Site icon Vistara News

ಇಬ್ಬರು ವಿದ್ಯಾರ್ಥಿನಿಯರ ಹುಡುಗಾಟ, ಪೊಲೀಸರ ಹುಡುಕಾಟ, ಕೊನೆಗೂ ಪತ್ತೆ

ಹೈಗ್ರೌಂಡ್ಸ್ ಪೊಲೀಸರಿಂದ ಪತ್ತೆ

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಜು.25ರಂದು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಇದೀಗ ಈ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ.

ದ್ವಿತೀಯ ಪಿಯುಸಿ ಓದುತ್ತಿದ್ದ ಈ ಇಬ್ಬರು ವಿದ್ಯಾರ್ಥಿನಿಯರು ಸ್ನೇಹಿತರಾಗಿದ್ದರು. ನಾವಿನ್ನು ಮನೆಗೆ ಬರುವುದಿಲ್ಲ, ನಮ್ಮನ್ನು ಹುಡುಕಬೇಡಿ ಎಂದು ತಿಳಿಸಿ ನಾಪತ್ತೆಯಾಗಿದ್ದರು. ಈ ಬಗ್ಗೆ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಇದನ್ನೂ ಓದಿ | Students Missing case | ಸರ್ಕಾರಿ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ; ಪೋಷಕರಲ್ಲಿ ಆತಂಕ

ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಇಬ್ಬರು ವಿದ್ಯಾರ್ಥಿನಿಯರಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಪೊಲೀಸರು ವಿದ್ಯಾರ್ಥಿನಿಯರನ್ನು ಬೆಂಗಳೂರಿಗೆ ಕರೆ ತಂದಿದ್ದಾರೆ. ಇವರನ್ನು ಪೋಷಕರಿಗೆ ಹಸ್ತಾಂತರ ಮಾಡಲಾಗಿದೆ.

Exit mobile version