Site icon Vistara News

Bus Accident: ಬಸ್‌ ಪಲ್ಟಿಯಾಗಿ ನಾಲ್ವರ ಸಾವು; ಮದುವೆಗೆ ಹೊರಟಿದ್ದವರು ಮಸಣ ಸೇರಿದರು

bus Accident

ಚಿತ್ರದುರ್ಗ: ಮದುವೆಗೆ ಹೊರಟಿದ್ದ ಬಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಹೊಸದುರ್ಗ-ಹೊಳಲ್ಕೆರೆ ಮಾರ್ಗದ ಉಗಣೆ ಕಟ್ಟೆ ಬಳಿ ನಡೆದಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ದುರಂತ (Bus Accident) ಸಂಭವಿಸಿದೆ.

ಹೊಸದುರ್ಗ -ಹೊಳಲ್ಕೆರೆ ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದರಿಂದ ನಾಲ್ವರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಳಲ್ಕೆರೆ, ಹೊಸದುರ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸೀಗೆಹಟ್ಟಿಯಿಂದ ದಾವಣಗೆರೆಗೆ ಮದುವೆಯ ಬಸ್ ಹೋಗುತ್ತಿದ್ದಾಗ ಅಪಘಾತ ನಡೆದಿದೆ.

PUC students drown in Someshwara Beach

ಬಸ್‌ನಲ್ಲಿ 35 ಮಂದಿ ಮದುವೆಗೆ ಹೊರಟಿದ್ದರು. ಅದರೆ, ಅಪಘಾತದಲ್ಲಿ ಸುಮಾರು 15 ಮಂದಿಗೆ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಧಾವಿಸಿದ ಪೊಲೀಸರು, ನಾಲ್ಕೈದು ಆಂಬ್ಯುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಕೆಲವರಿಗೆ ಹೊಳಲ್ಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನು ಕೆಲವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Murder case : ಮಲಗಿದ್ದ ರೈತನ‌ ರುಂಡವನ್ನೇ ಕತ್ತರಿಸಿದ ದುರುಳರು!

ದ್ವಿತೀಯ ಪಿಯುಸಿ ಇಬ್ಬರು ವಿದ್ಯಾರ್ಥಿಗಳು ಸೋಮೇಶ್ವರದಲ್ಲಿ ಸಮುದ್ರಪಾಲು

PUC students drown in Someshwara Beach

ಉಳ್ಳಾಲ: ಸೋಮೇಶ್ವರ ಸಮುದ್ರತೀರಕ್ಕೆ (Someshwara Beach) ವಿಹಾರಕ್ಕೆಂದು ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು (2nd PUC Students) ಸಮುದ್ರಪಾಲಾಗಿರುವ (Drown in sea) ಘಟನೆ ಶನಿವಾರ (ಡಿ.9) ಮಧ್ಯಾಹ್ನ ಸಂಭವಿಸಿದೆ. ಕಣ್ಮರೆಯಾಗಿರುವ ಇಬ್ಬರು ವಿದ್ಯಾರ್ಥಿಗಳಿಗಾಗಿ ಸ್ಥಳೀಯ ಈಜುಗಾರರು ಹಾಗೂ ಉಳ್ಳಾಲ ಠಾಣಾ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಯೆಶ್ವಿತ್ (18) ಮತ್ತು ಕುಂಜತ್ತೂರು ಮಜಲ್ ನಿವಾಸಿ ಜಯೇಂದ್ರ ಎಂಬುವವರ ಪುತ್ರ ಯುವರಾಜ್ (18) ಸಮುದ್ರ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾದವರು.

ಇಬ್ಬರು ಸಮೀಪದ ಸೋಮೇಶ್ವರ ಪರಿಜ್ಞಾನ ಪಿಯುಸಿ ಕಾಲೇಜಿನ ದ್ವಿತೀಯ ವರ್ಷ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾಗಿದ್ದಾರೆ. ಕಾಲೇಜು ಮುಗಿಸಿ ಮಧ್ಯಾಹ್ನ ನಂತರ ಸಮುದ್ರ ವಿಹಾರಕ್ಕೆಂದು ತೆರಳಿದ್ದರು. ಈ ವೇಳೆ ಓರ್ವ ವಿದ್ಯಾರ್ಥಿ ಸಮುದ್ರದ ಅಲೆಗಳ ನಡುವೆ ಸಿಲುಕಿದರೆ, ಇನ್ನೋರ್ವ ವಿದ್ಯಾರ್ಥಿ ಆತನನ್ನು ಹಿಡಿಯಲು ಮುಂದಾಗುತ್ತಿದ್ದಂತೆ ಇಬ್ಬರೂ ಅಲೆಗಳ ನಡುವೆ ಸಿಲುಕಿ ನಾಪತ್ತೆಯಾಗಿದ್ದಾರೆ.

ಸ್ಥಳಕ್ಕೆ ಉಳ್ಳಾಲ ಠಾಣಾಧಿಕಾರಿ ಎಚ್.ಎನ್ ಬಾಲಕೃಷ್ಣ ಭೇಟಿ ನೀಡಿದ್ದು, ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರ ಸಹಕಾರದೊಂದಿಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ | Road Accident : ನಿಂತಿದ್ದ ಟ್ರ್ಯಾಕ್ಟರ್‌ಗೆ ಆಂಬ್ಯುಲೆನ್ಸ್‌ಗೆ ಡಿಕ್ಕಿ; ಶಿಶು ಸಹಿತ ಗರ್ಭಿಣಿ ಸಾವು

ಅಲೆಗಳ ಅಬ್ಬರವಿದೆ ಈಜದಿರಿ!

ಸೋಮೇಶ್ವರ ಸಮುದ್ರ ತೀರ ಈಗಾಗಲೇ ಹಲವು ಜೀವಗಳನ್ನು ಬಲಿ ಪಡೆದುಕೊಂಡಿದೆ. ಈ ಕುರಿತು ಸ್ಥಳದಲ್ಲಿರುವ ಬಂಡೆಗಳಲ್ಲಿ ಹಾಗೂ ಇಲಾಖೆ ವತಿಯಿಂದ ನಾಮಫಲಕಗಳನ್ನು ಅಳವಡಿಸಿ ಮುನ್ನೆಚ್ಚರಿಕೆ ಕ್ರಮವನ್ನು ವಹಿಸುವಂತೆ ಕೋರಲಾಗಿದೆ. ಆದರೂ ಸ್ಥಳದಲ್ಲಿ ವಿಹಾರಕ್ಕೆಂದು ಬರುವ ವಿದ್ಯಾರ್ಥಿಗಳು, ಪ್ರವಾಸಿಗರು ಹೋಂಗಾರ್ಡ್‌ಗಳ ಮತ್ತು ನಾಮಫಲಕಗಳನ್ನು ಗಮನಿಸಿಯೂ ಸಮುದ್ರಕ್ಕೆ ಇಳಿದು ಜೀವ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಸ್ಥಳಕ್ಕೆ ಬರುವವರು ಮುಂಜಾಗ್ರತಾ ವಹಿಸಿ ವಿಹರಿಸುವಂತೆ ಉಳ್ಳಾಲ ಠಾಣಾಧಿಕಾರಿ ಎಚ್.ಎನ್. ಬಾಲಕೃಷ್ಣ ಎಚ್ಚರಿಕೆಯ ಸೂಚನೆ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version