ಬೆಳಗಾವಿ: ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿರುವ ಘಟನೆ (Road Accident) ಜಿಲ್ಲೆಯ ಗೋಕಾಕ್ ತಾಲೂಕಿನ ಲೋಳಸೂರ ಬ್ರಿಡ್ಜ್ ಬಳಿ ನಡೆದಿದೆ. ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಅಪಘಾತದಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್‌ನಡಿ ಬೈಕ್ ಸವಾರರು ಸಿಲುಕಿದ್ದು, ಜೆಸಿಬಿ ಬಳಸಿ ಟ್ರಾಕ್ಟರ್‌ನಡಿಯಿಂದ ಮೃತದೇಹಗಳನ್ನು ಪೊಲೀಸರು ಹೊರತೆಗೆಯುತ್ತಿದ್ದಾರೆ. ಮೃತರ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
2 ಬಸ್ ಮುಖಾಮುಖಿ ಡಿಕ್ಕಿಯಾಗಿ 10ಕ್ಕೂ ಹೆಚ್ಚು ಮಂದಿಗೆ ಗಾಯ
ವಿಜಯಪುರ: ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕವಲಗಿ ಗ್ರಾಮದ ಬಳಿ ನಡೆದಿದೆ. ಸಿಂದಗಿ ಮಾರ್ಗವಾಗಿ ವಿಜಯಪುರಕ್ಕೆ ಬರುತ್ತಿದ್ದ ಬಸ್ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್ ನಡುವೆ ಅಪಘಾತವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
Physical Harassment : ಬುದ್ಧಿಮಾಂದ್ಯ ಮಗಳನ್ನೇ ನಿರಂತರ ರೇಪ್ ಮಾಡಿದ ಪಾಪಿ ತಂದೆ
ಬೆಳಗಾವಿ: ಧೂರ್ತ ತಂದೆಯೊಬ್ಬ ತನ್ನ ಬುದ್ಧಿಮಾಂದ್ಯ ಮಗಳ (Mentally retarded daughter) ಮೇಲೆಯೇ ನಿರಂತರ ಅತ್ಯಾಚಾರ (Rape by father) ಮಾಡಿ ಆಕೆಯ ಮಗುವಿಗೂ ತಂದೆಯಾಗಿರುವ ಅಮಾನವೀಯ ಘಟನೆಯೊಂದು ನಡೆದಿದೆ. ಪೊಲೀಸರು ಪಾಪಿ ತಂದೆಯನ್ನು (Father Arrested) ಬಂಧಿಸಿದ್ದಾರೆ. ಯುವತಿ ಮಗುವಿಗೆ ಜನ್ಮ ನೀಡಿದ ಬಳಿಕವಷ್ಟೇ ಈ ಭಯಾನಕ ಘಟನೆ (Physical Harassment) ಬೆಳಕಿಗೆ ಬಂದಿದೆ.
ಬುದ್ಧಿಮಾಂದ್ಯ ಯುವತಿಯ ತಾಯಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹೀಗಾಗಿ ಮನೆಯಲ್ಲಿ ತಂದೆ ಮತ್ತು ಈ ಮಗಳು ಮಾತ್ರ ವಾಸಿಸುತ್ತಿದ್ದರು. ತಂದೆ ಮಗಳನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾನೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಈ ಧೂರ್ತ ಅಪ್ಪ ಪರಿಸ್ಥಿತಿಯ ದುರ್ಲಾಭವನ್ನು ಪಡೆದುಕೊಂಡು ತನ್ನ ಮಗಳ ಮೇಲೆಯೇ ಕಣ್ಣು ಹಾಕಿದ್ದ. ಯಾರೂ ಇಲ್ಲದ, ಏನೆಂದು ಅರ್ಥ ಮಾಡಿಕೊಳ್ಳಲಾಗದ ಬಾಲಕಿಯ ಮೇಲೆ ಪದೇಪದೇ ಅತ್ಯಾಚಾರ ಮಾಡಿದ್ದಾನೆ.
ಈ ನಡುವೆ, ಸಂತ್ರಸ್ತ ಯುವತಿಯ ಹೊಟ್ಟೆ ದೊಡ್ಡದಾಗುತ್ತಿರುವುದು ಕೆಲವರ ಗಮನಕ್ಕೆ ಬದಿತ್ತು. ಅವರು ಆಶಾ ಕಾರ್ಯಕರ್ತೆಯರಿಗೆ ವಿಷಯ ತಿಳಿಸಿದರು. ಸಂತ್ರಸ್ತೆ ಗರ್ಭಿಣಿ ಎಂದು ಆಶಾ ಕಾರ್ಯಕರ್ತೆಯರು ಖಚಿತಪಡಿಸಿದಾಗ, ಪೊಲೀಸರಿಗೆ ದೂರು ನೀಡಲಾಗಿದೆ.
ಇಷ್ಟೆಲ್ಲ ಆಗುವ ಹೊತ್ತಿಗೆ ಬುದ್ಧಿಮಾಂದ್ಯ ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಈ ನಡುವೆ, ಧೂರ್ತ ಅಪ್ಪ ಆಕೆಯ ಗರ್ಭಕ್ಕೆ ತಾನು ಕಾರಣನಲ್ಲ ಎಂದು ವಾದ ಮಾಡಿದ್ದ. ಹೀಗಾಗಿ ಡಿಎನ್‌ಎ ಪರೀಕ್ಷೆ ನಡೆಸಲಾಗಿದೆ. ಆಗ ಅಪ್ಪನೇ ಮಗಳನ್ನು ಬಸಿರು ಮಾಡಿದ ಧೂರ್ತ ಎನ್ನುವುದು ತಿಳಿದುಬಂತು.
ಇದನ್ನೂ ಓದಿ | Namma Metro: ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ; ರೈಲು ಸೇವೆ ಸ್ಥಗಿತ
ಎನ್‌ಜಿಒ ದೂರಿನ ಮೇರೆಗೆ ತನಿಖೆ ನಡೆಸಲಾಗಿದೆ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಎಸ್ಎಸ್ ಸಿದ್ದರಾಮಪ್ಪ ತಿಳಿಸಿದ್ದಾರೆ. ಮತ್ತು ಈಗಾಗಲೇ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.