Site icon Vistara News

Bike Accident: ಚಿಕ್ಕಮಗಳೂರಿನಲ್ಲಿ ಬೈಕ್-ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Two killed in bike- ksrtc bus collision in Chikkamagalur

ಚಿಕ್ಕಮಗಳೂರು: ಬೈಕ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Bike Accident) ನಗರದ ಎಪಿಎಂಸಿ ಬಳಿ ಬುಧವಾರ ನಡೆದಿದೆ.

ನಗರದ ದಂಟರಮಕ್ಕಿ ನಿವಾಸಿ ಶ್ರೀಧರ್, ಹಿರೇಮಗಳೂರು ನಿವಾಸಿ ಧನಂಜಯ್ ಮೃತರು. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ. ಅಪಘಾತದ ಬಳಿಕ ಬಸ್ ಚಾಲಕ ಬಸ್‌ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜೂಜು ಅಡ್ಡೆ ಮೇಲೆ ದಾಳಿ; ನಗರಸಭಾ ಸದಸ್ಯ, ಕಾನ್‌ಸ್ಟೇಬಲ್‌ ಸೇರಿ 11 ಜನರ ಬಂಧನ

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಸಾಗಾನಹಳ್ಳಿಯಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ, 11 ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ 1.5 ಲಕ್ಷ ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ.

ಇನ್ನೂ ಓದಿ | Assault Case: ಸಚಿವರ ಮನೆ ಮುಂದೆಯೇ ಅಮಾನುಷ ಕೃತ್ಯ, ಹಲವಾರು ಬಾರಿ ಕಾರು ಹತ್ತಿಸಿ ರೌಡಿಶೀಟರ್ ಕೊಲೆ ಯತ್ನ!

ತೋಟದ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯೊಂದಿಗೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ, ನಗರಸಭಾ ಸದಸ್ಯ ಆರ್.ಪಿ. ಗೋಪಿನಾಥ, ಹೆಡ್ ಕಾನ್‌ಸ್ಟೆಬಲ್ ಮೊಹಮ್ಮದ್ ಕಲಾಂದರ್ ಸೇರಿ 11 ಜನರನ್ನು ಬಂಧಿಸಲಾಗಿದೆ. ಬಂಧಿತ ಗೋಪಿನಾಥ ಗೌರಿಬಿದನೂರು ನಗರಸಭೆ ಸದಸ್ಯರಾಗಿದ್ದಾರೆ. ಮೊಹಮ್ಮದ್ ಕಲಾಂದರ್ ಚಿಕ್ಕಬಳ್ಳಾಪುರ ಸಂಚಾರ ಠಾಣೆ ಹೆಡ್ ಕಾನ್‌ಸ್ಟೆಬಲ್ ಆಗಿದ್ದಾರೆ. ಸರ್ಕಲ್ ಇನ್ಸ್‌ಪೆಕ್ಟರ್ ಕೆ. ಪಿ. ಸತ್ಯನಾರಾಯಣ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ.

ಹುಬ್ಬಳ್ಳಿಯ ನೃಪತುಂಗ ಬೆಟ್ಟಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಹುಬ್ಬಳ್ಳಿ.: ನಗರದ ನೃಪತುಂಗ ಬೆಟ್ಟದಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಗಿಡ ಮರಗಳು ಧಗಧಗನೆ ಹೊತ್ತಿಉರಿದಿವೆ. ಮರಗಳ ಮಾರಣಹೋಮಕ್ಕೆ ಪರಿಸರ ಪ್ರೇಮಿಗಳು ಆಕ್ರೋಶ ಹೊರಹಾಕಿದ್ದಾರೆ. ಕಸ ಸುಡಲು ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ | Road accident : ಮದ್ಯ ಸಾಗಿಸುತ್ತಿದ್ದ ಲಾರಿಗೆ ಅದಿರು ಸಾಗಾಟದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಮೃತ್ಯುವಶ

ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಐದನೇ ಬಾರಿಗೆ ನೃಪತುಂಗ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೀಗಾಗಿ ಬೆಂಕಿ ಹಚ್ಚುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.

ನೃಪತುಂಗ ಬೆಟ್ಟ ವಾಕರ್ಸ್ ಅಸೋಸಿಯೇಷನ್ ಸಾವಿರಾರು ಮರಗಳನ್ನು ನೆಟ್ಟು ಬೆಳೆಸುತ್ತಿದೆ. ಬೆಟ್ಟದಲ್ಲಿ ಬೆಂಕಿ ಅವಘಡಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ನಡಿಗೆದಾರರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Exit mobile version