Site icon Vistara News

Belagavi Shootout | ಬೆಳಗಾವಿಯಲ್ಲಿ ಶೂಟೌಟ್‌, ಇಬ್ಬರು ಹಿಂದು ಸಂಘಟನೆ ಮುಖಂಡರಿಗೆ ಗಾಯ, ಪರಿಸ್ಥಿತಿ ಉದ್ವಿಗ್ನ

Belagavi Shootout

ಬೆಳಗಾವಿ: ತಾಲೂಕಿನ ಹಿಂಡಲಗಾ ಗ್ರಾಮದ ಮರಾಠಿ ಶಾಲೆಯ ಎದುರು ದುಷ್ಕರ್ಮಿಗಳು ಗುಂಡಿನ ದಾಳಿ (Belagavi Shootout) ನಡೆಸಿದ್ದರಿಂದ ಇಬ್ಬರು ಹಿಂದುಪರ ಸಂಘಟನೆ ಮುಖಂಡರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಶ್ರೀರಾಮ ಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್, ಹಿಂದು ರಾಷ್ಟ್ರ ಸೇನಾ ಮುಖಂಡ ಮನೋಜ್ ದೇಸೂರಕರ ಗಾಯಾಳುಗಳು. ಶನಿವಾರ ಸಂಜೆ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿ, ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಕುಸಿದುಬಿದ್ದ ಗಾಯಾಳುಗಳನ್ನು ಸ್ಥಳೀಯರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Hit and Run case : ಆಟೋಗೆ ಗುದ್ದಿ ಇಬ್ಬರ ಸಾವಿಗೆ ಕಾರಣವಾದ ಕಾರು ಚಾಲಕ ಸೆರೆ; ತನ್ನ ತಪ್ಪಿಲ್ಲವೆಂದ ಆರೋಪಿ

Exit mobile version