ಶಿವಮೊಗ್ಗ: ಈಜಲು ತೆರಳಿದ್ದ ಇಬ್ಬರು ನೀರುಪಾಲಾಗಿರುವ ಘಟನೆ ಸಾಗರ ತಾಲೂಕಿನ ವಡನ್ ಬೈಲ್ ಬಳಿಯ ದೇವಿಗುಂಡಿಯಲ್ಲಿ ಭಾನುವಾರ ನಡೆದಿದೆ. ಕೃಷಿ ಅಧಿಕಾರಿ ಕುಮಾರ್, ಐಡಿಎಫ್‌ಸಿ ಬ್ಯಾಂಕ್ ಉದ್ಯೋಗಿ ಅರುಣ್ ಮೃತರು.
ಮೃತರು ವಡನ್ ಬೈಲ್ ಸಮೀಪದ ದೇವಿಗುಂಡಿಗೆ ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದರು. ಮಧ್ಯಾಹ್ನ ಊಟ ಮುಗಿಸಿದ ನಂತರ ಈಜಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳಗಿ ಮೃತಪಟ್ಟಿದ್ದಾರೆ. ಇಬ್ಬರ ಶವವನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕಾರ್ಗಲ್ ಸಬ್ ಇನ್ಸ್‌ಪೆಕ್ಟರ್ ಹೊಳಬಸಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಾಲಕನ ಕಂಟ್ರೋಲ್ ತಪ್ಪಿ ನಾಲ್ಕೈದು ಬಾರಿ ಕಾರು ಪಲ್ಟಿ; ಓರ್ವ ಸಾವು, ಮೂವರು ಗಂಭೀರʼ
ಹಾಸನ: ಇಲ್ಲಿನ ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅತಿ ವೇಗವಾಗಿ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣಕ್ಕೆ (Road Accident) ಸಿಗದೇ ನಾಲ್ಕೈದು ಬಾರಿ ಪಲ್ಟಿ ಹೊಡೆದಿದೆ. ಕಾರಿಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮೂವರು ಗಂಭೀರ ಗಾಯಗೊಂಡಿದ್ದಾರೆ.
ಕುಟುಂಬವೊಂದು ಆದಿಚುಂಚನಗಿರಿ ದೇವಾಲಯಕ್ಕೆ ಹೋಗಿ ವಾಪಸ್ಸು ಬರುವಾಗ ಮೇಲ್ಸುತುವೆ ಮೇಲೆ ಚಾಲಕನ ನಿಯಂತ್ರಣ ತಪ್ಪಿದೆ. ಕಾರು ವೇಗವಾಗಿ ಇದ್ದ ಕಾರಣಕ್ಕೆ ನಾಲ್ಕೈದು ಭಾರಿ ಪಲ್ಟಿಯಾಗಿ, ತಡೆಗೋಡೆಯಿಂದ ಅರ್ಧ ಭಾಗ ಹಾರಿಹೋಗಿದೆ. ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದರೆ ಭಾರಿ ಅನಾಹುತವಾಗುತ್ತಿದ್ದವು. ಮೇಲ್ಸೇತುವೆಯ ತಡೆಗೋಡೆ ಇದ್ದರಿಂದ ಕಾರು ಮೇಲೆಯೇ ಉಳಿದಿದೆ.
ಅಪಘಾತವಾಗುತ್ತಿದ್ದಂತೆ ಇತರೆ ವಾಹನ ಸವಾರರು ಕಾರಲ್ಲಿ ಸಿಲುಕಿ ನರಳಾಡುತ್ತಿದ್ದವರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆ ಹಾಸನಕ್ಕೆ ಶಿಫ್ಟ್ ಮಾಡಲಾಗಿದೆ. ಮೃತರ ಹಾಗೂ ಗಾಯಾಳುಗಳ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿದ್ಯುತ್ ಶಾಕ್‌ಗೆ ಪವರ್ ಮ್ಯಾನ್ ಸಾವು
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ದುರಸ್ತಿ ಕೆಲಸ ಮಾಡುವಾಗ ಪವರ್ ಮ್ಯಾನ್‌ಗೆ ವಿದ್ಯುತ್ ಶಾಕ್ ಹೊಡೆದಿದೆ. ಕಿರಣ್ (26) ವಿದ್ಯುತ್ ತಗುಲಿ ಮೃತಪಟ್ಟ ದುರ್ದೈವಿ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ