ವಿಜಯಪುರ: ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಮೃತಪಟ್ಟು, 10ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕವಲಗಿ ಗ್ರಾಮದ ಬಳಿ ನಡೆದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬಸವನ ಬಾಗೇಬಾಡಿ ತಾಲೂಕಿನ ಡೋಣೂರ ಗ್ರಾಮದ ಸಾಜೀದಾ ಬೇಗಂ ಮಕಾನದಾರ್ (36) ಮತ್ತು ಕಲಬುರಗಿ ಪಟ್ಟಣದ ನಿವಾಸಿ ರೋಹಿಣಿ ಪಂಚಾಳ (31) ಮೃತರು. ಎರಡೂ ಬಸ್ ಚಾಲಕರು ಸೇರಿದಂತೆ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಸಿಂದಗಿ ಮಾರ್ಗವಾಗಿ ವಿಜಯಪುರಕ್ಕೆ ಬರುತ್ತಿದ್ದ ಬಸ್ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದರಿಂದ ದುರಂತ ನಡೆದಿದೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಅಪಘಾತದ ಕಾರಣ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸಂಪೂರ್ಣ ಸಂಚಾರ ಬಂದ್ ಆಗಿದೆ. ಎರಡು ಮೂರು ಕಿಲೋಮೀಟರ್ವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದು,
ಸುಗಮ ಸಂಚಾರಕ್ಕೆ ಅನುವು ಮಾಡಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ | Inhuman Behaviour : ಕೊರೆಯುವ ಚಳಿಯಲ್ಲಿ ಹೆತ್ತ ತಾಯಿಯನ್ನೇ ಬಿಸಾಡಿ ಹೋದ ಮಗಳು-ಅಳಿಯ! ಥೂ, ಚೀ ಎಂದ್ರು ಜನ
ಅಪಘಾತಕ್ಕೊಳಗಾದ ಬಸ್‌ಗಳನ್ನು ತೆರವು ಮಾಡಲು ಸ್ಥಳಕ್ಕೆ ಕ್ರೇನ್ ಹಾಗೂ ಜೆಸಿಬಿಗಳಿಗೆ ಬಂದಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳಕ್ಕೆ ಎಎಸ್ಪಿ ಶಂಕರ ಮಾರಿಹಾಳ, ಸಿಪಿಐ ರಾಯಗೊಂಡ ಜನಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ; ಇಬ್ಬರ ದುರ್ಮರಣ
ಬೆಳಗಾವಿ: ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿರುವ ಘಟನೆ (Road Accident) ಜಿಲ್ಲೆಯ ಗೋಕಾಕ್ ತಾಲೂಕಿನ ಲೋಳಸೂರ ಬ್ರಿಡ್ಜ್ ಬಳಿ ನಡೆದಿದೆ. ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಅಪಘಾತದಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್‌ನಡಿ ಬೈಕ್ ಸವಾರರು ಸಿಲುಕಿದ್ದು, ಜೆಸಿಬಿ ಬಳಸಿ ಟ್ರಾಕ್ಟರ್‌ನಡಿಯಿಂದ ಮೃತದೇಹಗಳನ್ನು ಪೊಲೀಸರು ಹೊರತೆಗೆಯುತ್ತಿದ್ದಾರೆ. ಮೃತರ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.