Drowned in Sea: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರ ಪಾಲು - Vistara News

ಉಡುಪಿ

Drowned in Sea: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರ ಪಾಲು

Drowned in Sea: ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಶಿರೂರು ಅಳ್ವೆ ಗದ್ದೆ ಬಳಿ ಸಮುದ್ರದಲ್ಲಿ ಮೀನು ಹಿಡಿಯುತ್ತಿದ್ದಾಗ ಇಬ್ಬರು ಯುವಕರು ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ.

VISTARANEWS.COM


on

Gangolli Musab and Nazan who drowned in sea
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ಸಮುದ್ರ ಪಾಲಾಗಿರುವ (Drowned in Sea) ಘಟನೆ ಜಿಲ್ಲೆಯ ಬೈಂದೂರು ತಾಲೂಕು ಶಿರೂರು ಅಳ್ವೆ ಗದ್ದೆ ಬಳಿ ನಡೆದಿದೆ.

ಗಂಗೊಳ್ಳಿ ಮುಸಾಬ್ (22) ಮತ್ತು ನಝಾನ್ (24) ಕಾಣೆಯಾದ ಯುವಕರು. ಬೈಂದೂರು ತಾಲೂಕು ಶಿರೂರು ಅಳ್ವೆ ಗದ್ದೆ ಬಳಿ ಸಮುದ್ರದಲ್ಲಿ ನಾಲ್ವರು ಮೀನು ಹಿಡಿಯುತ್ತಿದ್ದರು. ಸಮುದ್ರದಲ್ಲಿ ಬಲೆ ಬೀಸುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದು ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ. ಉಳಿದ ಇಬ್ಬರು ಮೀನುಗಾರರು ಕಾಣೆಯಾದವರ ಶೋಧ ನಡೆಸಿ, ನಂತರ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದು, ನಾಪತ್ತೆಯಾದವರಿಗಾಗಿ ಸಮುದ್ರದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಎಂಡಿಎಂಎ ಮಾರುತ್ತಿದ್ದ ಇಬ್ಬರ ಬಂಧನ, 2.6 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ

MDMA drug

ಮಂಗಳೂರು: ಸುರತ್ಕಲ್ ಸಮೀಪದ ತಂಡಬೈಲ್ ಎಂಬಲ್ಲಿ ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, 2.6 ಲಕ್ಷ ಮೌಲ್ಯದ ಎಂಡಿಎಂಎ, ಕಾರು ಸಹಿತ ಒಟ್ಟು 7. 83 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ | Gadag News: ಸೂರ್ಯಕಾಂತಿ ಕಟಾವು ಮಾಡಿದ ಹೊಲದಲ್ಲಿ ಮೇಯ್ದು 200 ಕುರಿಗಳ ಸಾವು

ಶಾಕೀಬ್ ಅಲಿಯಾಸ್ ಶಬ್ಬು (33), ನಿಸಾರ್ ಹುಸೈನ್ ಅಲಿಯಾಸ್ ನಿಚ್ಚು‌ (34) ಬಂಧಿತರು. ಶಾಕೀಬ್ ಈ ಹಿಂದೆ ಹಲವು ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13 ಪ್ರಕರಣಗಳು ದಾಖಲಾಗಿವೆ. ನಿಸಾರ್ ಹುಸೈನ್ 9 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತ ಕೊಲೆ ಯತ್ನ ಸೇರಿ ಹಲವು ಪ್ರಕರಣಗಳ ಆರೋಪಿಯಾಗಿದ್ದಾನೆ. ಮಾದಕ ವಸ್ತು ಸಾಗಣೆ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೈಲು ಗೋಡೆ ಹಾರಿ ಎಸ್ಕೇಪ್ ಆದ ಅತ್ಯಾಚಾರ ಆರೋಪಿ!

Rape accused Vasanth

ದಾವಣಗೆರೆ: ಅತ್ಯಾಚಾರ ಪ್ರಕರಣದ ಆರೋಪಿ (Rape Accused) ಜೈಲಿನಿಂದ ಪರಾರಿಯಾದ ಘಟನೆ ದಾವಣಗೆರೆ ನಗರದ ಉಪಕಾರಾಗೃಹದಲ್ಲಿ (Davanagere Jail) ಶನಿವಾರ ನಡೆದಿದೆ. ಪರಾರಿಯಾದ ಆರೋಪಿಯನ್ನು 23 ವರ್ಷದ ವಸಂತ್ ಎಂದು ಗುರುತಿಸಲಾಗಿದೆ. ಈತ ಕಾರಾಗೃಹದ ಗೋಡೆಯನ್ನು ಹಾರಿ ಎಸ್ಕೇಪ್ ಆಗಿದ್ದಾನೆ(Escape from Jail).

ಪರಾರಿಯಾಗಿರುವ ವಸಂತ್ ದಾವಣಗೆರೆ ನಗರದ ಹೊರವಲಯದ ಕೂರರ್ ಪ್ರದೇಶದ ನಿವಾಸಿಯಾಗಿದ್ದಾನೆ. ಈ ಆಟೋ ಚಾಲಕನಾಗಿದ್ದಾನೆ. ಕಳೆದ ಎರಡು ದಿನಗಳ ಹಿಂದೆ ಈತನ ವಿರುದ್ಧ ದಾವಣಗೆರೆಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ವಸಂತ್‌ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು ಮಹಿಳಾ ಪೊಲೀಸ್ ಠಾಣೆ ಪೊಲೀಸರು. ಆದರೆ, ದಾವಣಗೆರೆ ಉಪ ಕಾರಾಗೃಹದಲ್ಲಿದ್ದ ಆರೋಪಿ ನಿನ್ನೆ ಗೋಡೆಯನ್ನು ಹಾರಿ ಪರಾರಿಯಾಗಿದ್ದಾನೆ. ಈ ವೇಳೆ, ಆತನ ಕಾಲಿಗೆ ಪೆಟ್ಟಾಗಿದ್ದರೂ ಲೆಕ್ಕಿಸದೇ ತಪ್ಪಿಸಿಕೊಂಡಿದ್ದಾನೆ.

ಇದನ್ನೂ ಓದಿ | ಕಾರು ಡಿಕ್ಕಿ ಪೌರಕಾರ್ಮಿಕನ ಕಾಲು ಕಟ್‌!; ಕುರಿಗಾಹಿಗೆ ಡಿಕ್ಕಿ ಹೊಡೆದ ಮಾಜಿ ಶಾಸಕನ ಅಳಿಯನ ಕಾರು!

ಆರೋಪಿ ಪರಾರಿಯಾದ ಕೆಲವು ಗಂಟೆಗಳ ಬಳಿಕ ಪೊಲೀಸರಿಗೆ ಗೊತ್ತಾಗಿದೆ. ಕೂಡಲೇ ಜೈಲು ಸಿಬ್ಬಂದಿ ಬಸವನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಸ್ಕೇಪ್ ಆಗಿರುವ ಅತ್ಯಾಚಾರ ಆರೋಪಿಯನ್ನು ಪೊಲೀಸರು ಹುಡುಕುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ತೊಯ್ದು ತೊಪ್ಪೆಯಾದ ಪುತ್ತೂರು; ನಾಳೆ ಮಳೆ ಅಬ್ಬರ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ಹಲವೆಡೆ ಮಳೆಯು ಅಬ್ಬರಿಸುತ್ತಿದೆ. ಸೋಮವಾರ ಪುತ್ತೂರಿನಲ್ಲಿ ಸುರಿದ ಅರ್ಧ ಗಂಟೆ ಮಳೆಗೆ (Karnataka Weather Forecast) ನದಿಯಂತಾಗಿತ್ತು. ಬೆಳಗಾವಿಯಲ್ಲೂ ನಿರಂತರ ಮಳೆಯಾಗಿದ್ದು, ಕೊಡಗಿಗೆ ಎನ್‍ಡಿಆರ್‍ಎಫ್ ತಂಡ ಭೇಟಿ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Heavy Rain ) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast Putur rain
ಪುತ್ತೂರಿನಲ್ಲಿ ಮಳೆ ಅಬ್ಬರಕ್ಕೆ ನದಿಯಂತಾದ ರಸ್ತೆಗಳು
Koo

ಮಂಗಳೂರು/ಬೆಂಗಳೂರು: ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ಭಾರಿ (Heavy Rain) ಮಳೆಯಾಗುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ಜೂ.4ರಂದು ಗುಡುಗು ಸಹಿತ ಭಾರೀ ಮಳೆಯೊಂದಿಗೆ (Karnataka Weather forecast) ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ನದಿಯಂತಾದ ಪುತ್ತೂರಿನ ರಸ್ತೆಗಳು

ಸೋಮವಾರ ಸಂಜೆ ಪುತ್ತೂರಿನಲ್ಲಿ ಗುಡುಗು ಸಿಡಿಲಿನ ಭಾರೀ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ಪುತ್ತೂರಿನ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿತ್ತು. ಪುತ್ತೂರಿನ ದರ್ಬೆಯ ಅಂಗಡಿ ಹಾಗೂ ಕೋರ್ಟ್ ರೋಡ್ ಬಳಿಯ ಜ್ಯುವೆಲ್ಲರಿ ಅಂಗಡಿಗಳು ಜಲಾವೃತಗೊಂಡಿತ್ತು. ಭಾರೀ ಮಳೆಗೆ ಪುತ್ತೂರಿನ ರಸ್ತೆಗಳು ನದಿಯಂತಾಗಿ, ಜನ ಜೀವನ ಅಸ್ತವ್ಯಸ್ತವಾಗಿತ್ತು. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದೆ ಈ ಅವಾಂತರಕ್ಕೆ ಕಾರಣ ಎಂದು ಕಿಡಿಕಾರಿದರು.

karnataka weather Forecast

ಬೆಳಗಾವಿಯಲ್ಲೂ ಧಾರಾಕಾರ ಮಳೆ

ಬೆಳಗಾವಿಯಲ್ಲಿ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ಬೆಳಗಾವಿ ನಗರ ಸೇರಿ ಜಿಲ್ಲೆಯ ಹಲವಡೆ ಭಾರಿ ಮಳೆಗೆ ಬೀದಿ ಬದಿ ವ್ಯಾಪಾರಸ್ಥರು ಹೈರಾಣಾದರಿ. ಕಳೆದ ಹಲವು ದಿನಗಳಿಂದ ಬಿಸಿಲಿಗೆ ತತ್ತರಿಸಿದ ಜನಕ್ಕೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

ಕೊಡಗಿಗೆ ಎನ್‍ಡಿಆರ್‍ಎಫ್ ತಂಡ ಭೇಟಿ

ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸುವಲ್ಲಿ ಅಗತ್ಯ ಮುನ್ನೆಚ್ಚರಿಕೆಯನ್ನು ವಹಿಸುವ ಸಂಬಂಧ ಈಗಾಗಲೇ ಎನ್‍ಡಿಆರ್‍ಎಫ್ ತಂಡ ಆಗಮಿಸಿದೆ. ಈ ಹಿನ್ನೆಲೆಯಲ್ಲಿ ಎನ್‌ಡಿಆರ್‌ಎಫ್‌ ತಂಡವು ಸೋಮವಾರ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರನ್ನು ಭೇಟಿ ಆಗಿದೆ. ಈ ವೇಳೆ ಎನ್‍ಡಿಆರ್‍ಎಫ್‍ನ ಅಜಯ್ ಕುಮಾರ್ ನೇತೃತ್ವದ ತಂಡವು ಜಿಲ್ಲಾಧಿಕಾರಿ ಜತೆಗೆ ಮಳೆಗಾಲದಲ್ಲಿ ಅನುಸರಿಸಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಿದರು.

karnataka weather Forecast

ಬಳಿಕ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ಮಳೆ ಸಂಬಂಧ ಹವಾಮಾನ ಇಲಾಖೆಯಿಂದ ಕಾಲಕಾಲಕ್ಕೆ ಬಿಡುಗಡೆ ಆಗುವ ಮಾಹಿತಿಯನ್ನು ಅಪ್‍ಡೇಟ್ ಮಾಡಲಾಗುತ್ತದೆ. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎಚ್ಚರವಹಿಸಿ, ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು. ಇದೇ ವೇಳೆ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವ, ಎನ್‍ಡಿಆರ್‍ಎಫ್ ತಂಡ ಪ್ರಮುಖರು ಇದ್ದರು. ಎನ್‍ಡಿಆರ್‍ಎಫ್ ತಂಡವು ಬೆಂಗಳೂರಿನ ಆರ್‍ಆರ್‍ಸಿ ವಿಭಾಗದಿಂದ ಆಗಮಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Electric shock : ಪ್ರತ್ಯೇಕ ಕಡೆ‌ ಕರೆಂಟ್‌ ಶಾಕ್‌ಗೆ ಲೈನ್‌ಮ್ಯಾನ್‌ ಸೇರಿ ಹಸು ಬಲಿ

Electric shock : ಉಡುಪಿಯಲ್ಲಿ ಟ್ರಾನ್ಸ್‌ಫಾರ್ಮರ್‌ ದುರಸ್ತಿ ವೇಳೆ ವಿದ್ಯುತ್‌ ಪ್ರವಹಿಸಿ ಲೈನ್‌ಮ್ಯಾನ್‌ ಸ್ಥಳದಲ್ಲೇ ಮೃತಪಟ್ಟರೆ, ಆನೇಕಲ್‌ನಲ್ಲಿ ರಸ್ತೆ ಬದಿ ಹೋಗುತ್ತಿದ್ದ ಹಸುವೊಂದು ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಿದೆ.

VISTARANEWS.COM


on

By

Cow including lineman dies of electric shock
Koo

ಉಡುಪಿ/ ಆನೇಕಲ್‌: ವಿದ್ಯುತ್ ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ (Electric shock) ಲೈನ್‌ಮ್ಯಾನ್ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಉಡುಪಿಯ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಅವಘಡ ನಡೆದಿದೆ.

ಲೈನ್ ಮ್ಯಾನ್ ಸಲೀಂ (38) ಮೃತ ದುರ್ದೈವಿ. ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವಾಗ ಶಾಕ್‌ ಹೊಡೆದಿದೆ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿಯಾಗಿರುವ ಸಲೀಂ, ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಬೈಂದೂರಿನಲ್ಲಿ ಸಲೀಂ ಜನಸ್ನೇಹಿ ಲೈನ್‌ಮ್ಯಾನ್ ಆಗಿದ್ದರು.

ಇದನ್ನೂ ಓದಿ: Road Accident : ಎದುರಿಗೆ ಬಂದ ಬೈಕ್‌ ತಪ್ಪಿಸಲು ಹೋಗಿ ಮಹಿಳೆಗೆ ಗುದ್ದಿದ ಕಾರು; ಎಗರಿ ಬಿದ್ದವಳು ಸ್ಥಳದಲ್ಲೇ ಸಾವು

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೂಕಜೀವಿ ಬಲಿ

ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಮಂಚನಹಳ್ಳಿಯಲ್ಲಿ ವಿದ್ಯುತ್ ಶಾಕ್‌ನಿಂದ ಹಸುವೊಂದು ದಾರುಣವಾಗಿ ಮೃತಪಟ್ಟಿದೆ. ಕರೆಂಟ್ ಶಾಕ್‌ನಿಂದ ಹಸು ಮೃತಪಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕರಗಪ್ಪ ಎಂಬುವವರು ಹಸುಗಳನ್ನ ಮೇಯಿಸಿಕೊಂಡು ರಸ್ತೆಯಲ್ಲಿ ನಡೆದು ಬರುತ್ತಿದ್ದರು. ಈ ವೇಳೆ ವಿದ್ಯುತ್ ಕಂಬದ ಬಳಿ ಕರೆಂಟ್ ಗ್ರೌಂಡಿಂಗ್ ಆಗಿ ಹಸು ಮೃತಪಟ್ಟಿದೆ. ಇದೇ ರೀತಿ ನಾಲ್ಕೈದು ಹಸುಗಳಿಗೆ ಅದೇ ಜಾಗದಲ್ಲಿ ಗ್ರೌಂಡಿಂಗ್‌ನಿಂದ ಶಾಕ್ ಆಗಿದೆ.

ರೈತನ ಜೀವನಾಧಾರೆಯಾಗಿದ್ದ ಹಸು ಮೃತಪಟ್ಟಿದ್ದಕ್ಕೆ ಜಿಗಣಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಒಂದು ಲಕ್ಷಕ್ಕೂ ಬೆಲೆಬಾಳುವ ಹಸುವನ್ನು ಕಳೆದುಕೊಂಡ ರೈತ ಕಂಗಾಲಾಗಿದ್ದಾರೆ. ಬೆಸ್ಕಾಂ ಇಲಾಖೆ ಸೂಕ್ತ ಪರಿಹಾರ ಕಲ್ಪಿಸಿಕೊಡಬೇಕೆಂದು ಕರಗಪ್ಪ ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Karnataka Rain : ರಾಜಧಾನಿ ಬೆಂಗಳೂರಿನಲ್ಲಿ (Bengaluru Rains) ಭಾನುವಾರ ಸುರಿದ ಎರಡು ಗಂಟೆಯ ಮಳೆಗೆ ಹಳೆಯ ದಾಖಲೆಗಳನ್ನು ಮುರಿದು ಮುನ್ನುಗ್ಗಿದೆ. 133 ವರ್ಷದ ದಾಖಲೆಯನ್ನು ಬೆಂಗಳೂರು ಮಳೆ ರೆಕಾರ್ಡ್ ಬ್ರೇಕ್ ಮಾಡಿದೆ. ಜತೆಗೆ ಸೋಮವಾರವು ಹಲವೆಡೆ ಮಳೆಯು ಅಬ್ಬರಿಸಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru Rain) ಜೂನ್‌ ಮೊದಲ ವಾರವೇ ಮಳೆಯಲ್ಲಿ ರೆಕಾರ್ಡ್‌ ಬ್ರೇಕ್‌ ಮಾಡಿದೆ. ಜೂ.2ರ ಭಾನುವಾರ ಬೆಂಗಳೂರಿನಲ್ಲಿ 111.2 mm ಮಳೆಯಾಗಿದೆ. ಈ ಮೂಲಕ 133 ವರ್ಷಗಳ ದಾಖಲೆಯನ್ನು ಮುರಿದಿದೆ. ಬೆಂಗಳೂರಿನಲ್ಲಿ 1891ರ ಜೂನ್ 16ರಂದು 101.6 mm ಮಳೆ ಆಗಿತ್ತು. ಆದರೆ ನಿನ್ನೆ ಭಾನುವಾರ ಸುರಿದ ಜೂನ್ ತಿಂಗಳ ಮಳೆ 133 ವರ್ಷಗಳ ದಾಖಲೆ (Karnataka Rain) ಮುರಿದಿದೆ ಎಂದು ವಿಸ್ತಾರ ನ್ಯೂಸ್‌ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಾಖಲೆಯ ಮಳೆ ಅಬ್ಬರದ ಡಿಟೈಲ್ಸ್‌

ವರ್ಷ- ಮಳೆ ಪ್ರಮಾಣ
1891ರ ಜೂನ್ 16ರಂದು 101.6 mm
2013ರ ಜೂನ್‌ 1ರಂದು 100mm
2009ರ ಜೂನ್ 11ರಂದು 89.6 mm
2024ರ ಜೂನ್‌ 2ರಂದು 111.2 mm

ಇದನ್ನೂ ಓದಿ: Bangalore Rain News : ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಕಡೆ ಉರುಳಿ ಬಿದ್ದ ಮರಗಳು, ಮೆಟ್ರೋ ಸಂಚಾರಕ್ಕೂ ಅಡಚಣೆ

ಚಿಕ್ಕಮಗಳೂರಲ್ಲಿ ಮಳೆಗೆ 50 ಎಕರೆ ಅಡಿಕೆ ತೋಟ ಜಲಾವೃತ

ಚಿಕ್ಕಮಗಳೂರು ಬಯಲುಸೀಮೆ ಭಾಗದಲ್ಲಿ ಸೋಮವಾರ (ಜೂ. 3) ಭಾರಿ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ 50 ಎಕರೆ ಅಡಿಕೆ ತೋಟ ಜಲಾವೃತಗೊಂಡಿದೆ. ಚಿಕ್ಕಮಗಳೂರು ತಾಲೂಕಿನ ಕ್ಯಾತನಬೀಡು, ಸಾದರಹಳ್ಳಿ ಗ್ರಾಮಗಳಲ್ಲಿ ಘಟನೆ ನಡೆದಿದೆ. ಗ್ರಾಮದ ಬಸವರಾಜು, ಲೋಕೇಶ್ ಸೇರಿದಂತೆ ಹಲವು ರೈತರ ತೋಟ ನೀರುಪಾಲಾಗಿದೆ. ಇನ್ನೂ ಚಿಕ್ಕಮಗಳೂರು, ಮುಡಿಗೆರೆ, ಕೊಪ್ಪ, ಶೃಂಗೇರಿ, ಎನ್‌ಆರ್ ಪುರದಲ್ಲಿ ನಿರಂತರ ಮಳೆಯಿಂದಾಗಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಕೊಟ್ಟಿಗೆಹಾರ, ಚಾರ್ಮಾಡಿ, ಕಿಗ್ಗಾ, ಬಸರಿ ಕಟ್ಟೆ ಭಾಗದಲ್ಲೂ ವ್ಯಾಪಕ ಮಳೆಯಾಗುತ್ತಿದೆ.

ದಾವಣಗೆರೆಯಲ್ಲಿ ಕೊಚ್ಚಿ ಹೋದ ಮಂಡಲೂರು ಸೇತುವೆ

ಭಾನುವಾರ ರಾತ್ರಿ ಸುರಿದ ಮಳೆಯಿಂದ ಮಂಡಲೂರು ಸೇತುವೆ ಕೊಚ್ಚಿ ಹೋಗಿದೆ. ದಾವಣಗೆರೆಯ ಮಂಡಲೂರಿನಿಂದ ಕಾಟಿಹಳ್ಳಿ ತಾಂಡಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯು ಕೊಚ್ಚಿ ಹೋದ ಕಾರಣದಿಂದ ಸಂಚಾರಕ್ಕೆ ಅಡಚಣೆ ಆಗಿತ್ತು. ಮಂಡಲೂರು ಗ್ರಾಮಕ್ಕೆ ಬರಲು ಹೋಗಲು ಆಗದೆ ಕಾಟಿಹಳ್ಳಿ ತಾಂಡದ ಜನರಿಗೆ ತೊಂದರೆ ಅನುಭವಿಸಿದರು. ಸೇತುವೆ ತುರ್ತು ಕಾಮಗಾರಿ ಆರಂಭಿಸುವಂತೆ ಗ್ರಾಮಸ್ಥರು ಆಗ್ರಹಿಸಿದರು.

ಕೊಡಗಿಗೂ ಎಂಟ್ರಿ ಕೊಟ್ಟ ಮುಂಗಾರು ಮಳೆ

ಸೋಮವಾರ ಕೊಡಗು ಜಿಲ್ಲೆಯ ಹಲವೆಡೆ ತುಂತುರು ಮಳೆ ಆರಂಭವಾಗಿದೆ. ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ಬಿಸಿಲ ವಾತವರಣವಿತ್ತು. ಸೋಮವಾರ ಮಧ್ಯಾಹ್ನದ ನಂತರ ಮಡಿಕೇರಿ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆಯಾಗಿದ್ದು, ಮನ್ಸೂನ್ ಮಾದರಿಯ ವಾತಾವರಣ ಕಂಡು ಬಂತು. ಮಳೆಯಿಂದಾಗಿ ಕೊಡಗಿನ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿದೆ. ಇತ್ತ ದಿಢೀರ್‌ ಮಳೆಗೆ ಸಾರ್ವಜನಿಕರು ಹಾಗೂ ದ್ವಿಚಕ್ರ ವಾಹನ ಸವಾರರು ಪರದಾಡಿದರು.

ಚಿತ್ರದುರ್ಗದಲ್ಲಿ ಮಳೆಗೆ ಬೆಳೆ ನಾಶ

ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಆರ್ಭಟಕ್ಕೆ ಮೊಳಕಾಲ್ಮುರು ತಾಲೂಕಿನಲ್ಲಿ ಅವ್ಯವಸ್ಥೆ ಆಗಿದೆ. ಪಕ್ಕುರ್ತಿ ಗ್ರಾಮದಲ್ಲಿ ಮಳೆಯಿಂದಾಗಿ ಶೇಂಗಾ, ಹತ್ತಿ, ಕಲ್ಲಂಗಡಿ, ಕನಕಾಂಬರ ಬೆಳೆ ನಾಶವಾಗಿದೆ. ಮಳೆ ರಭಸಕ್ಕೆ ನಾಲ್ಕು ಬೋರ್ವೆಲ್,ವಿದ್ಯುತ್ ಪರಿಕರ,ಪೈಪ್ ಲೈನ್ ಕೊಚ್ಚಿ ಹೋಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Udupi-Chikmagalur Lok Sabha constituency: ಬದಲಾವಣೆ ನಡುವೆ ಯಾರಿಗೆ ಮಣೆ ಹಾಕಲಿದ್ದಾರೆ ಉಡುಪಿ ಕ್ಷೇತ್ರದ ಮತದಾರರು?

Udupi-Chikmagalur Lok Sabha constituency: 2019ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕುಮಾರಿ ಶೋಭಾ ಕರಂದ್ಲಾಜೆ 7,18,916 ಮತಗಳನ್ನು ಪಡೆದು ಜಯಗಳಿಸಿದ್ದರು. ಜೆಡಿಎಸ್ ನ ಪ್ರಮೋದ್ ಮಧ್ವರಾಜ್ 3,69,317 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆ ಅವರನ್ನು 1,81,000 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು.

VISTARANEWS.COM


on

Udupi-Chikmagalur Lok Sabha constituency
Koo

ಬೆಂಗಳೂರು: ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ 2008ರ ಕ್ಷೇತ್ರ ಮರು ವಿಂಗಡಣೆ (Udupi-Chikmagalur Lok Sabha constituency) ನಂತರ ಅಸ್ತಿತ್ವಕ್ಕೆ ಬಂದಿತು. 2019 ರವರೆಗೆ ಈ ಕ್ಷೇತ್ರದಲ್ಲಿ ಮೂರು ಚುನಾವಣೆಗಳು ನಡೆದಿವೆ. ಇದರಲ್ಲಿ 2012 ರ ಉಪಚುನಾವಣೆಯೂ ಸೇರಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಭದ್ರಕೋಟೆಯಾಗಿದ್ದು ಉಪಚುನಾವಣೆಯಲ್ಲಿ ಮಾತ್ರ ಒಮ್ಮೆ ಕಾಂಗ್ರೆಸ್ ಗೆದ್ದಿದೆ. ಈ ಕ್ಷೇತ್ರದಲ್ಲಿ ಮೊದಲ ಚುನಾವಣೆ 2009ರಲ್ಲಿ ರಲ್ಲಿ ನಡೆಯಿತು. ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಶೃಂಗೇರಿ, ಮೂಡಿಗೆರೆ (ಎಸ್ಸಿ), ಚಿಕ್ಕಮಗಳೂರು, ತರೀಕೆರೆ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

2019ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ 7,18,916 ಮತಗಳನ್ನು ಪಡೆದು ಜಯಗಳಿಸಿದ್ದರು. ಜೆಡಿಎಸ್ ನ ಪ್ರಮೋದ್ ಮಧ್ವರಾಜ್ 3,69,317 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆ ಅವರನ್ನು 1,81,000 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ 5,81,168 ಮತಗಳನ್ನು ಪಡೆದರೆ, ಜಯಪ್ರಕಾಶ್ 3,99,525 ಮತಗಳನ್ನು ಪಡೆದರು.

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಮಾಜಿ ಸಚಿವರಾಗಿರುವ ಕೋಟಾ ಶ್ರೀನಿವಾಸ ಪೂಜಾರಿ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅವರು 2019 ರಿಂದ 2023 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಸದನದ ನಾಯಕರಾಗಿ ಮತ್ತು 2018-19 ರ ಅವಧಿಯಲ್ಲಿ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ.

ಜಯಪ್ರಕಾಶ್ ಹೆಗ್ಡೆ ಅವರು 2024ಲ್ಲಿ ಕಾಂಗ್ರೆಸ್ ಅಭ್ಯರ್ಥಿ. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಹಾಗೂ 1999 ಮತ್ತು 2004ರಲ್ಲಿ ಸ್ವತಂತ್ರ ಶಾಸಕರಾಗಿ ಬ್ರಹ್ಮಾವರ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕ್ಷೇತ್ರ ಪುನರ್ವಿಂಗಡಣೆಯಿಂದಾಗಿ ಬ್ರಹ್ಮಾವರ ಕ್ಷೇತ್ರ ಅಸ್ತಿತ್ವ ಕಳೆದುಕೊಂಡಾಗ 2008ರ ವಿಧಾನಸಭೆ ಚುನಾವಣೆಯಲ್ಲಿ ಕುಂದಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು ಅವರು.

ಇದನ್ನೂ ಓದಿ: Dakshina Kannada Lok Sabha Constituency : ದಕ್ಷಿಣ ಕನ್ನಡದಲ್ಲಿ ವಿಜಯ ಅಭಿಯಾನ ಮುಂದುವರಿಸಲು ಬಿಜೆಪಿ ಕಾತರ

2012ರ ಉಪಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಿಜೆಪಿ ಸೇರಿದ ನಂತರ ಹೆಗಡೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ನಂತರ ಅವರ ಕಾಂಗ್ರೆಸ್​ ಪಕ್ಷಕ್ಕೆ ಸೇರಿ ಟಿಕೆಟ್​ ಪಡೆದುಕೊಂಡಿದ್ದರು. ಉಡುಪಿ ಚಿಕ್ಕಮಗಳೂರು ತನ್ನ ಗಡಿಯನ್ನು ಇತರ ಐದು ಲೋಕಸಭಾ ಕ್ಷೇತ್ರಗಳೊಂದಿಗೆ ಹಂಚಿಕೊಂಡಿದೆ. ದಾವಣಗೆರೆ, ಶಿವಮೊಗ್ಗ, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರ ಸುತ್ತಲಿದೆ.

ಹಿಂದಿನ ಫಲಿತಾಂಶಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಅವರು ಜೆಡಿಎಸ್​​ನ ಪ್ರಮೋದ್ ಮಧ್ವರಾಜ್ ಅವರನ್ನು 3,49,599 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.62.43ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್​​ನ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು 1,81,643 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.56.2ರಷ್ಟು ಮತಗಳನ್ನು ಗಳಿಸಿದೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಡಿ.ವಿ.ಸದಾನಂದ ಗೌಡ ಅವರು ಕಾಂಗ್ರೆಸ್​​ನ ಪಕ್ಷದ ಜಯಪ್ರಕಾಶ್ ಹೆಗ್ಡೆ ಅವರನ್ನು 27,018 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.48.06ರಷ್ಟು ಮತಗಳನ್ನು ಪಡೆದಿತ್ತು.

Continue Reading
Advertisement
Bagalkot Lok Sabha Constituency
ಪ್ರಮುಖ ಸುದ್ದಿ6 mins ago

Bagalkot Lok Sabha Constituency: ಬಿಜೆಪಿಯ ಭದ್ರಕೋಟೆ ಭೇದಿಸುವರೇ ಸಂಯುಕ್ತಾ ಪಾಟೀಲ್?

karnataka weather Forecast Putur rain
ಮಳೆ23 mins ago

Karnataka Weather : ತೊಯ್ದು ತೊಪ್ಪೆಯಾದ ಪುತ್ತೂರು; ನಾಳೆ ಮಳೆ ಅಬ್ಬರ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

IND vs PAK
ಕ್ರಿಕೆಟ್40 mins ago

IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

Bangalore Rain
ಪ್ರಮುಖ ಸುದ್ದಿ48 mins ago

Bangalore Rain: ರಾಜಕಾಲುವೆ ಒತ್ತುವರಿ; ಮುಲಾಜಿಲ್ಲದೆ ತೆರವು ಮಾಡಲು ಡಿಕೆಶಿ ಸೂಚನೆ

Stock Market
ವಾಣಿಜ್ಯ59 mins ago

Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್‌ ಏರಿಕೆ

Dharwad Lok Sabha Constituency
ಧಾರವಾಡ1 hour ago

Dharwad Lok Sabha Constituency: ಜೋಶಿ vs ಅಸೂಟಿ; ಯಾವ ಅಭ್ಯರ್ಥಿಗೆ ಧಾರವಾಡ ಪೇಡಾ?

Anant Ambani Radhika Merchant Pre Wedding
ಫ್ಯಾಷನ್1 hour ago

Anant Ambani Radhika Merchant Pre Wedding: ಅಂಬಾನಿ ಫ್ಯಾಮಿಲಿಯ ಕ್ರ್ಯೂಸ್ ಟೂರ್‌ನಲ್ಲಿ ಸ್ಟಾರ್‌ಗಳ ಮಕ್ಕಳ ಲುಕ್‌ ಹೇಗಿದೆ ನೋಡಿ!

Vijaypur Lok Sabha Constituency
ವಿಜಯಪುರ1 hour ago

Vijaypur Lok Sabha Constituency: ವಿಜಯಪುರದಲ್ಲಿ ಅಧಿಕಾರದ ‘ಗೋಲ ಗುಮ್ಮಟ’ ಯಾರಿಗೆ?

IND vs PAK
ಕ್ರಿಕೆಟ್2 hours ago

IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ

Lok Sabha Election Result 2024
ದೇಶ2 hours ago

Lok Sabha Election Result 2024: ನಾಳೆ ಲೋಕಸಭೆ ಚುನಾವಣೆ ಫಲಿತಾಂಶ; ಯಾರಿಗೆ ಅಧಿಕಾರ? ನಿಮ್ಮ ಅಭಿಪ್ರಾಯ ತಿಳಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌