್ ಭವನದಲ್ಲಿ ಮಾರ್ಚ್‌ 5ರಂದು ರಾಜ್ಯ ಮಟ್ಟದ 5ನೇ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ-ಎಸ್ಟಿ ನೌಕರರ ಸಮಾವೇಶವನ್ನು ಆಯೋಜಿಸಲಾಗಿದೆ.

ಸಮಾವೇಶದಲ್ಲಿ ಭಾಗವಹಿಸುವ ಬೆಂಗಳೂರು ನಗರ ಜಿಲ್ಲೆಯ ಸಂಘದ ಸದಸ್ಯರು ಅಧಿಕಾರಿ, ನೌಕರರಿಗೆ ಮಾರ್ಚ್‌ 5ರಂದು ಒಂದು ದಿನ ಮಾತ್ರ ಹಾಗೂ ರಾಜ್ಯದ ಇತರೆ ಜಿಲ್ಲೆಗಳ ಸಂಘದ ಸದಸ್ಯ ಅಧಿಕಾರಿ, ನೌಕರರಿಗೆ ಪ್ರಯಾಣ ದಿನಗಳೂ ಸೇರಿದಂತೆ ಮಾ.5 ಮತ್ತು 6ರಂದು ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ.

ಇದನ್ನೂ ಓದಿ | Guarantee Survey : ಗ್ಯಾರಂಟಿ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಬಳಕೆ; ಎಸಿ ಗಿರಾಕಿಗಳೆಲ್ಲಿ ಎಂದ HDK

ಈ ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಸಮ್ಮೇಳನದ ಸಂಘಟಕರಿಂದ ಹಾಜರಾತಿ ಪ್ರಮಾಣ ಪತ್ರವನ್ನು ಪಡೆಯುವ ಷರತ್ತಿಗೊಳಪಟ್ಟು ರಜೆಯನ್ನು ಮಂಜೂರು ಮಾಡಲು ಸಕ್ಷಮ ಪ್ರಾಧಿಕಾರ ಈ ರಜೆಯನ್ನು ಮಂಜೂರು ಮಾಡತಕ್ಕದ್ದು ಎಂದು ಸ್ಪಷ್ಟಪಡಿಸಲಾಗಿದೆ.

Exit mobile version