Site icon Vistara News

ರಾಣೆಬೆನ್ನೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ದಾಳಿ, ಚಾಕು ಇರಿತದಿಂದ ಇಬ್ಬರು ಯುವಕರಿಗೆ ಗಾಯ

Hindu

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮುಸ್ಲಿಂ ಯುವಕರು ಹಿಂದೂಗಳ ಮೇಲೆ ದಾಳಿ ನಡೆಸಿದ್ದು, ಇಬ್ಬರು ಯುವಕರಿಗೆ ಚಾಕು ಇರಿದಿದ್ದಾರೆ. ಇಬ್ಬರೂ ಯುವಕರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಕಿ ಗಲ್ಲಿಯ ಗಣಪತಿ ಮೆರವಣಿಗೆಯು ನಗರದಾದ್ಯಂತ ನಡೆದಿದ್ದು, ದರ್ಗಾ ಸರ್ಕಲ್‌ಗೆ ಬಂದಾಗ ಮುಸ್ಲಿಂ ಯುವಕರು ಹಿಂದೂಗಳ ಮೇಲೆ ದಾಳಿ ನಡೆಸಿದ್ದಾರೆ. ಇದೇ ವೇಳೆ ಇಬ್ಬರಿಗೆ ಚಾಕು ಇರಿಯಲಾಗಿದೆ ಎಂದು ತಿಳಿದುಬಂದಿದೆ.

ಘಟನೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ದಾಳಿ ಖಂಡಿಸಿ ದರ್ಗಾ ವೃತ್ತದಲ್ಲಿರುವ ಮಸೀದಿ ಎದುರು ಹಿಂದೂ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಎಸ್‌ಪಿ, ಎಎಸ್‌ಪಿ ಸೇರಿ ನೂರಾರು ಪೊಲೀಸರು ಧಾವಿಸಿದ್ದಾರೆ. ಅಲ್ಲದೆ, ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಪ್ರಹಾರ ಮಾಡಿದ್ದಾರೆ. ಮುಸ್ಲಿಮರ ದಾಳಿಯನ್ನು ಹಿಂದೂ ಸಂಘಟನೆಗಳು ಖಂಡಿಸಿವೆ. ಇದೇ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು.

ಇದನ್ನೂ ಓದಿ | Viral Video | ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡ್ಯಾಗರ್ ಹಿಡಿದು ಕುಣಿದು ಕುಪ್ಪಳಿಸಿದ ಪುಂಡರು

Exit mobile version