Site icon Vistara News

Koratagere Accident: ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವು, ಐವರಿಗೆ ಗಾಯ  

Car Fully damaged in accident

#image_title

ಕೊರಟಗೆರೆ (ತುಮಕೂರು): ಲಾರಿ ಹಾಗೂ ಎರ್ಟಿಗಾ ಕಾರು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಅಗ್ರಹಾರ ಗ್ರಾಮ ಪಂಚಾಯಿತಿಯ ತುಮಕೂರು-ಕೊರಟಗೆರೆ ರಸ್ತೆಯಲ್ಲಿ ನಡೆದಿದೆ. ಆಂಧ್ರದಿಂದ ತುಮಕೂರು ಕಡೆಗೆ ಬರುತ್ತಿದ್ದ ಲಾರಿ ಹಾಗೂ ಕಾರು ನಡುವೆ ಅಪಘಾತವಾಗಿದೆ.

ದಾವಣಗೆರೆಯ ಶಿವು ನಾಯಕ್, ಮಧುಗಿರಿಯ ಕೊಡಿಗೇನಹಳ್ಳಿಯ ಪರಮೇಶ್ ಮೃತರು. ತುಮಕೂರು ಕಡೆಯಿಂದ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಕಡೆಗೆ ಇವರು ಮಂಗಳವಾರ ತಡರಾತ್ರಿ ಕಾರಿನಲ್ಲಿ ಬರುತ್ತಿದ್ದಾಗ ದುರಂತ ನಡೆದಿದೆ. ಕಾರಿನಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಇಬ್ಬರು ಮೃತಪಟ್ಟಿದ್ದರೆ, 5 ಮಂದಿ ಗಾಯಗೊಂಡಿದ್ದಾರೆ. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Road accident : ಟೆಂಪೊ, ಬೈಕ್‌ ನಡುವೆ ಅಪಘಾತ; ಮೂವರು ಸ್ನೇಹಿತರ ದಾರುಣ ಮರಣ

ಇದನ್ನೂ ಓದಿ | Car Accident: ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ

ಡಾಬಸ್ ಪೇಟೆಯಲ್ಲಿ ಸ್ನೇಹಿತನ ಮದುವೆ ಮುಗಿಸಿಕೊಂಡು ವಾಪಸ್ಸಾವಾಗುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಕೊರಟಗೆರೆ ಠಾಣೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗುಡಿಬಂಡೆಯಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಬೈಕ್‌ ಸವಾರ ಮೃತ್ಯು

ಚಿಕ್ಕಬಳ್ಳಾಪುರ: ಕ್ಯಾಂಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವುದು ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೆಣ್ಣೆಪರ್ತಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ನಂಜುಂಡಪ್ಪ (65) ಮೃತ ಸವಾರ. ಸ್ಥಳಕ್ಕೆ ಗುಡಿಬಂಡೆ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ

ರಾಮನಗರ: ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವುದು ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯ ದೇವರ ಹೊಸಹಳ್ಳಿ ಬಳಿ ನಡೆದಿದೆ.

ಚನ್ನಪಟ್ಟಣ ತಾಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ಭೀಕರ ಅಪಘಾತ ನಡೆದಿದೆ. ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರು ಕಡೆಗೆ 6 ಪ್ರಯಾಣಿಕರು ಬುಧವಾರ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಹೀಗಾಗಿ 13 ವರ್ಷದ ಬಾಲಕಿ ಹಾಗೂ 20 ವರ್ಷದ ಯುವತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ರಾಮನಗರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Road accident : ನಿದ್ರೆಯಲ್ಲಿದ್ದ ಮೂವರ ಮೇಲೆ ಹರಿದ ಜೆಸಿಬಿ, ಜಮೀನಿನಲ್ಲೇ ಹೆಣವಾದ ಕಾರ್ಮಿಕರು

ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

Exit mobile version